< ٢ أخبار 26 >
وَأَخَذَ كُلُّ شَعْبِ يَهُوذَا عُزِّيَّا وَهُوَ ٱبْنُ سِتَّ عَشَرَةَ سَنَةً وَمَلَّكُوهُ عِوَضًا عَنْ أَبِيهِ أَمَصْيَا. | ١ 1 |
ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
هُوَ بَنَى أَيْلَةَ وَرَدَّهَا لِيَهُوذَا بَعْدَ ٱضْطِجَاعِ ٱلْمَلِكِ مَعَ آبَائِهِ. | ٢ 2 |
ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.
كَانَ عُزِّيَّا ٱبْنَ سِتَّ عَشَرَةَ سَنَةً حِينَ مَلَكَ، وَمَلَكَ ٱثْنَتَيْنِ وَخَمْسِينَ سَنَةً فِي أُورُشَلِيمَ، وَٱسْمُ أُمِّهِ يَكُلْيَا مِنْ أُورُشَلِيمَ. | ٣ 3 |
ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
وَعَمِلَ ٱلْمُسْتَقِيمَ فِي عَيْنَيِ ٱلرَّبِّ حَسَبَ كُلِّ مَا عَمِلَ أَمَصْيَا أَبُوهُ. | ٤ 4 |
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
وَكَانَ يَطْلُبُ ٱللهَ فِي أَيَّامِ زَكَرِيَّا ٱلْفَاهِمِ بِمَنَاظِرِ ٱللهِ. وَفِي أَيَّامِ طَلَبِهِ ٱلرَّبَّ أَنْجَحَهُ ٱللهُ. | ٥ 5 |
ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.
وَخَرَجَ وَحَارَبَ ٱلْفِلِسْطِينِيِّينَ وَهَدَمَ سُورَ جَتَّ وَسُورَ يَبْنَةَ وَسُورَ أَشْدُودَ، وَبَنَى مُدُنًا فِي أَرْضِ أَشْدُودَ وَٱلْفِلِسْطِينِيِّينَ. | ٦ 6 |
ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
وَسَاعَدَهُ ٱللهُ عَلَى ٱلْفِلِسْطِينِيِّينَ وَعَلَى ٱلْعَرَبِ ٱلسَّاكِنِينَ فِي جُورِ بَعْلَ وَٱلْمَعُونِيِّينَ. | ٧ 7 |
ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.
وَأَعْطَى ٱلْعَمُّونِيُّونَ عُزِّيَّا هَدَايَا، وَٱمْتَدَّ ٱسْمُهُ إِلَى مَدْخَلِ مِصْرَ لِأَنَّهُ تَشَدَّدَ جِدًّا. | ٨ 8 |
ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.
وَبَنَى عُزِّيَّا أَبْرَاجًا فِي أُورُشَلِيمَ عِنْدَ بَابِ ٱلزَّاوِيَةِ وَعِنْدَ بَابِ ٱلْوَادِي وَعِنْدَ ٱلزَّاوِيَةِ وَحَصَّنَهَا. | ٩ 9 |
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.
وَبَنَى أَبْرَاجًا فِي ٱلْبَرِّيَّةِ، وَحَفَرَ آبَارًا كَثِيرَةً لِأَنَّهُ كَانَ لَهُ مَاشِيَةٌ كَثِيرَةٌ فِي ٱلسَّاحِلِ وَٱلسَّهْلِ، وَفَلَاّحُونَ وَكَرَّامُونَ فِي ٱلْجِبَالِ وَفِي ٱلْكَرْمَلِ، لِأَنَّهُ كَانَ يُحِبُّ ٱلْفِلَاحَةَ. | ١٠ 10 |
ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
وَكَانَ لِعُزِّيَّا جَيْشٌ مِنَ ٱلْمُقَاتِلِينَ يَخْرُجُونَ لِلْحَرْبِ أَحْزَابًا حَسَبَ عَدَدِ إِحْصَائِهِمْ عَنْ يَدِ يَعِيئِيلَ ٱلْكَاتِبِ وَمَعَسِيَا ٱلْعَرِيفِ تَحْتَ يَدِ حَنَنْيَّا وَاحِدٍ مِنْ رُؤَسَاءِ ٱلْمَلِكِ. | ١١ 11 |
ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
كُلُّ عَدَدِ رُؤُوسِ ٱلْآبَاءِ مِنْ جَبَابِرَةِ ٱلْبَأْسِ أَلْفَانِ وَسِتُّ مِئَةٍ. | ١٢ 12 |
ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.
وَتَحْتَ يَدِهِمْ جَيْشُ جُنُودٍ ثَلَاثُ مِئَةِ أَلْفٍ وَسَبْعَةُ آلَافٍ وَخَمْسُ مِئَةٍ مِنَ ٱلْمُقَاتِلِينَ بِقُوَّةٍ شَدِيدَةٍ لِمُسَاعَدَةِ ٱلْمَلِكِ عَلَى ٱلْعَدُوِّ. | ١٣ 13 |
ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.
