< मार्क 14 >
1 मंग दोन दिन नंतर वल्हांडण अनी बेखमीर भाकरीसना सण व्हता. तवय येशुले गुपचुप कसं मारी टाकानं हाई मुख्य याजक अनी शास्त्री दखी राहींतात.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.
2 “पण हाई सणना येळले करानं नही, करं तर कदाचित लोकसमा दंगा व्हई जाई” अस त्या बोलनात.
ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು.
3 येशु बेथानी गावले जो पहिले कोडरोगी व्हता त्या शिमोनना घर जेवाले बशेल व्हता तवय एक बाई जटामांसी वनस्पतीनं महागडं सुगंधी तेल संगमरवरना भांडामा लई वनी. तिनी ते भांडं फोडीन तेल त्याना डोकावर वती दिधं.
ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.
4 तवय काहीजण कुरकुर करीसन बोलणात, “हाई सुगंधी तेलना नाश का बरं करा?
ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?
5 कारण हाई सुगंधी तेल एक वरीसनी मजुरी म्हणजे तिनशे चांदिना शिक्कासनावर ईकाई जातं, ते ईकीन त्या पैसा गरीबसमा वाटाई जातात!” अस त्यासनी तिले दताडं.
ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.
6 पण येशु बोलना, “जाऊ द्या! तिले का बरं बोली राहीनात? तिनी मनाकरता एक चांगलं काम करेल शे.
ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
7 गोरगरीब कायमना तुमना जोडेच शेतस अनी तुमले वाटी तवय त्यासनं भलं करता ई. पण मी कायम तुमनासंगे राहसु अस नही.
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
8 तिनाघाई जे करता ई ते तिनी करं; मना मरानंतरनी तयारी पहिलेच तिनी करी दिधी.
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.
9 मी तुमले सत्य सांगस की, सर्व जगमा जठे जठे सुवार्ता सांगतीन, तठे तठे तिनी जे सत्कर्म करेल शे त्यानी आठवण करतीन.”
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.
10 मंग बारा शिष्यसमधला एक यहूदा इस्कर्योतनी मुख्य याजकसकडे जाईन येशुले सोपी दिसु, अस सांगं.
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
11 त्यानं ऐकीसन त्यासले आनंद व्हयना अनी त्यासनी त्याले पैसा देवानं ठरायं. मंग यहूदा येशुले कसं सोपी देवानं यानी संधी दखु लागना.
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.
12 बेखमीर भाकरना सणना पहिला दिन जवय वल्हांडणना यज्ञकरता कोकरूना बळी देतस, त्या दिन त्याना शिष्य येशुले बोलणात, “आम्हीन कोठे जाईसन वल्हांडणना जेवणनी तयारी करानी अशी तुमनी ईच्छा शे?”
ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.
13 मंग येशुनी त्याना शिष्यसमाधला दोन जणसले धाडीन सांगं, “नगरमा जा म्हणजे एक माणुस पाणीनं मडकं लई जातांना तुमले भेटी त्यानामांगे जा.
ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
14 तो ज्या घरमा जाई, तठला घरमालकले सांगा; ‘गुरु सांगस, मी मना शिष्यससंगे वल्हांडणनं जेवण करसु तर पाहुणचार करानी खोली कोठे शे?’
ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.
15 मंग तो स्वतः सजाडेल अनी तयार करेल एक मोठी माडीवरली खोली तुमले दखाडी, तठे आपलाकरता तयारी करा.”
ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.
16 मंग त्याना शिष्य शहरमा गयात तवय त्यानी सांगेलप्रमाणेच त्यासले दखायनं अनी त्यासनी वल्हांडणना जेवणनी तयारी करी.
ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.
17 मंग संध्याकाय व्हयनी तवय येशु बारा शिष्यससंगे तठे वना.
ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.
18 अनी त्या बशीन जेवण करी राहींतात तवय येशु बोलना, “मी तुमले सत्य सांगस की, तुमना मातीन एक माले शत्रुसना हातमा सोपी दि, तो आत्ते मनासंगे जेवण करी राहीना.”
ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
19 त्या नाराज व्हयनात अनी एक एकजण त्याले ईचारु लागणात, “मी शे का तो?”
ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.
20 येशुनी उत्तर दिधं, “बारा जणसपैकी एक जो मना ताटमा हात घाली राहीना.
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.
21 मनुष्यना पोऱ्याबद्दल लिखेल शे तसं त्याले जानच शे; पण जो मनुष्यना पोऱ्याले धरीन सोपी देवाव शे त्याना धिक्कार असो! तो माणुस जन्मले नही येता तर ते त्याले चांगलं व्हतं!”
ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.
22 त्या जेवण करतांना येशुनी भाकर लिधी अनं उपकार मानीन तोडी अनी शिष्यसले दिसन सांगं, हाई ल्या, “हाई मनं शरीर शे.”
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.
23 मंग त्यानी प्याला लिधा अनं देवना आभार मानीन त्यासले दिधा, अनी त्यासनी ते पिधं.
ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.
