< اَلتَّكْوِينُ 11 >
وَكَانَتِ ٱلْأَرْضُ كُلُّهَا لِسَانًا وَاحِدًا وَلُغَةً وَاحِدَةً. | ١ 1 |
ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.
وَحَدَثَ فِي ٱرْتِحَالِهِمْ شَرْقًا أَنَّهُمْ وَجَدُوا بُقْعَةً فِي أَرْضِ شِنْعَارَ وَسَكَنُوا هُنَاكَ. | ٢ 2 |
ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.
وَقَالَ بَعْضُهُمْ لِبَعْضٍ: «هَلُمَّ نَصْنَعُ لِبْنًا وَنَشْوِيهِ شَيًّا». فَكَانَ لَهُمُ ٱللِّبْنُ مَكَانَ ٱلْحَجَرِ، وَكَانَ لَهُمُ ٱلْحُمَرُ مَكَانَ ٱلطِّينِ. | ٣ 3 |
ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
وَقَالُوا: «هَلُمَّ نَبْنِ لِأَنْفُسِنَا مَدِينَةً وَبُرْجًا رَأْسُهُ بِٱلسَّمَاءِ. وَنَصْنَعُ لِأَنْفُسِنَا ٱسْمًا لِئَلَّا نَتَبَدَّدَ عَلَى وَجْهِ كُلِّ ٱلْأَرْضِ». | ٤ 4 |
ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.
فَنَزَلَ ٱلرَّبُّ لِيَنْظُرَ ٱلْمَدِينَةَ وَٱلْبُرْجَ ٱللَّذَيْنِ كَانَ بَنُو آدَمَ يَبْنُونَهُمَا. | ٥ 5 |
ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.
وَقَالَ ٱلرَّبُّ: «هُوَذَا شَعْبٌ وَاحِدٌ وَلِسَانٌ وَاحِدٌ لِجَمِيعِهِمْ، وَهَذَا ٱبْتِدَاؤُهُمْ بِٱلْعَمَلِ. وَٱلْآنَ لَا يَمْتَنِعُ عَلَيْهِمْ كُلُّ مَا يَنْوُونَ أَنْ يَعْمَلُوهُ. | ٦ 6 |
ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.
هَلُمَّ نَنْزِلْ وَنُبَلْبِلْ هُنَاكَ لِسَانَهُمْ حَتَّى لَا يَسْمَعَ بَعْضُهُمْ لِسَانَ بَعْضٍ». | ٧ 7 |
ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.
فَبَدَّدَهُمُ ٱلرَّبُّ مِنْ هُنَاكَ عَلَى وَجْهِ كُلِّ ٱلْأَرْضِ، فَكَفُّوا عَنْ بُنْيَانِ ٱلْمَدِينَةِ، | ٨ 8 |
ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
لِذَلِكَ دُعِيَ ٱسْمُهَا «بَابِلَ» لِأَنَّ ٱلرَّبَّ هُنَاكَ بَلْبَلَ لِسَانَ كُلِّ ٱلْأَرْضِ. وَمِنْ هُنَاكَ بَدَّدَهُمُ ٱلرَّبُّ عَلَى وَجْهِ كُلِّ ٱلْأَرْضِ. | ٩ 9 |
ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.
هَذِهِ مَوَالِيدُ سَامٍ: لَمَّا كَانَ سَامٌ ٱبْنَ مِئَةِ سَنَةٍ وَلَدَ أَرْفَكْشَادَ، بَعْدَ ٱلطُّوفَانِ بِسَنَتَيْنِ. | ١٠ 10 |
ಶೇಮನ ವಂಶಾವಳಿ: ಶೇಮನು ನೂರು ವರ್ಷದವನಾಗಿದ್ದಾಗ, ಎಂದರೆ, ಪ್ರಳಯವಾಗಿ ಎರಡು ವರ್ಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.
وَعَاشَ سَامٌ بَعْدَ مَا وَلَدَ أَرْفَكْشَادَ خَمْسَ مِئَةِ سَنَةٍ، وَوَلَدَ بَنِينَ وَبَنَاتٍ. | ١١ 11 |
ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ, ಶೇಮನು ಐನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ أَرْفَكْشَادُ خَمْسًا وَثَلَاثِينَ سَنَةً وَوَلَدَ شَالَحَ. | ١٢ 12 |
ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು.
وَعَاشَ أَرْفَكْشَادُ بَعْدَ مَا وَلَدَ شَالَحَ أَرْبَعَ مِئَةٍ وَثَلَاثَ سِنِينَ، وَوَلَدَ بَنِينَ وَبَنَاتٍ. | ١٣ 13 |
ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ شَالَحُ ثَلَاثِينَ سَنَةً وَوَلَدَ عَابِرَ. | ١٤ 14 |
ಶೆಲಹನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ಏಬೆರನು ಹುಟ್ಟಿದನು.
وَعَاشَ شَالَحُ بَعْدَ مَا وَلَدَ عَابِرَ أَرْبَعَ مِئَةٍ وَثَلَاثَ سِنِينَ، وَوَلَدَ بَنِينَ وَبَنَاتٍ. | ١٥ 15 |
ಶೆಲಹನಿಂದ ಏಬೆರನು ಹುಟ್ಟಿದ ಮೇಲೆ, ಶೆಲಹನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ عَابِرُ أَرْبَعًا وَثَلَاثِينَ سَنَةً وَوَلَدَ فَالَجَ. | ١٦ 16 |
ಏಬೆರನು ಮೂವತ್ತ ನಾಲ್ಕು ವರ್ಷದವನಾಗಿದ್ದಾಗ, ಅವನಿಂದ ಪೆಲೆಗನು ಹುಟ್ಟಿದನು.
