< صَمُوئِيلَ ٱلْأَوَّلُ 28 >
وَكَانَ فِي تِلْكَ ٱلْأَيَّامِ أَنَّ ٱلْفِلِسْطِينِيِّينَ جَمَعُوا جُيُوشَهُمْ لِكَيْ يُحَارِبُوا إِسْرَائِيلَ. فَقَالَ أَخِيشُ لِدَاوُدَ: «ٱعْلَمْ يَقِينًا أَنَّكَ سَتَخْرُجُ مَعِي فِي ٱلْجَيْشِ أَنْتَ وَرِجَالُكَ». | ١ 1 |
೧ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
فَقَالَ دَاوُدُ لِأَخِيشَ: «لِذَلِكَ أَنْتَ سَتَعْلَمُ مَا يَفْعَلُ عَبْدُكَ». فَقَالَ أَخِيشُ لِدَاوُدَ: «لِذَلِكَ أَجْعَلُكَ حَارِسًا لِرَأْسِي كُلَّ ٱلْأَيَّامِ». | ٢ 2 |
೨“ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.
وَمَاتَ صَمُوئِيلُ وَنَدَبَهُ كُلُّ إِسْرَائِيلَ وَدَفَنُوهُ فِي ٱلرَّامَةِ فِي مَدِينَتِهِ. وَكَانَ شَاوُلُ قَدْ نَفَى أَصْحَابَ ٱلْجَانِّ وَٱلتَّوَابِعِ مِنَ ٱلْأَرْضِ. | ٣ 3 |
೩ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
فَٱجْتَمَعَ ٱلْفِلِسْطِينِيُّونَ وَجَاءُوا وَنَزَلُوا فِي شُونَمَ، وَجَمَعَ شَاوُلُ جَمِيعَ إِسْرَائِيلَ وَنَزَلَ فِي جِلْبُوعَ. | ٤ 4 |
೪ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.
وَلَمَّا رَأَى شَاوُلُ جَيْشَ ٱلْفِلِسْطِينِيِّينَ خَافَ وَٱضْطَرَبَ قَلْبُهُ جِدًّا. | ٥ 5 |
೫ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.
فَسَأَلَ شَاوُلُ مِنَ ٱلرَّبِّ، فَلَمْ يُجِبْهُ ٱلرَّبُّ لَا بِٱلْأَحْلَامِ وَلَا بِٱلْأُورِيمِ وَلَا بِٱلْأَنْبِيَاءِ. | ٦ 6 |
೬ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
فَقَالَ شَاوُلُ لِعَبِيدِهِ: «فَتِّشُوا لِي عَلَى ٱمْرَأَةٍ صَاحِبَةِ جَانٍّ، فَأَذْهَبَ إِلَيْهَا وَأَسْأَلَهَا». فَقَالَ لَهُ عَبِيدُهُ: «هُوَذَا ٱمْرَأَةٌ صَاحِبَةُ جَانٍّ فِي عَيْنِ دُورٍ». | ٧ 7 |
೭ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
فَتَنَكَّرَ شَاوُلُ وَلَبِسَ ثِيَابًا أُخْرَى، وَذَهَبَ هُوَ وَرَجُلَانِ مَعَهُ وَجَاءُوا إِلَى ٱلْمَرْأَةِ لَيْلًا. وَقَالَ: «ٱعْرِفِي لِي بِٱلْجَانِّ وَأَصْعِدِي لِي مَنْ أَقُولُ لَكِ». | ٨ 8 |
೮ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
فَقَالَتْ لَهُ ٱلْمَرْأَةُ: «هُوَذَا أَنْتَ تَعْلَمُ مَا فَعَلَ شَاوُلُ، كَيْفَ قَطَعَ أَصْحَابَ ٱلْجَانِّ وَٱلتَّوَابِعِ مِنَ ٱلْأَرْضِ. فَلِمَاذَا تَضَعُ شَرَكًا لِنَفْسِي لِتُمِيتَهَا؟» | ٩ 9 |
೯ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.
فَحَلَفَ لَهَا شَاوُلُ بِٱلرَّبِّ قَائِلًا: «حَيٌّ هُوَ ٱلرَّبُّ، إِنَّهُ لَا يَلْحَقُكِ إِثْمٌ فِي هَذَا ٱلْأَمْرِ». | ١٠ 10 |
೧೦ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.
فَقَالَتِ ٱلْمَرْأَةُ: «مَنْ أُصْعِدُ لَكَ؟» فَقَالَ: «أَصْعِدِي لِي صَمُوئِيلَ». | ١١ 11 |
೧೧ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
فَلَمَّا رَأَتِ ٱلْمَرْأَةُ صَمُوئِيلَ صَرَخَتْ بِصَوْتٍ عَظِيمٍ، وَكَلَّمَتِ ٱلْمَرْأَةُ شَاوُلَ قَائِلَةً: «لِمَاذَا خَدَعْتَنِي وَأَنْتَ شَاوُلَ؟» | ١٢ 12 |
೧೨ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.
