< ১ সামুয়েল 20 >
1 ১ তাৰ পাছত দায়ূদে ৰামাৰ নায়োতৰ পৰা পলাই যোনাথনৰ ওচৰলৈ আহি ক’লে, “মই নো কি কৰিলোঁ? মোৰ অপৰাধ কি? আপোনাৰ পিতৃৰ আগত মই কি পাপ কৰিলোঁ, তেওঁ যে মোৰ প্ৰাণ লবলৈ চেষ্টা কৰিছে?”
೧ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
2 ২ যোনাথনে দায়ূদক ক’লে, “ইয়াৰ পৰা আঁতৰি থাকক, আপোনাৰ মৃত্যু নহয়। মোৰ পিতৃয়ে ডাঙৰ কি সৰু কোনো কাম মোক নোকোৱাকৈ নকৰে। মোৰ পিতৃয়ে এই কথা মোৰ পৰা কিয় গোপনে ৰাখিব? সেয়ে নহয়।”
೨ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.
3 ৩ তথাপিও দায়ূদে শপত খাই ক’লে, “মই তোমাৰ দৃষ্টিত যে অনুগ্ৰহপ্ৰাপ্ত হৈছোঁ, তাক তোমাৰ পিতৃয়ে ভালকৈ জানে; তেওঁ কৈছে, ‘যোনাথনক এই কথা জানিবলৈ নিদিবা, জানিলে সি অসন্তোষ পাব’। কিন্তু যিহোৱাৰ জীৱনৰ আৰু তোমাৰ জীৱনৰ শপত, মোৰ আৰু মৃত্যুৰ মাজত নিশ্চয়ে এখোজহে অন্তৰ আছে।”
೩ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
4 ৪ তেতিয়া যোনাথনে দায়ূদক ক’লে, “আপুনি যি ক’ব বিচাৰে কওক, মই আপোনাৰ কাৰণে তাকেই কৰিম।”
೪ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು.
5 ৫ দায়ূদে যোনাথনক ক’লে, “কাইলৈ ন-জোন ওলাব; তাতেই ময়েই ৰজাৰ লগত ভোজনত বহিব লাগিব। কিন্তু তুমি মোক যাবলৈ দিয়া, মই তৃতীয় দিনৰ গধূলিলৈকে পথাৰত লুকাই থাকিম।
೫ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
6 ৬ যদি তোমাৰ পিতৃয়ে মই নথকাটো মন কৰে, তেন্তে তুমি ক’বা, ‘দায়ূদে নিজ নগৰ বৈৎলেহেমলৈ সোনকালে যাবৰ কাৰণে মোৰ আগত বৰ আগ্ৰহেৰে অনুমতি বিচাৰিলে; কাৰণ সেই ঠাইত গোটেই বংশৰ কাৰণে এটা বছৰেকীয়া যজ্ঞ হৈ আছে।’
೬ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
7 ৭ তেওঁ যদি কয়, ‘ঠিকেই আছে’, তেতিয়া তোমাৰ দাসৰ মঙ্গল হ’ব। কিন্তু যদি তেওঁৰ খং উঠে, তেন্তে জানিবা যে, তেওঁ অমঙ্গলৰ কথা চিন্তা কৰিছে।
೭ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.
8 ৮ এই হেতুকে তুমি তোমাৰ দাসলৈ অনুগ্ৰহ কৰিবা; কাৰণ তুমি তোমাৰ এই দাসক তোমাৰে সৈতে যিহোৱাৰ চুক্তিলৈ আনিছা। তথাপি যদি মোৰ কোনো অপৰাধ থাকে, তেন্তে তুমি নিজে মোক বধ কৰা; তেনেহলে কিয় মোক তোমাৰ পিতৃৰ ওচৰলৈ নিব খুজিছা?”
೮ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.
9 ৯ যোনাথনে ক’লে, “এনে ভয় আপোনাৰ পৰা দূৰ হওক! কাৰণ মোৰ পিতৃয়ে আপোনালৈ অমঙ্গল ঘটাবলৈ স্থিৰ কৰা কথা যদি মই কেনেবাকৈ জানিব পাৰোঁ, তেন্তে মই জানো আপোনাক কৈ নিদিম?”
೯ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.
