< حِزْقِيَال 23 >
وَكَانَ إِلَيَّ كَلَامُ ٱلرَّبِّ قَائِلًا: | ١ 1 |
೧ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
«يَاٱبْنَ آدَمَ، كَانَ ٱمْرَأَتَانِ ٱبْنَتَا أُمٍّ وَاحِدَةٍ، | ٢ 2 |
೨“ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.
وَزَنَتَا بِمِصْرَ. فِي صِبَاهُمَا زَنَتَا. هُنَاكَ دُغْدِغَتْ ثُدِيُّهُمَا، وَهُنَاكَ تَزَغْزَغَتْ تَرَائِبُ عُذْرَتِهِمَا. | ٣ 3 |
೩ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.
وَٱسْمُهُمَا: أُهُولَةُ ٱلْكَبِيرَةُ، وَأُهُولِيبَةُ أُخْتُهَا. وَكَانَتَا لِي، وَوَلَدَتَا بَنِينَ وَبَنَاتٍ. وَٱسْمَاهُمَا: ٱلسَّامِرَةُ «أُهُولَةُ»، وَأُورُشَلِيمُ «أُهُولِيبَةُ». | ٤ 4 |
೪ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
وَزَنَتْ أُهُولَةُ مِنْ تَحْتِي وَعَشِقَتْ مُحِبِّيهَا، أَشُّورَ ٱلْأَبْطَالَ | ٥ 5 |
೫“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,
ٱللَّابِسِينَ ٱلْأَسْمَانْجُونِيَّ وُلَاةً وَشِحَنًا، كُلُّهُمْ شُبَّانُ شَهْوَةٍ، فُرْسَانٌ رَاكِبُونَ ٱلْخَيْلَ. | ٦ 6 |
೬ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
فَدَفَعَتْ لَهُمْ عُقْرَهَا لِمُخْتَارِي بَنِي أَشُّورَ كُلِّهِمْ، وَتَنَجَّسَتْ بِكُلِّ مَنْ عَشِقَتْهُمْ بِكُلِّ أَصْنَامِهِمْ. | ٧ 7 |
೭ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
وَلَمْ تَتْرُكْ زِنَاهَا مِنْ مِصْرَ أَيْضًا، لِأَنَّهُمْ ضَاجَعُوهَا فِي صِبَاهَا، وَزَغْزَغُوا تَرَائِبَ عِذْرَتِهَا وَسَكَبُوا عَلَيْهَا زِنَاهُمْ. | ٨ 8 |
೮ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.
لِذَلِكَ سَلَّمْتُهَا لِيَدِ عُشَّاقِهَا، لِيَدِ بَنِي أَشُّورَ ٱلَّذِينَ عَشِقَتْهُمْ. | ٩ 9 |
೯“ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
هُمْ كَشَفُوا عَوْرَتَهَا. أَخَذُوا بَنِيهَا وَبَنَاتِهَا، وَذَبَحُوهَا بِٱلسَّيْفِ، فَصَارَتْ عِبْرَةً لِلنِّسَاءِ. وَأَجْرَوْا عَلَيْهَا حُكْمًا. | ١٠ 10 |
೧೦ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”
«فَلَمَّا رَأَتْ أُخْتُهَا أُهُولِيبَةُ ذَلِكَ أَفْسَدَتْ فِي عِشْقِهَا أَكْثَرَ مِنْهَا، وَفِي زِنَاهَا أَكْثَرَ مِنْ زِنَا أُخْتِهَا. | ١١ 11 |
೧೧“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
عَشِقَتْ بَنِي أَشُّورَ ٱلْوُلَاةَ وَٱلشِّحَنَ ٱلْأَبْطَالَ ٱللَّابِسِينَ أَفْخَرَ لِبَاسٍ، فُرْسَانًا رَاكِبِينَ ٱلْخَيْلَ كُلُّهُمْ شُبَّانُ شَهْوَةٍ. | ١٢ 12 |
೧೨ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.
فَرَأَيْتُ أَنَّهَا قَدْ تَنَجَّسَتْ، وَلِكِلْتَيْهِمَا طَرِيقٌ وَاحِدَةٌ. | ١٣ 13 |
೧೩ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.
وَزَادَتْ زِنَاهَا. وَلَمَّا نَظَرَتْ إِلَى رِجَالٍ مُصَوَّرِينَ عَلَى ٱلْحَائِطِ، صُوَرُ ٱلْكَلْدَانِيِّينَ مُصَوَّرَةٍ بِمُغْرَةٍ، | ١٤ 14 |
೧೪“ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.