24 त्यानी त्यासले सांगं, “हाई मनं रंगत देव अनी मनुष्यना करारले दखाडस, हाई बराच जणसकरता वताई जाई ऱ्हायनं.
ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
25 मी तुमले सत्य सांगस की, मी तोपावत द्राक्षवेलना रस कधीच पिवाऊ नही जोपावत देवना राज्यमा नवा द्राक्षरस पितस नही.”
ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.
26 मंग देवनं गानं म्हणीसन त्या जैतुनना डोंगरकडे निंघी गयात.
ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.
27 मंग येशु त्यासले बोलना, “तुम्हीन सर्व माले सोडीन पळी जाशात, कारण शास्त्र अस सांगस की, ‘देव मेंढपायले मारी टाकी अनी मेंढरसनी दाणादाण व्हई जाई.’
ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’
28 तरी मी जिवत व्हवानंतर तुमना पहिले गालीलमा जासु.”
ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.
29 पेत्र त्याले बोलना, “जरी सर्व तुले सोडीन पळतीन पण मी तुले सोडीन पळाव नही.”
ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.
30 येशु त्याले बोलना मी तुले सत्य सांगस, “आज रातले कोंबडा दोनदाव कोकावाना पहिले तु तिनदाव माले नाकारशी.”
ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.
31 तरी पेत्र खंबीर व्हईसन बोलना, “तुमनासंगे माले मरणं पडनं तरी मी तुमले नाकारावुच नही!” अनी बाकीना शिष्यसनी पण तसच सांगं.
ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
32 मंग त्या गेथशेमाने नावना बागमा वनात तवय येशु त्याना शिष्यसले बोलना, “मी प्रार्थना करीसन येस तोपावत आठे बठा.”
ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.
33 त्यानी पेत्र, याकोब अनं योहान यासले संगे लिधं अनी तो अस्वस्थ अनं व्याकुळ व्हवु लागना,
ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,
34 तो त्यासले बोलना, “मी भलता उदास शे, आठपावत की मी मराले टेकेल शे, तुम्हीन आठेच थांबा अनी जागा ऱ्हा.”
“ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.
35 मंग तो त्यासनापाईन थोडा पुढे गया अनी जमीनवर पडीन प्रार्थना कराले लागना की, “शक्य व्हई तर हाई येळ टळी जावो.”
ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,
36 अनी तो बोलना, “हे बापा, हे पिता! तुले सर्वकाही शक्य शे, हाऊ दुःखना प्याला मनापाईन दुर कर. तरी मना ईच्छाप्रमाणे नको तर तुना ईच्छाप्रमाणे व्हवु दे.”
“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.
37 मंग त्यानी परत ईसन तिन्ही शिष्यसले झोपेल दखं. तवय तो पेत्रले बोलना, “शिमोन, तु झोपी गया का? एक तास बी तुनाघाई जागं ऱ्हावायनं नही का?”
ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?
38 “तुम्हीन परिक्षामा पडाले नको म्हणीन जागा ऱ्हा, अनी प्रार्थना करा. आत्मा कितला बी उतावळा व्हई, पण शरीर अशक्त शे.”
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
39 येशुनी परत जाईन त्याच शब्दसमा प्रार्थना करी.
ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.
40 मंग परत ईसन त्यानी दखं तर त्या झोपेल व्हतात; त्यासना डोया जड व्हई जायेल व्हतात अनी त्याले काय उत्तर देवानं त्यासले समजनं नही.
ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
41 परत तिसरांदाव त्यानी ईसन त्यासले सांगं, “आतेपावत तुम्हीन झोपीन आराम करी राहीनात? पुरं व्हयनं! येळ ई जायेल शे! दखा, मनुष्यना पोऱ्या पापी लोकसना ताबामा सोपाई राहीना.
ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.
42 ऊठा, आपण जाऊ. दखा, माले सोपी देणारा जोडे येल शे!”
ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
43 येशु बोली राहींता इतलामा बारा शिष्यसपैकी एक म्हणजे यहूदा तठे वना, त्यानाबरोबर मुख्य याजक, शास्त्री अनी वडील लोकसना माणसे तलवारी अनी टिपरा लई वनात.
ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.
44 त्याले सोपणारानी एक इशारा देयल व्हता तो असा की, “मी ज्यानं चुंबन लिसु तोच येशु शे. त्याले धरीन बांधीन अनं संभायीन लई जा.”
ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.
45 तो येताच येशुकडे गया अनी “गुरजी!” अस म्हणीन त्याना चुंबन लिधात.
ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.
46 मंग त्यासनी त्याले पकडीन बांधं.
ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು.
47 ज्या येशुजोडे उभा व्हतात त्यासनामाईन एकनी तलवारघाई प्रमुख याजकना सेवकना कान कापी टाका.
ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
48 तवय येशु त्यासले बोलना, “जसं एखादा नियम तोडणाराले धराकरता तलवार अनी टिपरा लई जातस तसा तुम्हीन माले धराले येल शेतस का?
ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?
