< 2 مُلُوك 3 >
وَفِي السَّنَةِ الثَّامِنَةِ عَشْرَةَ مِنْ حُكْمِ يَهُوشَافَاطَ مَلِكِ يَهُوذَا، اعْتَلَى يَهُورَامُ بْنُ آخْابَ عَرْشَ إِسْرَائِيلَ، وَدَامَ مُلْكُهُ فِي السَّامِرَةِ اثْنَتَيْ عَشْرَةَ سَنَةً. | ١ 1 |
೧ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.
وَارْتَكَبَ الشَّرَّ فِي عَيْنَيِ الرَّبِّ، وَلَكِنَّهُ لَمْ يُوْغِلْ فِيهِ مِثْلَمَا أَوْغَلَ أَبُوهُ وَأُمُّهُ، فَإِنَّهُ أَزَالَ تِمْثَالَ الْبَعْلِ الَّذِي نَصَبَهُ أَبُوهُ. | ٢ 2 |
೨ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.
غَيْرَ أَنَّهُ تَشَبَّثَ بِخَطَايَا يَرُبْعَامَ بْنِ نَبَاطَ الَّذِي اسْتَغْوَى إِسْرَائِيلَ لارْتِكَابِ الإِثْمِ، وَلَمْ يَحِدْ عَنْهَا. | ٣ 3 |
೩ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
وَكَانَ مِيشَعُ مَلِكُ مُوآبَ يَقُومُ بِتَرْبِيَةِ الْمَوَاشِي، وَيُؤَدِّي لِمَلِكِ إِسْرَائِيلَ مِئَةَ أَلْفِ خَرُوفٍ وَمِئَةَ أَلْفِ كَبْشٍ مَعَ أَصْوَافِهَا. | ٤ 4 |
೪ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
وَمَا إِنْ تُوُفِّيَ آخْابُ حَتَّى تَمَرَّدَ مَلِكُ مُوآبَ عَلَى إِسْرَائِيلَ، | ٥ 5 |
೫ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
فَحَشَدَ الْمَلِكُ يَهُورَامُ جُيُوشَهُ مِنْ كُلِّ إِسْرَائِيلَ. | ٦ 6 |
೬ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.
وَبَعَثَ يَهُورَامُ إِلَى يَهُوشَافَاطَ مَلِكِ يَهُوذَا قَائِلاً: «قَدْ تَمَرَّدَ مَلِكُ الْمُوآبِيِّينَ عَلَيَّ، فَهَلْ تَشْتَرِكُ مَعِي فِي مُحَارَبَتِهِ؟» فَأَجَابَهُ: «أَشْتَرِكُ، فَمَثَلِي مَثَلُكَ وَشَعْبِي كَشَعْبِكَ وَخَيْلِي كَخَيْلِكَ». | ٧ 7 |
೭ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.
فَسَأَلَهُ: «أَيَّ طَرِيقٍ نَتَّخِذُ؟» فَأَجَابَهُ يَهُوشَافَاطُ: «طَرِيقَ صَحْرَاءِ أَدُومَ». | ٨ 8 |
೮ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು.
فَتَوَجَّهَ مَلِكُ إِسْرَائِيلَ بِرِفْقَةِ حَلِيفَيْهِ: مَلِكِ يَهُوذَا وَمَلِكِ أَدُومَ، وَدَارُوا فِي الصَّحْرَاءِ مَسِيرَةَ سَبْعَةِ أَيَّامٍ. وَلَمْ يَكُنْ هُنَاكَ مَاءٌ لِيَشْرَبَ الْجَيْشُ وَالدَّوَابُ التَّابِعَةُ لَهُمْ. | ٩ 9 |
೯ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.
فَقَالَ مَلِكُ إِسْرَائِيلَ: «هَلْ دَعَانَا الرَّبُّ، نَحْنُ الْمُلُوكَ الثَّلاثَةَ، لِيُسَلِّمَنَا لِيَدِ مَلِكِ مُوآبَ؟» | ١٠ 10 |
೧೦ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.
