< Birinci Şamuel 11 >
1 Ammonlu Naxaş gəlib Yaveş-Gileada qarşı ordugah qurdu. Bütün Yaveş əhalisi Naxaşa dedi: «Bizimlə saziş bağla, biz də sənə qulluq edək».
ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.
2 Ammonlu Naxaş isə onlara dedi: «Bu şərtlə sizinlə razılığa gələrəm ki, hər birinizin sağ gözünü çıxarıb bütün İsraili rüsvay edim».
ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.
3 Yaveş ağsaqqalları ona dedilər: «Bizə yeddi gün möhlət ver ki, İsrailin bütün ərazisinə qasidlər göndərək və əgər bizi heç kim xilas edə bilməsə, sənə təslim olarıq».
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.
4 Qasidlər Şaulun Givea şəhərinə gəldilər və xalq arasında bu sözləri car çəkdilər. Bütün xalq da şivən qoparıb ağladı.
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.
5 Bu vaxt Şaul öküzlərin arxasınca tarladan gəlirdi. O dedi: «Xalqa nə olub ki, ağlayır?» Ona Yaveşlilərin sözünü çatdırdılar.
ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
6 Həmin sözləri eşidən zaman Allahın Ruhu Şaulun üstünə qüvvə ilə endi, qəzəbindən od tutub yandı.
ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,
7 O, bir cüt öküzünü götürüb parça-parça doğradı və onları qasidlərin əli ilə bütün İsrail ərazisinə göndərib dedi: «Kim Şaulun və Şamuelin ardınca getməsə, bax öküzləri bu kökə salınacaq». Xalqın arasına Rəbbin xofu düşdü və hamı bir nəfər kimi ayağa qalxdı.
ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.
8 Şaul onları Bezeqdə saydı: İsrail övladları üç yüz min və Yəhuda adamları isə otuz min nəfər oldu.
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.
9 Gələn qasidlərə dedilər: «Yaveş-Gileadlılara belə deyərsiniz: “Sabah gün qızınca sizə qurtuluş olacaq”». Qasidlər gedib bunu Yaveşlilərə bildirdilər və onlar da sevindilər.
ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.
10 Yaveşlilər Ammonlulara dedilər: «Sabah təslim olacağıq və bizimlə gözünüzdə xoş görünən kimi rəftar edin».
ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.
11 Ertəsi gün Şaul xalqı üç bölməyə ayırdı və səhər qarovulunda düşmən ordugahının içinə girərək gün qızana qədər Ammonluları qırdı. Qalanlar isə elə dağıldılar ki, onlardan iki nəfər bir yerdə qalmadı.
ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.
12 Xalq Şamuelə dedi: «“Şaulmu üzərimizdə padşah olacaq?” deyənlər kimlərdir? O adamları verin öldürək».
ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.
13 Şaul isə dedi: «Bu gün heç kəs öldürülməyəcək, çünki Rəbb bu gün İsrailə qurtuluş verdi».
ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.
14 Şamuel xalqa dedi: «Gəlin Qilqala gedək və orada padşahlığı yenidən təsdiq edək».
ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.
15 Bütün xalq Qilqala getdi. Orada – Qilqalda Şaulu Rəbbin önündə padşah olaraq qəbul etdilər və sonra Rəbbin önündə ünsiyyət qurbanları kəsdilər. Bütün İsraillilər Şaulla birgə böyük bayram etdilər.
ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.