< إِشَعْيَاءَ 40 >
عَزُّوا، عَزُّوا شَعْبِي، يَقُولُ إِلَهُكُمْ. | ١ 1 |
೧“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
طَيِّبُوا قَلْبَ أُورُشَلِيمَ وَنَادُوهَا بِأَنَّ جِهَادَهَا قَدْ كَمُلَ، أَنَّ إِثْمَهَا قَدْ عُفِيَ عَنْهُ، أَنَّهَا قَدْ قَبِلَتْ مِنْ يَدِ ٱلرَّبِّ ضِعْفَيْنِ عَنْ كُلِّ خَطَايَاهَا. | ٢ 2 |
೨ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
صَوْتُ صَارِخٍ فِي ٱلْبَرِّيَّةِ: «أَعِدُّوا طَرِيقَ ٱلرَّبِّ. قَوِّمُوا فِي ٱلْقَفْرِ سَبِيلًا لِإِلَهِنَا. | ٣ 3 |
೩ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
كُلُّ وَطَاءٍ يَرْتَفِعُ، وَكُلُّ جَبَلٍ وَأَكَمَةٍ يَنْخَفِضُ، وَيَصِيرُ ٱلْمُعْوَجُّ مُسْتَقِيمًا، وَٱلْعَرَاقِيبُ سَهْلًا. | ٤ 4 |
೪ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
فَيُعْلَنُ مَجْدُ ٱلرَّبِّ وَيَرَاهُ كُلُّ بَشَرٍ جَمِيعًا، لِأَنَّ فَمَ ٱلرَّبِّ تَكَلَّمَ». | ٥ 5 |
೫ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
صَوْتُ قَائِلٍ: «نَادِ». فَقَالَ: «بِمَاذَا أُنَادِي؟» «كُلُّ جَسَدٍ عُشْبٌ، وَكُلُّ جَمَالِهِ كَزَهْرِ ٱلْحَقْلِ. | ٦ 6 |
೬ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
يَبِسَ ٱلْعُشْبُ، ذَبُلَ ٱلزَّهْرُ، لِأَنَّ نَفْخَةَ ٱلرَّبِّ هَبَّتْ عَلَيْهِ. حَقًّا ٱلشَّعْبُ عُشْبٌ! | ٧ 7 |
೭ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
يَبِسَ ٱلْعُشْبُ، ذَبُلَ ٱلزَّهْرُ. وَأَمَّا كَلِمَةُ إِلَهِنَا فَتَثْبُتُ إِلَى ٱلْأَبَدِ». | ٨ 8 |
೮ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
عَلَى جَبَلٍ عَالٍ ٱصْعَدِي، يَا مُبَشِّرَةَ صِهْيَوْنَ. ٱرْفَعِي صَوْتَكِ بِقُوَّةٍ، يَا مُبَشِّرَةَ أُورُشَلِيمَ. ٱرْفَعِي لَا تَخَافِي. قُولِي لِمُدُنِ يَهُوذَا: «هُوَذَا إِلَهُكِ. | ٩ 9 |
೯ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
هُوَذَا ٱلسَّيِّدُ ٱلرَّبُّ بِقُوَّةٍ يَأْتِي وَذِرَاعُهُ تَحْكُمُ لَهُ. هُوَذَا أُجْرَتُهُ مَعَهُ وَعُمْلَتُهُ قُدَّامَهُ. | ١٠ 10 |
೧೦ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
كَرَاعٍ يَرْعَى قَطِيعَهُ. بِذِرَاعِهِ يَجْمَعُ ٱلْحُمْلَانَ، وَفِي حِضْنِهِ يَحْمِلُهَا، وَيَقُودُ ٱلْمُرْضِعَاتِ». | ١١ 11 |
೧೧ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
مَنْ كَالَ بِكَفِّهِ ٱلْمِيَاهَ، وَقَاسَ ٱلسَّمَاوَاتِ بِٱلشِّبْرِ، وَكَالَ بِٱلْكَيْلِ تُرَابَ ٱلْأَرْضِ، وَوَزَنَ ٱلْجِبَالَ بِٱلْقَبَّانِ، وَٱلْآكَامَ بِٱلْمِيزَانِ؟ | ١٢ 12 |
೧೨ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
مَنْ قَاسَ رُوحَ ٱلرَّبِّ، وَمَنْ مُشِيرُهُ يُعَلِّمُهُ؟ | ١٣ 13 |
೧೩ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
مَنِ ٱسْتَشَارَهُ فَأَفْهَمَهُ وَعَلَّمَهُ فِي طَرِيقِ ٱلْحَقِّ، وَعَلَّمَهُ مَعْرِفَةً وَعَرَّفَهُ سَبِيلَ ٱلْفَهْمِ.؟ | ١٤ 14 |
೧೪ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
هُوَذَا ٱلْأُمَمُ كَنُقْطَةٍ مِنْ دَلْوٍ، وَكَغُبَارِ ٱلْمِيزَانِ تُحْسَبُ. هُوَذَا ٱلْجَزَائِرُ يَرْفَعُهَا كَدُقَّةٍ! | ١٥ 15 |
೧೫ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
وَلُبْنَانُ لَيْسَ كَافِيًا لِلْإِيقَادِ، وَحَيَوَانُهُ لَيْسَ كَافِيًا لِمُحْرَقَةٍ. | ١٦ 16 |
