< حِزْقِيَال 37 >
كَانَتْ عَلَيَّ يَدُ ٱلرَّبِّ، فَأَخْرَجَني بِرُوحِ ٱلرَّبِّ وَأَنْزَلَنِي فِي وَسْطِ ٱلْبُقْعَةِ وَهِيَ مَلآنَةٌ عِظَامًا، | ١ 1 |
೧ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
وَأَمَرَّنِي عَلَيْهَا مِنْ حَوْلِهَا وَإِذَا هِيَ كَثِيرَةٌ جِدًّا عَلَى وَجْهِ ٱلْبُقْعَةِ، وَإِذَا هِيَ يَابِسَةٌ جِدًّا. | ٢ 2 |
೨ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
فَقَالَ لِي: «يَا ٱبْنَ آدَمَ، أَتَحْيَا هَذِهِ ٱلْعِظَامُ؟» فَقُلْتُ: «يَا سَيِّدُ ٱلرَّبُّ أَنْتَ تَعْلَمُ». | ٣ 3 |
೩ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.
فَقَالَ لِي: «تَنَبَّأْ عَلَى هَذِهِ ٱلْعِظَامِ وَقُلْ لَهَا: أَيَّتُهَا ٱلْعِظَامُ ٱلْيَابِسَةُ، ٱسْمَعِي كَلِمَةَ ٱلرَّبِّ: | ٤ 4 |
೪ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.
هَكذَا قَالَ ٱلسَّيِّدُ ٱلرَّبُّ لِهَذِهِ ٱلْعِظَامِ: هَأَنَذَا أُدْخِلُ فِيكُمْ رُوحًا فَتَحْيَوْنَ. | ٥ 5 |
೫ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
وَأَضَعُ عَلَيْكُمْ عَصَبًا وأَكْسِيكُمْ لَحْمًا وَأَبْسُطُ عَلَيْكُمْ جِلْدًا وَأَجْعَلُ فِيكُمْ رُوحًا، فَتَحْيَوْنَ وَتَعْلَمُونَ أَنِّي أَنَا ٱلرَّبُّ». | ٦ 6 |
೬ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”
فَتَنَبَّأْتُ كمَا أُمِرتُ. وَبَيْنَمَا أَنَا أَتنَبَّأُ كَانَ صَوْتٌ، وَإِذَا رَعْشٌ، فَتَقَارَبَتِ ٱلْعِظَامُ كُلُّ عَظْمٍ إِلَى عَظْمِهِ. | ٧ 7 |
೭ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.
ونَظَرْتُ وَإِذَا بِٱلْعَصَبِ وَٱللَّحْمِ كَسَاهَا، وبُسِطَ ٱلْجِلْدُ علَيْهَا مِنْ فَوْقُ، وَلَيْسَ فِيهَا رُوحٌ. | ٨ 8 |
೮ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.
فَقَالَ لِي: «تَنَبَّأْ لِلرُّوحِ، تَنَبَّأْ يَاٱبْنَ آدَمَ، وَقُلْ لِلرُّوحِ: هَكذَا قَالَ ٱلسَّيِّدُ ٱلرَّبُّ: هَلُمَّ يَارُوحُ مِنَ ٱلرِّيَاحِ ٱلْأَرْبَعِ وَهُبَّ عَلَى هَؤُلَاءِ ٱلْقَتْلَى لِيَحْيَوْا». | ٩ 9 |
೯ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’”
فَتَنَبَّأْتُ كَمَا أَمَرَني، فَدَخَلَ فِيهِمِ ٱلرُّوحُ، فَحَيُوا وَقَامُوا عَلَى أَقدَامِهِمْ جَيْشٌ عَظيمٌ جِدًّا جِدًّا. | ١٠ 10 |
೧೦ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.
ثُمَّ قَالَ لِي: «يَا ٱبْنَ آدَمَ، هَذِهِ ٱلعِظَامُ هِيَ كُلُّ بَيتِ إِسْرَائِيلَ. هَا هُمْ يَقُولُونَ: يَبِسَتْ عِظَامُنَا وَهَلَكَ رَجَاؤُنَا. قَدِ ٱنْقَطَعْنَا. | ١١ 11 |
೧೧ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.
لِذَلِكَ تَنَبَّأْ وَقُلْ لَهُمْ: هَكذَا قَالَ ٱلسَّيِّدُ ٱلرَّبُّ: هَأَنَذَا أَفتَحُ قُبُورَكُمْ وأُصْعِدُكُمْ مِنْ قُبُورِكُمْ يَا شَعْبِي، وَآتِي بِكُمْ إِلَى أَرْضِ إِسْرَائِيلَ. | ١٢ 12 |
೧೨ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
فَتَعْلَمُونَ أَنِّي أَنَا ٱلرَّبُّ عِنْدَ فَتْحِي قُبُورَكُمْ وَإِصْعَادِي إِيَّاكُمْ مِنْ قُبُورِكُمْ يَاشَعْبِي. | ١٣ 13 |
೧೩ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
وأَجْعَلُ رُوحِي فِيكُمْ فتَحْيَوْنَ، وَأَجْعَلُكُمْ فِي أَرْضِكُمْ، فَتَعْلَمُونَ أَنِّي أنَا ٱلرَّبُّ تَكَلَّمْتُ وَأَفْعَلُ، يَقُولُ ٱلرَّبُّ». | ١٤ 14 |
೧೪ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.
