< يوحنَّا 10 >

«اَلْحَقَّ ٱلْحَقَّ أَقُولُ لَكُمْ: إِنَّ ٱلَّذِي لَا يَدْخُلُ مِنَ ٱلْبَابِ إِلَى حَظِيرَةِ ٱلْخِرَافِ، بَلْ يَطْلَعُ مِنْ مَوْضِعٍ آخَرَ، فَذَاكَ سَارِقٌ وَلِصٌّ. ١ 1
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.
وَأَمَّا ٱلَّذِي يَدْخُلُ مِنَ ٱلْبَابِ فَهُوَ رَاعِي ٱلْخِرَافِ. ٢ 2
ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.
لِهَذَا يَفْتَحُ ٱلْبَوَّابُ، وَٱلْخِرَافُ تَسْمَعُ صَوْتَهُ، فَيَدْعُو خِرَافَهُ ٱلْخَاصَّةَ بِأَسْمَاءٍ وَيُخْرِجُهَا. ٣ 3
ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
وَمَتَى أَخْرَجَ خِرَافَهُ ٱلْخَاصَّةَ يَذْهَبُ أَمَامَهَا، وَٱلْخِرَافُ تَتْبَعُهُ، لِأَنَّهَا تَعْرِفُ صَوْتَهُ. ٤ 4
ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
وَأَمَّا ٱلْغَرِيبُ فَلَا تَتْبَعُهُ بَلْ تَهْرُبُ مِنْهُ، لِأَنَّهَا لَا تَعْرِفُ صَوْتَ ٱلْغُرَبَاءِ». ٥ 5
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.
هَذَا ٱلْمَثَلُ قَالَهُ لَهُمْ يَسُوعُ، وَأَمَّا هُمْ فَلَمْ يَفْهَمُوا مَا هُوَ ٱلَّذِي كَانَ يُكَلِّمُهُمْ بِهِ. ٦ 6
ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.
فَقَالَ لَهُمْ يَسُوعُ أَيْضًا: «ٱلْحَقَّ ٱلْحَقَّ أَقُولُ لَكُمْ: إِنِّي أَنَا بَابُ ٱلْخِرَافِ. ٧ 7
ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.
جَمِيعُ ٱلَّذِينَ أَتَوْا قَبْلِي هُمْ سُرَّاقٌ وَلُصُوصٌ، وَلَكِنَّ ٱلْخِرَافَ لَمْ تَسْمَعْ لَهُمْ. ٨ 8
ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
أَنَا هُوَ ٱلْبَابُ. إِنْ دَخَلَ بِي أَحَدٌ فَيَخْلُصُ وَيَدْخُلُ وَيَخْرُجُ وَيَجِدُ مَرْعًى. ٩ 9
ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.
اَلسَّارِقُ لَا يَأْتِي إِلَّا لِيَسْرِقَ وَيَذْبَحَ وَيُهْلِكَ، وَأَمَّا أَنَا فَقَدْ أَتَيْتُ لِتَكُونَ لَهُمْ حَيَاةٌ وَلِيَكُونَ لَهُمْ أَفْضَلُ. ١٠ 10
ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
أَنَا هُوَ ٱلرَّاعِي ٱلصَّالِحُ، وَٱلرَّاعِي ٱلصَّالِحُ يَبْذِلُ نَفْسَهُ عَنِ ٱلْخِرَافِ. ١١ 11
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
وَأَمَّا ٱلَّذِي هُوَ أَجِيرٌ، وَلَيْسَ رَاعِيًا، ٱلَّذِي لَيْسَتِ ٱلْخِرَافُ لَهُ، فَيَرَى ٱلذِّئْبَ مُقْبِلًا وَيَتْرُكُ ٱلْخِرَافَ وَيَهْرُبُ، فَيَخْطَفُ ٱلذِّئْبُ ٱلْخِرَافَ وَيُبَدِّدُهَا. ١٢ 12
ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.
وَٱلْأَجِيرُ يَهْرُبُ لِأَنَّهُ أَجِيرٌ، وَلَا يُبَالِي بِٱلْخِرَافِ. ١٣ 13
ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.
