< দ্বিতীয় বিবরণ 31 >
1 ১ পরে মোশি গিয়ে সব ইস্রায়েলকে এই সব কথা বললেন।
೧ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.
2 ২ আর তিনি তাদেরকে বললেন, “আজ আমার বয়স একশো কুড়ি বছর, আমি আর বাইরে যেতে ও ভিতরে আসতে পারি না এবং সদাপ্রভু আমাকে বলেছেন, তুমি এই যর্দ্দন (নদী) পার হবে না।
೨ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.
3 ৩ তোমার ঈশ্বর সদাপ্রভু নিজে তোমার আগে গিয়ে পার হয়ে যাবেন; তিনিই তোমার সামনে থেকে সেই জাতিদেরকে ধ্বংস করবেন, তাতে তুমি তাদেরকে তাড়িয়ে দেবে; সদাপ্রভু যেমন বলেছেন, তেমনি যিহোশূয়ই তোমার আগে গিয়ে পার হয়ে যাবে।
೩ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
4 ৪ আর সদাপ্রভু ইমোরীয়দের সীহোন ও ওগ নামে দুই রাজাকে ধ্বংস করে তাদের প্রতি ও তাদের দেশের প্রতি যেমন করেছেন, ওদের প্রতিও সেরকম করবেন।
೪ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
5 ৫ যখন তোমরা যুদ্ধে তাদের সঙ্গে সাক্ষাৎ করবে সদাপ্রভু তাদের বিরুদ্ধে তোমাদের জয় দেবেন, তখন তোমরা আমার আদেশ দেওয়া সব আদেশ অনুসারে তাদের প্রতি ব্যবহার করবে।
೫ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
6 ৬ তোমরা শক্তিশালী হও ও সাহস কর, ভয় কোরো না, তাদের থেকে ভীত হয়ো না; কারণ তোমার ঈশ্বর সদাপ্রভু নিজে তোমার সঙ্গে যাচ্ছেন, তিনি তোমাকে ছাড়বেন না, তোমাকে ত্যাগ করবেন না।”
೬ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
7 ৭ আর মোশি যিহোশূয়কে ডেকে পুরো ইস্রায়েলের সামনে বললেন, “তুমি শক্তিশালী হও ও সাহস কর, কারণ সদাপ্রভু এদেরকে যে দেশ দিতে এদের পূর্বপুরুষদের কাছে শপথ করেছেন, সেই দেশে এই লোকদের সঙ্গে তুমি প্রবেশ করবে এবং তুমি এদেরকে সেই দেশ অধিকার করাবে।
೭ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
8 ৮ আর সদাপ্রভু নিজে তোমার আগে আগে যাচ্ছেন; তিনিই তোমার সঙ্গে থাকবেন; তিনি তোমাকে ছাড়বেন না, তোমাকে ত্যাগ করবেন না; ভয় কোরো না, নিরাশ হয়ো না।”
೮ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
9 ৯ পরে মোশি এই নিয়ম লিখলেন এবং লেবির ছেলেরা যাজকরা, যারা সদাপ্রভুর নিয়ম সিন্দুক বহন করত, তাদেরকে ও ইস্রায়েলের সব প্রাচীনদেরকে সমর্পণ করলেন।
೯ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
10 ১০ আর মোশি তাদেরকে এই আদেশ দিলেন, “প্রত্যেক সাত বছরের শেষে, ঋণ বাতিলের দিনের কুটিরের পর্বে,
೧೦ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
11 ১১ যখন সমস্ত ইস্রায়েল তোমার ঈশ্বর সদাপ্রভুর মনোনীত জায়গায় তাঁর সামনে উপস্থিত হবে, সেই দিনের তুমি সমস্ত ইস্রায়েলের সামনে তাদের কাছে এই নিয়ম পড়বে।
೧೧ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
12 ১২ তুমি লোকদেরকে, পুরুষ, স্ত্রী, বালক বালিকা ও তোমার শহরের দরজার মধ্যবর্ত্তী বিদেশী সবাইকে জড়ো করবে, যেন তারা শুনে শেখে ও তোমাদের ঈশ্বর সদাপ্রভুকে ভয় করে এবং এই নিয়মের সব কথা যত্নসহকারে পালন করে
೧೨ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
13 ১৩ আর তাদের যে সন্তানরা এই সব জানে না, তারা যেন শুনে এবং যে দেশ অধিকার করতে তোমরা যর্দ্দন পার হয়ে যাচ্ছ, সেই দেশে যতদিন বেঁচে থাকে, তারা ততদিন যেন তোমাদের ঈশ্বর সদাপ্রভুকে ভয় করতে শেখে।”
೧೩ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.
