< বংশাবলির দ্বিতীয় খণ্ড 8 >
1 ১ সদাপ্রভুর মন্দির ও তাঁর নিজের বাড়ি তৈরী করতে শলোমনের কুড়ি বছর লাগল।
೧ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
2 ২ তারপর, হূরম শলোমনকে যে সব নগর দিয়েছিলেন, শলোমন সেগুলি পুনরায় তৈরী করে সেখানে ইস্রায়েল সন্তানদের বাস করতে দিলেন।
೨ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
3 ৩ তারপর শলোমন হমাৎ-সোবাতে গিয়ে সেটা দখল করলেন।
೩ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.
4 ৪ তিনি মরুপ্রান্তে তদ্মোর নগর এবং তৈরী করলেন হমাতে সমস্ত ভান্ডার-নগর তৈরী করলেন।
೪ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
5 ৫ তাই তিনি উপরের বৈৎ-হোরোণ ও নীচের বৈৎ-হোরোণ এই দুটি প্রাচীরে ঘেরা নগর প্রাচীর, দরজা ও অর্গলের মাধ্যমে শক্তিশালী করলেন।
೫ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
6 ৬ আর বালৎ এবং শলোমনের সব ভান্ডার-নগর এবং তাঁর রথের ও ঘোড়াচালকদের নগরগুলি, আর যিরূশালেমে, লিবানোনে ও তাঁর অধিকার দেশের সব জায়গায় যা যা তৈরী করতে শলোমনের ইচ্ছা ছিল, তিনি সবই তৈরী করলেন।
೬ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
7 ৭ হিত্তীয়, ইমোরীয়, পরিষীয়, হিব্বীয় ও যিবূষীয় যে সব লোক অবশিষ্ট ছিল, যারা ইস্রায়েলীয় নয়, যাদেরকে ইস্রায়েল সন্তানরা সম্পূর্ণ ভাবে ধ্বংস করে নি,
೭ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
8 ৮ দেশে অবশিষ্ট সেই লোকদের সন্তানদের শলোমন নিজের দাস হিসাবে সংগ্রহ করলেন; তারা আজ পর্যন্ত সেই কাজ করছে।
೮ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
9 ৯ কিন্তু শলোমন তাঁর কাজ করবার জন্য ইস্রায়েল সন্তানদের মধ্যে কাউকে দাস বানান নি; তারা যোদ্ধা, তাঁর প্রধান সেনাপতি এবং তাঁর রথের ও ঘোড়াচালকদের সেনাপতি হল।
೯ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
10 ১০ আর তাদের মধ্যে শলোমন রাজার নিযুক্ত দুশো পঞ্চাশ জন প্রধান শাসনকর্ত্তা প্রজাদের উপরে কর্তৃত্ব করত।
೧೦ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
11 ১১ পরে শলোমন ফরৌণের মেয়ের জন্য যে বাড়ি তৈরী করেছিলেন, সেই বাড়িতে দায়ূদ-নগর থেকে তাঁকে নিয়ে এলেন; কারণ তিনি বললেন, “আমার স্ত্রী ইস্রায়েলের রাজা দায়ূদের বাড়িতে থাকবেন না, কারণ যে সব জায়গায় সদাপ্রভুর সিন্দুক আনা হয়েছে সেই জায়গাগুলি পবিত্র।”
೧೧ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
12 ১২ আর শলোমন বারান্দার সামনে সদাপ্রভুর যে যজ্ঞবেদি তৈরী করেছিলেন, তার উপরে সদাপ্রভুর উদ্দেশ্যে হোম করতে লাগলেন।
೧೨ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,
13 ১৩ তিনি মোশির আদেশ মতে বিশ্রামবারে, অমাবস্যায় ও বছরের মধ্যে নির্ধারিত তিনটি উত্সবে, অর্থাৎ তাড়ীশূন্য রুটির উত্সবে, সপ্তাহের উত্সবে ও কুঁঠীর উত্সবে প্রতিদিনের নিয়ম অনুসারে বলি উৎসর্গ করতেন।
೧೩ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
14 ১৪ আর তিনি তাঁর বাবা দায়ূদের নির্ধারিত যাজকদের সেবা কাজের জন্য তাদের দিন সূচি নির্দিষ্ট করে দিলেন এবং প্রতিদিনের নিয়ম অনুসারে প্রশংসা ও যাজকদের সামনে পরিচর্য্যা করতে লেবীয়দেরকে নিজেদের কাজে নিযুক্ত করলেন। আর তিনি পালা অনুসারে প্রত্যেকটি দরজা দারোয়ানদের নিযুক্ত করলেন, কারণ ঈশ্বরের লোক দায়ূদ সেই রকম আদেশ দিয়েছিলেন।
೧೪ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
15 ১৫ আর রাজা যাজকদের ও লেবীয়দেরকে ভান্ডার প্রভৃতি যে কোনো বিষয়ে যে আদেশ দিতেন, তার অমান্য তারা করত না।
೧೫ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
16 ১৬ সদাপ্রভুর গৃহের ভিত যে দিন গাঁথা হয়েছিল সেদিন থেকে শুরু করে তা শেষ করবার দিন পর্যন্ত শলোমনের সমস্ত কাজ নিয়ম করে চলল-সদাপ্রভুর গৃহের কাজ শেষ হল।
೧೬ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
17 ১৭ তারপর শলোমন ইদোম দেশের সমুদ্র পারের ইৎসিয়োন-গেবরে ও এলতে গেলেন।
೧೭ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.
18 ১৮ আর হূরম তাঁর দাসেদের দিয়ে তাঁর কাছে কয়েকটি জাহাজ ও সামুদ্রিক কাজে দক্ষ দাসদেরকে পাঠালেন; তারা শলোমনের দাসেদের সঙ্গে ওফীরে গিয়ে সেখান থেকে চারশো পঞ্চাশ তালন্ত সোনা নিয়ে শলোমন রাজার কাছে আনলো।
೧೮ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.