< اَلتَّكْوِينُ 8 >
ثُمَّ ذَكَرَ ٱللهُ نُوحًا وَكُلَّ ٱلْوُحُوشِ وَكُلَّ ٱلْبَهَائِمِ ٱلَّتِي مَعَهُ فِي ٱلْفُلْكِ. وَأَجَازَ ٱللهُ رِيحًا عَلَى ٱلْأَرْضِ فَهَدَأَتِ ٱلْمِيَاهُ. | ١ 1 |
ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.
وَٱنْسَدَّتْ يَنَابِيعُ ٱلْغَمْرِ وَطَاقَاتُ ٱلسَّمَاءِ، فَٱمْتَنَعَ ٱلْمَطَرُ مِنَ ٱلسَّمَاءِ. | ٢ 2 |
ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.
وَرَجَعَتِ ٱلْمِيَاهُ عَنِ ٱلْأَرْضِ رُجُوعًا مُتَوَالِيًا. وَبَعْدَ مِئَةٍ وَخَمْسِينَ يَوْمًا نَقَصَتِ ٱلْمِيَاهُ، | ٣ 3 |
ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.
وَٱسْتَقَرَّ ٱلْفُلْكُ فِي ٱلشَّهْرِ ٱلسَّابِعِ، فِي ٱلْيَوْمِ ٱلسَّابِعَ عَشَرَ مِنَ ٱلشَّهْرِ، عَلَى جِبَالِ أَرَارَاطَ. | ٤ 4 |
ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.
وَكَانَتِ ٱلْمِيَاهُ تَنْقُصُ نَقْصًا مُتَوَالِيًا إِلَى ٱلشَّهْرِ ٱلْعَاشِرِ. وَفِي ٱلْعَاشِرِ فِي أَوَّلِ ٱلشَّهْرِ، ظَهَرَتْ رُؤُوسُ ٱلْجِبَالِ. | ٥ 5 |
ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
وَحَدَثَ مِنْ بَعْدِ أَرْبَعِينَ يَوْمًا أَنَّ نُوحًا فَتَحَ طَاقَةَ ٱلْفُلْكِ ٱلَّتِي كَانَ قَدْ عَمِلَهَا | ٦ 6 |
ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.
وَأَرْسَلَ ٱلْغُرَابَ، فَخَرَجَ مُتَرَدِّدًا حَتَّى نَشِفَتِ ٱلْمِيَاهُ عَنِ ٱلْأَرْضِ. | ٧ 7 |
ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.
ثُمَّ أَرْسَلَ ٱلْحَمَامَةَ مِنْ عِنْدِهِ لِيَرَى هَلْ قَلَّتِ ٱلْمِيَاهُ عَنْ وَجْهِ ٱلْأَرْضِ، | ٨ 8 |
ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.
فَلَمْ تَجِدِ ٱلْحَمَامَةُ مَقَرًّا لِرِجْلِهَا، فَرَجَعَتْ إِلَيْهِ إِلَى ٱلْفُلْكِ لِأَنَّ مِيَاهًا كَانَتْ عَلَى وَجْهِ كُلِّ ٱلْأَرْضِ. فَمَدَّ يَدَهُ وَأَخَذَهَا وَأَدْخَلَهَا عِنْدَهُ إِلَى ٱلْفُلْكِ. | ٩ 9 |
ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.
فَلَبِثَ أَيْضًا سَبْعَةَ أَيَّامٍ أُخَرَ وَعَادَ فَأَرْسَلَ ٱلْحَمَامَةَ مِنَ ٱلْفُلْكِ، | ١٠ 10 |
ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.
فَأَتَتْ إِلَيْهِ ٱلْحَمَامَةُ عِنْدَ ٱلْمَسَاءِ، وَإِذَا وَرَقَةُ زَيْتُونٍ خَضْرَاءُ فِي فَمِهَا. فَعَلِمَ نُوحٌ أَنَّ ٱلْمِيَاهَ قَدْ قَلَّتْ عَنِ ٱلْأَرْضِ. | ١١ 11 |
ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.
فَلَبِثَ أَيْضًا سَبْعَةَ أَيَّامٍ أُخَرَ وَأَرْسَلَ ٱلْحَمَامَةَ فَلَمْ تَعُدْ تَرْجِعُ إِلَيْهِ أَيْضًا. | ١٢ 12 |
ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.
