< দ্বিতীয় রাজাবলি 19 >
1 ১ রাজা হিষ্কিয় এই কথা শোনার পর নিজের কাপড় ছিঁড়লেন আর চটের পোশাক পরলেন এবং সদাপ্রভুর গৃহে গেলেন।
೧ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
2 ২ তিনি রাজবাড়ীর পরিচালক ইলীয়াকীম, রাজার লেখক শিব্ন ও যাজকদের প্রাচীনদের চট পরিয়ে আমোসের ছেলে যিশাইয় ভাববাদীর কাছে পাঠিয়ে দিলেন।
೨ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
3 ৩ তাঁরা যিশাইয়কে বললেন, “হিষ্কিয় বলছেন যে, আজকের দিন টা হল কষ্টের, তিরস্কার হওয়ার ও অসম্মানের দিন। কারণ যেন সন্তানেরা জন্ম হবার মুখে এসেছে কিন্তু তাদের জন্ম দেবার শক্তি নেই।
೩ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
4 ৪ অশূরের রাজা যিনি জীবন্ত ঈশ্বরকে ঠাট্টা বিদ্রূপ করতে রব্শাকিকে পাঠিয়েছেন কিন্তু আপনার ঈশ্বর সদাপ্রভু হয়তো সেই সব কথা শুনে তাকে ধমক দেবেন। তাই যারা এখনও বেঁচে আছে তাদের জন্য আপনি প্রার্থনা করুন।”
೪ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
5 ৫ তখন রাজা হিষ্কিয়ের কর্মচারীরা যিশাইয়ের কাছে আসলেন,
೫ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
6 ৬ এবং যিশাইয় তাঁদের বললেন “তোমাদের মালিককে বল যে, সদাপ্রভু এই কথা বলছেন, ‘তুমি যা শুনেছ, অর্থাৎ অশূরের রাজার কর্মচারীরা আমার বিরুদ্ধে যে সব অপমানের কথা বলেছে তাতে তুমি ভয় পেয়ো না।
೬ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
7 ৭ দেখো, আমি তার মধ্যে এমন একটা আত্মা দেব যার ফলে সে একটা সংবাদ শুনতে পাবে এবং নিজের দেশে ফিরে যাবে। আমি তাকে তার নিজের দেশে তলোয়ারের দ্বারা শেষ করে দেব’।”
೭ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
8 ৮ পরে রব্শাকি ফিরে গেলেন এবং দেখলেন যে, অশূরের রাজা লিব্নার বিরুদ্ধে যুদ্ধ করছেন। কারণ তিনি লাখীশ থেকে চলে গিয়েছিলেন একথা রব্শাকি শুনেছিলেন।
೮ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
9 ৯ অশূরের রাজা সন্হেরীব শুনতে পেলেন যে, কূশ দেশের রাজা তির্হকঃ তাঁর বিরুদ্ধে যুদ্ধ করবার জন্য বের হয়েছেন। তাই তিনি আবার দূতদের দিয়ে হিষ্কিয়ের কাছে খবর পাঠালেন,
೯ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
10 ১০ “তোমরা যিহূদার রাজা হিষ্কিয়কে বলবে, তুমি যাঁকে বিশ্বাস কর সেই ঈশ্বর এইরকম বলে তোমাদের প্রতারণা না করুক যে, রাজা অশূরের হাতে যিরূশালেমকে দেওয়া হবে না।
೧೦ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
11 ১১ দেখো, অশূরের রাজারা কিভাবে অন্য সব দেশগুলি সম্পূর্ণভাবে ধ্বংস করে দিয়েছেন তা তুমি নিশ্চয়ই শুনেছ; তাহলে তুমি কি রক্ষা পাবে?
೧೧ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
12 ১২ আমার পূর্বপুরুষেরা যে সব জাতিকে ধ্বংস করেছেন তাদের দেবতারা, অর্থাৎ গোষণ, হারণ, রেৎসফ এবং তলঃসরে বাসকারী এদনের লোকদের দেবতারা কি তাদের রক্ষা করেছে?
೧೨ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
13 ১৩ হমাতের রাজা, অর্পদের রাজা, সফর্বয়িম শহরের রাজা অথবা হেনা ও ইব্বার রাজা কোথায়?”