فَسَأَلَ يَهُوشَافَاطُ: «أَلَيْسَ هُنَا نَبِيٌّ لِلرَّبِّ، فَنَطْلُبَ مَشُورَةَ الرَّبِّ عَنْ يَدِهِ؟». فَأَجَابَ وَاحِدٌ مِنْ رِجَالِ مَلِكِ إِسْرَائِيلَ: «هُنَا أَلِيشَعُ بْنُ شَافَاطَ الَّذِي كَانَ خَادِماً لِلنَّبِيِّ إِيلِيَّا». | ١١ 11 |
೧೧ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
فَقَالَ يَهُوشَافَاطُ: «عِنْدَهُ كَلامُ الرَّبِّ». فَتَوَجَّهَ إِلَيْهِ مَلِكُ إِسْرَائِيلَ وَيَهُوشَافَاطُ وَمَلِكُ أَدُومَ. | ١٢ 12 |
೧೨ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
فَقَالَ أَلِيشَعُ لِمَلِكِ إِسْرَائِيلَ: «مَا شَأْنِي بِكَ؟ اذْهَبْ وَاسْتَشِرْ أَنْبِيَاءَ أَبِيكَ وَأَنْبِيَاءَ أُمِّكَ». فَأَجَابَهُ مَلِكُ إِسْرَائِيلَ: «كَلا إِذْ يَبْدُو أَنَّ الرَّبَّ قَدْ دَعَانَا نَحْنُ الْمُلُوكَ الثَّلاثَةَ لِيُسَلِّمَنا لِيَدِ مَلِكِ مُوآبَ». | ١٣ 13 |
೧೩ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
فَقَالَ أَلِيشَعُ: «حَيٌّ هُوَ الرَّبُّ الْقَدِيرُ الَّذِي أَنَا مَاثِلٌ أَمَامَهُ، إِنَّهُ لَوْلا تَوْقِيرِي لِحُضُورِ يَهُوشَافَاطَ مَلِكِ يَهُوذَا لَمَا كُنْتُ أَعْبَأُ بِالنَّظَرِ إِلَيْكَ. | ١٤ 14 |
೧೪ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
وَالآنَ ادْعُوا عَازِفَ عُودٍ». وَعِنْدَمَا عَزَفَ الْمُوسِيقَى عَلَى عُودِهِ حَلَّ رُوحُ الرَّبِّ عَلَى أَلِيشَعَ، | ١٥ 15 |
೧೫ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.
فَقَالَ: «هَذَا مَا يَقُولُهُ الرَّبُّ: احْفُرُوا فِي هَذَا الْوَادِي حُفَراً كَثِيرَةً وَعَمِيقَةً، | ١٦ 16 |
೧೬ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.
وَمَعَ أَنَّكُمْ لَنْ تَرَوْا رِيحاً وَلا مَطَراً فَإِنَّ هَذَا الْوَادِي سَيَفِيضُ بِالْمَاءِ، فَتَشْرَبُونَ أَنْتُمْ وَمَاشِيَتُكُمْ وَبَهَائِمُكُمْ. | ١٧ 17 |
೧೭‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.
وَهَذَا أَمْرٌ يَسِيرٌ لَدَى الرَّبِّ، وَهُوَ أَيْضاً يَنْصُرُكُمْ عَلَى مَلِكِ مُوآبَ. | ١٨ 18 |
೧೮“ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
فَتُدَمِّرُونَ كُلَّ مَدِينَةٍ مُحَصَّنَةٍ، وَكُلَّ مَدِينَةٍ رَئِيسِيَّةٍ، وَتَقْطَعُونَ كُلَّ شَجَرَةٍ مُثْمِرَةٍ، وَتَرْدُمُونَ كُلَّ عُيُونِ الْمَاءِ، وَتُخَرِّبُونَ كُلَّ حَقْلٍ خَصِبٍ بِالْحِجَارَةِ». | ١٩ 19 |
೧೯ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.
