< نَاحُوم 1 >
وَحْيٌ عَلَى نِينَوَى. سِفْرُ رُؤْيَا نَاحُومَ ٱلْأَلْقُوشِيِّ. | ١ 1 |
ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
اَلرَّبُّ إِلَهٌ غَيُورٌ وَمُنْتَقِمٌ. ٱلرّبُّ مُنْتَقِمٌ وَذُو سَخَطٍ. ٱلرّبُّ مُنْتَقِمٌ مِن مُبْغِضِيهِ وَحَافِظٌ غَضَبَهُ عَلَى أَعْدَائِهِ. | ٢ 2 |
ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.
ٱلرَّبُّ بَطِيءُ ٱلْغَضَبِ وَعَظِيمُ ٱلْقُدْرَةِ، وَلَكِنَّهُ لَا يُبَرِّئُ ٱلْبَتَّةَ. ٱلرَّبُّ فِي ٱلزَّوْبَعَةِ، وَفِي ٱلْعَاصِفِ طَرِيقُهُ، وَٱلسَّحَابُ غُبَارُ رِجْلَيْهِ. | ٣ 3 |
ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.
يَنْتَهِرُ ٱلْبَحْرَ فَيُنَشِّفُهُ وَيُجَفِّفُ جَمِيعَ ٱلْأَنْهَارِ. يَذْبُلُ بَاشَانُ وَٱلْكَرْمَلُ، وَزَهْرُ لُبْنَانَ يَذْبُلُ. | ٤ 4 |
ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.
اَلْجِبَالُ تَرْجُفُ مِنْهُ، وَٱلتِّلَالُ تَذُوبُ، وَٱلْأَرْضُ تُرْفَعُ مِنْ وَجْهِهِ، وَٱلْعَالَمُ وَكُلُّ ٱلسَّاكِنِينَ فِيهِ. | ٥ 5 |
ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.
مَنْ يَقِفُ أَمَامَ سَخَطِهِ؟ وَمَنْ يَقُومُ فِي حُمُوِّ غَضَبِهِ؟ غَيْظُهُ يَنْسَكِبُ كَٱلنَّارِ، وَٱلصُّخُورُ تَنْهَدِمُ مِنْهُ. | ٦ 6 |
ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.
صَالِحٌ هُوَ ٱلرَّبُّ. حِصْنٌ فِي يَوْمِ ٱلضَّيقِ، وَهُوَ يَعْرِفُ ٱلْمُتَوَكِّلِينَ عَلَيْهِ. | ٧ 7 |
ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.
وَلَكِنْ بِطُوفَانٍ عَابِرٍ يَصْنَعُ هَلَاكًا تَامًّا لِمَوْضِعِهَا، وَأَعْدَاؤُهُ يَتْبَعُهُمْ ظَلَامٌ. | ٨ 8 |
ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.
مَاذَا تَفْتَكِرُونَ عَلَى ٱلرَّبِّ؟ هُوَ صَانِعٌ هَلَاكًا تَامًّا. لَا يَقُومُ ٱلضِّيقُ مَرَّتَيْنِ. | ٩ 9 |
ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.
فَإِنَّهُمْ وَهُمْ مُشْتَبِكُونَ مِثْلَ ٱلشَّوْكِ، وَسَكْرَانُونَ كَمِنْ خَمْرِهِمْ، يُؤْكَلُونَ كَٱلْقَشِّ ٱلْيَابِسِ بِٱلْكَمَالِ. | ١٠ 10 |
ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.
مِنْكِ خَرَجَ ٱلْمُفْتَكِرُ عَلَى ٱلرَّبِّ شَرًّا، ٱلْمُشِيرُ بِٱلْهَلَاكِ. | ١١ 11 |
ನಿನೆವೆಯೇ ಯೆಹೋವ ದೇವರಿಗೆ ವಿರೋಧವಾಗಿ ದುರಾಲೋಚನೆ ಮಾಡಿ, ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
هَكَذَا قَالَ ٱلرَّبُّ: «إِنْ كَانُوا سَالِمِينَ وَكَثِيرِينَ هَكَذَا، فَهَكَذَا يُجَزُّونَ فَيَعْبُرُ. أَذْلَلْتُكِ. لَا أُذِلُّكِ ثَانِيَةً. | ١٢ 12 |
ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.
وَٱلْآنَ أَكْسِرُ نِيرَهُ عَنْكِ وَأَقْطَعُ رُبُطَكِ». | ١٣ 13 |
ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.
وَلَكِنْ قَدْ أَوْصَى عَنْكَ ٱلرَّبُّ: «لَا يُزْرَعُ مِنِ ٱسْمِكَ فِي مَا بَعْدُ. إِنِّي أَقْطَعُ مِنْ بَيْتِ إِلَهِكَ ٱلتَّمَاثِيلَ ٱلْمَنْحُوتَةَ وَٱلْمَسْبُوكَةَ. أَجْعَلُهُ قَبْرَكَ، لِأَنَّكَ صِرْتَ حَقِيرًا». | ١٤ 14 |
ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.
هُوَذَا عَلَى ٱلْجِبَالِ قَدَمَا مُبَشِّرٍ مُنَادٍ بِٱلسَّلَامِ! عَيِّدِي يَا يَهُوذَا أَعْيَادَكِ. أَوْفِي نُذُورَكِ، فَإِنَّهُ لَا يَعُودُ يَعْبُرُ فِيكِ أَيْضًا ٱلْمُهْلِكُ. قَدِ ٱنْقَرَضَ كُلُّهُ. | ١٥ 15 |
ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.