೧೩ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
14 ১৪ হিষ্কিয় দূতদের কাছ থেকে চিঠিখানা নিলেন এবং সেটি পড়লেন। পরে তিনি সদাপ্রভুর গৃহে গেলেন এবং তাঁর সামনে চিঠিটা মেলে দিলেন।
೧೪ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
15 ১৫ হিষ্কিয় সদাপ্রভুর কাছে এই প্রার্থনা করলেন এবং বললেন, “বাহিনীগনের সদাপ্রভু, ইস্রায়েলের ঈশ্বর, করূবের মাঝে অবস্থিত হে সদাপ্রভু, তুমিই একমাত্র পৃথিবীর সমস্ত রাজ্যের ঈশ্বর। তুমি মহাকাশ ও পৃথিবী সৃষ্টি করেছ।
೧೫ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
16 ১৬ হে সদাপ্রভু, কান ফেরাও এবং শোন; তোমার চোখ খোল সদাপ্রভু এবং দেখ, সন্হেরীবের কথা শোন যা জীবন্ত ঈশ্বরকে অপমান করবার জন্য বলে পাঠিয়েছে।
೧೬ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
17 ১৭ সত্য, হে সদাপ্রভু, যে অশূরের রাজারা সব জাতিকে এবং তাদের দেশ ধ্বংস করেছে।
೧೭ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
18 ১৮ তারা তাদের দেবতাদের আগুনে ফেলে দিয়েছে। কারণ সেগুলো তো ঈশ্বর ছিল না কিন্তু শুধুমাত্র মানুষের হাতে তৈরী কেবল কাঠ আর পাথর; সেইজন্য অশূরেরা তাদের ধ্বংস করে দিয়েছে।
೧೮ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
19 ১৯ এখন হে সদাপ্রভু আমাদের ঈশ্বর, অশূরের রাজার হাত থেকে তুমি আমাদের রক্ষা কর, যাতে পৃথিবীর সমস্ত রাজ্য জানতে পারে যে, হে সদাপ্রভু, তুমি, একমাত্র তুমিই ঈশ্বর।”
೧೯ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
20 ২০ তখন আমোসের ছেলে যিশাইয় হিষ্কিয়ের কাছে একটি খবর পাঠালেন, সদাপ্রভু, ইস্রায়েলের ঈশ্বর বলছেন যে, অশূরের রাজা সন্হেরীব সম্বন্ধে আপনার প্রার্থনা আমি শুনেছি।
೨೦ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
21 ২১ তার বিষয়ে সদাপ্রভু এই কথা বলছেন, “সিয়োন কুমারী মেয়ে তোমাকে তুচ্ছ করছে এবং হাঁসাহাঁসি করছে। যিরূশালেমের মেয়েরা তোমার দিকে মাথা নাড়ছে।
೨೧ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
22 ২২ তুমি কাকে তুচ্ছ করেছ? কার বিরুদ্ধে অপমানের কথা বলেছ? তুমি কার বিরুদ্ধে চিৎকার করেছ এবং গর্ব সহকারে চোখ তুলে তাকিয়েছ? তুমি ইস্রায়েলের পবিত্রতমের বিরুদ্ধেই এই সব করেছ।
೨೨ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
23 ২৩ তোমার লোকদের দিয়ে তুমি প্রভুকে অপমান করে বলেছ যে, আমি সব রথ দিয়ে পাহাড়গুলোর চূড়ায় উঠেছি, লেবাননের সবচেয়ে উঁচু চূড়ায় উঠেছি। আমি তার সবচেয়ে লম্বা লম্বা এরস গাছ আর ভাল ভাল দেবদারু গাছ কেটে ফেলব। আমি তার বনের শেষপ্রান্ত, সুন্দর ফলবান জায়গায় ঢুকব।
೨೩ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
24 ২৪ আমি বিদেশের মাটিতে কুয়ো খুঁড়েছি এবং সেখানকার জল খেয়েছি। আমি নিজের পা দিয়ে মিশরের সব নদীগুলো শুকনো করব।
೨೪ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
25 ২৫ তুমি কি শোন নি যে, বহুদিন পূর্বেই আমি তা ঠিক করে রেখেছিলাম? বহুকাল আগেই আমি তার পরিকল্পনা করেছিলাম? আর এখন আমি তা করলাম। তোমার মাধ্যমে দেয়াল দিয়ে ঘেরা শহরগুলো ধ্বংস করে পাথরের ঢিবি করতে পেরেছি।
