< বংশাবলির দ্বিতীয় খণ্ড 15 >
1 ১ পরে ঈশ্বরের আত্মা ওদেদের ছেলে অসরিয়ের উপরে আসলেন,
೧ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
2 ২ তখন তিনি আসার সঙ্গে দেখা করতে গিয়ে তাকে বললেন, “হে আসা এবং যিহূদা ও বিন্যামীনের লোক সকল, তোমরা আমার কথা শোনো; তোমরা যতদিন সদাপ্রভুর সঙ্গে থাকবে ততদিন তিনিও তোমাদের সঙ্গে আছেন; আর যদি তোমরা তাঁর খোঁজ কর, তবে তিনি তোমাদেরকে তাঁর উদ্দেশ্য জানাবেন; কিন্তু তাঁকে যদি ত্যাগ কর, তবে তিনি তোমাদেরকে ত্যাগ করবেন।
೨ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
3 ৩ ইস্রায়েলীয়েরা অনেক দিন ধরে সত্য ঈশ্বর ছাড়া, শিক্ষা দেবার জন্য যাজক ছাড়া এবং ব্যবস্থা ছাড়াই চলছিল;
೩ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
4 ৪ কিন্তু সংকটের দিনের তারা ইস্রায়েলের ঈশ্বর সদাপ্রভুর দিকে ফিরে তাঁর খোঁজ করল, তখন তিনি তাদেরকে তাঁর উদ্দেশ্য জানালেন।
೪ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
5 ৫ সেই দিনের কোথাও যাওয়া-আসা করা নিরাপদ ছিল না, কারণ সমস্ত জায়গার লোকেরা তখন খুব অসুবিধার মধ্যে ছিল।
೫ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
6 ৬ তারা চূর্ণ-বিচূর্ণ হত, এক জাতি অন্য জাতিকে ও এক নগর অন্য নগরকে আঘাত করত, কারণ সব রকমের সংকট দিয়ে ঈশ্বর তাদের কষ্ট দিচ্ছিলেন।
೬ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
7 ৭ কিন্তু তোমরা বলবান হও, তোমাদের হাত দুর্বল না হোক, কারণ তোমাদের কাজের জন্য পুরষ্কার পাবে।”
೭ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
8 ৮ যখন আসা এই সব কথা, অর্থাৎ ওদেদের ছেলে ভাববাদী অসরিয়ের ভাববাণী শুনে সাহস পেয়ে যিহূদার ও বিন্যামীনের সমস্ত দেশ থেকে এবং তিনি পর্বতে ঘেরা ইফ্রয়িম দেশে যে সব নগর দখল করেছিলেন, সেখান থেকে জঘন্য জিনিসগুলি ধ্বংস করলেন এবং সদাপ্রভুর বারান্দার সামনের সদাপ্রভুর যজ্ঞবেদি মেরামত করলেন।
೮ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
9 ৯ পরে তিনি সমস্ত যিহূদা ও বিন্যামীনকে এবং তাদের মধ্যে বসবাসকারী ইফ্রয়িম, মনঃশি ও শিমিয়োন থেকে আসা লোকেদেরকে জড়ো করলেন; কারণ তাঁর ঈশ্বর সদাপ্রভু তাঁর সঙ্গে আছেন দেখে, ইস্রায়েলের অনেক লোক তাঁর পক্ষে এসেছিল।
೯ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
10 ১০ আসার রাজত্বের পনেরো বছরের তৃতীয় মাসে লোকেরা যিরূশালেমে জড়ো হয়েছিল।
೧೦ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
11 ১১ আর সেই দিনের তারা লুট করে আনা দ্রব্য থেকে সাতশো গরু ও সাত হাজার ভেড়া সদাপ্রভুর উদ্দেশ্যে বলিদান করল।
೧೧ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
12 ১২ আর তারা এই প্রতিজ্ঞা করল যে, তারা সমস্ত মনপ্রাণ দিয়ে তাদের পূর্বপুরুষদের ঈশ্বর সদাপ্রভুর খোঁজ করবে;
೧೨ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
13 ১৩ ছোট বড়, স্ত্রী-পুরুষ, যে কেউ ইস্রায়েলের ঈশ্বর সদাপ্রভুর খোঁজ না করবে তাদের মেরে ফেলা হবে।
೧೩ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
14 ১৪ তারা চিৎকার করে জয়ধ্বনির সঙ্গে তূরী ও শিংগা বাজিয়ে সদাপ্রভুর কাছে শপথ করল।
೧೪ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
15 ১৫ এই শপথে সমস্ত যিহূদা আনন্দ করল, কারণ তারা তাদের সমস্ত হৃদয় দিয়ে শপথ করেছিল এবং সমস্ত ইচ্ছার সঙ্গে সদাপ্রভুর খোঁজ করায় তিনি তাদেরকে তাঁর উদ্দেশ্য জানালেন; আর তিনি চারিদিকে তাদের বিশ্রাম দিলেন।
೧೫ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
16 ১৬ আর রাজা আসার মা মাখা একটা জঘন্য আশেরার প্রতিমা তৈরী করেছিলেন বলে আসা তাঁকে রাজমাতার পদ থেকে সরিয়ে দিলেন এবং আসা তাঁর সেই জঘন্য প্রতিমা ভেঙে ফেললেন ও কিদ্রোণ স্রোতের ধারে সেটা পুড়িয়ে দিলেন।
೧೬ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
17 ১৭ কিন্তু ইস্রায়েলের মধ্যে সব উঁচু জায়গা গুলি ধ্বংস হয়নি; তবুও আসার হৃদয় সারাজীবন একরকম ছিল।
೧೭ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
18 ১৮ আর তিনি তাঁর বাবার পবিত্র করা ও তাঁর পবিত্র করা রূপা, সোনা ও পাত্রগুলি ঈশ্বরের গৃহে নিয়ে এলেন।
೧೮ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
19 ১৯ আসার রাজত্বের পঁয়ত্রিশ বছর পর্যন্ত আর কোনো যুদ্ধ হয়নি।
೧೯ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.