< اَلْمَزَامِيرُ 33 >
اِهْتِفُوا أَيُّهَا ٱلصِّدِّيقُونَ بِٱلرَّبِّ. بِٱلْمُسْتَقِيمِينَ يَلِيقُ ٱلتَّسْبِيحُ. | ١ 1 |
ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.
ٱحْمَدُوا ٱلرَّبَّ بِٱلْعُودِ. بِرَبَابَةٍ ذَاتِ عَشَرَةِ أَوْتَارٍ رَنِّمُوا لَهُ. | ٢ 2 |
ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.
غَنُّوا لَهُ أُغْنِيَةً جَدِيدَةً. أَحْسِنُوا ٱلْعَزْفَ بِهُتَافٍ. | ٣ 3 |
ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.
لِأَنَّ كَلِمَةَ ٱلرَّبِّ مُسْتَقِيمَةٌ، وَكُلَّ صُنْعِهِ بِٱلْأَمَانَةِ. | ٤ 4 |
ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.
يُحِبُّ ٱلْبِرَّ وَٱلْعَدْلَ. ٱمْتَلَأَتِ ٱلْأَرْضُ مِنْ رَحْمَةِ ٱلرَّبِّ. | ٥ 5 |
ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.
بِكَلِمَةِ ٱلرَّبِّ صُنِعَتِ ٱلسَّمَاوَاتُ، وَبِنَسَمَةِ فِيهِ كُلُّ جُنُودِهَا. | ٦ 6 |
ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.
يَجْمَعُ كَنَدٍّ أَمْوَاهَ ٱلْيَمِّ. يَجْعَلُ ٱللُّجَجَ فِي أَهْرَاءٍ. | ٧ 7 |
ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.
لِتَخْشَ ٱلرَّبَّ كُلُّ ٱلْأَرْضِ، وَمِنْهُ لِيَخَفْ كُلُّ سُكَّانِ ٱلْمَسْكُونَةِ. | ٨ 8 |
ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.
لِأَنَّهُ قَالَ فَكَانَ. هُوَ أَمَرَ فَصَارَ. | ٩ 9 |
ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.
ٱلرَّبُّ أَبْطَلَ مُؤَامَرَةَ ٱلْأُمَمِ. لَاشَى أَفْكَارَ ٱلشُّعُوبِ. | ١٠ 10 |
ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.
أَمَّا مُؤَامَرَةُ ٱلرَّبِّ فَإِلَى ٱلْأَبَدِ تَثْبُتُ. أَفْكَارُ قَلْبِهِ إِلَى دَوْرٍ فَدَوْرٍ. | ١١ 11 |
ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.
طُوبَى لِلْأُمَّةِ ٱلَّتِي ٱلرَّبُّ إِلَهُهَا، ٱلشَّعْبِ ٱلَّذِي ٱخْتَارَهُ مِيرَاثًا لِنَفْسِهِ. | ١٢ 12 |
ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.
مِنَ ٱلسَّمَاوَاتِ نَظَرَ ٱلرَّبُّ. رَأَى جَمِيعَ بَنِي ٱلْبَشَرِ. | ١٣ 13 |
ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.
مِنْ مَكَانِ سُكْنَاهُ تَطَلَّعَ إِلَى جَمِيعِ سُكَّانِ ٱلْأَرْضِ. | ١٤ 14 |
ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.
ٱلْمُصَوِّرُ قُلُوبَهُمْ جَمِيعًا، ٱلْمُنْتَبِهُ إِلَى كُلِّ أَعْمَالِهِمْ. | ١٥ 15 |
ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.
لَنْ يَخْلُصَ ٱلْمَلِكُ بِكِثْرَةِ ٱلْجَيْشِ. ٱلْجَبَّارُ لَا يُنْقَذُ بِعِظَمِ ٱلْقُوَّةِ. | ١٦ 16 |
ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.
بَاطِلٌ هُوَ ٱلْفَرَسُ لِأَجْلِ ٱلْخَلَاصِ، وَبِشِدَّةِ قُوَّتِهِ لَا يُنَجِّي. | ١٧ 17 |
ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.
هُوَذَا عَيْنُ ٱلرَّبِّ عَلَى خَائِفِيهِ ٱلرَّاجِينَ رَحْمَتَهُ، | ١٨ 18 |
ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.
لِيُنَجِّيَ مِنَ ٱلْمَوْتِ أَنْفُسَهُمْ، وَلِيَسْتَحْيِيَهُمْ فِي ٱلْجُوعِ. | ١٩ 19 |
ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.
أَنْفُسُنَا ٱنْتَظَرَتِ ٱلرَّبَّ. مَعُونَتُنَا وَتُرْسُنَا هُوَ. | ٢٠ 20 |
ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.
لِأَنَّهُ بِهِ تَفْرَحُ قُلُوبُنَا، لِأَنَّنَا عَلَى ٱسْمِهِ ٱلْقُدُّوسِ ٱتَّكَلْنَا. | ٢١ 21 |
ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.
لِتَكُنْ يَارَبُّ رَحْمَتُكَ عَلَيْنَا حَسْبَمَا ٱنْتَظَرْنَاكَ. | ٢٢ 22 |
ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.