೨೫ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
26 ২৬ সেখানকার লোকেরা শক্তিহীন হয়েছে এবং ভীষণ ভয় ও লজ্জা পেয়েছে। তারা ক্ষেতের চারার মত, গজিয়ে ওঠা সবুজ ঘাসের মত, ছাদের উপরে গজানো ঘাসের মত যা বেড়ে উঠবার আগেই শুকিয়ে যাবে সেরকম হলো।
೨೬ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
27 ২৭ কিন্তু তোমার মধ্যে বসে থাকা আর কখন বাইরে যাওয়া বা ভিতরে আসা এবং কেমন করে আমার বিরুদ্ধে রেগে ওঠ আমি তা জানি।
೨೭“ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
28 ২৮ কারণ আমার বিরুদ্ধে তুমি রেগে উঠেছ এবং তোমার গর্বের কথা আমার কানে এসেছে বলে আমি আমার কড়া তোমার নাকে লাগাব এবং তোমার মুখে আমার বল্গা লাগাব; আর যে পথ দিয়ে তুমি এসেছ সেই পথেই তোমাকে ফিরিয়ে দেব৷”
೨೮ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
29 ২৯ আর হে হিষ্কিয়, তোমার জন্য চিহ্ন হবে এই, এই বছরে নিজের থেকেই যা জন্মাবে তোমরা তাই খাবে এবং দ্বিতীয় বছরে তা থেকে যা জন্মাবে তা খাবে। কিন্তু তৃতীয় বছরে তোমরা অবশ্যই বীজ বুনবে ও ফসল কাটবে আর আঙুর গাছ লাগিয়ে তার ফল খাবে।
೨೯ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
30 ৩০ যিহূদা গোষ্ঠীর যে লোকেরা তখনও বেঁচে থাকবে তারা আবার গাছের মত নীচে শিকড় বসাবে আর উপরে ফল দেবে।
೩೦ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
31 ৩১ যিরূশালেম থেকে অবশিষ্ট লোকেরা আসবে, আর সিয়োন পাহাড় থেকে আসবে বেঁচে যাওয়া লোক। বাহিনীগনের সদাপ্রভুর আগ্রহেই এই সব করবে।
೩೧ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
32 ৩২ সেজন্য অশূরের রাজার সম্পর্কে সদাপ্রভু এই কথা বলেন, সে এই শহরে আসবে না কিম্বা এখানে একটা তীরও ছুড়বে না। সে ঢাল নিয়ে এর সামনে আসবে না কিম্বা ওঠা নামা করবার জন্য কিছু তৈরী করবে না।
೩೨ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
33 ৩৩ সে যে পথ দিয়ে এসেছে সেই পথ দিয়েই ফিরে যাবে; এই শহরে সে প্রবেশ করবে না। এটাই হলো সদাপ্রভুর ঘোষণা।
೩೩ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
34 ৩৪ কারণ আমি আমার ও আমার দাস দায়ূদের জন্য এই শহরটা রক্ষা করব ও তার ঢাল হয়ে থাকব।
೩೪ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
35 ৩৫ সেই রাতে সদাপ্রভুর দূত বের হয়ে অশূরীয়দের শিবির আক্রমণ করলেন এবং এক লক্ষ পঁচাশি হাজার সৈন্যকে মেরে ফেললেন। পরদিন ভোরবেলায় লোকেরা যখন উঠল তখন দেখতে পেল সব জায়গায় শুধু মৃতদেহ।
೩೫ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
36 ৩৬ সেজন্য অশূর রাজা সন্হেরীব তাঁর সৈন্যদল নিয়ে ইস্রায়েল থেকে চলে গেলেন এবং নীনবীতে ফিরে গিয়ে সেখানে থাকতে লাগলেন।
೩೬ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
37 ৩৭ পরে, সন্হেরীব যেমন তাঁর দেবতা নিষ্রোকের মন্দিরে পূজা করছিলেন, তাঁর ছেলেরা অদ্রম্মেলক ও শরেৎসর তাঁকে তলোয়ার দিয়ে মেরে ফেলে তারা অরারট দেশে পালিয়ে গেল। তখন সন্হেরীবের জায়গায় তাঁর ছেলে এসর-হদ্দোন রাজা হলেন।
೩೭ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.