وَكَانَ إِلَيَّ كَلَامُ ٱلرَّبِّ قَائِلًا: | ١٥ 15 |
೧೫ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
«وَأَنْتَ يَا ٱبْنَ آدَمَ، خُذْ لِنَفْسِكَ عَصًا وَاحِدَةً وَٱكْتُبْ عَلَيْهَا: لِيَهُوذَا وَلِبَنِي إِسْرَائِيلَ رُفَقَائِهِ. وَخُذْ عَصًا أُخْرَى وَٱكْتُبْ عَلَيْهَا: لِيُوسُفَ، عَصَا أَفْرَايِمَ وَكُلِّ بَيْتِ إِسْرَائِيلَ رُفَقَائِهِ. | ١٦ 16 |
೧೬“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
وَٱقْرِنْهُمَا ٱلْوَاحِدَةَ بِٱلْأُخْرَى كَعَصًا وَاحِدَةٍ، فَتَصِيرَا وَاحِدَةً فِي يَدِكَ. | ١٧ 17 |
೧೭ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.
فَإِذَا كَلَّمَكَ أَبْنَاءُ شَعْبِكَ قَائِلِينَ: أَمَا تُخْبِرُنَا مَا لَكَ وَهَذَا؟ | ١٨ 18 |
೧೮“ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,
فَقُلْ لَهُمْ: هَكَذَا قَالَ ٱلسَّيِّدُ ٱلرَّبُّ: هَأَنَذَا آخُذُ عَصَا يُوسُفَ ٱلَّتِي فِي يَدِ أَفْرَايِمَ وَأَسْبَاطَ إِسْرَائِيلَ رُفَقَاءَهُ، وَأَضُمُّ إِلَيْهَا عَصَا يَهُوذَا، وَأَجْعَلُهُمْ عَصًا وَاحِدَةً فَيَصِيرُونَ وَاحِدَةً فِي يَدِي. | ١٩ 19 |
೧೯ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.
وَتَكُونُ ٱلْعَصَوَانِ ٱللَّتَانِ كَتَبْتَ عَلَيْهِمَا فِي يَدِكَ أَمَامَ أَعْيُنِهِمْ. | ٢٠ 20 |
೨೦ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”
وَقُلْ لَهُمْ: هَكَذَا قَالَ ٱلسَّيِّدُ ٱلرَّبُّ: هَأَنَذَا آخُذُ بَنِي إِسْرَائِيلَ مِنْ بَيْنِ ٱلْأُمَمِ ٱلَّتِي ذَهَبُوا إِلَيْهَا، وَأَجْمَعُهُمْ مِنْ كُلِّ نَاحِيَةٍ، وَآتِي بِهِمْ إِلَى أَرْضِهِمْ، | ٢١ 21 |
೨೧ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.
وَأُصَيِّرُهُمْ أُمَّةً وَاحِدَةً فِي ٱلْأَرْضِ عَلَى جِبَالِ إِسْرَائِيلَ، وَمَلِكٌ وَاحِدٌ يَكُونُ مَلِكًا عَلَيْهِمْ كُلِّهِمْ، وَلَا يَكُونُونَ بَعْدُ أُمَّتَيْنِ، وَلَا يَنْقَسِمُونَ بَعْدُ إِلَى مَمْلَكَتَيْنِ. | ٢٢ 22 |
೨೨ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.
وَلَا يَتَنَجَّسُونَ بَعْدُ بِأَصْنَامِهِمْ وَلَا بِرَجَاسَاتِهِمْ وَلَا بِشَيْءٍ مِنْ مَعَاصِيهِمْ، بَلْ أُخَلِّصُهُمْ مِنْ كُلِّ مَسَاكِنِهِمِ ٱلَّتِي فِيهَا أَخْطَأُوا، وَأُطَهِّرُهُمْ فَيَكُونُونَ لِي شَعْبًا وَأَنَا أَكُونُ لَهُمْ إِلَهًا. | ٢٣ 23 |
೨೩ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
وَدَاوُدُ عَبْدِي يَكُونُ مَلِكًا عَلَيْهِمْ، وَيَكُونُ لِجَمِيعِهِمْ رَاعٍ وَاحِدٌ، فَيَسْلُكُونَ فِي أَحْكَامِي وَيَحْفَظُونَ فَرَائِضِي وَيَعْمَلُونَ بِهَا. | ٢٤ 24 |
೨೪“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
وَيَسْكُنُونَ فِي ٱلْأَرْضِ ٱلَّتِي أَعْطَيْتُ عَبْدِي يَعْقُوبَ إِيَّاهَا، ٱلَّتِي سَكَنَهَا آبَاؤُكُمْ، وَيَسْكُنُونَ فِيهَا هُمْ وَبَنُوهُمْ وَبَنُو بَنِيهِمْ إِلَى ٱلْأَبَدِ، وَعَبْدِي دَاوُدُ رَئِيسٌ عَلَيْهِمْ إِلَى ٱلْأَبَدِ. | ٢٥ 25 |
೨೫ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
وَأَقْطَعُ مَعَهُمْ عَهْدَ سَلَامٍ، فَيَكُونُ مَعَهُمْ عَهْدًا مُؤَبَّدًا، وَأُقِرُّهُمْ وَأُكَثِّرُهُمْ وَأَجْعَلُ مَقْدِسِي فِي وَسْطِهِمْ إِلَى ٱلْأَبَدِ. | ٢٦ 26 |
೨೬ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
وَيَكُونُ مَسْكَنِي فَوْقَهُمْ، وَأَكُونُ لَهُمْ إِلَهًا وَيَكُونُونَ لِي شَعْبًا. | ٢٧ 27 |
೨೭ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.
فَتَعْلَمُ ٱلْأُمَمُ أَنِّي أَنَا ٱلرَّبُّ مُقَدِّسُ إِسْرَائِيلَ، إِذْ يَكُونُ مَقْدِسِي فِي وَسْطِهِمْ إِلَى ٱلْأَبَدِ». | ٢٨ 28 |
೨೮ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”