< যিরমিয়ের বই 23 >
1 ১ সদাপ্রভু বলেন, “ধিক সেই পালকদের! যারা আমার পশু চড়ানোর মাঠের ভেড়াগুলিকে ধ্বংস করে ও ছড়িয়ে দেয়।”
೧“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
2 ২ সেইজন্য সদাপ্রভু, ইস্রায়েলের ঈশ্বর, যে পালকেরা তাঁর লোকদের চরায় সেই পালকদের উদ্দেশ্যে এই কথা বলেন, “তোমরা আমার পালের ভেড়াগুলিকে ছিন্নভিন্ন করেছ এবং তাদের তাড়িয়ে দিয়েছ, তাদের কোন যত্ন কর নি। জানো! তোমাদের মন্দ কাজের জন্য আমি তার মূল্য ফিরিয়ে দেব,” এটি সদাপ্রভুর ঘোষণা।
೨ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
3 ৩ “আমি যে সব দেশে আমার পালগুলিকে তাড়িয়ে দিয়েছিলাম, সেখান থেকে আমি নিজেই তাদের জড়ো করব এবং আমি তাদের পশু চরাবার মাঠে ফিরিয়ে আনব, সেখানে তারা ফলবান হবে ও বেড়ে উঠবে।
೩ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
4 ৪ তখন আমি তাদের উপর এমন পালকদের নিযুক্ত করব, যারা তাদের পালন করবে; তারা কেউ ভয় পাবে না বা আতঙ্কিত হবে না। তাদের মধ্যে কেউ হারিয়ে যাবে না,” এটি সদাপ্রভু ঘোষণা করেন।
೪ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
5 ৫ “দেখ! সেই দিন আসছে,” এটি সদাপ্রভুর ঘোষণা, “যখন আমি দায়ূদের জন্য একটি ন্যায়বান শাখাকে তুলব। তিনি রাজা হয়ে রাজত্ব করবেন; তিনি সাফল্যের সঙ্গে এই দেশে ন্যায়বিচার ও ধার্ম্মিকতা করবেন।
೫ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
6 ৬ তাঁর দিনের যিহূদা উদ্ধার পাবে এবং ইস্রায়েল নিরাপদে বাস করবে। তাঁকে এই নাম ডাকা হবে ‘সদাপ্রভু আমাদের ধার্ম্মিকতা।’
೬ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
7 ৭ অতএব দেখ, সেই দিন আসছে,” এটি সদাপ্রভুর ঘোষণা, “যখন তারা আর বলবে না, ‘জীবন্ত সদাপ্রভুর দিব্যি, যিনি ইস্রায়েলকে মিশর দেশ থেকে বের করে এনেছিলেন।’
೭ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
8 ৮ পরিবর্তে তারা বলবে, ‘জীবন্ত সদাপ্রভুর দিব্যি, যিনি ইস্রায়েলের বংশকে উত্তর দেশে ও সেই সব দেশ, যেখানে তারা ছড়িয়ে পড়েছিল, সেখান থেকে নিয়ে এসেছেন। তাই তারা নিজেদের দেশে বাস করবে’।”
೮ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
9 ৯ ভাববাদীদের জন্য আমার মধ্যে আমার অন্তর ভেঙে গিয়েছে এবং আমার সমস্ত হাড় কাঁপছে। আমি মাতালের মত হয়েছি, তার মত যার আঙ্গুর রস বেশি খাওয়া হয়ে গিয়েছে, এর কারণ হল সদাপ্রভু ও তাঁর পবিত্র বাক্য।
೯ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
10 ১০ এই দেশ ব্যভিচারীতে ভরে গেছে। তার জন্য এই দেশ বিলাপ করে। মরুপ্রান্তের তৃণক্ষেত শুকিয়ে গেছে। এই ভাববাদীরা মন্দ পথে চলছে; তাদের ক্ষমতা সঠিক ভাবে ব্যবহার করছে না।
೧೦ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
11 ১১ “ভাববাদী ও যাজকেরা উভয়েই অশুচি হয়েছে; আমার গৃহে আমি তাদের দুষ্টতা দেখেছি।” এটি সদাপ্রভুর ঘোষণা।
೧೧ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
12 ১২ সেইজন্য তাদের পথ অন্ধকারের মধ্যে পিচ্ছিল হবে। তাদের তাড়িয়ে দেওয়া হবে; সেখানে তারা পতিত হবে। কারণ আমি তাদের বিরুদ্ধে শাস্তির বছরে বিপদ পাঠাবো। এটি সদাপ্রভুর ঘোষণা।
೧೨ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
13 ১৩ “শমরিয়ার ভাববাদীদের মধ্যে আমি জঘন্য ব্যাপার দেখেছি, তারা বাল দেবতার ভাববাণী করে এবং আমার প্রজা ইস্রায়েলীয়দের সঠিক পথ থেকে দূরে সরায়।
೧೩ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.
