< اَللَّاوِيِّينَ 8 >
وَكَلَّمَ ٱلرَّبُّ مُوسَى قَائِلًا: | ١ 1 |
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ,
«خُذْ هَارُونَ وَبَنِيهِ مَعَهُ، وَٱلثِّيَابَ وَدُهْنَ ٱلْمَسْحَةِ وَثَوْرَ ٱلْخَطِيَّةِ وَٱلْكَبْشَيْنِ وَسَلَّ ٱلْفَطِيرِ، | ٢ 2 |
೨“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
وَٱجْمَعْ كُلَّ ٱلْجَمَاعَةِ إِلَى بَابِ خَيْمَةِ ٱلِٱجْتِمَاعِ». | ٣ 3 |
೩ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
فَفَعَلَ مُوسَى كَمَا أَمَرَهُ ٱلرَّبُّ. فَٱجْتَمَعَتِ ٱلْجَمَاعَةُ إِلَى بَابِ خَيْمَةِ ٱلِٱجْتِمَاعِ. | ٤ 4 |
೪ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
ثُمَّ قَالَ مُوسَى لِلْجَمَاعَةِ: «هَذَا مَا أَمَرَ ٱلرَّبُّ أَنْ يُفْعَلَ». | ٥ 5 |
೫ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು.
فَقَدَّمَ مُوسَى هَارُونَ وَبَنِيهِ وَغَسَّلَهُمْ بِمَاءٍ. | ٦ 6 |
೬ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
وَجَعَلَ عَلَيْهِ ٱلْقَمِيصَ وَنَطَّقَهُ بِٱلْمِنْطَقَةِ وَأَلْبَسَهُ ٱلْجُبَّةَ وَجَعَلَ عَلَيْهِ ٱلرِّدَاءَ، وَنَطَّقَهُ بِزُنَّارِ ٱلرِّدَاءِ وَشَدَّهُ بِهِ. | ٧ 7 |
೭ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
وَوَضَعَ عَلَيْهِ ٱلصُّدْرَةَ وَجَعَلَ فِي ٱلصُّدْرَةِ ٱلْأُورِيمَ وَٱلتُّمِّيمَ. | ٨ 8 |
೮ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
وَوَضَعَ ٱلْعِمَامَةَ عَلَى رَأْسِهِ، وَوَضَعَ عَلَى ٱلْعِمَامَةِ إِلَى جِهَةِ وَجْهِهِ صَفِيحَةَ ٱلذَّهَبِ، ٱلْإِكْلِيلَ ٱلْمُقَدَّسَ، كَمَا أَمَرَ ٱلرَّبُّ مُوسَى. | ٩ 9 |
೯ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
ثُمَّ أَخَذَ مُوسَى دُهْنَ ٱلْمَسْحَةِ وَمَسَحَ ٱلْمَسْكَنَ وَكُلَّ مَا فِيهِ وَقَدَّسَهُ، | ١٠ 10 |
೧೦ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
وَنَضَحَ مِنْهُ عَلَى ٱلْمَذْبَحِ سَبْعَ مَرَّاتٍ، وَمَسَحَ ٱلْمَذْبَحَ وَجَمِيعَ آنِيَتِهِ، وَٱلْمِرْحَضَةَ وَقَاعِدَتَهَا لِتَقْدِيسِهَا. | ١١ 11 |
೧೧ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
وَصَبَّ مِنْ دُهْنِ ٱلْمَسْحَةِ عَلَى رَأْسِ هَارُونَ وَمَسَحَهُ لِتَقْدِيسِهِ. | ١٢ 12 |
೧೨ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
ثُمَّ قَدَّمَ مُوسَى بَنِي هَارُونَ وَأَلْبَسَهُمْ أَقْمِصَةً وَنَطَّقَهُمْ بِمَنَاطِقَ وَشَدَّ لَهُمْ قَلَانِسَ، كَمَا أَمَرَ ٱلرَّبُّ مُوسَى. | ١٣ 13 |
೧೩ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.
