< اَلْعَدَد 16 >
وَأَخَذَ قُورَحُ بْنُ يِصْهَارَ بْنِ قَهَاتَ بْنِ لَاوِي، وَدَاثَانُ وَأَبِيرَامُ ٱبْنَا أَلِيآبَ، وَأُونُ بْنُ فَالَتَ، بَنُو رَأُوبَيْنَ، | ١ 1 |
೧ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.
يُقَاوِمُونَ مُوسَى مَعَ أُنَاسٍ مِنْ بَنِي إِسْرَائِيلَ، مِئَتَيْنِ وَخَمْسِينَ رُؤَسَاءِ ٱلْجَمَاعَةِ مَدْعُوِّينَ لِلِٱجْتِمَاعِ ذَوِي ٱسْمٍ. | ٢ 2 |
೨ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
فَٱجْتَمَعُوا عَلَى مُوسَى وَهَارُونَ وَقَالُوا لَهُمَا: «كَفَاكُمَا! إِنَّ كُلَّ ٱلْجَمَاعَةِ بِأَسْرِهَا مُقَدَّسَةٌ وَفِي وَسَطِهَا ٱلرَّبُّ. فَمَا بَالُكُمَا تَرْتَفِعَانِ عَلَى جَمَاعَةِ ٱلرَّبِّ؟». | ٣ 3 |
೩ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
فَلَمَّا سَمِعَ مُوسَى سَقَطَ عَلَى وَجْهِهِ. | ٤ 4 |
೪ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
ثُمَّ كَلَّمَ قُورَحَ وَجَمِيعَ قَوْمِهِ قَائِلًا: «غَدًا يُعْلِنُ ٱلرَّبُّ مَنْ هُوَ لَهُ، وَمَنِ ٱلْمُقَدَّسُ حَتَّى يُقَرِّبَهُ إِلَيْهِ. فَٱلَّذِي يَخْتَارُهُ يُقَرِّبُهُ إِلَيْهِ. | ٥ 5 |
೫ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
اِفْعَلُوا هَذَا: خُذُوا لَكُمْ مَجَامِرَ. قُورَحُ وَكُلُّ جَمَاعَتِهِ. | ٦ 6 |
೬ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
وَٱجْعَلُوا فِيهَا نَارًا، وَضَعُوا عَلَيْهَا بَخُورًا أَمَامَ ٱلرَّبِّ غَدًا. فَٱلرَّجُلُ ٱلَّذِي يَخْتَارُهُ ٱلرَّبُّ هُوَ ٱلْمُقَدَّسُ. كَفَاكُمْ يَا بَنِي لَاوِي!». | ٧ 7 |
೭ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
وَقَالَ مُوسَى لِقُورَحَ: «ٱسْمَعُوا يَا بَنِي لَاوِي. | ٨ 8 |
೮ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
أَقَلِيلٌ عَلَيْكُمْ أَنَّ إِلَهَ إِسْرَائِيلَ أَفْرَزَكُمْ مِنْ جَمَاعَةِ إِسْرَائِيلَ لِيُقَرِّبَكُمْ إِلَيْهِ لِكَيْ تَعْمَلُوا خِدْمَةَ مَسْكَنِ ٱلرَّبِّ، وَتَقِفُوا قُدَّامَ ٱلْجَمَاعَةِ لِخِدْمَتِهَا؟ | ٩ 9 |
೯ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
فَقَرَّبَكَ وَجَمِيعَ إِخْوَتِكَ بَنِي لَاوِي مَعَكَ، وَتَطْلُبُونَ أَيْضًا كَهَنُوتًا! | ١٠ 10 |
೧೦ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
إِذَنْ أَنْتَ وَكُلُّ جَمَاعَتِكَ مُتَّفِقُونَ عَلَى ٱلرَّبِّ. وَأَمَّا هَارُونُ فَمَا هُوَ حَتَّى تَتَذَمَّرُوا عَلَيْهِ؟» | ١١ 11 |
೧೧ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
فَأَرْسَلَ مُوسَى لِيَدْعُوَ دَاثَانَ وَأَبِيرَامَ ٱبْنَيْ أَلِيآبَ. فَقَالَا: «لَا نَصْعَدُ! | ١٢ 12 |
೧೨ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
