< اَلْمُلُوكِ ٱلثَّانِي 9 >
وَدَعَا أَلِيشَعُ ٱلنَّبِيُّ وَاحِدًا مِنْ بَنِي ٱلْأَنْبِيَاءِ وَقَالَ لَهُ: «شُدَّ حَقَوَيْكَ وَخُذْ قِنِّينَةَ ٱلدُّهْنِ هَذِهِ بِيَدِكَ، وَٱذْهَبْ إِلَى رَامُوتِ جِلْعَادَ. | ١ 1 |
೧ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
وَإِذَا وَصَلْتَ إِلَى هُنَاكَ فَٱنْظُرْ هُنَاكَ يَاهُوَ بْنَ يَهُوشَافَاطَ بْنَ نِمْشِي، وَٱدْخُلْ وَأَقِمْهُ مِنْ وَسْطِ إِخْوَتِهِ، وَٱدْخُلْ بِهِ إِلَى مُخْدَعٍ دَاخِلَ مُخْدَعٍ. | ٢ 2 |
೨ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
ثُمَّ خُذْ قِنِّينَةَ ٱلدُّهْنِ وَصُبَّ عَلَى رَأْسِهِ وَقُلْ: هَكَذَا قَالَ ٱلرَّبُّ: قَدْ مَسَحْتُكَ مَلِكًا عَلَى إِسْرَائِيلَ. ثُمَّ ٱفْتَحِ ٱلْبَابَ وَٱهْرُبْ وَلَا تَنْتَظِرْ». | ٣ 3 |
೩ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.
فَٱنْطَلَقَ ٱلْغُلَامُ، أَيِ ٱلْغُلَامُ ٱلنَّبِيُّ إِلَى رَامُوتِ جِلْعَادَ | ٤ 4 |
೪ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
وَدَخَلَ وَإِذَا قُوَّادُ ٱلْجَيْشِ جُلُوسٌ. فَقَالَ: «لِي كَلَامٌ مَعَكَ يَا قَائِدُ». فَقَالَ يَاهُو: «مَعَ مَنْ مِنَّا كُلِّنَا؟». فَقَالَ: «مَعَكَ أَيُّهَا ٱلْقَائِدُ». | ٥ 5 |
೫ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
فَقَامَ وَدَخَلَ ٱلْبَيْتَ، فَصَبَّ ٱلدُّهْنَ عَلَى رَأْسِهِ وَقَالَ لَهُ: «هَكَذَا قَالَ ٱلرَّبُّ إِلَهُ إِسْرَائِيلَ: قَدْ مَسَحْتُكَ مَلِكًا عَلَى شَعْبِ ٱلرَّبِّ إِسْرَائِيلَ، | ٦ 6 |
೬ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
فَتَضْرِبُ بَيْتَ أَخْآبَ سَيِّدِكَ. وَأَنْتَقِمُ لِدِمَاءِ عَبِيدِيَ ٱلْأَنْبِيَاءِ، وَدِمَاءِ جَمِيعِ عَبِيدِ ٱلرَّبِّ مِنْ يَدِ إِيزَابَلَ. | ٧ 7 |
೭ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
فَيَبِيدُ كُلُّ بَيْتِ أَخْآبَ، وَأَسْتَأْصِلُ لِأَخْآبَ كُلَّ بَائِلٍ بِحَائِطٍ وَمَحْجُوزٍ وَمُطْلَقٍ فِي إِسْرَائِيلَ. | ٨ 8 |
೮ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
وَأَجْعَلُ بَيْتَ أَخْآبَ كَبَيْتِ يَرُبْعَامَ بْنِ نَبَاطَ، وَكَبَيْتِ بَعْشَا بْنِ أَخِيَّا. | ٩ 9 |
೯ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
وَتَأْكُلُ ٱلْكِلَابُ إِيزَابَلَ فِي حَقْلِ يَزْرَعِيلَ وَلَيْسَ مَنْ يَدْفِنُهَا». ثُمَّ فَتَحَ ٱلْبَابَ وَهَرَبَ. | ١٠ 10 |
೧೦ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.