೧೬(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
كُلُّ ٱلْأُمَمِ كَلَا شَيْءٍ قُدَّامَهُ. مِنَ ٱلْعَدَمِ وَٱلْبَاطِلِ تُحْسَبُ عِنْدَهُ. | ١٧ 17 |
೧೭ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
فَبِمَنْ تُشَبِّهُونَ ٱللهَ، وَأَيَّ شَبَهٍ تُعَادِلُونَ بِهِ؟ | ١٨ 18 |
೧೮ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
اَلصَّنَمُ يَسْبِكُهُ ٱلصَّانِعُ، وَٱلصَّائِغُ يُغَشِّيهِ بِذَهَبٍ وَيَصُوغُ سَلَاسِلَ فِضَّةٍ. | ١٩ 19 |
೧೯ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
ٱلْفَقِيرُ عَنِ ٱلتَّقْدِمَةِ يَنْتَخِبُ خَشَبًا لَا يُسَوِّسُ، يَطْلُبُ لَهُ صَانِعًا مَاهِرًا لِيَنْصُبَ صَنَمًا لَا يَتَزَعْزَعُ! | ٢٠ 20 |
೨೦(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
أَلَا تَعْلَمُونَ؟ أَلَا تَسْمَعُونَ؟ أَلَمْ تُخْبَرُوا مِنَ ٱلْبَدَاءَةِ؟ أَلَمْ تَفْهَمُوا مِنْ أَسَاسَاتِ ٱلْأَرْضِ؟ | ٢١ 21 |
೨೧ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
ٱلْجَالِسُ عَلَى كُرَةِ ٱلْأَرْضِ وَسُكَّانُهَا كَٱلْجُنْدُبِ. ٱلَّذِي يَنْشُرُ ٱلسَّمَاوَاتِ كَسَرَادِقَ، وَيَبْسُطُهَا كَخَيْمَةٍ لِلسَّكَنِ. | ٢٢ 22 |
೨೨ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
ٱلَّذِي يَجْعَلُ ٱلْعُظَمَاءَ لَا شَيْئًا، وَيُصَيِّرُ قُضَاةَ ٱلْأَرْضِ كَٱلْبَاطِلِ. | ٢٣ 23 |
೨೩ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
لَمْ يُغْرَسُوا بَلْ لَمْ يُزْرَعُوا وَلَمْ يَتَأَصَّلْ فِي ٱلْأَرْضِ سَاقُهُمْ. فَنَفَخَ أَيْضًا عَلَيْهِمْ فَجَفُّوا، وَٱلْعَاصِفُ كَٱلْعَصْفِ يَحْمِلُهُمْ. | ٢٤ 24 |
೨೪ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
«فَبِمَنْ تُشَبِّهُونَنِي فَأُسَاوِيَهُ؟» يَقُولُ ٱلْقُدُّوسُ. | ٢٥ 25 |
೨೫ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
ٱرْفَعُوا إِلَى ٱلْعَلَاءِ عُيُونَكُمْ وَٱنْظُرُوا، مَنْ خَلَقَ هَذِهِ؟ مَنِ ٱلَّذِي يُخْرِجُ بِعَدَدٍ جُنْدَهَا، يَدْعُو كُلَّهَا بِأَسْمَاءٍ؟ لِكَثْرَةِ ٱلْقُوَّةِ وَكَوْنِهِ شَدِيدَ ٱلْقُدْرَةِ لَا يُفْقَدُ أَحَدٌ. | ٢٦ 26 |
೨೬ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
لِمَاذَا تَقُولُ يَا يَعْقُوبُ وَتَتَكَلَّمُ يَا إِسْرَائِيلُ: «قَدِ ٱخْتَفَتْ طَرِيقِي عَنِ ٱلرَّبِّ وَفَاتَ حَقِّي إِلَهِي»؟ | ٢٧ 27 |
೨೭ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
أَمَا عَرَفْتَ أَمْ لَمْ تَسْمَعْ؟ إِلَهُ ٱلدَّهْرِ ٱلرَّبُّ خَالِقُ أَطْرَافِ ٱلْأَرْضِ لَا يَكِلُّ وَلَا يَعْيَا. لَيْسَ عَنْ فَهْمِهِ فَحْصٌ. | ٢٨ 28 |
೨೮ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
يُعْطِي ٱلْمُعْيِيَ قُدْرَةً، وَلِعَدِيمِ ٱلْقُوَّةِ يُكَثِّرُ شِدَّةً. | ٢٩ 29 |
೨೯ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
اَلْغِلْمَانُ يُعْيُونَ وَيَتْعَبُونَ، وَٱلْفِتْيَانُ يَتَعَثَّرُونَ تَعَثُّرًا. | ٣٠ 30 |
೩೦ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
وَأَمَّا مُنْتَظِرُو ٱلرَّبِّ فَيُجَدِّدُونَ قُوَّةً. يَرْفَعُونَ أَجْنِحَةً كَٱلنُّسُورِ. يَرْكُضُونَ وَلَا يَتْعَبُونَ. يَمْشُونَ وَلَا يُعْيُونَ. | ٣١ 31 |
೩೧ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.