< إِشَعْيَاءَ 45 >
هَكَذَا يَقُولُ ٱلرَّبُّ لِمَسِيحِهِ، لِكُورَشَ ٱلَّذِي أَمْسَكْتُ بِيَمِينِهِ لِأَدُوسَ أَمَامَهُ أُمَمًا، وَأَحْقَاءَ مُلُوكٍ أَحُلُّ، لِأَفْتَحَ أَمَامَهُ ٱلْمِصْرَاعَيْنِ، وَٱلْأَبْوَابُ لَا تُغْلَقُ: | ١ 1 |
೧ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
«أَنَا أَسِيرُ قُدَّامَكَ وَٱلْهِضَابَ أُمَهِّدُ. أُكَسِّرُ مِصْرَاعَيِ ٱلنُّحَاسِ، وَمَغَالِيقَ ٱلْحَدِيدِ أَقْصِفُ. | ٢ 2 |
೨“ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
وَأُعْطِيكَ ذَخَائِرَ ٱلظُّلْمَةِ وَكُنُوزَ ٱلْمَخَابِئِ، لِكَيْ تَعْرِفَ أَنِّي أَنَا ٱلرَّبُّ ٱلَّذِي يَدْعُوكَ بِٱسْمِكَ، إِلَهُ إِسْرَائِيلَ. | ٣ 3 |
೩ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
لِأَجْلِ عَبْدِي يَعْقُوبَ، وَإِسْرَائِيلَ مُخْتَارِي، دَعَوْتُكَ بِٱسْمِكَ. لَقَّبْتُكَ وَأَنْتَ لَسْتَ تَعْرِفُنِي. | ٤ 4 |
೪ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.
أَنَا ٱلرَّبُّ وَلَيْسَ آخَرُ. لَا إِلَهَ سِوَايَ. نَطَّقْتُكَ وَأَنْتَ لَمْ تَعْرِفْنِي. | ٥ 5 |
೫ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
لِكَيْ يَعْلَمُوا مِنْ مَشْرِقِ ٱلشَّمْسِ وَمِنْ مَغْرِبِهَا أَنْ لَيْسَ غَيْرِي. أَنَا ٱلرَّبُّ وَلَيْسَ آخَرُ. | ٦ 6 |
೬ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
مُصَوِّرُ ٱلنُّورِ وَخَالِقُ ٱلظُّلْمَةِ، صَانِعُ ٱلسَّلَامِ وَخَالِقُ ٱلشَّرِّ. أَنَا ٱلرَّبُّ صَانِعُ كُلِّ هَذِهِ. | ٧ 7 |
೭ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
اُقْطُرِي أَيَّتُهَا ٱلسَّمَاوَاتُ مِنْ فَوْقُ، وَلْيُنْزِلُ ٱلْجَوُّ بِرًّا. لِتَنْفَتِحِ ٱلْأَرْضُ فَيُثْمِرَ ٱلْخَلَاصُ، وَلْتُنْبِتْ بِرًّا مَعًا. أَنَا ٱلرَّبَّ قَدْ خَلَقْتُهُ. | ٨ 8 |
೮ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
«وَيْلٌ لِمَنْ يُخَاصِمُ جَابِلَهُ. خَزَفٌ بَيْنَ أَخْزَافِ ٱلْأَرْضِ. هَلْ يَقُولُ ٱلطِّينُ لِجَابِلِهِ: مَاذَا تَصْنَعُ؟ أَوْ يَقُولُ: عَمَلُكَ لَيْسَ لَهُ يَدَانِ؟ | ٩ 9 |
೯ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
وَيْلٌ لِلَّذِي يَقُولُ لِأَبِيهِ: مَاذَا تَلِدُ؟ وَلِلْمَرْأَةِ: مَاذَا تَلِدِينَ؟». | ١٠ 10 |
೧೦‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
هَكَذَا يَقُولُ ٱلرَّبُّ قُدُّوسُ إِسْرَائِيلَ وَجَابِلُهُ: «اِسْأَلُونِي عَنِ ٱلْآتِيَاتِ! مِنْ جِهَةِ بَنِيَّ وَمِنْ جِهَةِ عَمَلِ يَدِي أَوْصُونِي! | ١١ 11 |
೧೧ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
أَنَا صَنَعْتُ ٱلْأَرْضَ وَخَلَقْتُ ٱلْإِنْسَانَ عَلَيْهَا. يَدَايَ أَنَا نَشَرَتَا ٱلسَّمَاوَاتِ، وَكُلَّ جُنْدِهَا أَنَا أَمَرْتُ. | ١٢ 12 |
೧೨ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.