14 ১৪ পরে সদাপ্রভু মোশিকে বললেন, “দেখ, তোমার মৃত্যুদিন কাছাকাছি, তুমি যিহোশূয়কে ডাক এবং তোমরা উভয়ে সমাগম তাঁবুতে উপস্থিত হও, আমি তাকে আদেশ দেব।” তাতে মোশি ও যিহোশূয় গিয়ে সমাগম তাঁবুতে উপস্থিত হলেন।
೧೪ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
15 ১৫ আর সদাপ্রভু সেই তাঁবুতে মেঘের স্তম্ভে দেখা দিলেন; সেই মেঘের স্তম্ভ তাঁবু দরজার ওপরে স্থির থাকল।
೧೫ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
16 ১৬ তখন সদাপ্রভু মোশিকে বললেন, “দেখ, তুমি নিজের পূর্বপুরুষদের (পিতা) সঙ্গে শুবে, আর এই লোকেরা উঠবে এবং যে দেশে প্রবেশ করতে যাচ্ছে, সেই দেশের বিদেশী দেবতাদের অনুসরণে ব্যভিচার করবে এবং আমাকে ত্যাগ করবে ও তাদের সঙ্গে করে আমার নিয়ম ভাঙ্গবে।
೧೬ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
17 ১৭ সেই দিনের তাদের বিরুদ্ধে আমার রাগ প্রজ্বলিত হবে, আমি তাদেরকে ত্যাগ করব ও তাদের থেকে নিজের মুখ লুকাব আর তারা কবলিত হবে এবং তাদের ওপরে নানা ধরনের অমঙ্গল ও সঙ্কট ঘটবে; সেই দিনের তারা বলবে, ‘আমাদের উপর এই সমস্ত অমঙ্গল ঘটেছে, এর কারণ কি এটাই না, যে আমাদের ঈশ্বর আমাদের মধ্যবর্ত্তী নন?’
೧೭ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
18 ১৮ বাস্তবিক তারা অন্য দেবতাদের কাছে ফিরে যে সব খারাপ কাজ করবে, তার জন্য সেই দিনের আমি অবশ্য তাদের থেকে নিজের মুখ ঢাকব।
೧೮ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
19 ১৯ এখন তোমরা নিজেদের জন্য এই গান লেখো এবং তুমি ইস্রায়েলের লোকদেরকে এই গান শেখাও ও তাদেরকে মুখস্থ করাও; যেন এই গান ইস্রায়েলের লোকদের বিরুদ্ধে আমার সাক্ষী হয়।
೧೯“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.
20 ২০ কারণ আমি যে দেশ দিতে তাদের পূর্বপুরুষদের (পিতা) কাছে শপথ করেছি, সেই দুধ ও মধুপ্রবাহী দেশ তাদেরকে নিয়ে গেলে পর যখন তারা খেয়ে তৃপ্তি ও মোটা হবে, তখন অন্য দেবতাদের কাছে ফিরবে এবং তাদের সেবা করবে, আমাকে অবজ্ঞা করবে ও আমার নিয়ম ভাঙ্গবে।
೨೦ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
21 ২১ আর যখন তাদের ওপরে নানা ধরনের অমঙ্গল ও সঙ্কট ঘটবে, সেই দিনের এই গান সাক্ষী হিসাবে তাদের সামনে সাক্ষ্য দেবে; কারণ তাদের বংশের মুখে এই গান ভুলে যাবে না; প্রকৃত পক্ষে আমি যে দেশের বিষয়ে শপথ করেছি, সেই দেশে তাদেরকে আনার আগেও এখন তারা যে পরিকল্পনা করছে, তা আমি জানি।”
೨೧ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
22 ২২ পরে মোশি সেই দিনের ঐ গান লিখে ইস্রায়েলের লোকদেরকে শেখালেন।
೨೨ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
23 ২৩ আর তিনি নূনের ছেলে যিহোশূয়কে আদেশ দিয়ে বললেন, “তুমি শক্তিশালী হও ও সাহস কর; কারণ আমি ইস্রায়েলের লোকদেরকে যে দেশ দিতে শপথ করেছি, সেই দেশে তুমি তাদেরকে নিয়ে যাবে এবং আমি তোমার সঙ্গী হব।”
೨೩ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
24 ২৪ আর মোশি শেষ পর্যন্ত এই নিয়মের কথা সব বইয়ে রচনার পর
೨೪ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,
25 ২৫ সদাপ্রভুর নিয়ম সিন্দুক বহনকারী লেবীয়দেরকে এই আদেশ দিলেন,
೨೫ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,
26 ২৬ “তোমরা এই নিয়মের বই নিয়ে তোমাদের ঈশ্বর সদাপ্রভুর নিয়ম সিন্দুকের পাশে রাখ; এটা তোমাদের বিরুদ্ধে সাক্ষীর জন্য সেই জায়গায় থাকবে।
೨೬“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
27 ২৭ কারণ তোমার বিরুদ্ধাচারিতা ও তোমার একগুঁয়েমিতা আমি জানি; দেখ, তোমাদের সঙ্গে আমি জীবিত থাকতেই আজ তোমরা সদাপ্রভুর বিরুদ্ধাচারী হলে, তবে আমার মৃত্যুর পরে কি না করবে?
೨೭ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
28 ২৮ তোমরা নিজেদের বংশের সমস্ত প্রাচীনদেরকে ও কর্ম্মচারীকে আমার কাছে জড়ো কর; আমি তাদের কানে এই সব কথা বলি এবং তাদের বিরুদ্ধে আকাশমণ্ডল ও পৃথিবীকে সাক্ষী করি।
೨೮ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
29 ২৯ কারণ আমি জানি, আমার মৃত্যুর পরে তোমরা সম্পূর্ণ ভ্রষ্ট হয়ে পড়বে এবং আমার আদেশ দেওয়া পথ হইতে বিপথগামী হবে। আর পরবর্তীকালে তোমাদের অমঙ্গল ঘটবে, কারণ সদাপ্রভুর দৃষ্টিতে যা খারাপ, তা করে তোমরা নিজেদের হাতের কাজের মাধ্যমে তাঁকে অসন্তুষ্ট করবে।”
೨೯ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
30 ৩০ পরে মোশি শেষ পর্যন্ত ইস্রায়েলের সমস্ত সমাজের কাছে এই গানের কথা গুলি বলতে লাগলেন।
೩೦ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.