وَأَمَّا يَاهُو فَخَرَجَ إِلَى عَبِيدِ سَيِّدِهِ، فَقِيلَ لَهُ: «أَسَلَامٌ؟ لِمَاذَا جَاءَ هَذَا ٱلْمَجْنُونُ إِلَيْكَ؟» فَقَالَ لَهُمْ: «أَنْتُمْ تَعْرِفُونَ ٱلرَّجُلَ وَكَلَامَهُ». | ١١ 11 |
೧೧ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
فَقَالُوا: «كَذِبٌ. فَأَخْبِرْنَا». فَقَالَ: «بِكَذَا وَكَذَا كَلَّمَنِي قَائِلًا: هَكَذَا قَالَ ٱلرَّبُّ: قَدْ مَسَحْتُكَ مَلِكًا عَلَى إِسْرَائِيلَ». | ١٢ 12 |
೧೨ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
فَبَادَرَ كُلُّ وَاحِدٍ وَأَخَذَ ثَوْبَهُ وَوَضَعَهُ تَحْتَهُ عَلَى ٱلدَّرَجِ نَفْسِهِ، وَضَرَبُوا بِٱلْبُوقِ وَقَالُوا: «قَدْ مَلَكَ يَاهُو». | ١٣ 13 |
೧೩ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.
وَعَصَى يَاهُو بْنُ يَهُوشَافَاطَ بْنِ نِمْشِي عَلَى يُورَامَ. وَكَانَ يُورَامُ يُحَافِظُ عَلَى رَامُوتِ جِلْعَادَ هُوَ وَكُلُّ إِسْرَائِيلَ مِنْ حَزَائِيلَ مَلِكِ أَرَامَ. | ١٤ 14 |
೧೪ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
وَرَجَعَ يَهُورَامُ ٱلْمَلِكُ لِكَيْ يَبْرَأَ فِي يَزْرَعِيلَ مِنَ ٱلْجُرُوحِ ٱلَّتِي ضَرَبَهُ بِهَا ٱلْأَرَامِيُّونَ حِينَ قَاتَلَ حَزَائِيلَ مَلِكَ أَرَامَ. فَقَالَ يَاهُو: «إِنْ كَانَ فِي أَنْفُسِكُمْ، لَا يَخْرُجْ مُنْهَزِمٌ مِنَ ٱلْمَدِينَةِ لِكَيْ يَنْطَلِقَ فَيُخْبِرَ فِي يَزْرَعِيلَ». | ١٥ 15 |
೧೫ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು.
وَرَكِبَ يَاهُو وَذَهَبَ إِلَى يَزْرَعِيلَ، لِأَنَّ يُورَامَ كَانَ مُضْطَجِعًا هُنَاكَ. وَنَزَلَ أَخَزْيَا مَلِكُ يَهُوذَا لِيَرَى يُورَامَ. | ١٦ 16 |
೧೬ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
وَكَانَ ٱلرَّقِيبُ وَاقِفًا عَلَى ٱلْبُرْجِ فِي يَزْرَعِيلَ، فَرَأَى جَمَاعَةَ يَاهُو عِنْدَ إِقْبَالِهِ، فَقَالَ: «إِنِّي أَرَى جَمَاعَةً». فَقَالَ يَهُورَامُ: «خُذْ فَارِسًا وَأَرْسِلْهُ لِلِقَائِهِمْ، فَيَقُولَ: أَسَلَامٌ؟» | ١٧ 17 |
೧೭ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
فَذَهَبَ رَاكِبُ ٱلْفَرَسِ لِلِقَائِهِ وَقَالَ: «هَكَذَا يَقُولُ ٱلْمَلِكُ: أَسَلَامٌ؟» فَقَالَ يَاهُو: «مَا لَكَ وَلِلسَّلَامِ؟ دُرْ إِلَى وَرَائِي». فَأَخْبَرَ ٱلرَّقِيبُ قَائِلًا: «قَدْ وَصَلَ ٱلرَّسُولُ إِلَيْهِمْ وَلَمْ يَرْجِعْ». | ١٨ 18 |
೧೮ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.