فَقَالَ لَهَا ٱلْمَلِكُ: «لَا تَخَافِي. فَمَاذَا رَأَيْتِ؟» فَقَالَتِ ٱلْمَرْأَةُ لِشَاوُلَ: «رَأَيْتُ آلِهَةً يَصْعَدُونَ مِنَ ٱلْأَرْضِ». | ١٣ 13 |
೧೩ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
فَقَالَ لَهَا: «مَا هِيَ صُورَتُهُ؟» فَقَالَتْ: «رَجُلٌ شَيْخٌ صَاعِدٌ وَهُوَ مُغَطًّى بِجُبَّةٍ». فَعَلِمَ شَاوُلُ أَنَّهُ صَمُوئِيلُ، فَخَرَّ عَلَى وَجْهِهِ إِلَى ٱلْأَرْضِ وَسَجَدَ. | ١٤ 14 |
೧೪ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
فَقَالَ صَمُوئِيلُ لِشَاوُلَ: «لِمَاذَا أَقْلَقْتَنِي بِإِصْعَادِكَ إِيَّايَ؟» فَقَالَ شَاوُلُ: «قَدْ ضَاقَ بِي ٱلْأَمْرُ جِدًّا. اَلْفِلِسْطِينِيُّونَ يُحَارِبُونَنِي، وَٱلرَّبُّ فَارَقَنِي وَلَمْ يَعُدْ يُجِيبُنِي لَا بِٱلْأَنْبِيَاءِ وَلَا بِٱلْأَحْلَامِ. فَدَعَوْتُكَ لِكَيْ تُعْلِمَنِي مَاذَا أَصْنَعُ». | ١٥ 15 |
೧೫ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.
فَقَالَ صَمُوئِيلُ: «وَلِمَاذَا تَسْأَلُنِي وَٱلرَّبُّ قَدْ فَارَقَكَ وَصَارَ عَدُوَّكَ؟ | ١٦ 16 |
೧೬ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?
وَقَدْ فَعَلَ ٱلرَّبُّ لِنَفْسِهِ كَمَا تَكَلَّمَ عَنْ يَدِي، وَقَدْ شَقَّ ٱلرَّبُّ ٱلْمَمْلَكَةَ مِنْ يَدِكَ وَأَعْطَاهَا لِقَرِيبِكَ دَاوُدَ. | ١٧ 17 |
೧೭ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
لِأَنَّكَ لَمْ تَسْمَعْ لِصَوْتِ ٱلرَّبِّ وَلَمْ تَفْعَلْ حُمُوَّ غَضَبِهِ فِي عَمَالِيقَ، لِذَلِكَ قَدْ فَعَلَ ٱلرَّبُّ بِكَ هَذَا ٱلْأَمْرَ ٱلْيَوْمَ. | ١٨ 18 |
೧೮ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.
وَيَدْفَعُ ٱلرَّبُّ إِسْرَائِيلَ أَيْضًا مَعَكَ لِيَدِ ٱلْفِلِسْطِينِيِّينَ. وَغَدًا أَنْتَ وَبَنُوكَ تَكُونُونَ مَعِي، وَيَدْفَعُ ٱلرَّبُّ جَيْشَ إِسْرَائِيلَ أَيْضًا لِيَدِ ٱلْفِلِسْطِينِيِّينَ». | ١٩ 19 |
೧೯ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.
فَأَسْرَعَ شَاوُلُ وَسَقَطَ عَلَى طُولِهِ إِلَى ٱلْأَرْضِ وَخَافَ جِدًّا مِنْ كَلَامِ صَمُوئِيلَ، وَأَيْضًا لَمْ تَكُنْ فِيهِ قُوَّةٌ، لِأَنَّهُ لَمْ يَأْكُلْ طَعَامًا ٱلنَّهَارَ كُلَّهُ وَٱللَّيْلَ. | ٢٠ 20 |
೨೦ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.
ثُمَّ جَاءَتِ ٱلْمَرْأَةُ إِلَى شَاوُلَ وَرَأَتْ أَنَّهُ مُرْتَاعٌ جِدًّا، فَقَالَتْ لَهُ: «هُوَذَا قَدْ سَمِعَتْ جَارِيَتُكَ لِصَوْتِكَ فَوَضَعْتُ نَفْسِي فِي كَفِّي وَسَمِعْتُ لِكَلَامِكَ ٱلَّذِي كَلَّمْتَنِي بِهِ. | ٢١ 21 |
೨೧ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
وَٱلْآنَ ٱسْمَعْ أَنْتَ أَيْضًا لِصَوْتِ جَارِيَتِكَ فَأَضَعَ قُدَّامَكَ كِسْرَةَ خُبْزٍ وَكُلْ، فَتَكُونَ فِيكَ قُوَّةٌ إِذْ تَسِيرُ فِي ٱلطَّرِيقِ». | ٢٢ 22 |
೨೨ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.
فَأَبَى وَقَالَ: «لَا آكُلُ». فَأَلَحَّ عَلَيْهِ عَبْدَاهُ وَٱلْمَرْأَةُ أَيْضًا، فَسَمِعَ لِصَوْتِهِمْ وَقَامَ عَنِ ٱلْأَرْضِ وَجَلَسَ عَلَى ٱلسَّرِيرِ. | ٢٣ 23 |
೨೩ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
وَكَانَ لِلْمَرْأَةِ عِجْلٌ مُسَمَّنٌ فِي ٱلْبَيْتِ، فَأَسْرَعَتْ وَذَبَحَتْهُ وَأَخَذَتْ دَقِيقًا وَعَجَنَتْهُ وَخَبَزَتْ فَطِيرًا، | ٢٤ 24 |
೨೪ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
ثُمَّ قَدَّمَتْهُ أَمَامَ شَاوُلَ وَأَمَامَ عَبْدَيْهِ فَأَكَلُوا. وَقَامُوا وَذَهَبُوا فِي تِلْكَ ٱللَّيْلَةِ. | ٢٥ 25 |
೨೫ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.