10 ১০ তেতিয়া দায়ুদে যোনাথনক ক’লে, “তোমাৰ পিতৃয়ে তোমাক কটু উত্তৰ দিলে, তাক কোনে মোক ক’ব?”
೧೦ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು
11 ১১ যোনাথনে দায়ুদক ক’লে, “আহক, আমি পথাৰলৈ ওলাই যাওঁহঁক।” সেয়ে দুয়ো পথাৰলৈ ওলাই গ’ল।
೧೧ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.
12 ১২ যোনাথনে দায়ুদক ক’ল, “মই ইস্ৰায়েলৰ ঈশ্বৰ যিহোৱাক সাক্ষী কৰি কৈছোঁ যে, কাইলৈ বা পৰহিলৈ প্ৰায় এই সময়ত মোৰ পিতৃৰ মন চাম; তাতে আপোনালৈ অনুগ্ৰহ থকাৰ প্ৰমাণ পালে, মই তেতিয়াই মানুহ পঠিয়াই আপোনাক সেই বিষয়ে নজনাম নে?
೧೨ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.
13 ১৩ যদি আপোনাৰ অমঙ্গল কৰিবলৈ মোৰ পিতৃ মন থাকে, আৰু মই সেই বিষয়ে আপোনাক নজনাও, তেনেহলে যিহোৱাই যোনাথনক অমুক আৰু তাতকৈ অধিক দণ্ড দিয়ক; তেনেকুৱা হ’লে, আপোনাক বিদায় দিম; তাতে আপুনি কুশলে যাব; আৰু যিহোৱা মোৰ পিতৃৰ লগত থকাৰ দৰে আপোনাৰ লগতো থাকক।
೧೩ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.
14 ১৪ মই নমৰিবৰ কাৰণে আপুনি যে কেৱল মই জীয়াই থকা কালত যিহোৱাৰ অনুগ্ৰহ মোৰ বাবে দেখুৱাব এনে নহয়;
೧೪ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.
15 ১৫ কিন্তু মোৰ বংশলৈকো দয়া কৰিবলৈ কেতিয়াও ক্ৰুতি নকৰিব, আনকি যেতিয়া যিহোৱাই দায়ুদৰ শত্ৰুবোৰৰ প্ৰতিজনক পৃথিবীৰ পৰা উচ্ছন্ন কৰিব, তেতিয়াও নকৰিবা।”
೧೫ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.
16 ১৬ এইদৰে যোনাথনে দায়ূদৰ পৰিয়ালৰ সৈতে এটা চুক্তি কৰিলে আৰু তেওঁ ক’লে, যিহোৱাই দায়ুদক শত্ৰুবোৰৰ হাতৰ পৰা ৰক্ষা কৰক।
೧೬ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,
17 ১৭ এইদৰে যোনাথনে দায়ুদৰ ওচৰত পুনৰ প্রতিজ্ঞা কৰিলে, কাৰণ তেওঁ তেওঁক প্ৰেম কৰিছিল; তেওঁ নিজ প্ৰাণৰ দৰে দায়ূদক প্ৰেম কৰিছিল।
೧೭ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
18 ১৮ সেয়ে যোনাথনে দায়ুদক ক’লে, “কাইলৈ ন-জোন ওলাব; তাতে আপোনাৰ অনুপস্থিতি অনুভৱ হ’ব, কাৰণ আপোনাৰ আসন খালী হৈ থাকিব।
೧೮ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
19 ১৯ আপুনি পৰহিলৈ অতি বেগাই নামি আহিব, আৰু আগেয়ে যি ঠাইত আহি লুকাই আছিল, সেই ঠাইলৈ আহি এজল নামৰ শিলটোৰ ওচৰত লুকাই থাকিব।
೧೯ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.
20 ২০ তাতে মই লক্ষ্য কৰি মৰাৰ দৰে তিনিটা কাঁড় মাৰিম।
೨೦ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು
21 ২১ আৰু মই এজন ডেকা ল’ৰাক সেই ঠাইলৈ পঠিয়াম আৰু তেওঁক ক’ম, ‘যোৱা আৰু কাঁড়বোৰ বিচাৰা’। যদি মই সেই ডেকা ল’ৰাক কওঁ, কাঁড় কেইডাল এইফালে আছে, তাৰ পৰা তুলি আনা’; তেনেহলে আপুনি আহিব। কিয়নো কোনো ভয় নাই, যিহোৱাৰ জীৱনৰ শপত তোমাৰ মঙ্গলহে হ’ব।
೨೧ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.
