< اَلْمَزَامِيرُ 39 >
لِإِمَامِ ٱلْمُغَنِّينَ. لِيَدُوثُونَ. مَزْمُورٌ لِدَاوُدَ قُلْتُ: «أَتَحَفَّظُ لِسَبِيلِي مِنَ ٱلْخَطَإِ بِلِسَانِي. أَحْفَظُ لِفَمِي كِمَامَةً فِيمَا ٱلشِّرِّيرُ مُقَابِلِي». | ١ 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
صَمَتُّ صَمْتًا، سَكَتُّ عَنِ ٱلْخَيْرِ، فَتَحَرَّكَ وَجَعِي. | ٢ 2 |
೨ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.
حَمِيَ قَلْبِي فِي جَوْفِي. عِنْدَ لَهَجِي ٱشْتَعَلَتِ ٱلنَّارُ. تَكَلَّمْتُ بِلِسَانِي: | ٣ 3 |
೩ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,
«عَرِّفْنِي يَارَبُّ نِهَايَتِي وَمِقْدَارَ أَيَّامِي كَمْ هِيَ، فَأَعْلَمَ كَيْفَ أَنَا زَائِلٌ. | ٤ 4 |
೪“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
هُوَذَا جَعَلْتَ أَيَّامِي أَشْبَارًا، وَعُمْرِي كَلَا شَيْءَ قُدَّامَكَ. إِنَّمَا نَفْخَةً كُلُّ إِنْسَانٍ قَدْ جُعِلَ. سِلَاهْ. | ٥ 5 |
೫ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. (ಸೆಲಾ)
إِنَّمَا كَخَيَالٍ يَتَمَشَّى ٱلْإِنْسَانُ. إِنَّمَا بَاطِلًا يَضِجُّونَ. يَذْخَرُ ذَخَائِرَ وَلَا يَدْرِي مَنْ يَضُمُّهَا. | ٦ 6 |
೬ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
«وَٱلْآنَ، مَاذَا ٱنْتَظَرْتُ يَارَبُّ؟ رَجَائِي فِيكَ هُوَ. | ٧ 7 |
೭“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.
مِنْ كُلِّ مَعَاصِيَّ نَجِّنِي. لَا تَجْعَلْنِي عَارًا عِنْدَ ٱلْجَاهِلِ. | ٨ 8 |
೮ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.
صَمَتُّ. لَا أَفْتَحُ فَمِي، لِأَنَّكَ أَنْتَ فَعَلْتَ. | ٩ 9 |
೯ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.
ٱرْفَعْ عَنِّي ضَرْبَكَ. مِنْ مُهَاجَمَةِ يَدِكَ أَنَا قَدْ فَنِيتُ. | ١٠ 10 |
೧೦ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
بِتَأْدِيبَاتٍ إِنْ أَدَّبْتَ ٱلْإِنْسَانَ مِنْ أَجْلِ إِثْمِهِ، أَفْنَيْتَ مِثْلَ ٱلْعُثِّ مُشْتَهَاهُ. إِنَّمَا كُلُّ إِنْسَانٍ نَفْخَةٌ. سِلَاهْ. | ١١ 11 |
೧೧ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. (ಸೆಲಾ)
اِسْتَمِعْ صَلَاتِي يَارَبُّ، وَٱصْغَ إِلَى صُرَاخِي. لَا تَسْكُتْ عَنْ دُمُوعِي. لِأَنِّي أَنَا غَرِيبٌ عِنْدَكَ. نَزِيلٌ مِثْلُ جَمِيعِ آبَائِي. | ١٢ 12 |
೧೨ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
ٱقْتَصِرْ عَنِّي فَأَتَبَلَّجَ قَبْلَ أَنْ أَذْهَبَ فَلَا أُوجَدَ». | ١٣ 13 |
೧೩ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”