< إِشَعْيَاءَ 1 >
رُؤْيَا إِشَعْيَاءَ بْنِ آمُوصَ، ٱلَّتِي رَآهَا عَلَى يَهُوذَا وَأُورُشَلِيمَ، فِي أَيَّامِ عُزِّيَّا وَيُوثَامَ وَآحَازَ وَحِزْقِيَّا مُلُوكِ يَهُوذَا: | ١ 1 |
೧ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
اِسْمَعِي أَيَّتُهَا ٱلسَّمَاوَاتُ وَأَصْغِي أَيَّتُهَا ٱلْأَرْضُ، لِأَنَّ ٱلرَّبَّ يَتَكَلَّمُ: «رَبَّيْتُ بَنِينَ وَنَشَّأْتُهُمْ، أَمَّا هُمْ فَعَصَوْا عَلَيَّ. | ٢ 2 |
೨ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
اَلثَّوْرُ يَعْرِفُ قَانِيَهُ وَٱلْحِمَارُ مِعْلَفَ صَاحِبِهِ، أَمَّا إِسْرَائِيلُ فَلَا يَعْرِفُ. شَعْبِي لَا يَفْهَمُ». | ٣ 3 |
೩ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
وَيْلٌ لِلْأُمَّةِ ٱلْخَاطِئَةِ، ٱلشَّعْبِ ٱلثَّقِيلِ ٱلْإِثْمِ، نَسْلِ فَاعِلِي ٱلشَّرِّ، أَوْلَادِ مُفْسِدِينَ! تَرَكُوا ٱلرَّبَّ، ٱسْتَهَانُوا بِقُدُّوسِ إِسْرَائِيلَ، ٱرْتَدُّوا إِلَى وَرَاءٍ. | ٤ 4 |
೪ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
عَلَى مَ تُضْرَبُونَ بَعْدُ؟ تَزْدَادُونَ زَيَغَانًا! كُلُّ ٱلرَّأْسِ مَرِيضٌ، وَكُلُّ ٱلْقَلْبِ سَقِيمٌ. | ٥ 5 |
೫ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
مِنْ أَسْفَلِ ٱلْقَدَمِ إِلَى ٱلرَّأْسِ لَيْسَ فِيهِ صِحَّةٌ، بَلْ جُرْحٌ وَأَحْبَاطٌ وَضَرْبَةٌ طَرِيَّةٌ لَمْ تُعْصَرْ وَلَمْ تُعْصَبْ وَلَمْ تُلَيَّنْ بِٱلزَّيْتِ. | ٦ 6 |
೬ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
بِلَادُكُمْ خَرِبَةٌ. مُدُنُكُمْ مُحْرَقَةٌ بِٱلنَّارِ. أَرْضُكُمْ تَأْكُلُهَا غُرَبَاءُ قُدَّامَكُمْ، وَهِيَ خَرِبَةٌ كَٱنْقِلَابِ ٱلْغُرَبَاءِ. | ٧ 7 |
೭ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
فَبَقِيَتِ ٱبْنَةُ صِهْيَوْنَ كَمِظَلَّةٍ فِي كَرْمٍ، كَخَيْمَةٍ فِي مَقْثَأَةٍ، كَمَدِينَةٍ مُحَاصَرَةٍ. | ٨ 8 |
೮ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
لَوْلَا أَنَّ رَبَّ ٱلْجُنُودِ أَبْقَى لَنَا بَقِيَّةً صَغِيرَةً، لَصِرْنَا مِثْلَ سَدُومَ وَشَابَهْنَا عَمُورَةَ. | ٩ 9 |
೯ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
اِسْمَعُوا كَلَامَ ٱلرَّبِّ يَا قُضَاةَ سَدُومَ! أَصْغُوا إِلَى شَرِيعَةِ إِلَهِنَا يَا شَعْبَ عَمُورَةَ: | ١٠ 10 |
೧೦ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
«لِمَاذَا لِي كَثْرَةُ ذَبَائِحِكُمْ، يَقُولُ ٱلرَّبُّ. ٱتَّخَمْتُ مِنْ مُحْرَقَاتِ كِبَاشٍ وَشَحْمِ مُسَمَّنَاتٍ، وَبِدَمِ عُجُولٍ وَخِرْفَانٍ وَتُيُوسٍ مَا أُسَرُّ. | ١١ 11 |
೧೧ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
حِينَمَا تَأْتُونَ لِتَظْهَرُوا أَمَامِي، مَنْ طَلَبَ هَذَا مِنْ أَيْدِيكُمْ أَنْ تَدُوسُوا دُورِي؟ | ١٢ 12 |
೧೨ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
لَا تَعُودُوا تَأْتُونَ بِتَقْدِمَةٍ بَاطِلَةٍ. ٱلْبَخُورُ هُوَ مَكْرَهَةٌ لِي. رَأْسُ ٱلشَّهْرِ وَٱلسَّبْتُ وَنِدَاءُ ٱلْمَحْفَلِ. لَسْتُ أُطِيقُ ٱلْإِثْمَ وَٱلِٱعْتِكَافَ. | ١٣ 13 |
೧೩ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
رُؤُوسُ شُهُورِكُمْ وَأَعْيَادُكُمْ بَغَضَتْهَا نَفْسِي. صَارَتْ عَلَيَّ ثِقْلًا. مَلِلْتُ حَمْلَهَا. | ١٤ 14 |
೧೪ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
فَحِينَ تَبْسُطُونَ أَيْدِيَكُمْ أَسْتُرُ عَيْنَيَّ عَنْكُمْ، وَإِنْ كَثَّرْتُمُ ٱلصَّلَاةَ لَا أَسْمَعُ. أَيْدِيكُمْ مَلْآنَةٌ دَمًا. | ١٥ 15 |