أَمَّا أَنَا فَإِنِّي ٱلرَّاعِي ٱلصَّالِحُ، وَأَعْرِفُ خَاصَّتِي وَخَاصَّتِي تَعْرِفُنِي، ١٤ 14
“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.
كَمَا أَنَّ ٱلْآبَ يَعْرِفُنِي وَأَنَا أَعْرِفُ ٱلْآبَ. وَأَنَا أَضَعُ نَفْسِي عَنِ ٱلْخِرَافِ. ١٥ 15
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
وَلِي خِرَافٌ أُخَرُ لَيْسَتْ مِنْ هَذِهِ ٱلْحَظِيرَةِ، يَنْبَغِي أَنْ آتِيَ بِتِلْكَ أَيْضًا فَتَسْمَعُ صَوْتِي، وَتَكُونُ رَعِيَّةٌ وَاحِدَةٌ وَرَاعٍ وَاحِدٌ. ١٦ 16
ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.
لِهَذَا يُحِبُّنِي ٱلْآبُ، لِأَنِّي أَضَعُ نَفْسِي لِآخُذَهَا أَيْضًا. ١٧ 17
ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.
لَيْسَ أَحَدٌ يَأْخُذُهَا مِنِّي، بَلْ أَضَعُهَا أَنَا مِنْ ذَاتِي. لِي سُلْطَانٌ أَنْ أَضَعَهَا وَلِي سُلْطَانٌ أَنْ آخُذَهَا أَيْضًا. هَذِهِ ٱلْوَصِيَّةُ قَبِلْتُهَا مِنْ أَبِي». ١٨ 18
ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.
فَحَدَثَ أَيْضًا ٱنْشِقَاقٌ بَيْنَ ٱلْيَهُودِ بِسَبَبِ هَذَا ٱلْكَلَامِ. ١٩ 19
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.
فَقَالَ كَثِيرُونَ مِنْهُمْ: «بِهِ شَيْطَانٌ وَهُوَ يَهْذِي. لِمَاذَا تَسْتَمِعُونَ لَهُ؟». ٢٠ 20
ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.
آخَرُونَ قَالُوا: «لَيْسَ هَذَا كَلَامَ مَنْ بِهِ شَيْطَانٌ. أَلَعَلَّ شَيْطَانًا يَقْدِرُ أَنْ يَفْتَحَ أَعْيُنَ ٱلْعُمْيَانِ؟». ٢١ 21
ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
وَكَانَ عِيدُ ٱلتَّجْدِيدِ فِي أُورُشَلِيمَ، وَكَانَ شِتَاءٌ. ٢٢ 22
ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.
وَكَانَ يَسُوعُ يَتَمَشَّى فِي ٱلْهَيْكَلِ فِي رِوَاقِ سُلَيْمَانَ، ٢٣ 23
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.
فَٱحْتَاطَ بِهِ ٱلْيَهُودُ وَقَالُوا لَهُ: «إِلَى مَتَى تُعَلِّقُ أَنْفُسَنَا؟ إِنْ كُنْتَ أَنْتَ ٱلْمَسِيحَ فَقُلْ لَنَا جَهْرًا». ٢٤ 24
ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.
أَجَابَهُمْ يَسُوعُ: «إِنِّي قُلْتُ لَكُمْ وَلَسْتُمْ تُؤْمِنُونَ. اَلْأَعْمَالُ ٱلَّتِي أَنَا أَعْمَلُهَا بِٱسْمِ أَبِي هِيَ تَشْهَدُ لِي. ٢٥ 25
ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
وَلَكِنَّكُمْ لَسْتُمْ تُؤْمِنُونَ لِأَنَّكُمْ لَسْتُمْ مِنْ خِرَافِي، كَمَا قُلْتُ لَكُمْ. ٢٦ 26
ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.