فَأَرْسَلَ رَاكِبَ فَرَسٍ ثَانِيًا، فَلَمَّا وَصَلَ إِلَيْهِمْ قَالَ: «هَكَذَا يَقُولُ ٱلْمَلِكُ: أَسَلَامٌ؟» فَقَالَ يَاهُو: «مَا لَكَ وَلِلسَّلَامِ؟ دُرْ إِلَى وَرَائِي». | ١٩ 19 |
೧೯ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
فَأَخْبَرَ ٱلرَّقِيبُ قَائِلًا: «قَدْ وَصَلَ إِلَيْهِمْ وَلَمْ يَرْجِعْ. وَٱلسَّوْقُ كَسَوْقِ يَاهُوَ بْنِ نِمْشِي، لِأَنَّهُ يَسُوقُ بِجُنُونٍ». | ٢٠ 20 |
೨೦ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
فَقَالَ يَهُورَامُ: «ٱشْدُدْ». فَشُدَّتْ مَرْكَبَتُهُ، وَخَرَجَ يَهُورَامُ مَلِكُ إِسْرَائِيلَ وَأَخَزْيَا مَلِكُ يَهُوذَا، كُلُّ وَاحِدٍ فِي مَرْكَبَتِهِ، خَرَجَا لِلِقَاءِ يَاهُو. فَصَادَفَاهُ عِنْدَ حَقْلَةِ نَابُوتَ ٱلْيَزْرَعِيلِيِّ. | ٢١ 21 |
೨೧ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
فَلَمَّا رَأَى يَهُورَامُ يَاهُوَ قَالَ: «أَسَلَامٌ يَا يَاهُو؟» فَقَالَ: «أَيُّ سَلَامٍ مَا دَامَ زِنَى إِيزَابَلَ أُمِّكَ وَسِحْرُهَا ٱلْكَثِيرُ؟» | ٢٢ 22 |
೨೨ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
فَرَدَّ يَهُورَامُ يَدَيْهِ وَهَرَبَ، وَقَالَ لِأَخَزْيَا: «خِيَانَةً يَا أَخَزْيَا!» | ٢٣ 23 |
೨೩ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
فَقَبَضَ يَاهُو بِيَدِهِ عَلَى ٱلْقَوْسِ وَضَرَبَ يَهُورَامَ بَيْنَ ذِرَاعَيْهِ، فَخَرَجَ ٱلسَّهْمُ مِنْ قَلْبِهِ فَسَقَطَ فِي مَرْكَبَتِهِ. | ٢٤ 24 |
೨೪ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.
وَقَالَ لِبِدْقَرَ ثَالِثِهِ: «ٱرْفَعْهُ وَأَلْقِهِ فِي حِصَّةِ حَقْلِ نَابُوتَ ٱلْيَزْرَعِيلِيِّ. وَٱذْكُرْ كَيْفَ إِذْ رَكِبْتُ أَنَا وَإِيَّاكَ مَعًا وَرَاءَ أَخْآبَ أَبِيهِ، جَعَلَ ٱلرَّبُّ عَلَيْهِ هَذَا ٱلْحِمْلَ. | ٢٥ 25 |
೨೫ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
أَلَمْ أَرَ أَمْسًا دَمَ نَابُوتَ وَدِمَاءَ بَنِيهِ يَقُولُ ٱلرَّبُّ، فَأُجَازِيكَ فِي هَذِهِ ٱلْحَقْلَةِ يَقُولُ ٱلرَّبُّ. فَٱلْآنَ ٱرْفَعْهُ وَأَلْقِهِ فِي ٱلْحَقْلَةِ حَسَبَ قَوْلِ ٱلرَّبِّ». | ٢٦ 26 |
೨೬ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.