೧೫ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
اِغْتَسِلُوا. تَنَقَّوْا. ٱعْزِلُوا شَرَّ أَفْعَالِكُمْ مِنْ أَمَامِ عَيْنَيَّ. كُفُّوا عَنْ فِعْلِ ٱلشَّرِّ. | ١٦ 16 |
೧೬ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
تَعَلَّمُوا فَعْلَ ٱلْخَيْرِ. ٱطْلُبُوا ٱلْحَقَّ. ٱنْصِفُوا ٱلْمَظْلُومَ. ٱقْضُوا لِلْيَتِيمِ. حَامُوا عَنِ ٱلْأَرْمَلَةِ. | ١٧ 17 |
೧೭ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
هَلُمَّ نَتَحَاجَجْ، يَقُولُ ٱلرَّبُّ. إِنْ كَانَتْ خَطَايَاكُمْ كَٱلْقِرْمِزِ تَبْيَضُّ كَٱلثَّلْجِ. إِنْ كَانَتْ حَمْرَاءَ كَٱلدُّودِيِّ تَصِيرُ كَٱلصُّوفِ. | ١٨ 18 |
೧೮“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
إِنْ شِئْتُمْ وَسَمِعْتُمْ تَأْكُلُونَ خَيْرَ ٱلْأَرْضِ. | ١٩ 19 |
೧೯ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
وَإِنْ أَبَيْتُمْ وَتَمَرَّدْتُمْ تُؤْكَلُونَ بِٱلسَّيْفِ». لِأَنَّ فَمَ ٱلرَّبِّ تَكَلَّمَ. | ٢٠ 20 |
೨೦ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
كَيْفَ صَارَتِ ٱلْقَرْيَةُ ٱلْأَمِينَةُ زَانِيَةً! مَلآنَةً حَقًّا. كَانَ ٱلْعَدْلُ يَبِيتُ فِيهَا، وَأَمَّا ٱلْآنَ فَٱلْقَاتِلُونَ. | ٢١ 21 |
೨೧ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
صَارَتْ فِضَّتُكِ زَغَلًا وَخَمْرُكِ مَغْشُوشَةً بِمَاءٍ. | ٢٢ 22 |
೨೨ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
رُؤَسَاؤُكِ مُتَمَرِّدُونَ وَلُغَفَاءُ ٱللُّصُوصِ. كُلُّ وَاحِدٍ مِنْهُمْ يُحِبُّ ٱلرَّشْوَةَ وَيَتْبَعُ ٱلْعَطَايَا. لَا يَقْضُونَ لِلْيَتِيمِ، وَدَعْوَى ٱلْأَرْمَلَةِ لَا تَصِلُ إِلَيْهِمْ. | ٢٣ 23 |
೨೩ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
لِذَلِكَ يَقُولُ ٱلسَّيِّدُ رَبُّ ٱلْجُنُودِ عَزِيزُ إِسْرَائِيلَ: «آهِ! إِنِّي أَسْتَرِيحُ مِنْ خُصَمَائِي وَأَنْتَقِمُ مِنْ أَعْدَائِي، | ٢٤ 24 |
೨೪ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
وَأَرُدُّ يَدِي عَلَيْكِ، وَأُنَقِّي زَغَلَكِ كَأَنَّهُ بِٱلْبَوْرَقِ، وَأَنْزِعُ كُلَّ قَصْدِيرِكِ، | ٢٥ 25 |
೨೫ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
وَأُعِيدُ قُضَاتَكِ كَمَا فِي ٱلْأَوَّلِ، وَمُشِيرِيكِ كَمَا فِي ٱلْبَدَاءَةِ. بَعْدَ ذَلِكَ تُدْعَيْنَ مَدِينَةَ ٱلْعَدْلِ، ٱلْقَرْيَةَ ٱلْأَمِينَةَ». | ٢٦ 26 |
೨೬ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
صِهْيَوْنُ تُفْدَى بِٱلْحَقِّ، وَتَائِبُوهَا بِٱلْبِرِّ. | ٢٧ 27 |
೨೭ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
وَهَلَاكُ ٱلْمُذْنِبِينَ وَٱلْخُطَاةِ يَكُونُ سَوَاءً، وَتَارِكُو ٱلرَّبِّ يَفْنَوْنَ. | ٢٨ 28 |
೨೮ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
لِأَنَّهُمْ يَخْجَلُونَ مِنْ أَشْجَارِ ٱلْبُطْمِ ٱلَّتِي ٱشْتَهَيْتُمُوهَا، وَتُخْزَوْنَ مِنَ ٱلْجَنَّاتِ ٱلَّتِي ٱخْتَرْتُمُوهَا. | ٢٩ 29 |
೨೯“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
لِأَنَّكُمْ تَصِيرُونَ كَبُطْمَةٍ قَدْ ذَبُلَ وَرَقُهَا، وَكَجَنَّةٍ لَيْسَ لَهَا مَاءٌ. | ٣٠ 30 |
೩೦ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
وَيَصِيرُ ٱلْقَوِيُّ مَشَاقَةً وَعَمَلُهُ شَرَارًا، فَيَحْتَرِقَانِ كِلَاهُمَا مَعًا وَلَيْسَ مَنْ يُطْفِئُ. | ٣١ 31 |
೩೧ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”