وَهَيَّأَ لَهُمْ عُزِّيَّا، لِكُلِّ ٱلْجَيْشِ، أَتْرَاسًا وَرِمَاحًا وَخُوَذًا وَدُرُوعًا وَقِسِيًّا وَحِجَارَةَ مَقَالِيعَ. | ١٤ 14 |
ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.
وَعَمِلَ فِي أُورُشَلِيمَ مَنْجَنِيقَاتٍ ٱخْتِرَاعَ مُخْتَرِعِينَ لِتَكُونَ عَلَى ٱلْأَبْرَاجِ وَعَلَى ٱلزَّوَايَا، لِتُرْمَى بِهَا ٱلسِّهَامُ وَٱلْحِجَارَةُ ٱلْعَظِيمَةُ. وَٱمْتَدَّ ٱسْمُهُ إِلَى بَعِيدٍ إِذْ عَجِبَتْ مُسَاعَدَتُهُ حَتَّى تَشَدَّدَ. | ١٥ 15 |
ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.
وَلَمَّا تَشَدَّدَ ٱرْتَفَعَ قَلْبُهُ إِلَى ٱلْهَلَاكِ وَخَانَ ٱلرَّبَّ إِلَهَهُ، وَدَخَلَ هَيْكَلَ ٱلرَّبِّ لِيُوقِدَ عَلَى مَذْبَحِ ٱلْبَخُورِ. | ١٦ 16 |
ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.
وَدَخَلَ وَرَاءَهُ عَزَرْيَا ٱلْكَاهِنُ وَمَعَهُ ثَمَانُونَ مِنْ كَهَنَةِ ٱلرَّبِّ بَنِي ٱلْبَأْسِ. | ١٧ 17 |
ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,
وَقَاوَمُوا عُزِّيَّا ٱلْمَلِكَ وَقَالُوا لَهُ: «لَيْسَ لَكَ يَا عُزِّيَّا أَنْ تُوقِدَ لِلرَّبِّ، بَلْ لِلْكَهَنَةِ بَنِي هَارُونَ ٱلْمُقَدَّسِينَ لِلْإِيقَادِ. اُخْرُجْ مِنَ ٱلْمَقْدِسِ لِأَنَّكَ خُنْتَ وَلَيْسَ لَكَ مِنْ كَرَامَةٍ مِنْ عِنْدِ ٱلرَّبِّ ٱلْإِلَهِ». | ١٨ 18 |
ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.
فَحَنِقَ عُزِّيَّا. وَكَانَ فِي يَدِهِ مِجْمَرَةٌ لِلْإِيقَادِ. وَعِنْدَ حَنَقِهِ عَلَى ٱلْكَهَنَةِ خَرَجَ بَرَصٌ فِي جَبْهَتِهِ أَمَامَ ٱلْكَهَنَةِ فِي بَيْتِ ٱلرَّبِّ بِجَانِبِ مَذْبَحِ ٱلْبَخُورِ. | ١٩ 19 |
ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.
فَٱلْتَفَتَ نَحْوَهُ عَزَرْيَاهُو ٱلْكَاهِنُ ٱلرَّأْسُ وَكُلُّ ٱلْكَهَنَةِ وَإِذَا هُوَ أَبْرَصُ فِي جَبْهَتِهِ، فَطَرَدُوهُ مِنْ هُنَاكَ حَتَّى إِنَّهُ هُوَ نَفْسُهُ بَادَرَ إِلَى ٱلْخُرُوجِ لِأَنَّ ٱلرَّبَّ ضَرَبَهُ. | ٢٠ 20 |
ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.
وَكَانَ عُزِّيَّا ٱلْمَلِكُ أَبْرَصَ إِلَى يَوْمِ وَفَاتِهِ، وَأَقَامَ فِي بَيْتِ ٱلْمَرَضِ أَبْرَصَ لِأَنَّهُ قُطِعَ مِنْ بَيْتِ ٱلرَّبِّ، وَكَانَ يُوثَامُ ٱبْنُهُ عَلَى بَيْتِ ٱلْمَلِكِ يَحْكُمُ عَلَى شَعْبِ ٱلْأَرْضِ. | ٢١ 21 |
ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.
وَبَقِيَّةُ أُمُورِ عُزِّيَّا ٱلْأُولَى وَٱلْأَخِيرَةُ كَتَبَهَا إِشَعْيَاءُ بْنُ آمُوصَ ٱلنَّبِيُّ. | ٢٢ 22 |
ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.
ثُمَّ ٱضْطَجَعَ عُزِّيَّا مَعَ آبَائِهِ وَدَفَنُوهُ مَعَ آبَائِهِ فِي حَقْلِ ٱلْمِقْبَرَةِ ٱلَّتِي لِلْمُلُوكِ، لِأَنَّهُمْ قَالُوا إِنَّهُ أَبْرَصُ. وَمَلَكَ يُوثَامُ ٱبْنُهُ عِوَضًا عَنْهُ. | ٢٣ 23 |
ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.