ثُمَّ قَدَّمَ ثَوْرَ ٱلْخَطِيَّةِ، وَوَضَعَ هَارُونُ وَبَنُوهُ أَيْدِيَهُمْ عَلَى رَأْسِ ثَوْرِ ٱلْخَطِيَّةِ. | ١٤ 14 |
೧೪ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
فَذَبَحَهُ، وَأَخَذَ مُوسَى ٱلدَّمَ وَجَعَلَهُ عَلَى قُرُونِ ٱلْمَذْبَحِ مُسْتَدِيرًا بِإِصْبَعِهِ، وَطَهَّرَ ٱلْمَذْبَحَ. ثُمَّ صَبَّ ٱلدَّمَ إِلَى أَسْفَلِ ٱلْمَذْبَحِ وَقَدَّسَهُ تَكْفِيرًا عَنْهُ. | ١٥ 15 |
೧೫ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
وَأَخَذَ كُلَّ ٱلشَّحْمِ ٱلَّذِي عَلَى ٱلْأَحْشَاءِ وَزِيَادَةَ ٱلْكَبِدِ وَٱلْكُلْيَتَيْنِ وَشَحْمَهُمَا، وَأَوْقَدَهُ مُوسَى عَلَى ٱلْمَذْبَحِ. | ١٦ 16 |
೧೬ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
وَأَمَّا ٱلثَّوْرُ: جِلْدُهُ وَلَحْمُهُ وَفَرْثُهُ، فَأَحْرَقَهُ بِنَارٍ خَارِجَ ٱلْمَحَلَّةِ، كَمَا أَمَرَ ٱلرَّبُّ مُوسَى. | ١٧ 17 |
೧೭ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
ثُمَّ قَدَّمَ كَبْشَ ٱلْمُحْرَقَةِ، فَوَضَعَ هَارُونُ وَبَنُوهُ أَيْدِيَهُمْ عَلَى رَأْسِ ٱلْكَبْشِ. | ١٨ 18 |
೧೮ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
فَذَبَحَهُ، وَرَشَّ مُوسَى ٱلدَّمَ عَلَى ٱلْمَذْبَحِ مُسْتَدِيرًا. | ١٩ 19 |
೧೯ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
وَقَطَّعَ ٱلْكَبْشَ إِلَى قِطَعِهِ. وَأَوْقَدَ مُوسَى ٱلرَّأْسَ وَٱلْقِطَعَ وَٱلشَّحْمَ. | ٢٠ 20 |
೨೦ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.
وَأَمَّا ٱلْأَحْشَاءُ وَٱلْأَكَارِعُ فَغَسَلَهَا بِمَاءٍ، وَأَوْقَدَ مُوسَى كُلَّ ٱلْكَبْشِ عَلَى ٱلْمَذْبَحِ. إِنَّهُ مُحْرَقَةٌ لِرَائِحَةِ سَرُورٍ. وَقُودٌ هُوَ لِلرَّبِّ، كَمَا أَمَرَ ٱلرَّبُّ مُوسَى. | ٢١ 21 |
೨೧ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
ثُمَّ قَدَّمَ ٱلْكَبْشَ ٱلثَّانِي، كَبْشَ ٱلْمَلْءِ، فَوَضَعَ هَارُونُ وَبَنُوهُ أَيْدِيَهُمْ عَلَى رَأْسِ ٱلْكَبْشِ. | ٢٢ 22 |
೨೨ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
فَذَبَحَهُ، وَأَخَذَ مُوسَى مِنْ دَمِهِ وَجَعَلَ عَلَى شَحْمَةِ أُذُنِ هَارُونَ ٱلْيُمْنَى، وَعَلَى إِبْهَامِ يَدِهِ ٱلْيُمْنَى، وَعَلَى إِبْهَامِ رِجْلِهِ ٱلْيُمْنَى. | ٢٣ 23 |
೨೩ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
ثُمَّ قَدَّمَ مُوسَى بَنِي هَارُونَ وَجَعَلَ مِنَ ٱلدَّمِ عَلَى شَحْمِ آذَانِهِمِ ٱلْيُمْنَى، وَعَلَى أَبَاهِمِ أَيْدِيهِمِ ٱلْيُمْنَى، وَعَلَى أَبَاهِمِ أَرْجُلِهِمِ ٱلْيُمْنَى، ثُمَّ رَشَّ مُوسَى ٱلدَّمَ عَلَى ٱلْمَذْبَحِ مُسْتَدِيرًا. | ٢٤ 24 |
೨೪ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
ثُمَّ أَخَذَ ٱلشَّحْمَ: ٱلْأَلْيَةَ وَكُلَّ ٱلشَّحْمِ ٱلَّذِي عَلَى ٱلْأَحْشَاءِ، وَزِيَادَةَ ٱلْكَبِدِ وَٱلْكُلْيَتَيْنِ وَشَحْمَهُمَا، وَٱلسَّاقَ ٱلْيُمْنَى، | ٢٥ 25 |
೨೫ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
وَمِنْ سَلِّ ٱلْفَطِيرِ ٱلَّذِي أَمَامَ ٱلرَّبِّ، أَخَذَ قُرْصًا وَاحِدًا فَطِيرًا، وَقُرْصًا وَاحِدًا مِنَ ٱلْخُبْزِ بِزَيْتٍ، وَرُقَاقَةً وَاحِدَةً، وَوَضَعَهَا عَلَى ٱلشَّحْمِ وَعَلَى ٱلسَّاقِ ٱلْيُمْنَى، | ٢٦ 26 |
೨೬ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
وَجَعَلَ ٱلْجَمِيعَ عَلَى كَفَّيْ هَارُونَ وَكُفُوفِ بَنِيهِ، وَرَدَّدَهَا تَرْدِيدًا أَمَامَ ٱلرَّبِّ. | ٢٧ 27 |
೨೭ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.
