< اَلتَّكْوِينُ 46 >
فَٱرْتَحَلَ إِسْرَائِيلُ وَكُلُّ مَا كَانَ لَهُ وَأَتَى إِلَى بِئْرِ سَبْعٍ، وَذَبَحَ ذَبَائِحَ لإِلَهِ أَبِيهِ إِسْحَاقَ. | ١ 1 |
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.
فَكَلَّمَ ٱللهُ إِسْرَائِيلَ فِي رُؤَى ٱللَّيْلِ وَقَالَ: «يَعْقُوبُ، يَعْقُوبُ!». فَقَالَ: «هَأَنَذَا». | ٢ 2 |
ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.
فَقَالَ: «أَنَا ٱللهُ، إِلَهُ أَبِيكَ. لَا تَخَفْ مِنَ ٱلنُّزُولِ إِلَى مِصْرَ، لِأَنِّي أَجْعَلُكَ أُمَّةً عَظِيمَةً هُنَاكَ. | ٣ 3 |
ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.
أَنَا أَنْزِلُ مَعَكَ إِلَى مِصْرَ، وَأَنَا أُصْعِدُكَ أَيْضًا. وَيَضَعُ يُوسُفُ يَدَهُ عَلَى عَيْنَيْكَ». | ٤ 4 |
ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.
فَقَامَ يَعْقُوبُ مِنْ بِئْرِ سَبْعٍ، وَحَمَلَ بَنُو إِسْرَائِيلَ يَعْقُوبَ أَبَاهُمْ وَأَوْلَادَهُمْ وَنِسَاءَهُمْ فِي ٱلْعَجَلَاتِ ٱلَّتِي أَرْسَلَ فِرْعَوْنُ لِحَمْلِهِ. | ٥ 5 |
ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.
وَأَخَذُوا مَوَاشِيَهُمْ وَمُقْتَنَاهُمُ ٱلَّذِي ٱقْتَنَوْا فِي أَرْضِ كَنْعَانَ، وَجَاءُوا إِلَى مِصْرَ. يَعْقُوبُ وَكُلُّ نَسْلِهِ مَعَهُ. | ٦ 6 |
ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.
بَنُوهُ وَبَنُو بَنِيهِ مَعَهُ، وَبَنَاتُهُ وَبَنَاتُ بَنِيهِ وَكُلُّ نَسْلِهِ، جَاءَ بِهِمْ مَعَهُ إِلَى مِصْرَ. | ٧ 7 |
ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.
وَهَذِهِ أَسْمَاءُ بَنِي إِسْرَائِيلَ ٱلَّذِينَ جَاءُوا إِلَى مِصْرَ: يَعْقُوبُ وَبَنُوهُ. بِكْرُ يَعْقُوبَ رَأُوبَيْنُ. | ٨ 8 |
ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.
وَبَنُو رَأُوبَيْنَ: حَنُوكُ وَفَلُّو وَحَصْرُونُ وَكَرْمِي. | ٩ 9 |
ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.
وَبَنُو شِمْعُونَ: يَمُوئِيلُ وَيَامِينُ وَأُوهَدُ وَيَاكِينُ وَصُوحَرُ وَشَأُولُ ٱبْنُ ٱلْكَنْعَانِيَّةِ. | ١٠ 10 |
ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.
وَبَنُو لَاوِي: جِرْشُونُ وَقَهَاتُ وَمَرَارِي. | ١١ 11 |
ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.
وَبَنُو يَهُوذَا: عِيرٌ وَأُونَانُ وَشِيلَةُ وَفَارَصُ وَزَارَحُ. وَأَمَّا عِيرٌ وَأُونَانُ فَمَاتَا فِي أَرْضِ كَنْعَانَ. وَكَانَ ٱبْنَا فَارَصَ: حَصْرُونَ وَحَامُولَ. | ١٢ 12 |
ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.
وَبَنُو يَسَّاكَرَ: تُولَاعُ وَفَوَّةُ وَيُوبُ وَشِمْرُونُ. | ١٣ 13 |
ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.
وَبَنُو زَبُولُونَ: سَارَدُ وَإِيلُونُ وَيَاحَلْئِيلُ. | ١٤ 14 |
ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹಲೇಲ್ ಎಂಬುವರು.
هَؤُلَاءِ بَنُو لَيْئَةَ ٱلَّذِينَ وَلَدَتْهُمْ لِيَعْقُوبَ فِي فَدَّانَ أَرَامَ مَعَ دِينَةَ ٱبْنَتِهِ. جَمِيعُ نُفُوسِ بَنِيهِ وَبَنَاتِهِ ثَلَاثٌ وَثَلَاثُونَ. | ١٥ 15 |
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.
وَبَنُو جَادَ: صِفْيُونُ وَحَجِّي وَشُونِي وَأَصْبُونُ وَعِيرِي وَأَرُودِي وَأَرْئِيلِي. | ١٦ 16 |
ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.
وَبَنُو أَشِيرَ: يِمْنَةُ وَيِشْوَةُ وَيِشْوِي وَبَرِيعَةُ، وَسَارَحُ هِيَ أُخْتُهُمْ. وَٱبْنَا بَرِيعَةَ: حَابِرُ وَمَلْكِيئِيلُ. | ١٧ 17 |
ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.
هَؤُلَاءِ بَنُو زِلْفَةَ ٱلَّتِي أَعْطَاهَا لَابَانُ لِلَيْئَةَ ٱبْنَتِهِ، فَوَلَدَتْ هَؤُلَاءِ لِيَعْقُوبَ، سِتَّ عَشَرَةَ نَفْسًا. | ١٨ 18 |
ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.