49 मी तुमनासंगे रोज मंदिरमा शिकाडी राहींतु, तवय तुम्हीन का बरं माले धरं नही, पण हाई ह्यानाकरता व्हयनं की शास्त्रना लेख पुरा व्हवाले पाहिजे.”
ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.
50 मंग येशुसंगेना सर्व शिष्य त्याले सोडीन पळी गयात.
ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.
51 त्या येळले एक तरूण पोऱ्या त्याना आंगवर लुंगीशिवाय काहीच नव्हतं तो येशुना मांगे चाली राहींता, त्याले त्यासनी धराना प्रयत्न करा.
ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,
52 पण तो ती लुंगी टाकीन उघडाच पळी गया.
ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.
53 मंग येशुले त्या प्रमुख याजकसकडे लई वनात अनी त्यानाजवळ सर्व मुख्य याजक, वडील अनी शास्त्री जमनात.
ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.
54 पेत्र दुरतीन त्याना मांगेमांगे चालत मुख्य याजकना वाडामा गया अनी तो पहारेकरीससंगे शेकोटी जोडे शेकी राहींता.
ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.
55 मुख्य याजक अनी सर्व यहूदीसना न्यायसभा मधलासनी येशुले मृत्युदंड भेटाकरता त्यानाविरुध्द काय आरोप कराना हाई शोधी राहींतात. पण त्यासले एक बी आरोप सापडना नही.
ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.
56 बराच जणसनी त्यानाविरुध्द खोटी साक्ष दिधी, पण त्यासना साक्षमा काहीच तथ्य नव्हतं.
ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ.
57 काही लोकसनी उभं राहीन येशुनाविरुध्द अशी खोटी साक्ष दिधी की,
ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,
58 हाई हातघाई बांधेल मंदिर मी तोडी टाकसु अनी हात नही लावता दुसरं तीन दिनमा उभं करसु अस आम्हीन याले बोलतांना ऐकं.
“‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.
59 पण त्यासनी हाई साक्षमापण तथ्य नव्हतं.
ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
60 तवय मुख्य याजकनी मझार उभं राहीसन येशुले ईचारं, “ह्या तुनाविरुध्द साक्ष दि राहिनात त्यानावर तुले काहीच उत्तर देणं नही शे का?”
ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.
61 येशु गप्पच राहिना, त्यानी काहीच उत्तर दिधं नही. प्रमुख याजकसनी परत त्याले ईचारं, “धन्यवादित देवना पोऱ्या ख्रिस्त तो तुच शे का?”
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.
62 येशुनी सांगं, “मीच शे, अनी तुम्हीन मनुष्यना पोऱ्याले सर्वसमर्थ परमेश्वरना उजवीकडे बशेल अनी आकाशमधला ढगससंगे येतांना दखशात.”
ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.
63 मुख्य याजक आपला कपडा फाडीन बोलना, आमले आत्ते साक्षीदारसनी काय गरज!
ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ?
64 हाऊ देवनी थट्टा करी राहीना, हाई तुम्हीन ऐकं, तुमले काय वाटस? तवय सर्वासनी ठराय हाऊ मरणदंडले योग्य शे.
ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.
65 मंग बराच जण येशुवर थुंकू लागणात, त्यानं तोंड झाकीन त्याले बुक्क्या माऱ्यात अनी त्याले सांगु लागणात, “वळख, तुले कोणी मारं!” अनी पहारेकरीसनी त्याले थापड्या मारीन ताबामा लिधं.
ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.
66 पेत्र खाल वाडामा व्हता तवय प्रमुख याजकसना सेवकसमाधली एक बाई तठे वनी.
ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
67 अनी तिनी पेत्रले शेकतांना टक लाईन दखीन सांगं, “तु पण येशु नासरेथकरना संगे व्हता ना.”
ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.
68 पण त्यानी नाकारीन सांगं, “तु काय सांगी राहीनी, माले माहीत नही अनं समजी बी नही राहीनं” अनी तो वाडाना दुसरी बाजुले गया ईतलामा कोंबडा कोकायना.
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.
69 मंग त्या दासीनी त्याले परत दखं अनी त्यानाजोडे ज्या उभा व्हतात त्यासले सांगु लागणी, “हाऊ त्यासनापैकीच एक शे!”
ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.
70 पण त्यानी परत नकार. मंग थोडा येळमा जोडे उभा राहनारासनी पेत्रले सांगं, “तु खरच त्यासनापैकीच शे ना, कारण तु गालीली शे.”
ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.
71 मंग पेत्र बोलणा, “जर मी खोटं बोली ऱ्हायनु तर, देव माले मारी टाको! असा शपथा वाहीन बोलु लागणा, हाऊ ज्या माणुसबद्दल तुम्हीन बोली राहिनात त्याले मी वळखत नही!”
ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.
72 अनी लगेच दुसरींदाव कोंबडा कोकायना. तवय “कोंबडा दोनदाव कोकाई, त्याना पहिले तु माले तीनदाव नाकारशी” असा ज्या शब्द येशुनी पेत्रले सांगेल व्हतात त्या त्याले आठवणात अनी तो रडाले लागना.
ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.