وَكَانَ فِي ٱلسَّنَةِ ٱلْوَاحِدَةِ وَٱلسِّتِّ مِئَةٍ، فِي ٱلشَّهْرِ ٱلْأَوَّلِ فِي أَوَّلِ ٱلشَّهْرِ، أَنَّ ٱلْمِيَاهَ نَشِفَتْ عَنِ ٱلْأَرْضِ. فَكَشَفَ نُوحٌ ٱلْغِطَاءَ عَنِ ٱلْفُلْكِ وَنَظَرَ، فَإِذَا وَجْهُ ٱلْأَرْضِ قَدْ نَشِفَ. | ١٣ 13 |
ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು.
وَفِي ٱلشَّهْرِ ٱلثَّانِي، فِي ٱلْيَوْمِ ٱلسَّابِعِ وَٱلْعِشْرِينَ مِنَ ٱلشَّهْرِ، جَفَّتِ ٱلْأَرْضُ. | ١٤ 14 |
ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
وَكَلَّمَ ٱللهُ نُوحًا قَائِلًا: | ١٥ 15 |
ಆಗ ದೇವರು ನೋಹನಿಗೆ,
«ٱخْرُجْ مِنَ ٱلْفُلْكِ أَنْتَ وَٱمْرَأَتُكَ وَبَنُوكَ وَنِسَاءُ بَنِيكَ مَعَكَ. | ١٦ 16 |
“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.
وَكُلَّ ٱلْحَيَوَانَاتِ ٱلَّتِي مَعَكَ مِنْ كُلِّ ذِي جَسَدٍ: ٱلطُّيُورِ، وَٱلْبَهَائِمِ، وَكُلَّ ٱلدَّبَّابَاتِ ٱلَّتِي تَدِبُّ عَلَى ٱلْأَرْضِ، أَخْرِجْهَا مَعَكَ. وَلْتَتَوَالَدْ فِي ٱلْأَرْضِ وَتُثْمِرْ وَتَكْثُرْ عَلَى ٱلْأَرْضِ». | ١٧ 17 |
ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.
فَخَرَجَ نُوحٌ وَبَنُوهُ وَٱمْرَأَتُهُ وَنِسَاءُ بَنِيهِ مَعَهُ. | ١٨ 18 |
ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು.
وَكُلُّ ٱلْحَيَوَانَاتِ، كُلُّ ٱلدَّبَّابَاتِ، وَكُلُّ ٱلطُّيُورِ، كُلُّ مَا يَدِبُّ عَلَى ٱلْأَرْضِ، كَأَنْوَاعِهَا خَرَجَتْ مِنَ ٱلْفُلْكِ. | ١٩ 19 |
ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.
وَبَنَى نُوحٌ مَذْبَحًا لِلرَّبِّ. وَأَخَذَ مِنْ كُلِّ ٱلْبَهَائِمِ ٱلطَّاهِرَةِ وَمِنْ كُلِّ ٱلطُّيُورِ ٱلطَّاهِرَةِ وَأَصْعَدَ مُحْرَقَاتٍ عَلَى ٱلْمَذْبَحِ، | ٢٠ 20 |
ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
فَتَنَسَّمَ ٱلرَّبُّ رَائِحَةَ ٱلرِّضَا. وَقَالَ ٱلرَّبُّ فِي قَلْبِهِ: «لَا أَعُودُ أَلْعَنُ ٱلْأَرْضَ أَيْضًا مِنْ أَجْلِ ٱلْإِنْسَانِ، لِأَنَّ تَصَوُّرَ قَلْبِ ٱلْإِنْسَانِ شِرِّيرٌ مُنْذُ حَدَاثَتِهِ. وَلَا أَعُودُ أَيْضًا أُمِيتُ كُلَّ حَيٍّ كَمَا فَعَلْتُ. | ٢١ 21 |
ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.
مُدَّةَ كُلِّ أَيَّامِ ٱلْأَرْضِ: زَرْعٌ وَحَصَادٌ، وَبَرْدٌ وَحَرٌّ، وَصَيْفٌ وَشِتَاءٌ، وَنَهَارٌ وَلَيْلٌ، لَا تَزَالُ». | ٢٢ 22 |
“ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”