22 ২২ কিন্তু মই যদি ডেকা ল’ৰাটোক কওঁ, ‘চোৱা, কাঁড়বোৰ তোৰ সিফালে আছে’, তেতিয়া আপুনি নিজৰ পথত গুচি যাব; কাৰণ যিহোৱাই আপোনাক বিদায় দিছে।
೨೨ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.
23 ২৩ আপোনাৰ আৰু মোৰ মাজত হোৱা চুক্তি আৰু মই কোৱা কথাবোৰ মনত ৰাখিব; যিহোৱা আপোনাৰ আৰু মোৰ মাজত চিৰদিন সাক্ষী হৈ আছে।”
೨೩ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.
24 ২৪ তাৰ পাছত দায়ূদে গৈ পথাৰত লুকাই থাকিল; পাছত যেতিয়া ন-জোন ওলাল, তেতিয়া ৰজাই আহি ভোজনত বহিল।
೨೪ದಾವೀದನು ಹೊಲದಲ್ಲಿ ಅಡಗಿಕೊಂಡನು.
25 ২৫ তাতে ৰজাই সচৰাচৰ বহাৰ দৰে দেৱালৰ ওচৰত থকা আসনত গৈ বহিল। পাছত যোনাথন উঠি থিয় হ’ল আৰু অবনেৰ চৌলৰ কাষতে বহিল, কিন্তু দায়ুদৰ আসন খালী হৈ থাকিল।
೨೫ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
26 ২৬ সেইদিনা চৌলে একোকে নক’লে; কাৰণ তেওঁ ভাবিলে, “দায়ূদৰ কিবা হয়তো হৈছে। সি শুচি নহয়, সঁচাকৈ সি শুচি নহয়।”
೨೬ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
27 ২৭ ন-জোনৰ পাছদিনা অৰ্থাৎ মাহৰ দ্বিতীয় দিনাও দায়ুদৰ আসন শূণ্য হৈ থকাত চৌলে নিজৰ পুত্ৰ যোনাথনক সুধিলে, “যিচয়ৰ পুতেক কালি আৰু আজিও ভোজলৈ কিয় অহা নাই?”
೨೭ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.
28 ২৮ তেতিয়া যোনাথনে উত্তৰ দি চৌলক ক’লে, “দায়ুদে বৈৎলেহেমলৈ যাবৰ কাৰণে বৰ আগ্ৰহেৰে মোৰ পৰা অনুমতি বিচাৰিলে;
೨೮ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ
29 ২৯ আৰু মোক ক’লে, ‘মই মিনতি কৰিছোঁ, মোক যাবলৈ দিয়া; কিয়নো নগৰত আমাৰ গোষ্ঠীৰ এক যজ্ঞ হ’ব, আৰু মোৰ ককায়ে মোক তাত উপস্থিত হ’বলৈ আজ্ঞা কৰিছে; এই হেতুকে মই যদি তোমাৰ দৃষ্টিত অনুগ্ৰহপ্ৰাপ্ত হৈছোঁ, তেন্তে বিনয় কৰোঁ, মোক যাবলৈ দিয়া; মই গৈ মোৰ ভাইসকলক চাই আহোঁ’। এই কাৰণে তেওঁ মহাৰাজৰ মেজলৈ আহিব পৰা নাই’।”
೨೯ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
30 ৩০ তেতিয়া যোনাথনলৈ চৌলৰ ক্ৰোধ জ্বলি উঠিল আৰু তেওঁ যোনাথনক ক’লে, “হেৰ’ বিপথগামীনী আৰু বিদ্ৰোহীনী তিৰোতাৰ পুতেক, তই তোৰ লাজ, আৰু তোৰ মাৰক বিবস্ত্ৰ কৰাৰ লাজ প্ৰকাশ কৰিবলৈ যে যিচয়ৰ পুতেকক মনোনীত কৰিলি, তাক জানো মই নাজানো?
