< Levililər 12 >
2 «İsrail övladlarına belə de: “Hamilə olub oğlan uşağı doğan bir qadın aybaşı, murdarlıq dövründə olduğu kimi yeddi gün murdar sayılsın.
೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
3 Səkkizinci gün uşaq sünnət olunsun.
೩ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.
4 Qadın qanaxmadan paklanmaq üçün daha otuz üç gün gözləsin. Bu paklanma dövrü bitənə qədər qadın heç bir müqəddəs şeyə toxunmamalı və Müqəddəs məkana yaxınlaşmamalıdır.
೪ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.
5 Əgər bir qadın qız uşağı doğarsa, aybaşı vaxtı kimi iki həftə murdar sayılsın və paklanmaq üçün əlavə olaraq altmış altı gün gözləsin.
೫ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.
6 Oğlan yaxud qız uşağı doğub paklanma müddəti bitəndə qadın Hüzur çadırının girişinə birillik toğlunu yandırma qurbanı kimi və göyərçin yaxud qumru quşunu kahinin yanına günah qurbanı kimi gətirsin.
೬“‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
7 Kahin bunları Rəbbin hüzurunda qurban gətirib, zahı qadın üçün kəffarə etsin ki, o qan axmasından pak olsun. Qız ya oğlan doğan zahı qadın üçün təlimat budur.
೭ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.
8 Əgər qadının toğlu gətirməyə gücü çatmırsa, onda birini yandırma qurbanı, o birini isə günah qurbanı olaraq iki qumru quşu yaxud iki göyərçin gətirsin. Bununla kahin həmin zahı üçün kəffarə etsin ki, o pak olsun”».
೮ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.