وَفِي الصَّبَاحِ، فِي مَوْعِدِ تَقْدِيمِ الْمُحْرَقَةِ دَوَّى هَدِيرُ مِيَاهٍ مُتَدَفِّقَةٍ مِنْ طَرِيقِ أَدُومَ، فَفَاضَتِ الأَرْضُ بِالْمِيَاهِ. | ٢٠ 20 |
೨೦ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
وَعِنْدَمَا عَلِمَ الْمُوآبِيُّونَ أَنَّ الْمُلُوكَ الثَّلاثَةَ اجْتَمَعُوا لِمُحَارَبَتِهِمْ جَنَّدُوا كُلَّ قَادِرٍ عَلَى حَمْلِ السِّلاحِ مِنَ الصِّغَارِ وَالْكِبَارِ، وَاحْتَشَدُوا عِنْدَ الْحُدُودِ. | ٢١ 21 |
೨೧ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.
وَحِينَ بَكَّرُوا فِي صَبِيحَةِ الْيَوْمِ التَّالِي رَأَوْا أَشِعَةَ الشَّمْسِ مُنْعَكِسَةً عَلَى الْمِيَاهِ أَمَامَهُمْ، فَبَدَتْ لَهُمْ حَمْرَاءَ كَالدَّمِ. | ٢٢ 22 |
೨೨ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
فَظَنُّوهَا دَماً وَقَالُوا: «قَدْ تَحَارَبَ الْمُلُوكُ مَعاً، وَقَتَلَ بَعْضُهُمْ بَعْضاً. فَهَيَّا إِلَى النَّهْبِ أَيُّهَا الْمُوآبِيُّونَ». | ٢٣ 23 |
೨೩ಇವರು, “ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!” ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.
فَانْطَلَقُوا إِلَى مُعَسْكَرِ إِسْرَائِيلَ، فَهَبَّ الإِسْرَائِيلِيُّونَ وَهَاجَمُوهُمْ فَفَرُّوا أَمَامَهُمْ، فَتَعَقَّبَهُمُ الإِسْرَائِيلِيُّونَ إِلَى بِلادِهِمْ وَهُمْ يَقْتُلُونَهُمْ. | ٢٤ 24 |
೨೪ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.
وَهَدَمُوا الْمُدُنَ. وَرَاحَ كُلُّ وَاحِدٍ مِنْ أَفْرَادِ الْجَيْشِ يُلْقِي حَجَراً فِي كُلِّ حَقْلٍ خَصِبٍ حَتَّى مَلأُوهَا، وَرَدَمُوا جَمِيعَ عُيُونِ الْمَاءِ، وَقَطَعُوا كُلَّ شَجَرَةٍ مُثْمِرَةٍ، وَلَمْ تَسْلَمْ إِلّا الْعَاصِمَةُ «قِيرُ حَارِسَةَ» الَّتِي حَاصَرَتْهَا وَهَاجَمَتْهَا فِرَقُ الْمَقَالِيعِ. | ٢٥ 25 |
೨೫ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.
فَلَمَّا رَأَى مَلِكُ مُوآبَ أَنَّ الْمَعْرَكَةَ اشْتَدَّتْ عَلَيْهِ اخْتَارَ سَبْعَ مِئَةِ رَجُلٍ مِنَ الْمُحَارِبِينَ بِالسُّيوفِ لِيَقُومَ بِمُحَاوَلَةِ شَقِّ طَرِيقِهِ لِيُهَاجِمَ مَلِكَ أَدُومَ، فَلَمْ يُفْلِحْ. | ٢٦ 26 |
೨೬ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
فَأَخَذَ ابْنَهُ الْبِكْرَ الَّذِي كَانَ سَيَخْلُفُهُ عَلَى الْعَرْشِ، وَأَحْرَقَهُ عَلَى السُّورِ قُرْبَاناً لإِلَهِ مُوآبَ، مِمَّا أَثَارَ الْغَيْظَ الشَّدِيدَ عَلى إِسْرَائِيلَ فَارْتَدَّ الإِسْرَائِيلِيُّونَ إِلَى بِلادِهِمْ. | ٢٧ 27 |
೨೭ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.