< শমূয়েলের প্রথম বই 21 >
1 ১ পরে দায়ূদ নোবে অহীমেলক যাজকের কাছে গেলেন; আর অহীমেলক কাঁপতে কাঁপতে এসে দায়ূদের সঙ্গে দেখা করলেন ও তাঁকে বললেন, “আপনি একা কেন? আপনার সঙ্গে কেউ নেই কেন?”
೧ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.
2 ২ দায়ূদ অহীমেলক যাজককে বললেন, “রাজা একটি কাজের দায়িত্ব দিয়ে আমাকে বলেছেন, আমি তোমাকে যে কাজে পাঠালাম ও যা আদেশ করলাম, তার কিছু যেন কেউ না জানে আর; আমি নিজের সঙ্গী যুবকদেরকে ওই জায়গায় আসতে বলেছি৷
೨ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
3 ৩ এখন আপনার কাছে কি আছে? পাঁচটা রুটি কিংবা যা থাকে, আমার হাতে দিন ৷”
೩ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು.
4 ৪ যাজক দায়ূদকে উত্তর দিলেন, “আমার কাছে সাধারণ রুটি নেই, শুধুমাত্র পবিত্র রুটি আছে-যদি সেই যুবকেরা শুধু স্ত্রীর থেকে আলাদা হয়ে থাকে৷”
೪ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.
5 ৫ দায়ূদ যাজককে উত্তর দিলেন, “সত্যিই তিন দিন আমাদের থেকে স্ত্রীরা আলাদা আছে; আমি যখন বেরিয়ে আসি, তখন যাত্রা সাধারণ হলেও যুবকদের পাত্রগুলি পবিত্র ছিল; তাই আজ তাদের পাত্রগুলি আরও কত না পবিত্র৷”
೫ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು
6 ৬ তখন যাজক তাঁকে পবিত্র রুটি দিলেন; কারণ সেখানে অন্য রুটি ছিল না, কেবল ওটা তুলে নেবার দিনের সেকা রুটি রাখবার জন্য যে দর্শন-রুটি সদাপ্রভুর সামনে থেকে সরিয়ে রাখা হয়েছিল, সেটাই শুধু ছিল৷
೬ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.
7 ৭ সেই দিন শৌলের দাসেদের মধ্যে ইদোমীয় দোয়েগ নামে একজন সদাপ্রভুর সামনে আবদ্ধ হয়ে সেখানে ছিল, সে শৌলের প্রধান পশুপালক৷
೭ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.
8 ৮ পরে দায়ূদ অহীমেলককে বললেন, “এখানে আপনার কাছে বর্শা কিংবা তলোয়ার নেই? কারণ রাজকাজের তাড়াতাড়িতে আমি নিজের তলোয়ার বা অস্ত্র সঙ্গে আনি নি৷”
೮ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.
9 ৯ যাজক বললেন, “এলা উপত্যকায় আপনি যাকে হত্যা করেছিলেন, সেই পলেষ্টীয় গলিয়াতের তলোয়ার আছে; দেখুন, এফোদের পিছন দিকে এখানে কাপড়ে জড়ান আছে; এটা যদি নিতে চান, নিন, কারণ, এটা ছাড়া আর কোন তরোয়াল এখানে নেই৷” দায়ূদ বললেন, “সেটার মত আর নেই; সেটাই আমাকে দিন ৷”
೯ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.
10 ১০ পরে দায়ূদ উঠে সেদিন শৌলের ভয়ে পালিয়ে গাতের রাজা আখীশের কাছে গেলেন।
೧೦ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
11 ১১ তাতে আখীশের দাসেরা তাঁকে বলল, “এ ব্যক্তি কি দেশের রাজা দায়ূদ না? লোকেরা কি নাচতে নাচতে ওঁর বিষয়ে নিজেরা গান করে বলে নি, ‘শৌল হত্যা করলেন হাজার হাজার আর দায়ূদ হত্যা করলেন অযুত অযুত’?”
೧೧ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.
12 ১২ আর দায়ূদ সে কথা মনে রাখলেন এবং গাতের রাজা আখীশের থেকে খুব ভীত হলেন৷
೧೨ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,
13 ১৩ আর তিনি তাদের সামনে তাঁর আচরণ পরিবর্তন করলেন; তিনি তাদের কাছে পাগলের মত ব্যবহার করতেন, ফটকের দরজা আঁচড়াতেন, নিজের দাড়ির উপরে লালা ঝরতে দিতেন৷
೧೩ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
14 ১৪ তখন আখীশ নিজের দাসদেরকে বললেন, “দেখ, তোমরা দেখতে পাচ্ছ, এ পাগল; তবে একে আমার কাছে আনলে কেন?
೧೪ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ?
15 ১৫ আমার কি পাগলের অভাব আছে যে, তোমরা একে আমার কাছে পাগলামি করতে এনেছ? এ কি আমার বাড়িতে আসবে?”
೧೫ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.