وَلَمَّا رَأَى ذَلِكَ أَخَزْيَا مَلِكُ يَهُوذَا هَرَبَ فِي طَرِيقِ بَيْتِ ٱلْبُسْتَانِ، فَطَارَدَهُ يَاهُو وَقَالَ: «ٱضْرِبُوهُ». فَضَرَبُوهُ أَيْضًا فِي ٱلْمَرْكَبَةِ فِي عَقَبَةِ جُورَ ٱلَّتِي عِنْدَ يِبْلَعَامَ. فَهَرَبَ إِلَى مَجِدُّو وَمَاتَ هُنَاكَ. | ٢٧ 27 |
೨೭ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
فَأَرْكَبَهُ عَبِيدُهُ إِلَى أُورُشَلِيمَ وَدَفَنُوهُ فِي قَبْرِهِ مَعَ آبَائِهِ فِي مَدِينَةِ دَاوُدَ. | ٢٨ 28 |
೨೮ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
فِي ٱلسَّنَةِ ٱلْحَادِيَةَ عَشْرَةَ لِيُورَامَ بْنِ أَخْآبَ، مَلَكَ أَخَزْيَا عَلَى يَهُوذَا. | ٢٩ 29 |
೨೯ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.
فَجَاءَ يَاهُو إِلَى يَزْرَعِيلَ. وَلَمَّا سَمِعَتْ إِيزَابَلُ كَحَّلَتْ بِٱلْأُثْمُدِ عَيْنَيْهَا، وَزَيَّنَتْ رَأْسَهَا وَتَطَلَّعَتْ مِنْ كَوَّةٍ. | ٣٠ 30 |
೩೦ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.
وَعِنْدَ دُخُولِ يَاهُو ٱلْبَابَ قَالَتْ: «أَسَلَامٌ لِزِمْرِي قَاتِلِ سَيِّدِهِ؟» | ٣١ 31 |
೩೧ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
فَرَفَعَ وَجْهَهُ نَحْوَ ٱلْكَوَّةِ وَقَالَ: «مَنْ مَعِي؟ مَنْ؟» فَأَشْرَفَ عَلَيْهِ ٱثْنَانِ أَوْ ثَلَاثَةٌ مِنَ ٱلْخِصْيَانِ. | ٣٢ 32 |
೩೨ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.
فَقَالَ: «ٱطْرَحُوهَا». فَطَرَحُوهَا، فَسَالَ مِنْ دَمِهَا عَلَى ٱلْحَائِطِ وَعَلَى ٱلْخَيْلِ فَدَاسَهَا. | ٣٣ 33 |
೩೩ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
وَدَخَلَ وَأَكَلَ وَشَرِبَ ثُمَّ قَالَ: «ٱفْتَقِدُوا هَذِهِ ٱلْمَلْعُونَةَ وَٱدْفِنُوهَا، لِأَنَّهَا بِنْتُ مَلِكٍ». | ٣٤ 34 |
೩೪ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
وَلَمَّا مَضَوْا لِيَدْفِنُوهَا، لَمْ يَجِدُوا مِنْهَا إِلَّا ٱلْجُمْجُمَةَ وَٱلرِّجْلَيْنِ وَكَفَّيِ ٱلْيَدَيْنِ. | ٣٥ 35 |
೩೫ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
فَرَجَعُوا وَأَخْبَرُوهُ، فَقَالَ: «إِنَّهُ كَلَامُ ٱلرَّبِّ ٱلَّذِي تَكَلَّمَ بِهِ عَنْ يَدِ عَبْدِهِ إِيلِيَّا ٱلتِّشْبِيِّ قَائِلًا: فِي حَقْلِ يَزْرَعِيلَ تَأْكُلُ ٱلْكِلَابُ لَحْمَ إِيزَابَلَ. | ٣٦ 36 |
೩೬ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
وَتَكُونُ جُثَّةُ إِيزَابَلَ كَدِمْنَةٍ عَلَى وَجْهِ ٱلْحَقْلِ فِي قِسْمِ يَزْرَعِيلَ حَتَّى لَا يَقُولُوا: هَذِهِ إِيزَابَلُ». | ٣٧ 37 |
೩೭ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.