أَقَلِيلٌ أَنَّكَ أَصْعَدْتَنَا مِنْ أَرْضٍ تَفِيضُ لَبَنًا وَعَسَلًا لِتُمِيتَنَا فِي ٱلْبَرِّيَّةِ حَتَّى تَتَرَأَسَ عَلَيْنَا تَرَؤُّسًا؟ | ١٣ 13 |
೧೩ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
كَذَلِكَ لَمْ تَأْتِ بِنَا إِلَى أَرْضٍ تَفِيضُ لَبَنًا وَعَسَلًا، وَلَا أَعْطَيْتَنَا نَصِيبَ حُقُولٍ وَكُرُومٍ. هَلْ تَقْلَعُ أَعْيُنَ هَؤُلَاءِ ٱلْقَوْمِ؟ لَا نَصْعَدُ!». | ١٤ 14 |
೧೪ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
فَٱغْتَاظَ مُوسَى جِدًّا وَقَالَ لِلرَّبِّ: «لَا تَلْتَفِتْ إِلَى تَقْدِمَتِهِمَا. حِمَارًا وَاحِدًا لَمْ آخُذْ مِنْهُمْ، وَلَا أَسَأْتُ إِلَى أَحَدٍ مِنْهُمْ». | ١٥ 15 |
೧೫ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
وَقَالَ مُوسَى لِقُورَحَ: «كُنْ أَنْتَ وَكُلُّ جَمَاعَتِكَ أَمَامَ ٱلرَّبِّ، أَنْتَ وَهُمْ وَهَارُونُ غَدًا، | ١٦ 16 |
೧೬ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
وَخُذُوا كُلُّ وَاحِدٍ مِجْمَرَتَهُ، وَٱجْعَلُوا فِيهَا بَخُورًا، وَقَدِّمُوا أَمَامَ ٱلرَّبِّ كُلُّ وَاحِدٍ مِجْمَرَتَهُ. مِئَتَيْنِ وَخَمْسِينَ مِجْمَرَةً. وَأَنْتَ وَهَارُونُ كُلُّ وَاحِدٍ مِجْمَرَتَهُ». | ١٧ 17 |
೧೭ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
فَأَخَذُوا كُلُّ وَاحِدٍ مِجْمَرَتَهُ وَجَعَلُوا فِيهَا نَارًا وَوَضَعُوا عَلَيْهَا بَخُورًا، وَوَقَفُوا لَدَى بَابِ خَيْمَةِ ٱلِٱجْتِمَاعِ مَعَ مُوسَى وَهَارُونَ. | ١٨ 18 |
೧೮ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
وَجَمَعَ عَلَيْهِمَا قُورَحُ كُلَّ ٱلْجَمَاعَةِ إِلَى بَابِ خَيْمَةِ ٱلِٱجْتِمَاعِ، فَتَرَاءَى مَجْدُ ٱلرَّبِّ لِكُلِّ ٱلْجَمَاعَةِ. | ١٩ 19 |
೧೯ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
وَكَلَّمَ ٱلرَّبُّ مُوسَى وَهَارُونَ قَائِلًا: | ٢٠ 20 |
೨೦ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
«ٱفْتَرِزَا مِنْ بَيْنِ هَذِهِ ٱلْجَمَاعَةِ فَإِنِّي أُفْنِيهِمْ فِي لَحْظَةٍ». | ٢١ 21 |
೨೧“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
فَخَرَّا عَلَى وَجْهَيْهِمَا وَقَالَا: «ٱللَّهُمَّ، إِلَهَ أَرْوَاحِ جَمِيعِ ٱلْبَشَرِ، هَلْ يُخْطِئُ رَجُلٌ وَاحِدٌ فَتَسْخَطَ عَلَى كُلِّ ٱلْجَمَاعَةِ؟» | ٢٢ 22 |
೨೨ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
فَكَلَّمَ ٱلرَّبُّ مُوسَى قَائِلًا: | ٢٣ 23 |
೨೩ಆಗ ಯೆಹೋವನು ಮೋಶೆಗೆ ಉತ್ತರವಾಗಿ,
«كَلِّمِ ٱلْجَمَاعَةَ قَائِلًا: ٱطْلَعُوا مِنْ حَوَالَيْ مَسْكَنِ قُورَحَ وَدَاثَانَ وَأَبِيرَامَ». | ٢٤ 24 |
೨೪“ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು.
