< Saylar 35 >

1 İordan çayının yanında, Yerixo qarşısında olan Moav düzənliyində Rəbb Musaya dedi:
ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
2 «İsrail övladlarına əmr et ki, mülk etdikləri torpaqda yaşamaq üçün Levililərə şəhərlər versinlər. Sən şəhərlərin ətrafında Levililərə otlaqlar da ver.
“ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.
3 Beləliklə, Levililərin yaşamaq üçün şəhərləri və onların mal-qaraları, sürüləri və digər heyvanları üçün otlaqları olsun.
ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.
4 Levililərə verəcəyiniz şəhərlərin ətrafındakı otlaqlar şəhər divarından min qulac uzanacaq.
“ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
5 Şəhər ortada olaraq şəhərin bayırından şərq tərəfini iki min qulac, cənub tərəfini iki min qulac, qərb tərəfini iki min qulac və şimal tərəfini iki min qulac ölçün. Bu onlar üçün şəhər otlaqları olsun.
ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6 Levililərə verəcəyiniz şəhərlərdən altı sığınacaq şəhər olsun ki, kimisə öldürən oraya qaça bilsin. Bunlardan başqa qırx iki şəhər də verin.
“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.
7 Levililərə verəcəyiniz şəhərlərin cəmi qırx səkkiz şəhər olsun. Onları otlaqları ilə birgə verin.
ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.
8 Levililərə verəcəyiniz şəhərlər hər qəbiləyə düşən payın nisbətində alınsın, çox şəhəri olan qəbilədən çox şəhər, az şəhəri olan qəbilədən az şəhər alın».
ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.
9 Sonra Rəbb Musaya dedi:
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
10 «İsrail övladlarına de: “Siz İordan çayını keçib Kənan torpağına girəndə
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
11 sığınacaq şəhərlər olaraq bəzi şəhərlər seçin ki, bilmədən adam öldürən oraya qaçsın.
ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
12 Qisas alandan sığınacaq şəhərləriniz bunlar olsun ki, adam öldürən şəxs icmanın önündə hökm alana qədər öldürülməsin.
ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.
13 Verəcəyiniz bu altı şəhər sizin üçün sığınacaq şəhərlər olsun.
ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
14 İordan çayının o biri tayında üç şəhər və Kənan torpağında üç şəhər verin. Bunlar sığınacaq şəhərlər olsun.
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
15 Bu altı şəhər İsrail övladlarına, aralarında yaşayan yadellilərə və qəriblərə sığınacaq şəhərləri olacaq. Belə ki bilmədən birini öldürən hər kəs oraya qaça bilsin.
ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
16 Əgər biri dəmir bir alətlə başqa birini vurub öldürmüşsə, o adam qatildir. Qatil öldürülməlidir.
“‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
17 Əgər kimsə əlində insanın ölə biləcəyi bir daşla kimisə vurmuşsa və o adam ölmüşsə, onda o adam qatildir. Qatil öldürülməlidir.
ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
18 Yaxud əlində adam öldürə bilən ağac bir alətlə birini vurub öldürmüşsə, o adam qatildir. Qatil öldürülməlidir.
ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.
19 Tökülən qanın qisasını alan özü qatili öldürsün, onunla rastlaşdığı zaman öldürsün.
ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.
20 Əgər onu kinlə itələyib yaxud pusquda duraraq ona tərəf bir şey atıb öldürmüşsə
ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,
21 ya da ədavətə görə onu əli ilə vurub öldürmüşsə, vuran mütləq öldürülməlidir. O qatildir, tökülən qanın qisasını alan adam qatilə rast gəldiyi zaman onu öldürsün.
ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.
22 Ancaq ədavəti olmayaraq birini qəflətən itələmişsə yaxud pusquda durmadan ona bir şey atmışsa
“‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,
23 və yaxud da onu görmədən üstünə adam öldürə bilən bir daş düşürüb öldürmüşsə, onda ölən şəxsi-qərəzlik olmadığından və ona ziyan vurmaq istəmədiyindən
ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,
24 adam öldürənlə tökülən qanın qisasını alan arasında bu hökmlərə görə icma hökm çıxaracaq.
ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
25 İcma tökülən qanın qisasını alanın əlindən adam öldürəni qurtaracaq, qaçdığı sığınacaq şəhərə geri göndərəcək və o, müqəddəs yağla məsh olunmuş baş kahinin ölümünə qədər orada qalacaq.
ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.
26 Əgər adam öldürən qaçdığı sığınacaq şəhərin sərhədini keçərsə,
“‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,
27 tökülən qanın qisasını alan adam öldürəni sığınacaq şəhərin sərhəd kənarında taparsa və onu öldürərsə, o qatil sayılmayacaq.
ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.
28 Çünki adam öldürən baş kahinin ölümünə qədər sığındığı şəhərdə qalmalı idi. Ancaq baş kahinin ölümündən sonra öz mülkü olan torpağına qayıda bilər.
ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.
29 Bunlar nəsildən-nəslə bütün yaşadığınız yerlərdə qanun və hökm olacaq.
“‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.
30 Bir adam bir adamı öldürsə, şahidlərin ifadəsi ilə öldürülsün. Lakin heç bir qatil tək şahidin ifadəsi ilə öldürülməsin.
“‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.
31 Ölüm cəzasına layiq qatilin canı üçün fidyə almayın, çünki o öldürülməlidir.
“‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.
32 Sığınacaq şəhərinə qaçan üçün fidyə almayın ki, kahinin ölümündən əvvəl torpağında yaşamağa qayıtsın.
“‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.
33 Beləcə olduğunuz ölkəni murdarlamayın. Çünki qan tökmək ölkəni murdar edər və ölkədə tökülən qanın əvəzi ancaq onu tökənin qanı ilə kəffarə oluna bilər.
“‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
34 Yaşadığınız, Mənim də olduğum ölkəni ləkələməyin. Çünki İsrail övladları arasında yaşayan Rəbb Mənəm”».
ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’” ಎಂದರು.

< Saylar 35 >