اِبْنَا رَاحِيلَ ٱمْرَأَةِ يَعْقُوبَ: يُوسُفُ وَبَنْيَامِينُ. | ١٩ 19 |
ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.
وَوُلِدَ لِيُوسُفَ فِي أَرْضِ مِصْرَ: مَنَسَّى وَأَفْرَايِمُ، ٱللَّذَانِ وَلَدَتْهُمَا لَهُ أَسْنَاتُ بِنْتُ فُوطِي فَارَعَ كَاهِنِ أُونٍ. | ٢٠ 20 |
ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.
وَبَنُو بَنْيَامِينَ: بَالَعُ وَبَاكَرُ وَأَشْبِيلُ وَجِيرَا وَنَعْمَانُ وَإِيحِي وَرُوشُ وَمُفِّيمُ وَحُفِّيمُ وَأَرْدُ. | ٢١ 21 |
ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.
هَؤُلَاءِ بَنُو رَاحِيلَ ٱلَّذِينَ وُلِدُوا لِيَعْقُوبَ. جَمِيعُ ٱلنُّفُوسِ أَرْبَعَ عَشَرَةَ. | ٢٢ 22 |
ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.
وَٱبْنُ دَانَ: حُوشِيمُ. | ٢٣ 23 |
ದಾನನ ಮಗನು: ಹುಶೀಮನು.
وَبَنُو نَفْتَالِي: يَاحَصْئِيلُ وَجُونِي وَيِصْرُ وَشِلِّيمُ. | ٢٤ 24 |
ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.
هَؤُلَاءِ بَنُو بِلْهَةَ ٱلَّتِي أَعْطَاهَا لَابَانُ لِرَاحِيلَ ٱبْنَتِهِ. فَوَلَدَتْ هَؤُلَاءِ لِيَعْقُوبَ. جَمِيعُ ٱلْأَنْفُسِ سَبْعٌ. | ٢٥ 25 |
ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ.
جَمِيعُ ٱلنُّفُوسِ لِيَعْقُوبَ ٱلَّتِي أَتَتْ إِلَى مِصْرَ، ٱلْخَارِجَةِ مِنْ صُلْبِهِ، مَا عَدَا نِسَاءَ بَنِي يَعْقُوبَ، جَمِيعُ ٱلنُّفُوسِ سِتٌّ وَسِتُّونَ نَفْسًا. | ٢٦ 26 |
ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.
وَٱبْنَا يُوسُفَ ٱللَّذَانِ وُلِدَا لَهُ فِي مِصْرَ نَفْسَانِ. جَمِيعُ نُفُوسِ بَيْتِ يَعْقُوبَ ٱلَّتِي جَاءَتْ إِلَى مِصْرَ سَبْعُونَ. | ٢٧ 27 |
ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
فَأَرْسَلَ يَهُوذَا أَمَامَهُ إِلَى يُوسُفَ لِيُرِيَ ٱلطَّرِيقَ أَمَامَهُ إِلَى جَاسَانَ، ثُمَّ جَاءُوا إِلَى أَرْضِ جَاسَانَ. | ٢٨ 28 |
ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.
فَشَدَّ يُوسُفُ مَرْكَبَتَهُ وَصَعِدَ لِٱسْتِقْبَالِ إِسْرَائِيلَ أَبِيهِ إِلَى جَاسَانَ. وَلَمَّا ظَهَرَ لَهُ وَقَعَ عَلَى عُنُقِهِ وَبَكَى عَلَى عُنُقِهِ زَمَانًا. | ٢٩ 29 |
ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.
فَقَالَ إِسْرَائِيلُ لِيُوسُفَ: «أَمُوتُ ٱلْآنَ بَعْدَ مَا رَأَيْتُ وَجْهَكَ أَنَّكَ حَيٌّ بَعْدُ». | ٣٠ 30 |
ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.
ثُمَّ قَالَ يُوسُفُ لِإِخْوَتِهِ وَلِبَيْتِ أَبِيهِ: «أَصْعَدُ وَأُخْبِرُ فِرْعَوْنَ وَأَقُولُ لَهُ: إِخْوَتِي وَبَيْتُ أَبِي ٱلَّذِينَ فِي أَرْضِ كَنْعَانَ جَاءُوا إِلَيَّ. | ٣١ 31 |
ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
وَٱلرِّجَالُ رُعَاةُ غَنَمٍ، فَإِنَّهُمْ كَانُوا أَهْلَ مَوَاشٍ، وَقَدْ جَاءُوا بِغَنَمِهِمْ وَبَقَرِهِمْ وَكُلِّ مَا لَهُمْ. | ٣٢ 32 |
ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.
فَيَكُونُ إِذَا دَعَاكُمْ فِرْعَوْنُ وَقَالَ: مَا صِنَاعَتُكُمْ؟ | ٣٣ 33 |
ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.
أَنْ تَقُولُوا: عَبِيدُكَ أَهْلُ مَوَاشٍ مُنْذُ صِبَانَا إِلَى ٱلْآنَ، نَحْنُ وَآبَاؤُنَا جَمِيعًا. لِكَيْ تَسْكُنُوا فِي أَرْضِ جَاسَانَ. لِأَنَّ كُلَّ رَاعِي غَنَمٍ رِجْسٌ لِلْمِصْرِيِّينَ». | ٣٤ 34 |
ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.