೩೦ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
31 ৩১ কিন্তু যিচয়ৰ পুতেক যেতিয়ালৈকে পৃথিবীত জীয়াই থাকিব, তেতিয়ালৈকে তই থিৰে থাকিব নোৱাৰিবি, আৰু তোৰ ৰজাও থিৰে নাথাকিব; এই হেতুকে এতিয়া মানুহ পঠাই তাক মোৰ আগলৈ আন; কিয়নো সি মৰিবই লাগিব”;
೩೧ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
32 ৩২ তাতে যোনাথনে উত্তৰ দি নিজৰ বাপেক চৌলক ক’লে, “তেওঁ কিয় মৰিব? তেওঁনো কি কৰিলে?
೩೨ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.
33 ৩৩ তেতিয়া চৌলে যোনাথনক মাৰিবৰ বাবে যাঠি মাৰি পঠালে। তেতিয়া যোনাথনে বুজিলে যে, তেওঁৰ পিতৃ চৌলে সচাঁকৈয়ে দায়ূদক বধ কৰিবলৈ চল বিচাৰি আছে।
೩೩ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು
34 ৩৪ তাতে যোনাথন অতিশয় ক্ৰুদ্ধ হৈ উঠিল আৰু ভোজনৰ মেজৰ পৰা উঠি গ’ল। এইদৰে তেওঁ মাহৰ দ্বিতীয় দিনাও একো ভোজন নকৰিলে। দায়ুদৰ কাৰণে তেওঁ বেজাৰ পালে, কিয়নো তেওঁৰ পিতৃয়ে তেওঁক অপমান কৰিছিল।
೩೪ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
35 ৩৫ পাছদিনা ৰাতিপুৱা দায়ুদেৰে সৈতে নিৰূপণ কৰা পথাৰলৈ যোনাথনে ওলাই গ’ল আৰু তেওঁৰ লগত এজন ডেকা ল’ৰা আছিল।
೩೫ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,
36 ৩৬ তেওঁ সেই ডেকা ল’ৰাক ক’লে, “দৌৰ আৰু মই মাৰি পঠোৱা কাঁড়বোৰ বিচাৰি আন।” তাতে ল’ৰাটিয়ে দৌৰ মাৰোতে তেওঁ তাৰ সিফালে পৰাকৈ কাঁড়বোৰ মাৰিলে।
೩೬ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
37 ৩৭ তাতে ডেকা ল’ৰা জনে গৈ যোনাথনে মাৰি পঠোৱা কাঁড়বোৰৰ ওচৰ পোৱাত, তেওঁ তাক ক’লে, ‘তোৰ সিফালে জনো কাঁড়বোৰ নাই’?
೩೭ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ
38 ৩৮ পাছত যোনাথনে ল’ৰাজনক মাতি ক’লে, “বেগাই দৌৰি আহ। তাত ৰৈ নাথাকিবি।” তেতিয়া সেই ল’ৰাজনে কাঁড়বোৰ বুটলি আনি যোনাথানৰ ওচৰলৈ আহিল।
೩೮ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
39 ৩৯ কিন্তু ল’ৰাজনে একো বুজি নাপালে; মাত্ৰ দায়ূদেহে এই বিষয় বুজি পালে।
೩೯ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
40 ৪০ পাছত যোনাথনে নিজৰ ধনু-কাঁড়বোৰ ল’ৰা জনৰ হাতত দিলে আৰু ক’লে, “যোৱা, এইবোৰ লৈ নগৰলৈ যোৱা।”
೪೦ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.
41 ৪১ তাৰ পাছত ডেকা ল’ৰা জন যোৱাৰ লগে লগে দায়ূদে দক্ষিণ দিশৰ পৰা ওলাই আহিল আৰু তললৈ মুখ কৰি পৰি তিনিবাৰ প্ৰণিপাত কৰিলে। তাতে তেওঁলোক পৰস্পৰে চুমা খালে আৰু কান্দিলে; তাতে দায়ুদৰ সৈতে অধিক ক্ৰন্দন হ’ল।
೪೧ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
42 ৪২ পাছত যোনাথনে দায়ুদক ক’লে, “আপুনি কুশলে যাওক; কিয়নো আমি দুয়ো যিহোৱাৰ নামেৰে এই শপত খালো যে, যিহোৱা আপোনাৰ আৰু মোৰ মাজত থকাৰ দৰে আপোনাৰ বংশ আৰু মোৰ বংশৰ মাজতো সদাকাল থাকিব।” পাছত তেওঁ উঠি গুচি গ’ল, আৰু যোনাথন নগৰলৈ উভতি গ’ল।
೪೨ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.