ثُمَّ أَخَذَهَا مُوسَى عَنْ كُفُوفِهِمْ، وَأَوْقَدَهَا عَلَى ٱلْمَذْبَحِ فَوْقَ ٱلْمُحْرَقَةِ. إِنَّهَا قُرْبَانُ مَلْءٍ لِرَائِحَةِ سَرُورٍ. وَقُودٌ هِيَ لِلرَّبِّ. | ٢٨ 28 |
೨೮ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.
ثُمَّ أَخَذَ مُوسَى ٱلصَّدْرَ وَرَدَّدَهُ تَرْدِيدًا أَمَامَ ٱلرَّبِّ مِنْ كَبْشِ ٱلْمَلْءِ. لِمُوسَى كَانَ نَصِيبًا، كَمَا أَمَرَ ٱلرَّبُّ مُوسَى. | ٢٩ 29 |
೨೯ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
ثُمَّ أَخَذَ مُوسَى مِنْ دُهْنِ ٱلْمَسْحَةِ وَمِنَ ٱلدَّمِ ٱلَّذِي عَلَى ٱلْمَذْبَحِ، وَنَضَحَ عَلَى هَارُونَ وَعَلَى ثِيَابِهِ، وَعَلَى بَنِيهِ وَعَلَى ثِيَابِ بَنِيهِ مَعَهُ. وَقَدَّسَ هَارُونَ وَثِيَابَهُ وَبَنِيهِ وَثِيَابَ بَنِيهِ مَعَهُ. | ٣٠ 30 |
೩೦ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
ثُمَّ قَالَ مُوسَى لِهَارُونَ وَبَنِيهِ: «ٱطْبُخُوا ٱللَّحْمَ لَدَى بَابِ خَيْمَةِ ٱلِٱجْتِمَاعِ، وَهُنَاكَ تَأْكُلُونَهُ وَٱلْخُبْزَ ٱلَّذِي فِي سَلِّ قُرْبَانِ ٱلْمَلْءِ، كَمَا أَمَرْتُ قَائِلًا: هَارُونُ وَبَنُوهُ يَأْكُلُونَهُ. | ٣١ 31 |
೩೧ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
وَٱلْبَاقِي مِنَ ٱللَّحْمِ وَٱلْخُبْزِ تُحْرِقُونَهُ بِٱلنَّارِ. | ٣٢ 32 |
೩೨ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
وَمِنْ لَدُنْ بَابِ خَيْمَةِ ٱلِٱجْتِمَاعِ، لَا تَخْرُجُونَ سَبْعَةَ أَيَّامٍ إِلَى يَوْمِ كَمَالِ أَيَّامِ مَلْئِكُمْ، لِأَنَّهُ سَبْعَةَ أَيَّامٍ يَمْلَأُ أَيْدِيَكُمْ. | ٣٣ 33 |
೩೩ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
كَمَا فَعَلَ فِي هَذَا ٱلْيَوْمِ، قَدْ أَمَرَ ٱلرَّبُّ أَنْ يُفْعَلَ لِلتَّكْفِيرِ عَنْكُمْ. | ٣٤ 34 |
೩೪ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
وَلَدَى بَابِ خَيْمَةِ ٱلِٱجْتِمَاعِ تُقِيمُونَ نَهَارًا وَلَيْلًا سَبْعَةَ أَيَّامٍ، وَتَحْفَظُونَ شَعَائِرَ ٱلرَّبِّ فَلَا تَمُوتُونَ، لِأَنِّي هَكَذَا أُمِرْتُ». | ٣٥ 35 |
೩೫ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
فَعَمِلَ هَارُونُ وَبَنُوهُ كُلَّ مَا أَمَرَ بِهِ ٱلرَّبُّ عَلَى يَدِ مُوسَى. | ٣٦ 36 |
೩೬ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.