< أَسْتِير 5 >
وَفِي ٱلْيَوْمِ ٱلثَّالِثِ لَبِسَتْ أَسْتِيرُ ثِيَابًا مَلَكِيَّةً وَوَقَفَتْ فِي دَارِ بَيْتِ ٱلْمَلِكِ ٱلدَّاخِلِيَّةِ مُقَابِلَ بَيْتِ ٱلْمَلِكِ، وَٱلْمَلِكُ جَالِسٌ عَلَى كُرْسِيِّ مُلْكِهِ فِي بَيْتِ ٱلْمُلْكِ مُقَابِلَ مَدْخَلِ ٱلْبَيْتِ. | ١ 1 |
೧ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
فَلَمَّا رَأَى ٱلْمَلِكُ أَسْتِيرَ ٱلْمَلِكَةَ وَاقِفَةً فِي ٱلدَّارِ نَالَتْ نِعْمَةً فِي عَيْنَيْهِ، فَمَدَّ ٱلْمَلِكُ لِأَسْتِيرَ قَضِيبَ ٱلذَّهَبِ ٱلَّذِي بِيَدِهِ، فَدَنَتْ أَسْتِيرُ وَلَمَسَتْ رَأْسَ ٱلْقَضِيبِ. | ٢ 2 |
೨ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
فَقَالَ لَهَا ٱلْمَلِكُ: «مَا لَكِ يَا أَسْتِيرُ ٱلْمَلِكَةُ؟ وَمَا هِيَ طِلْبَتُكِ؟ إِلَى نِصْفِ ٱلْمَمْلَكَةِ تُعْطَى لَكِ». | ٣ 3 |
೩ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
فَقَالَتْ أَسْتِيرُ: «إِنْ حَسُنَ عِنْدَ ٱلْمَلِكِ فَلْيَأْتِ ٱلْمَلِكُ وَهَامَانُ ٱلْيَوْمَ إِلَى ٱلْوَلِيمَةِ ٱلَّتِي عَمِلْتُهَا لَهُ». | ٤ 4 |
೪ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.
فَقَالَ ٱلْمَلِكُ: «أَسْرِعُوا بِهَامَانَ لِيُفْعَلَ كَلَامُ أَسْتِيرَ». فَأَتَى ٱلْمَلِكُ وَهَامَانُ إِلَى ٱلْوَلِيمَةِ ٱلَّتِي عَمِلَتْهَا أَسْتِيرُ. | ٥ 5 |
೫ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.
فَقَالَ ٱلْمَلِكُ لِأَسْتِيرَ عِنْدَ شُرْبِ ٱلْخَمْرِ: «مَا هُوَ سُؤْلُكِ فَيُعْطَى لَكِ؟ وَمَا هِيَ طِلْبَتُكِ؟ إِلَى نِصْفِ ٱلْمَمْلَكَةِ تُقْضَى». | ٦ 6 |
೬ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
فَأَجَابَتْ أَسْتِيرُ وَقَالتْ: «إِنَّ سُؤْلِي وَطِلْبَتِي، | ٧ 7 |
೭ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
إِنْ وَجَدْتُ نِعْمَةً فِي عَيْنَيِ ٱلْمَلِكِ، وَإِذَا حَسُنَ عِنْدَ ٱلْمَلِكِ أَنْ يُعْطَى سُؤْلِي وَتُقْضَى طِلْبَتِي، أَنْ يَأْتِيَ ٱلْمَلِكُ وَهَامَانُ إِلَى ٱلْوَلِيمَةِ ٱلَّتِي أَعْمَلُهَا لَهُمَا، وَغَدًا أَفْعَلُ حَسَبَ أَمْرِ ٱلْمَلِكِ». | ٨ 8 |
೮ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
فَخَرَجَ هَامَانُ فِي ذَلِكَ ٱلْيَوْمِ فَرِحًا وَطَيِّبَ ٱلْقَلْبِ. وَلَكِنْ لَمَّا رَأَى هَامَانُ مُرْدَخَايَ فِي بَابِ ٱلْمَلِكِ وَلَمْ يَقُمْ وَلَا تَحَرَّكَ لَهُ، ٱمْتَلَأَ هَامَانُ غَيْظًا عَلَى مُرْدَخَايَ. | ٩ 9 |
೯ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
وَتَجَلَّدَ هَامَانُ وَدَخَلَ بَيْتَهُ وَأَرْسَلَ فَٱسْتَحْضَرَ أَحِبَّاءَهُ وَزَرَشَ زَوْجَتَهُ، | ١٠ 10 |
೧೦ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.
وَعَدَّدَ لَهُمْ هَامَانُ عَظَمَةَ غِنَاهُ وَكَثْرَةَ بَنِيهِ، وَكُلَّ مَا عَظَّمَهُ ٱلْمَلِكُ بِهِ وَرَقَّاهُ عَلَى ٱلرُّؤَسَاءِ وَعَبِيدِ ٱلْمَلِكِ. | ١١ 11 |
೧೧ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
وَقَالَ هَامَانُ: «حَتَّى إِنَّ أَسْتِيرَ ٱلْمَلِكَةَ لَمْ تُدْخِلْ مَعَ ٱلْمَلِكِ إِلَى ٱلْوَلِيمَةِ ٱلَّتِي عَمِلَتْهَا إِلَّا إِيَّايَ. وَأَنَا غَدًا أَيْضًا مَدْعُوٌّ إِلَيْهَا مَعَ ٱلْمَلِكِ. | ١٢ 12 |
೧೨“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
وَكُلُّ هَذَا لَا يُسَاوِي عِنْدِي شَيْئًا كُلَّمَا أَرَى مُرْدَخَايَ ٱلْيَهُودِيَّ جَالِسًا فِي بَابِ ٱلْمَلِكِ». | ١٣ 13 |
೧೩ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
فَقَالَتْ لَهُ زَرَشُ زَوْجَتُهُ وَكُلُّ أَحِبَّائِهِ: «فَلْيَعْمَلُوا خَشَبَةً ٱرْتِفَاعُهَا خَمْسُونَ ذِرَاعًا، وَفِي ٱلصَّبَاحِ قُلْ لِلْمَلِكِ أَنْ يَصْلِبُوا مُرْدَخَايَ عَلَيْهَا، ثُمَّ ٱدْخُلْ مَعَ ٱلْمَلِكِ إِلَى ٱلْوَلِيمَةِ فَرِحًا». فَحَسُنَ ٱلْكَلَامُ عِنْدَ هَامَانَ وَعَمِلَ ٱلْخَشَبَةَ. | ١٤ 14 |
೧೪ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.