< حِزْقِيَال 5 >
«وَأَنْتَ يَا ٱبْنَ آدَمَ، فَخُذْ لِنَفْسِكَ سِكِّينًا حَادًّا، مُوسَى ٱلْحَلَّاقِ تَأْخُذُ لِنَفْسِكَ، وَأَمْرِرْهَا عَلَى رَأْسِكَ وَعَلَى لِحْيَتِكَ. وَخُذْ لِنَفْسِكَ مِيزَانًا لِلْوَزْنِ وَٱقْسِمْهُ، | ١ 1 |
೧“ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.
وَأَحْرِقْ بِٱلنَّارِ ثُلُثَهُ فِي وَسْطِ ٱلْمَدِينَةِ إِذَا تَمَّتْ أَيَّامُ ٱلْحِصَارِ. وَخُذْ ثُلُثًا وَٱضْرِبْهُ بِٱلسَّيْفِ حَوَالَيْهِ، وَذَرِّ ثُلُثًا إِلَى ٱلرِّيحِ، وَأَنَا أَسْتَلُّ سَيْفًا وَرَاءَهُمْ. | ٢ 2 |
೨ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.
وَخُذْ مِنْهُ قَلِيلًا بِٱلْعَدَدِ وَصُرَّهُ فِي أَذْيَالِكَ. | ٣ 3 |
೩ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು.
وَخُذْ مِنْهُ أَيْضًا وَأَلْقِهِ فِي وَسْطِ ٱلنَّارِ، وَأَحْرِقْهُ بِٱلنَّارِ. مِنْهُ تَخْرُجُ نَارٌ عَلَى كُلِّ بَيْتِ إِسْرَائِيلَ. | ٤ 4 |
೪ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”
«هَكَذَا قَالَ ٱلسَّيِّدُ ٱلرَّبُّ: هَذِهِ أُورُشَلِيمُ. فِي وَسْطِ ٱلشُّعُوبِ قَدْ أَقَمْتُهَا وَحَوَالَيْهَا ٱلْأَرَاضِي. | ٥ 5 |
೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.
فَخَالَفَتْ أَحْكَامِي بِأَشَرَّ مِنَ ٱلْأُمَمِ، وَفَرَائِضِي بِأَشَرَّ مِنَ ٱلْأَرَاضِي ٱلَّتِي حَوَالَيْهَا، لِأَنَّ أَحْكَامِي رَفَضُوهَا وَفَرَائِضِي لَمْ يَسْلُكُوا فِيهَا. | ٦ 6 |
೬ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
لِأَجْلِ ذَلِكَ هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّكُمْ ضَجَجْتُمْ أَكْثَرَ مِنَ ٱلْأُمَمِ ٱلَّتِي حَوَالَيْكُمْ، وَلَمْ تَسْلُكُوا فِي فَرَائِضِي، وَلَمْ تَعْمَلُوا حَسَبَ أَحْكَامِي، وَلَا عَمِلْتُمْ حَسَبَ أَحْكَامِ ٱلْأُمَمِ ٱلَّتِي حَوَالَيْكُمْ، | ٧ 7 |
೭ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
لِذَلِكَ هَكَذَا قَالَ ٱلسَّيِّدُ ٱلرَّبُّ: هَا إِنِّي أَنَا أَيْضًا عَلَيْكِ، وَسَأُجْرِي فِي وَسْطِكِ أَحْكَامًا أَمَامَ عُيُونِ ٱلْأُمَمِ، | ٨ 8 |
೮ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.
وَأَفْعَلُ بِكِ مَا لَمْ أَفْعَلْ، وَمَا لَنْ أَفْعَلَ مِثْلَهُ بَعْدُ، بِسَبَبِ كُلِّ أَرْجَاسِكِ. | ٩ 9 |
೯ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
لِأَجْلِ ذَلِكَ تَأْكُلُ ٱلْآبَاءُ ٱلْأَبْنَاءَ فِي وَسْطِكِ، وَٱلْأَبْنَاءُ يَأْكُلُونَ آبَاءَهُمْ. وَأُجْرِي فِيكِ أَحْكَامًا، وَأُذَرِّي بَقِيَّتَكِ كُلَّهَا فِي كُلِّ رِيحٍ. | ١٠ 10 |
೧೦ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”
مِنْ أَجْلِ ذَلِكَ حَيٌّ أَنَا، يَقُولُ ٱلسَّيِّدُ ٱلرَّبُّ، مِنْ أَجْلِ أَنَّكِ قَدْ نَجَّسْتِ مَقْدِسِي بِكُلِّ مَكْرُهَاتِكِ وَبِكُلِّ أَرْجَاسِكِ، فَأَنَا أَيْضًا أَجُزُّ وَلَا تُشْفُقُ عَيْنِي، وَأَنَا أَيْضًا لَا أَعْفُو. | ١١ 11 |
೧೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.
ثُلُثُكِ يَمُوتُ بِٱلْوَبَإِ، وَبِالْجُوعِ يَفْنَوْنَ فِي وَسْطِكِ. وَثُلُثٌ يَسْقُطُ بِٱلسَّيْفِ مِنْ حَوْلِكِ، وَثُلُثٌ أُذَرِّيهِ فِي كُلِّ رِيحٍ، وَأَسْتَلُّ سَيْفًا وَرَاءَهُمْ. | ١٢ 12 |
೧೨ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
وَإِذَا تَمَّ غَضَبِي وَأَحْلَلْتُ سَخَطِي عَلَيْهِمْ وَتَشَفَّيْتُ، يَعْلَمُونَ أَنِّي أَنَا ٱلرَّبُّ تَكَلَّمْتُ فِي غَيْرَتِي، إِذَا أَتْمَمْتُ سَخَطِي فِيهِمْ. | ١٣ 13 |
೧೩“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
وَأَجْعَلُكِ خَرَابًا وَعَارًا بَيْنَ ٱلْأُمَمِ ٱلَّتِي حَوَالَيْكِ أَمَامَ عَيْنَيْ كُلِّ عَابِرٍ، | ١٤ 14 |
೧೪ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.
فَتَكُونِينَ عَارًا وَلَعْنَةً وَتَأْدِيبًا وَدَهَشًا لِلْأُمَمِ ٱلَّتِي حَوَالَيْكِ، إِذَا أَجْرَيْتُ فِيكِ أَحْكَامًا بِغَضَبٍ وَبِسَخَطٍ وَبِتَوْبِيخَاتٍ حَامِيَةٍ. أَنَا ٱلرَّبُّ تَكَلَّمْتُ. | ١٥ 15 |
೧೫“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
إِذَا أَرْسَلْتُ عَلَيْهِمْ سِهَامَ ٱلْجُوعِ ٱلشِّرِّيرَةَ ٱلَّتِي تَكُونُ لِلْخَرَابِ ٱلَّتِي أُرْسِلُهَا لِخَرَابِكُمْ، وَأَزِيدُ ٱلْجُوعَ عَلَيْكُمْ، وَأُكَسِّرُ لَكُمْ قِوَامَ ٱلْخُبْزِ، | ١٦ 16 |
೧೬ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
وَإِذَا أَرْسَلْتُ عَلَيْكُمُ ٱلْجُوعَ وَٱلْوُحُوشَ ٱلرَّدِيئَةَ فَتُثْكِلُكِ، وَيَعْبُرُ فِيكِ ٱلْوَبَأُ وَٱلدَّمُ، وَأَجْلُبُ عَلَيْكِ سَيْفًا. أَنَا ٱلرَّبُّ تَكَلَّمْتُ». | ١٧ 17 |
೧೭ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.