< أَسْتِير 5 >
وَفِي ٱلْيَوْمِ ٱلثَّالِثِ لَبِسَتْ أَسْتِيرُ ثِيَابًا مَلَكِيَّةً وَوَقَفَتْ فِي دَارِ بَيْتِ ٱلْمَلِكِ ٱلدَّاخِلِيَّةِ مُقَابِلَ بَيْتِ ٱلْمَلِكِ، وَٱلْمَلِكُ جَالِسٌ عَلَى كُرْسِيِّ مُلْكِهِ فِي بَيْتِ ٱلْمُلْكِ مُقَابِلَ مَدْخَلِ ٱلْبَيْتِ. | ١ 1 |
ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
فَلَمَّا رَأَى ٱلْمَلِكُ أَسْتِيرَ ٱلْمَلِكَةَ وَاقِفَةً فِي ٱلدَّارِ نَالَتْ نِعْمَةً فِي عَيْنَيْهِ، فَمَدَّ ٱلْمَلِكُ لِأَسْتِيرَ قَضِيبَ ٱلذَّهَبِ ٱلَّذِي بِيَدِهِ، فَدَنَتْ أَسْتِيرُ وَلَمَسَتْ رَأْسَ ٱلْقَضِيبِ. | ٢ 2 |
ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.
فَقَالَ لَهَا ٱلْمَلِكُ: «مَا لَكِ يَا أَسْتِيرُ ٱلْمَلِكَةُ؟ وَمَا هِيَ طِلْبَتُكِ؟ إِلَى نِصْفِ ٱلْمَمْلَكَةِ تُعْطَى لَكِ». | ٣ 3 |
ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
فَقَالَتْ أَسْتِيرُ: «إِنْ حَسُنَ عِنْدَ ٱلْمَلِكِ فَلْيَأْتِ ٱلْمَلِكُ وَهَامَانُ ٱلْيَوْمَ إِلَى ٱلْوَلِيمَةِ ٱلَّتِي عَمِلْتُهَا لَهُ». | ٤ 4 |
ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.
فَقَالَ ٱلْمَلِكُ: «أَسْرِعُوا بِهَامَانَ لِيُفْعَلَ كَلَامُ أَسْتِيرَ». فَأَتَى ٱلْمَلِكُ وَهَامَانُ إِلَى ٱلْوَلِيمَةِ ٱلَّتِي عَمِلَتْهَا أَسْتِيرُ. | ٥ 5 |
ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
فَقَالَ ٱلْمَلِكُ لِأَسْتِيرَ عِنْدَ شُرْبِ ٱلْخَمْرِ: «مَا هُوَ سُؤْلُكِ فَيُعْطَى لَكِ؟ وَمَا هِيَ طِلْبَتُكِ؟ إِلَى نِصْفِ ٱلْمَمْلَكَةِ تُقْضَى». | ٦ 6 |
ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
فَأَجَابَتْ أَسْتِيرُ وَقَالتْ: «إِنَّ سُؤْلِي وَطِلْبَتِي، | ٧ 7 |
ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ:
إِنْ وَجَدْتُ نِعْمَةً فِي عَيْنَيِ ٱلْمَلِكِ، وَإِذَا حَسُنَ عِنْدَ ٱلْمَلِكِ أَنْ يُعْطَى سُؤْلِي وَتُقْضَى طِلْبَتِي، أَنْ يَأْتِيَ ٱلْمَلِكُ وَهَامَانُ إِلَى ٱلْوَلِيمَةِ ٱلَّتِي أَعْمَلُهَا لَهُمَا، وَغَدًا أَفْعَلُ حَسَبَ أَمْرِ ٱلْمَلِكِ». | ٨ 8 |
ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.
فَخَرَجَ هَامَانُ فِي ذَلِكَ ٱلْيَوْمِ فَرِحًا وَطَيِّبَ ٱلْقَلْبِ. وَلَكِنْ لَمَّا رَأَى هَامَانُ مُرْدَخَايَ فِي بَابِ ٱلْمَلِكِ وَلَمْ يَقُمْ وَلَا تَحَرَّكَ لَهُ، ٱمْتَلَأَ هَامَانُ غَيْظًا عَلَى مُرْدَخَايَ. | ٩ 9 |
ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.
وَتَجَلَّدَ هَامَانُ وَدَخَلَ بَيْتَهُ وَأَرْسَلَ فَٱسْتَحْضَرَ أَحِبَّاءَهُ وَزَرَشَ زَوْجَتَهُ، | ١٠ 10 |
ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು. ಅವನು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಯಿಸಿದನು.
وَعَدَّدَ لَهُمْ هَامَانُ عَظَمَةَ غِنَاهُ وَكَثْرَةَ بَنِيهِ، وَكُلَّ مَا عَظَّمَهُ ٱلْمَلِكُ بِهِ وَرَقَّاهُ عَلَى ٱلرُّؤَسَاءِ وَعَبِيدِ ٱلْمَلِكِ. | ١١ 11 |
ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.
وَقَالَ هَامَانُ: «حَتَّى إِنَّ أَسْتِيرَ ٱلْمَلِكَةَ لَمْ تُدْخِلْ مَعَ ٱلْمَلِكِ إِلَى ٱلْوَلِيمَةِ ٱلَّتِي عَمِلَتْهَا إِلَّا إِيَّايَ. وَأَنَا غَدًا أَيْضًا مَدْعُوٌّ إِلَيْهَا مَعَ ٱلْمَلِكِ. | ١٢ 12 |
ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.
وَكُلُّ هَذَا لَا يُسَاوِي عِنْدِي شَيْئًا كُلَّمَا أَرَى مُرْدَخَايَ ٱلْيَهُودِيَّ جَالِسًا فِي بَابِ ٱلْمَلِكِ». | ١٣ 13 |
ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.
فَقَالَتْ لَهُ زَرَشُ زَوْجَتُهُ وَكُلُّ أَحِبَّائِهِ: «فَلْيَعْمَلُوا خَشَبَةً ٱرْتِفَاعُهَا خَمْسُونَ ذِرَاعًا، وَفِي ٱلصَّبَاحِ قُلْ لِلْمَلِكِ أَنْ يَصْلِبُوا مُرْدَخَايَ عَلَيْهَا، ثُمَّ ٱدْخُلْ مَعَ ٱلْمَلِكِ إِلَى ٱلْوَلِيمَةِ فَرِحًا». فَحَسُنَ ٱلْكَلَامُ عِنْدَ هَامَانَ وَعَمِلَ ٱلْخَشَبَةَ. | ١٤ 14 |
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.