مُنَطَّقِينَ بِمَنَاطِقَ عَلَى أَحْقَائِهِمْ، عَمَائِمُهُمْ مَسْدُولَةٌ عَلَى رُؤُوسِهِمْ. كُلُّهُمْ فِي ٱلْمَنْظَرِ رُؤَسَاءُ مَرْكَبَاتٍ شِبْهُ بَنِي بَابِلَ ٱلْكَلْدَانِيِّينَ أَرْضُ مِيلَادِهِمْ، | ١٥ 15 |
೧೫ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
عَشِقَتْهُمْ عِنْدَ لَمْحِ عَيْنَيْهَا إِيَّاهُمْ، وَأَرْسَلَتْ إِلَيْهِمْ رُسُلًا إِلَى أَرْضِ ٱلْكَلْدَانِيِّينَ. | ١٦ 16 |
೧೬ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.
فَأَتَاهَا بَنُو بَابِلَ فِي مَضْجَعِ ٱلْحُبِّ وَنَجَّسُوهَا بِزِنَاهُمْ، فَتَنَجَّسَتْ بِهِمْ، وجَفَتْهُمْ نَفْسُهَا. | ١٧ 17 |
೧೭ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.
وَكَشَفَتْ زِنَاهَا وَكَشَفَتْ عَوْرَتَهَا، فَجَفَتْهَا نَفْسِي، كَمَا جَفَتْ نَفْسِي أُخْتَهَا. | ١٨ 18 |
೧೮ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
وَأَكْثَرَتْ زِنَاهَا بِذِكْرِهَا أَيَّامَ صِبَاهَا ٱلَّتِي فِيهَا زَنَتْ بِأَرْضِ مِصْرَ. | ١٩ 19 |
೧೯ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು.
وَعَشِقَتْ مَعْشُوقِيهِمِ ٱلَّذِينَ لَحْمُهُمْ كَلَحْمِ ٱلْحَمِيرِ وَمَنِيُّهُمْ كَمَنِيِّ ٱلْخَيْلِ. | ٢٠ 20 |
೨೦ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.
وَٱفْتَقَدْتِ رَذِيلَةَ صِبَاكِ بِزَغْزَغَةِ ٱلْمِصْرِيِّينَ تَرَائِبَكِ لِأَجْلِ ثَدْيِ صِبَاكِ. | ٢١ 21 |
೨೧ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.”
«لِأَجْلِ ذَلِكَ يَا أُهُولِيبَةُ، هَكَذَا قَالَ ٱلسَّيِّدُ ٱلرَّبُّ: هَأَنَذَا أُهَيِّجُ عَلَيْكِ عُشَّاقَكِ ٱلَّذِينَ جَفَتْهُمْ نَفْسُكِ، وَآتِي بِهِمْ عَلَيْكِ مِنْ كُلِّ جِهَةٍ: | ٢٢ 22 |
೨೨ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
بَنِي بَابِلَ وَكُلَّ ٱلْكَلْدَانِيِّينَ، فَقُودَ وَشُوعَ وَقُوعَ، وَمَعَهُمْ كُلُّ بَنِي أَشُّورَ، شُبَّانُ شَهْوَةٍ، وُلَاةٌ وَشِحَنٌ كُلُّهُمْ رُؤَسَاءُ مَرْكَبَاتٍ وَشُهَرَاءُ. كُلُّهُمْ رَاكِبُونَ ٱلْخَيْلَ. | ٢٣ 23 |
೨೩ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
فَيَأْتُونَ عَلَيْكِ بِأَسْلِحَةٍ مَرْكَبَاتٍ وَعَجَلَاتٍ، وَبِجَمَاعَةِ شُعُوبٍ يُقِيمُونَ عَلَيْكِ ٱلتُّرْسَ وَٱلْمِجَنَّ وَٱلْخُوذَةَ مِنْ حَوْلِكِ، وَأُسَلِّمُ لَهُمُ ٱلْحُكْمَ فَيَحْكُمُونَ عَلَيْكِ بِأَحْكَامِهِمْ. | ٢٤ 24 |
೨೪ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
وَأَجْعَلُ غَيْرَتِي عَلَيْكِ فَيُعَامِلُونَكِ بِٱلسَّخَطِ. يَقْطَعُونَ أَنْفَكِ وَأُذُنَيْكِ، وَبَقِيَّتُكِ تَسْقُطُ بِٱلسَّيْفِ. يَأْخُذُونَ بَنِيكِ وَبَنَاتِكِ، وَتُؤْكَلُ بَقِيَّتُكِ بِٱلنَّارِ. | ٢٥ 25 |
೨೫ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.
