< Wamolegei Sia: Olelesu 14 >
1 Amalalu, na da Sibi Mano Saione Goumi da: iya lelebe ba: i. E sigi lelebe, dunu l44,000 gala amo Ea Dio amola Ea Ada Dio, ilia odagiga dedei ba: i.
೧ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
2 Amalalu, na nabaloba, sia: muagadodi misi, amo da gasa bagade hano nawa: li amola gasa bagade gu gelebe, amaiwane gala. Sia: da sani baidama dusa dunu ilia sani baidama dulalawane agoane nabi.
೨ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
3 Dunu l44,000 ilia da Fisu, esalebe liligi amola asigilai dunu, amo ilia midadi gesami hea: sa lelu. Amo gesami da gaheabolo gesami amola hea: be dunu fawane da amo gesami dawa: Gode da dunu huluane afafane, amo dunu 144,000 ilegele, bidi lai dagoi.
೩ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
4 Amo dunu da uda hame lai. Ilia da uda gilisili hamedafa golai. Ilia Sibi Mano da habidili ahoa Ema fa: no bobogesa. Gode da amo dunu Hima amola Sibi Manoma imunusa: , eno osobo bagade dunu ilima afafane ilegei dagoi.
೪ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
5 Ilia da ogogosu hamedafa dawa: i. Ilia da ida: iwanedafa hamoi dagoi.
೫ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
6 Amalalu, na da a: igele dunu eno muagado gadodilidafa hagili ahoanebe ba: i. E da Gode Ea Sia: Ida: iwane Gala amo dunu fifi asi gala, sia: hisu, fi hisu amola ouligisu hisu, amo huluanema olelela ahoa. (aiōnios )
೬ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios )
7 E da ha: giwane wele sia: i, “Godema beda: ma amola E da ida: iwaneba: le, Ema nodoma! Bai dunu fifi asi gala dunu Ema fofada: su eso da doaga: i dagoi. Gode da Hebene, osobo bagade, hano wayabo bagade amola hano nasu huluane hamoi. Ema nodone sia: ne gadoma!”
೭ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
8 Eno a: igele da amo a: igele fa: no bobogele, amane ha: giwane wele sia: i, “Uda da dafai dagoi. Ba: bilone Bagade uda da dafai dagoi. E da sia: beba: le, dunu huluane da ea gasa bagade adini mai dagoi. Amo da fedege agoane, ilia wadela: i uda lasu hou hamosu!”
೮ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
9 A: igele osoda da eno aduna bisili asi, elama fa: no bobogelalebe ba: i. E ha: giwane amane wele sia: i, “Nowa da ohe fi liligi amo amola ea loboga hamoi agoaila liligi, elama nodone sia: ne gadole amola ea dawa: digima: ne dedesu amo ea odagi o lobo amoga dedei ba: sea,
೯ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
10 amo dunu ilia da fedege agoane Gode Ea waini hano manu. Amo waini hano da Gode Ea se dabe iasu ougi hou. E da amo gasa bagade waini hano Ea ougi faigelei ganodini sogasali. Dunu huluane amo ilia Gode Ea ougi waini hano nasea, ilia lalu salafa hamoi amo ganodini, hadigi a: igele dunu amola Sibi Mano ilia midadi, se dabe iasu bagade ba: mu.
೧೦ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
11 Ilima se dabe iasu ima: ne lalu, amo ea mobi da mae yolesili eso huluane heda: lala. Nowa da ohe fi liligi amola ea loboga hamoi agoaila liligi, amoma nodone sia: ne gadosa amola e dawa: digima: ne dedesu ilia lai dagoi, ilia da mae helefili se nabalumu.” (aiōn )
೧೧ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn )
12 Amaiba: le, Gode Ea fi dunu amo ilia Gode Ea hamoma: ne sia: i fa: no bobogesa amola Yesu Ea hou lalegagusa, ilia mae yolesili Gode Ea hawa: hamonanumu da defea.
೧೨ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
13 Amalalu, sia: muagadodi misi, na da amane nabi, “Agoane dedema! ‘Dunu ilia da wali amola fa: no, Hina Gode Ea hawa: hamobeba: le bogosea, hahawane bagade ba: mu!’” Gode Ea A: silibu da bu adole i, “Dafawane! Ilia hawa: hamobeba: le bidi lamu. Ilia da gasa bagade hawa: hamosu yolesili, helefisu ba: mu.”
೧೩ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
14 Amalalu, na da ahea: ya: i mu mobi amo da: iya, dunu agoai ba: su liligi fila heda: lebe ba: i. Ea dialuma da: iya gouli habuga dialebe amola ea lobo ganodini wagebi gobihei ba: i.
೧೪ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
15 Amalalu, a:igele dunu eno amo Debolo Diasu ganodini gadili manebe ba: i. E da dunu amo da mu mobi fila heda: i, amoma amane ha: giwane wele sia: i, “Defea! Eso da doaga: beba: le, dia wagebi gobiheiga ha: i manu gamima! Osobo bagade ha: i manu da yoi dagoi.”
೧೫ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
16 Amalalu, dunu da mu mobiga fila heda: i, amo da ea gobiheiga yoi ha: i manu osobo bagadega fai.
೧೬ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
17 Amalalu, a:igele dunu eno, e amola da wagebi gobihei gagui, da Debolo Diasu Hebene ganodini, amoga misi.
೧೭ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
18 Amalalu, a:igele dunu eno amo da lalu ouligisu dunu, e da oloda yolesili, misini, e da a: igele wagebi gobihei gagui amoma ha: giwane wele sia: i, “Waini fage da yoiba: le, dia gobiheiga waini sagaiga waini fage gamima!”
೧೮ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
19 Amaiba: le, a:igele da ea gobiheiga fananu, waini fage fadegale, Gode Ea ougi bagade waini hano emo osa: gisu amo ganodini sanasi.
೧೯ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
20 Amalalu, Gode da amo waini fage Ea waini hano emo osa: gisu amo ganodini osa: gilalu, maga: me bagade amo ea seda defei da 300 gilomida amola ea lugudu defei da gadenene 2 mida, Gode Ea waini osa: gisu amoga misi.
೨೦ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.