خِرَافِي تَسْمَعُ صَوْتِي، وَأَنَا أَعْرِفُهَا فَتَتْبَعُنِي. ٢٧ 27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
وَأَنَا أُعْطِيهَا حَيَاةً أَبَدِيَّةً، وَلَنْ تَهْلِكَ إِلَى ٱلْأَبَدِ، وَلَا يَخْطَفُهَا أَحَدٌ مِنْ يَدِي. (aiōn g165, aiōnios g166) ٢٨ 28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn g165, aiōnios g166)
أَبِي ٱلَّذِي أَعْطَانِي إِيَّاهَا هُوَ أَعْظَمُ مِنَ ٱلْكُلِّ، وَلَا يَقْدِرُ أَحَدٌ أَنْ يَخْطَفَ مِنْ يَدِ أَبِي. ٢٩ 29
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.
أَنَا وَٱلْآبُ وَاحِدٌ». ٣٠ 30
ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.
فَتَنَاوَلَ ٱلْيَهُودُ أَيْضًا حِجَارَةً لِيَرْجُمُوهُ. ٣١ 31
ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.
أَجَابَهُمْ يَسُوعُ: «أَعْمَالًا كَثِيرَةً حَسَنَةً أَرَيْتُكُمْ مِنْ عِنْدِ أَبِي. بِسَبَبِ أَيِّ عَمَلٍ مِنْهَا تَرْجُمُونَنِي؟». ٣٢ 32
ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.
أَجَابَهُ ٱلْيَهُودُ قَائِلِينَ: «لَسْنَا نَرْجُمُكَ لِأَجْلِ عَمَلٍ حَسَنٍ، بَلْ لِأَجْلِ تَجْدِيفٍ، فَإِنَّكَ وَأَنْتَ إِنْسَانٌ تَجْعَلُ نَفْسَكَ إِلَهًا». ٣٣ 33
ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.
أَجَابَهُمْ يَسُوعُ: «أَلَيْسَ مَكْتُوبًا فِي نَامُوسِكُمْ: أَنَا قُلْتُ إِنَّكُمْ آلِهَةٌ؟ ٣٤ 34
ಅದಕ್ಕೆ ಯೇಸು, “‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?
إِنْ قَالَ آلِهَةٌ لِأُولَئِكَ ٱلَّذِينَ صَارَتْ إِلَيْهِمْ كَلِمَةُ ٱللهِ، وَلَا يُمْكِنُ أَنْ يُنْقَضَ ٱلْمَكْتُوبُ، ٣٥ 35
ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.
فَٱلَّذِي قَدَّسَهُ ٱلْآبُ وَأَرْسَلَهُ إِلَى ٱلْعَالَمِ، أَتَقُولُونَ لَهُ: إِنَّكَ تُجَدِّفُ، لِأَنِّي قُلْتُ: إِنِّي ٱبْنُ ٱللهِ؟ ٣٦ 36
ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?
إِنْ كُنْتُ لَسْتُ أَعْمَلُ أَعْمَالَ أَبِي فَلَا تُؤْمِنُوا بِي. ٣٧ 37
ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ.
وَلَكِنْ إِنْ كُنْتُ أَعْمَلُ، فَإِنْ لَمْ تُؤْمِنُوا بِي فَآمِنُوا بِٱلْأَعْمَالِ، لِكَيْ تَعْرِفُوا وَتُؤْمِنُوا أَنَّ ٱلْآبَ فِيَّ وَأَنَا فِيهِ». ٣٨ 38
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.
فَطَلَبُوا أَيْضًا أَنْ يُمْسِكُوهُ فَخَرَجَ مِنْ أَيْدِيهِمْ، ٣٩ 39
ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.
وَمَضَى أَيْضًا إِلَى عَبْرِ ٱلْأُرْدُنِّ إِلَى ٱلْمَكَانِ ٱلَّذِي كَانَ يُوحَنَّا يُعَمِّدُ فِيهِ أَوَّلًا وَمَكَثَ هُنَاكَ. ٤٠ 40
ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.
فَأَتَى إِلَيْهِ كَثِيرُونَ وَقَالُوا: «إِنَّ يُوحَنَّا لَمْ يَفْعَلْ آيَةً وَاحِدَةً، وَلَكِنْ كُلُّ مَا قَالَهُ يُوحَنَّا عَنْ هَذَا كَانَ حَقًّا». ٤١ 41
ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.
فَآمَنَ كَثِيرُونَ بِهِ هُنَاكَ. ٤٢ 42
ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

< يوحنَّا 10 >