< যিহিস্কেল ভাববাদীর বই 25 >
1 ১ তারপর সদাপ্রভুর বাক্য আমার কাছে এল এবং বলল
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2 ২ “মানুষের সন্তান, তুমি অম্মোন-সন্তানদের দিকে মুখ রাখ ও তাদের বিরুদ্ধে ভাববাণী বল।
“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.
3 ৩ তুমি অম্মোন-সন্তানদেরকে বল, ‘প্রভু সদাপ্রভুর বাক্য শোন। এই বাক্য যা সদাপ্রভু বলেন, তুমি বলেছো “আহা” আমার পবিত্র স্থান যখন অপবিত্র হয়েছিল, ইস্রায়েল-ভূমি যখন জনশূন্য ছিল এবং যিহূদা-কুল যখন তাদের নির্বাসিত হয়েছিল।
ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ
4 ৪ তাই দেখ, আমি তোমাকে অধিকার হিসাবে পূর্বদেশের লোকেদের হাতে সমর্পণ করব, তারা তোমার মধ্যে শিবির স্থাপন করবে এবং তোমার মধ্যে তাদের তাঁবু তৈরী করবে; তারা তোমার ফল খাবে এবং তোমার দুধ পান করবে।
ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.
5 ৫ আর আমি রব্বাকে উটের চারনভূমি তৈরী করবো এবং ও অম্মোন সন্তানদের দেশকে মেষ পালের জায়গা করব; তাতে তোমার জানবে যে, আমি সদাপ্রভু।
ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.
6 ৬ কারণ প্রভু সদাপ্রভু এ কথা বলেন, তুমি ইস্রায়েল-দেশের বিরুদ্ধে হাততালি দিয়েছ, পা দিয়ে আঘাত করেছ ও আত্মার সঙ্গে সম্পূর্ন অবজ্ঞাভাবে আনন্দ করেছ।
ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,
7 ৭ এই জন্য দেখ, আমি তোমাকে আমার হাত দিয়ে আঘত করবো, জাতিদের লুটপাট করার জন্য তোমাকে পাঠাবো, অন্য লোকেদের মধ্য থেকে তোমাকে কেটে ফেলব এবং ধ্বংস করবো। আমি তোমাকে দেশের মধ্য থেকে তোমাকে ধ্বংস করব; তাতে তুমি জানবে যে, আমি সদাপ্রভু’।”
ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’”
8 ৮ প্রভু সদাপ্রভু এ কথা বলেন, মোয়াব ও সেয়ীর বলে, দেখ, যিহূদা-কুল অন্য সব জাতির মত।
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.
9 ৯ তাই দেখ, আমি মোয়াবের ঢাল শহরের সীমানার দিকে খুলে দেবো, জাকজমকপূর্ণ বৈৎ-যিশীমোতে বালমিয়নে ও কিরিয়াথয়িমে
ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
10 ১০ অস্মোন-সন্তানদের বিরুদ্ধে পূর্বদেশের লোকেদের জন্য পথ তৈরী করে দেশে অধিকারের জন্য দেব, এভাবে অম্মোন-সন্তানেরা আর জাতিদের মধ্যে স্মৃতিপথে আসবেনা।
ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.
11 ১১ তাই আমি মোয়াবের বিরুদ্ধে বিচার করব তাতে তারা জানবে যে, আমি সদাপ্রভু।
ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”
12 ১২ প্রভু সদাপ্রভু এ কথা বলেন, “ইদোম এভাবে যিহূদা-কুলের ওপর প্রতিশোধ নিয়েছে এবং প্রতিজ্ঞাবদ্ধ হয়ে অন্যায় করেছে।”
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.
13 ১৩ তাই প্রভু সদাপ্রভু এ কথা বলেন, “আমি আমার হাত দিয়ে ইদোমের উপরে আঘাত করবো এবং মানুষ ও পশুকে ধ্বংস করব। আমি তাদেরকে তৈমন থেকে দদান পর্যন্ত পরিত্যক্ত জায়গা করব, তারা তরোয়ালে পতিত হবে।
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.
14 ১৪ এই ভাবে আমি ইদোমের ওপরে আমার প্রতিশোধ নেওয়ার ভার ইস্রায়েলের হাতে সমর্পণ করব, তাতে আমার যেরকম রাগ ও যেরকম কোপ, তারা ইদোমের ওপর সেরকম ব্যবহার করবে, তখন তারা আমার প্রতিশোধের কথা জানবে;” এটা সদাপ্রভু বলেন।
ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’”
15 ১৫ প্রভু সদাপ্রভু এ কথা বলেন, পলেষ্টীয়েরা যিহূদাদের ওপর প্রতিশোধ নিয়েছে এবং তাদের ধ্বংস করেছে কারণ, চিরশত্রুতা এবং ঘৃণা তাদের হৃদয়ে ছিল।
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.
16 ১৬ তাই প্রভু সদাপ্রভু একথা বলেন, দেখ, আমি পলেষ্টীয়দের বিরুদ্ধে আমার হাত তুলবো এবং আমি কেটে ফেলবো করেথীয়দেরকে এবং বাকিদের ধ্বংস করবো যারা সমুদ্রের উপকূলে থাকে।
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.
17 ১৭ কারণ আমি তাদের বিরুদ্ধে প্রতিশোধ নেব শাস্তি দিয়ে, তাহলে তারা জানবে যে আমি সদাপ্রভু যখন আমি তাদের ওপরে প্রতিশোধ নেব।
ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”