وَعَاشَ عَابِرُ بَعْدَ مَا وَلَدَ فَالَجَ أَرْبَعَ مِئَةٍ وَثَلَاثِينَ سَنَةً، وَوَلَدَ بَنِينَ وَبَنَاتٍ. | ١٧ 17 |
ಏಬೆರನಿಂದ ಪೆಲೆಗನು ಹುಟ್ಟಿದ ಮೇಲೆ, ಏಬೆರನು ನಾನೂರ ಮೂವತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ فَالَجُ ثَلَاثِينَ سَنَةً وَوَلَدَ رَعُوَ. | ١٨ 18 |
ಪೆಲೆಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ರೆಗೂವನು ಹುಟ್ಟಿದನು.
وَعَاشَ فَالَجُ بَعْدَ مَا وَلَدَ رَعُوَ مِئَتَيْنِ وَتِسْعَ سِنِينَ، وَوَلَدَ بَنِينَ وَبَنَاتٍ. | ١٩ 19 |
ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ, ಪೆಲೆಗನು ಇನ್ನೂರ ಒಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ رَعُو ٱثْنَتَيْنِ وَثَلَاثِينَ سَنَةً وَوَلَدَ سَرُوجَ. | ٢٠ 20 |
ರೆಗೂವನು ಮೂವತ್ತೆರಡು ವರ್ಷದವನಾಗಿದ್ದಾಗ, ಅವನಿಂದ ಸೆರೂಗನು ಹುಟ್ಟಿದನು.
وَعَاشَ رَعُو بَعْدَ مَا وَلَدَ سَرُوجَ مِئَتَيْنِ وَسَبْعَ سِنِينَ، وَوَلَدَ بَنِينَ وَبَنَاتٍ. | ٢١ 21 |
ರೆಗೂವನಿಂದ ಸೆರೂಗನು ಹುಟ್ಟಿದ ಮೇಲೆ, ರೆಗೂವನು ಇನ್ನೂರ ಏಳು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ سَرُوجُ ثَلَاثِينَ سَنَةً وَوَلَدَ نَاحُورَ. | ٢٢ 22 |
ಸೆರೂಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ನಾಹೋರನು ಹುಟ್ಟಿದನು.
وَعَاشَ سَرُوجُ بَعْدَ مَا وَلَدَ نَاحُورَ مِئَتَيْ سَنَةٍ، وَوَلَدَ بَنِينَ وَبَنَاتٍ. | ٢٣ 23 |
ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ نَاحُورُ تِسْعًا وَعِشْرِينَ سَنَةً وَوَلَدَ تَارَحَ. | ٢٤ 24 |
ನಾಹೋರನು ಇಪ್ಪತ್ತೊಂಬತ್ತು ವರ್ಷದವನಾಗಿದ್ದಾಗ, ಅವನಿಂದ ತೆರಹನು ಹುಟ್ಟಿದನು.
وَعَاشَ نَاحُورُ بَعْدَ مَا وَلَدَ تَارَحَ مِئَةً وَتِسْعَ عَشَرَةَ سَنَةً، وَوَلَدَ بَنِينَ وَبَنَاتٍ. | ٢٥ 25 |
ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.
وَعَاشَ تَارَحُ سَبْعِينَ سَنَةً، وَوَلَدَ أَبْرَامَ وَنَاحُورَ وَهَارَانَ. | ٢٦ 26 |
ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
وَهَذِهِ مَوَالِيدُ تَارَحَ: وَلَدَ تَارَحُ أَبْرَامَ وَنَاحُورَ وَهَارَانَ. وَوَلَدَ هَارَانُ لُوطًا. | ٢٧ 27 |
ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
وَمَاتَ هَارَانُ قَبْلَ تَارَحَ أَبِيهِ فِي أَرْضِ مِيلَادِهِ فِي أُورِ ٱلْكَلْدَانِيِّينَ. | ٢٨ 28 |
ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.
وَٱتَّخَذَ أَبْرَامُ وَنَاحُورُ لِأَنْفُسِهِمَا ٱمْرَأَتَيْنِ: ٱسْمُ ٱمْرَأَةِ أَبْرَامَ سَارَايُ، وَٱسْمُ ٱمْرَأَةِ نَاحُورَ مِلْكَةُ بِنْتُ هَارَانَ، أَبِي مِلْكَةَ وَأَبِي يِسْكَةَ. | ٢٩ 29 |
ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.
وَكَانَتْ سَارَايُ عَاقِرًا لَيْسَ لَهَا وَلَدٌ. | ٣٠ 30 |
ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.
وَأَخَذَ تَارَحُ أَبْرَامَ ٱبْنَهُ، وَلُوطًا بْنَ هَارَانَ، ٱبْنَ ٱبْنِهِ، وَسَارَايَ كَنَّتَهُ ٱمْرَأَةَ أَبْرَامَ ٱبْنِهِ، فَخَرَجُوا مَعًا مِنْ أُورِ ٱلْكَلْدَانِيِّينَ لِيَذْهَبُوا إِلَى أَرْضِ كَنْعَانَ. فَأَتَوْا إِلَى حَارَانَ وَأَقَامُوا هُنَاكَ. | ٣١ 31 |
ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.
وَكَانَتْ أَيَّامُ تَارَحَ مِئَتَيْنِ وَخَمْسَ سِنِينَ. وَمَاتَ تَارَحُ فِي حَارَانَ. | ٣٢ 32 |
ತೆರಹನು ಇನ್ನೂರ ಐದು ವರ್ಷ ಜೀವಿಸಿ, ಹಾರಾನಿನಲ್ಲಿ ಮರಣಹೊಂದಿದನು.