أَنَا قَدْ أَنْهَضْتُهُ بِٱلنَّصْرِ، وَكُلَّ طُرُقِهِ أُسَهِّلُ. هُوَ يَبْنِي مَدِينَتِي وَيُطْلِقُ سَبْيِي، لَا بِثَمَنٍ وَلَا بِهَدِيَّةٍ، قَالَ رَبُّ ٱلْجُنُودِ». | ١٣ 13 |
೧೩ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
هَكَذَا قَالَ ٱلرَّبُّ: «تَعَبُ مِصْرَ وَتِجَارَةُ كُوشٍ وَٱلسَّبَئِيُّونَ ذَوُو ٱلْقَامَةِ إِلَيْكِ يَعْبُرُونَ وَلَكِ يَكُونُونَ. خَلْفَكِ يَمْشُونَ. بِٱلْقُيُودِ يَمُرُّونَ وَلَكِ يَسْجُدُونَ. إِلَيْكِ يَتَضَرَّعُونَ قَائِلِينَ: فِيكِ وَحْدَكِ ٱللهُ وَلَيْسَ آخَرُ. لَيْسَ إِلَهٌ». | ١٤ 14 |
೧೪ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”
حَقًّا أَنْتَ إِلَهٌ مُحْتَجِبٌ يَا إِلَهَ إِسْرَائِيلَ ٱلْمُخَلِّصَ. | ١٥ 15 |
೧೫ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
قَدْ خَزُوا وَخَجِلُوا كُلُّهُمْ. مَضَوْا بِٱلْخَجَلِ جَمِيعًا، ٱلصَّانِعُونَ ٱلتَّمَاثِيلَ. | ١٦ 16 |
೧೬ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
أَمَّا إِسْرَائِيلُ فَيَخْلُصُ بِٱلرَّبِّ خَلَاصًا أَبَدِيًّا. لَا تَخْزَوْنَ وَلَا تَخْجَلُونَ إِلَى دُهُورِ ٱلْأَبَدِ. | ١٧ 17 |
೧೭ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
لِأَنَّهُ هَكَذَا قَالَ ٱلرَّبُّ: «خَالِقُ ٱلسَّمَاوَاتِ هُوَ ٱللهُ. مُصَوِّرُ ٱلْأَرْضِ وَصَانِعُهَا. هُوَ قَرَّرَهَا. لَمْ يَخْلُقْهَا بَاطِلًا. لِلسَّكَنِ صَوَّرَهَا. أَنَا ٱلرَّبُّ وَلَيْسَ آخَرُ. | ١٨ 18 |
೧೮ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
لَمْ أَتَكَلَّمْ بِٱلْخِفَاءِ فِي مَكَانٍ مِنَ ٱلْأَرْضِ مُظْلِمٍ. لَمْ أَقُلْ لِنَسْلِ يَعْقُوبَ: بَاطِلًا ٱطْلُبُونِي. أَنَا ٱلرَّبُّ مُتَكَلِّمٌ بِٱلصِّدْقِ، مُخْبِرٌ بِٱلِٱسْتِقَامَةِ. | ١٩ 19 |
೧೯ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
«اِجْتَمِعُوا وَهَلُمُّوا تَقَدَّمُوا مَعًا أَيُّهَا ٱلنَّاجُونَ مِنَ ٱلْأُمَمِ. لَا يَعْلَمُ ٱلْحَامِلُونَ خَشَبَ صَنَمِهِمْ، وَٱلْمُصَلُّونَ إِلَى إِلَهٍ لَا يُخَلِّصُ. | ٢٠ 20 |
೨೦ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
أَخْبِرُوا. قَدِّمُوا. وَلْيَتَشَاوَرُوا مَعًا. مَنْ أَعْلَمَ بِهَذِهِ مُنْذُ ٱلْقَدِيمِ، أَخْبَرَ بِهَا مُنْذُ زَمَانٍ؟ أَلَيْسَ أَنَا ٱلرَّبُّ وَلَا إِلَهَ آخَرَ غَيْرِي؟ إِلَهٌ بَارٌّ وَمُخَلِّصٌ. لَيْسَ سِوَايَ. | ٢١ 21 |
೨೧ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
اِلْتَفِتُوا إِلَيَّ وَٱخْلُصُوا يَا جَمِيعَ أَقَاصِي ٱلْأَرْضِ، لِأَنِّي أَنَا ٱللهُ وَلَيْسَ آخَرَ. | ٢٢ 22 |
೨೨ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
بِذَاتِي أَقْسَمْتُ، خَرَجَ مِنْ فَمِي ٱلصِّدْقُ كَلِمَةٌ لَا تَرْجِعُ: إِنَّهُ لِي تَجْثُو كُلُّ رُكْبَةٍ، يَحْلِفُ كُلُّ لِسَانٍ. | ٢٣ 23 |
೨೩ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
قَالَ لِي: إِنَّمَا بِٱلرَّبِّ ٱلْبِرُّ وَٱلْقُوَّةُ. إِلَيْهِ يَأْتِي، وَيَخْزَى جَمِيعُ ٱلْمُغْتَاظِينَ عَلَيْهِ. | ٢٤ 24 |
೨೪ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
بِٱلرَّبِّ يَتَبَرَّرُ وَيَفْتَخِرُ كُلُّ نَسْلِ إِسْرَائِيلَ». | ٢٥ 25 |
೨೫ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.