فَقَامَ مُوسَى وَذَهَبَ إِلَى دَاثَانَ وَأَبِيرَامَ، وَذَهَبَ وَرَاءَهُ شُيُوخُ إِسْرَائِيلَ. | ٢٥ 25 |
೨೫ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
فَكَلَّمَ ٱلْجَمَاعَةَ قَائِلًا: «ٱعْتَزِلُوا عَنْ خِيَامِ هَؤُلَاءِ ٱلْقَوْمِ ٱلْبُغَاةِ، وَلَا تَمَسُّوا شَيْئًا مِمَّا لَهُمْ لِئَلَّا تَهْلَكُوا بِجَمِيعِ خَطَايَاهُمْ». | ٢٦ 26 |
೨೬ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
فَطَلَعُوا مِنْ حَوَالَيْ مَسْكَنِ قُورَحَ وَدَاثَانَ وَأَبِيرَامَ، وَخَرَجَ دَاثَانُ وَأَبِيرَامُ وَوَقَفَا فِي بَابِ خَيْمَتَيْهِمَا مَعَ نِسَائِهِمَا وَبَنِيهِمَا وَأَطْفَالِهِمَا. | ٢٧ 27 |
೨೭ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
فَقَالَ مُوسَى: «بِهَذَا تَعْلَمُونَ أَنَّ ٱلرَّبَّ قَدْ أَرْسَلَنِي لِأَعْمَلَ كُلَّ هَذِهِ ٱلْأَعْمَالِ، وَأَنَّهَا لَيْسَتْ مِنْ نَفْسِي. | ٢٨ 28 |
೨೮ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
إِنْ مَاتَ هَؤُلَاءِ كَمَوْتِ كُلِّ إِنْسَانٍ، وَأَصَابَتْهُمْ مَصِيبَةُ كُلِّ إِنْسَانٍ، فَلَيْسَ ٱلرَّبُّ قَدْ أَرْسَلَنِي. | ٢٩ 29 |
೨೯ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
وَلَكِنْ إِنِ ٱبْتَدَعَ ٱلرَّبُّ بِدْعَةً وَفَتَحَتِ ٱلْأَرْضُ فَاهَا وَٱبْتَلَعَتْهُمْ وَكُلَّ مَا لَهُمْ، فَهَبَطُوا أَحْيَاءً إِلَى ٱلْهَاوِيَةِ، تَعْلَمُونَ أَنَّ هَؤُلَاءِ ٱلْقَوْمَ قَدِ ٱزْدَرَوْا بِٱلرَّبِّ». (Sheol ) | ٣٠ 30 |
೩೦ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು. (Sheol )
فَلَمَّا فَرَغَ مِنَ ٱلتَّكَلُّمِ بِكُلِّ هَذَا ٱلْكَلَامِ، ٱنْشَقَّتِ ٱلْأَرْضُ ٱلَّتِي تَحْتَهُمْ، | ٣١ 31 |
೩೧ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
وَفَتَحَتِ ٱلْأَرْضُ فَاهَا وَٱبْتَلَعَتْهُمْ وَبُيُوتَهُمْ وَكُلَّ مَنْ كَانَ لِقُورَحَ مَعَ كُلِّ ٱلْأَمْوَالِ، | ٣٢ 32 |
೩೨ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
فَنَزَلُوا هُمْ وَكُلُّ مَا كَانَ لَهُمْ أَحْيَاءً إِلَى ٱلْهَاوِيَةِ، وَٱنْطَبَقَتْ عَلَيْهِمِ ٱلْأَرْضُ، فَبَادُوا مِنْ بَيْنِ ٱلْجَمَاعَةِ. (Sheol ) | ٣٣ 33 |
೩೩ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. (Sheol )
وَكُلُّ إِسْرَائِيلَ ٱلَّذِينَ حَوْلَهُمْ هَرَبُوا مِنْ صَوْتِهِمْ، لِأَنَّهُمْ قَالُوا: «لَعَلَّ ٱلْأَرْضَ تَبْتَلِعُنَا». | ٣٤ 34 |
೩೪ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
وَخَرَجَتْ نَارٌ مِنْ عِنْدِ ٱلرَّبِّ وَأَكَلَتِ ٱلْمِئَتَيْنِ وَٱلْخَمْسِينَ رَجُلًا ٱلَّذِينَ قَرَّبُوا ٱلْبَخُورَ. | ٣٥ 35 |
೩೫ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.
ثُمَّ كَلَّمَ ٱلرَّبُّ مُوسَى قَائِلًا: | ٣٦ 36 |
೩೬ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ
«قُلْ لِأَلِعَازَارَ بْنِ هَارُونَ ٱلْكَاهِنِ أَنْ يَرْفَعَ ٱلْمَجَامِرَ مِنَ ٱلْحَرِيقِ، وَٱذْرِ ٱلنَّارَ هُنَاكَ فَإِنَّهُنَّ قَدْ تَقَدَّسْنَ. | ٣٧ 37 |
೩೭“ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.
مَجَامِرَ هَؤُلَاءِ ٱلْمُخْطِئِينَ ضِدَّ نُفُوسِهِمْ، فَلْيَعْمَلُوهَا صَفَائِحَ مَطْرُوقَةً غِشَاءً لِلْمَذْبَحِ، لِأَنَّهُمْ قَدْ قَدَّمُوهَا أَمَامَ ٱلرَّبِّ فَتَقَدَّسَتْ. فَتَكُونُ عَلَامَةً لِبَنِي إِسْرَائِيلَ». | ٣٨ 38 |
೩೮ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.