وَيَنْزِعُونَ عَنْكِ ثِيَابَكِ، وَيَأْخُذُونَ أَدَوَاتِ زِينَتِكِ. | ٢٦ 26 |
೨೬ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
وَأُبَطِّلُ رَذِيلَتَكِ عَنْكِ وَزِنَاكِ مِنْ أَرْضِ مِصْرَ، فَلَا تَرْفَعِينَ عَيْنَيْكِ إِلَيْهِمْ وَلَا تَذْكُرِينَ مِصْرَ بَعْدُ. | ٢٧ 27 |
೨೭ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”
لِأَنَّهُ هَكَذَا قَالَ ٱلسَّيِّدُ ٱلرَّبُّ: هَأَنَذَا أُسَلِّمُكِ لِيَدِ ٱلَّذِينَ أَبْغَضْتِهِمْ، لِيَدِ ٱلَّذِينَ جَفَتْهُمْ نَفْسُكِ. | ٢٨ 28 |
೨೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
فَيُعَامِلُونَكِ بِٱلْبُغْضَاءِ وَيَأْخُذُونَ كُلَّ تَعَبِكِ، وَيَتْرُكُونَكِ عُرْيَانَةً وَعَارِيَةً، فَتَنْكَشِفُ عَوْرَةُ زِنَاكِ وَرَذِيلَتُكِ وَزِنَاكِ. | ٢٩ 29 |
೨೯ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
أَفْعَلُ بِكِ هَذَا لِأَنَّكِ زَنَيْتِ وَرَاءَ ٱلْأُمَمِ، لِأَنَّكِ تَنَجَّسْتِ بِأَصْنَامِهِمْ. | ٣٠ 30 |
೩೦“ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.
فِي طَرِيقِ أُخْتِكِ سَلَكْتِ فَأَدْفَعُ كَأْسَهَا لِيَدِكِ. | ٣١ 31 |
೩೧ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”
هَكَذَا قَالَ ٱلسَّيِّدُ ٱلرَّبُّ: إِنَّكِ تَشْرَبِينَ كَأْسَ أُخْتِكِ ٱلْعَمِيقَةَ ٱلْكَبِيرَةَ. تَكُونِينَ لِلضَّحِكِ وَلِلِٱسْتِهْزَاءِ. تَسَعُ كَثِيرًا. | ٣٢ 32 |
೩೨ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
تَمْتَلِئِينَ سُكْرًا وَحُزْنًا، كَأْسَ ٱلتَّحَيُّرِ وَٱلْخَرَابِ، كَأْسَ أُخْتِكِ ٱلسَّامِرَةِ. | ٣٣ 33 |
೩೩ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.
فَتَشْرَبِينَهَا وَتَمْتَصِّينَهَا وَتَقْضَمِينَ شُقَفَهَا وَتَجْتَثِّينَ ثَدْيَيْكِ، لِأَنِّي تَكَلَّمْتُ، يَقُولُ ٱلسَّيِّدُ ٱلرَّبُّ. | ٣٤ 34 |
೩೪“ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ.
لِذَلِكَ هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّكِ نَسِيتِنِي وَطَرَحْتِنِي وَرَاءَ ظَهْرِكِ، فَتَحْمِلِي أَيْضًا رَذِيلَتَكِ وَزِنَاكِ». | ٣٥ 35 |
೩೫ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”
وَقَالَ ٱلرَّبُّ لِي: «يَا ٱبْنَ آدَمَ، أَتَحْكُمُ عَلَى أُهُولَةَ وَأُهُولِيبَةَ؟ بَلْ أَخْبِرْهُمَا بِرَجَاسَاتِهِمَا، | ٣٦ 36 |
೩೬ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
لِأَنَّهُمَا قَدْ زَنَتَا وَفِي أَيْدِيهِمَا دَمٌ، وَزَنَتَا بِأَصْنَامِهِمَا وَأَيْضًا أَجَازَتَا بَنِيهِمَا ٱلَّذِينَ وَلَدَتَاهُمْ لِي ٱلنَّارَ أَكْلًا لَهَا. | ٣٧ 37 |
೩೭ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.
وَفَعَلَتَا أَيْضًا بِي هَذَا: نَجَّسَتَا مَقْدِسِي فِي ذَلِكَ ٱلْيَوْمِ وَدَنَّسَتَا سُبُوتِي. | ٣٨ 38 |
೩೮ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.