فَأَخَذَ أَلِعَازَارُ ٱلْكَاهِنُ مَجَامِرَ ٱلنُّحَاسِ ٱلَّتِي قَدَّمَهَا ٱلْمُحْتَرِقُونَ، وَطَرَقُوهَا غِشَاءً لِلْمَذْبَحِ، | ٣٩ 39 |
೩೯ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
تَذْكَارًا لِبَنِي إِسْرَائِيلَ، لِكَيْ لَا يَقْتَرِبَ رَجُلٌ أَجْنَبِيٌّ لَيْسَ مِنْ نَسْلِ هَارُونَ لِيُبَخِّرَ بَخُورًا أَمَامَ ٱلرَّبِّ، فَيَكُونَ مِثْلَ قُورَحَ وَجَمَاعَتِهِ، كَمَا كَلَّمَهُ ٱلرَّبُّ عَنْ يَدِ مُوسَى. | ٤٠ 40 |
೪೦ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
فَتَذَمَّرَ كُلُّ جَمَاعَةِ بَنِي إِسْرَائِيلَ فِي ٱلْغَدِ عَلَى مُوسَى وَهَارُونَ قَائِلِينَ: «أَنْتُمَا قَدْ قَتَلْتُمَا شَعْبَ ٱلرَّبِّ». | ٤١ 41 |
೪೧ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
وَلَمَّا ٱجْتَمَعَتِ ٱلْجَمَاعَةُ عَلَى مُوسَى وَهَارُونَ ٱنْصَرَفَا إِلَى خَيْمَةِ ٱلِٱجْتِمَاعِ وَإِذَا هِيَ قَدْ غَطَّتْهَا ٱلسَّحَابَةُ وَتَرَاءَى مَجْدُ ٱلرَّبِّ. | ٤٢ 42 |
೪೨ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.
فَجَاءَ مُوسَى وَهَارُونُ إِلَى قُدَّامِ خَيْمَةِ ٱلِٱجْتِمَاعِ. | ٤٣ 43 |
೪೩ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.
فَكَلَّمَ ٱلرَّبُّ مُوسَى قَائِلًا: | ٤٤ 44 |
೪೪ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
«اِطْلَعَا مِنْ وَسَطِ هَذِهِ ٱلْجَمَاعَةِ، فَإِنِّي أُفْنِيهِمْ بِلَحْظَةٍ». فَخَرَّا عَلَى وَجْهَيْهِمَا. | ٤٥ 45 |
೪೫“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
ثُمَّ قَالَ مُوسَى لِهَارُونَ: «خُذِ ٱلْمِجْمَرَةَ وَٱجْعَلْ فِيهَا نَارًا مِنْ عَلَى ٱلْمَذْبَحِ، وَضَعْ بَخُورًا، وَٱذْهَبْ بِهَا مُسْرِعًا إِلَى ٱلْجَمَاعَةِ وَكَفِّرْ عَنْهُمْ، لِأَنَّ ٱلسَّخَطَ قَدْ خَرَجَ مِنْ قِبَلِ ٱلرَّبِّ. قَدِ ٱبْتَدَأَ ٱلْوَبَأُ». | ٤٦ 46 |
೪೬ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
فَأَخَذَ هَارُونُ كَمَا قَالَ مُوسَى، وَرَكَضَ إِلَى وَسَطِ ٱلْجَمَاعَةِ، وَإِذَا ٱلْوَبَأُ قَدِ ٱبْتَدَأَ فِي ٱلشَّعْبِ. فَوَضَعَ ٱلْبَخُورَ وَكَفَّرَ عَنِ ٱلشَّعْبِ. | ٤٧ 47 |
೪೭ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
وَوَقَفَ بَيْنَ ٱلْمَوْتَى وَٱلْأَحْيَاءِ فَٱمْتَنَعَ ٱلْوَبَأُ. | ٤٨ 48 |
೪೮ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.
فَكَانَ ٱلَّذِينَ مَاتُوا بِٱلْوَبَإِ أَرْبَعَةَ عَشَرَ أَلْفًا وَسَبْعَ مِئَةٍ، عَدَا ٱلَّذِينَ مَاتُوا بِسَبَبِ قُورَحَ. | ٤٩ 49 |
೪೯ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.
ثُمَّ رَجَعَ هَارُونُ إِلَى مُوسَى إِلَى بَابِ خَيْمَةِ ٱلِٱجْتِمَاعِ وَٱلْوَبَأُ قَدِ ٱمْتَنَعَ. | ٥٠ 50 |
೫೦ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.