وَلَمَّا ذَبَحَتَا بَنِيهِمَا لِأَصْنَامِهِمَا، أَتَتَا فِي ذَلِكَ ٱلْيَوْمِ إِلَى مَقْدِسِي لِتُنَجِّسَاهُ. فَهُوَذَا هَكَذَا فَعَلَتَا فِي وَسْطِ بَيْتِي. | ٣٩ 39 |
೩೯ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.
بَلْ أَرْسَلْتُمَا إِلَى رِجَالٍ آتِينَ مِنْ بَعِيدٍ. ٱلَّذِينَ أُرْسِلَ إِلَيْهِمْ رَسُولٌ فَهُوَذَا جَاءُوا. هُمُ ٱلَّذِينَ لِأَجْلِهِمِ ٱسْتَحْمَمْتِ وَكَحَّلْتِ عَيْنَيْكِ وَتَحَلَّيْتِ بِٱلْحُلِيِّ، | ٤٠ 40 |
೪೦“ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
وَجَلَسْتِ عَلَى سَرِيرٍ فَاخِرٍ أَمَامَهُ مَائِدَةٌ مُنَضَّضَةٌ، وَوَضَعْتِ عَلَيْهَا بَخُورِي وَزَيْتِي. | ٤١ 41 |
೪೧ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
وَصَوْتُ جُمْهُورٍ مُتَرَفِّهِينَ مَعَهَا، مَعَ أُنَاسٍ مِنْ رَعَاعِ ٱلْخَلْقِ. أُتِيَ بِسَكَارَى مِنَ ٱلْبَرِّيَّةِ، ٱلَّذِينَ جَعَلُوا أَسْوِرَةً عَلَى أَيْدِيهِمَا وَتَاجَ جَمَالٍ عَلَى رُؤُوسِهِمَا. | ٤٢ 42 |
೪೨“ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
فَقُلْتُ عَنِ ٱلْبَالِيَةِ فِي ٱلزِّنَا: ٱلْآنَ يَزْنُونَ زِنًا مَعَهَا وَهِيَ. | ٤٣ 43 |
೪೩ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.
فَدَخَلُوا عَلَيْهَا كَمَا يُدْخَلُ عَلَى ٱمْرَأَةٍ زَانِيَةٍ. هَكَذَا دَخَلُوا عَلَى أُهُولَةَ وَعَلَى أُهُولِيبَةَ ٱلْمَرْأَتَيْنِ ٱلزَّانِيَتَيْنِ. | ٤٤ 44 |
೪೪ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.
وَٱلرِّجَالُ ٱلصِّدِّيقُونَ هُمْ يَحْكُمُونَ عَلَيْهِمَا حُكْمَ زَانِيَةٍ وَحُكْمَ سَفَّاكَةِ ٱلدَّمِ، لِأَنَّهُمَا زَانِيَتَانِ وَفِي أَيْدِيهِمَا دَمٌ. | ٤٥ 45 |
೪೫ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”
لِأَنَّهُ هَكَذَا قَالَ ٱلسَّيِّدُ ٱلرَّبُّ: إِنِّي أُصْعِدُ عَلَيْهِمَا جَمَاعَةً وَأُسَلِّمُهُمَا لِلْجَوْرِ وَٱلنَّهْبِ. | ٤٦ 46 |
೪೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
وَتَرْجُمُهُمَا ٱلْجَمَاعَةُ بِٱلْحِجَارَةِ، وَيُقَطِّعُونَهُمَا بِسُيُوفِهِمْ، وَيَذْبَحُونَ أَبْنَاءَهُمَا وَبَنَاتِهِمَا، وَيُحْرِقُونَ بُيُوتَهُمَا بِٱلنَّارِ. | ٤٧ 47 |
೪೭ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
فَأُبَطِّلُ ٱلرَّذِيلَةَ مِنَ ٱلْأَرْضِ، فَتَتَأَدَّبُ جَمِيعُ ٱلنِّسَاءِ وَلَا يَفْعَلْنَ مِثْلَ رَذِيلَتِكُمَا. | ٤٨ 48 |
೪೮“ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.
وَيَرُدُّونَ عَلَيْكُمَا رَذِيلَتَكُمَا، فَتَحْمِلَانِ خَطَايَا أَصْنَامِكُمَا، وَتَعْلَمَانِ أَنِّي أَنَا ٱلسَّيِّدُ ٱلرَّبُّ». | ٤٩ 49 |
೪೯ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.