14 ১৪ যিরূশালেমের ভাববাদীদের মধ্যে ভয়ঙ্কর জিনিস দেখেছি, তারা ব্যভিচার করে এবং মিথ্যার পথে হাঁটে। তারা অন্যায়কারীদের হাত শক্ত করে! কেউ তার দুষ্টতা থেকে ফেরে না। তারা সবাই আমার কাছে সদোমের মত, যিরূশালেমের অধিবাসীরা ঘমোরার মত।”
೧೪ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
15 ১৫ সেইজন্য বাহিনীগণের সদাপ্রভু ভাববাদীদের সম্বন্ধে এই কথা বলেন, “দেখ, আমি তাদের তেতো খাবার খাওয়াব ও বিষাক্ত জল পান করাব, কারণ যিরূশালেমের ভাববাদীদের কাছ থেকে অশুচিতা সমস্ত দেশে ছড়িয়ে গেছে।”
೧೫ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
16 ১৬ বাহিনীগণের সদাপ্রভু এই কথা বলেন, “যে ভাববাদীরা তোমাদের কাছে ভাববাণী করে তোমরা তাদের কথা শোন না। তারা তোমাদের প্রতারিত করে! তারা সদাপ্রভুর মুখ থেকে না, নিজেদের মন থেকে দর্শনের কথা বলে।
೧೬ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
17 ১৭ তারা সর্বদা তাদের কাছে এই কথা বলে, যারা আমাকে অসম্মান করে, ‘সদাপ্রভু ঘোষণা করেন, তোমাদের শান্তি হবে।’ যারা নিজেদের হৃদয়ের একগুঁয়েমিতে চলে, তারা বলে, ‘তোমাদের উপর বিপদ আসবে না।’
೧೭ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.
18 ১৮ তাদের মধ্যে কে সদাপ্রভুর সভায় দাঁড়িয়েছে? কে দেখে ও তাঁর বাক্য শোনে? কে তাঁর বাক্যে মনোযোগ দেয় ও শোনে?
೧೮ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
19 ১৯ দেখ, সদাপ্রভুর থেকে ঝড় আসছে! তাঁর ক্রোধ ছুটে যাচ্ছে এবং প্রচণ্ড ঘূর্ণি ঝড় বার হচ্ছে। দুষ্টদের মাথার উপরে এটা ঘুরছে।
೧೯ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
20 ২০ যতক্ষণ না এটা সম্পূর্ণ হয় এবং তাঁর অন্তরের উদ্দেশ্য সফল না হয় সদাপ্রভুর রোষ ফিরে যাবে না। শেষ দিনের, তোমরা তা বুঝতে পারবে।
೨೦ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
21 ২১ এই ভাববাদীদের আমি পাঠাই নি। তারা নিজেরাই প্রকাশিত হয়েছে। আমি তাদের কোন কথা ঘোষণা করিনি, কিন্তু তবুও তারা ভাববাণী করেছে।
೨೧ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
22 ২২ কারণ যদি তারা আমার সভায় দাঁড়াত, তাহলে আমার প্রজাদের কাছে তারা আমার বাক্যই শোনাত; তারা তাদের মন্দ পথ ও মন্দ কাজ থেকে ফেরাত।
೨೨ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.
23 ২৩ আমি কি শুধু কাছের ঈশ্বর, দূরের ঈশ্বর কি নই? এটি সদাপ্রভুর ঘোষণা।
೨೩ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ?
24 ২৪ কেউ কি এমন গোপন জায়গায় লুকাতে পারে যেখানে আমি তাকে দেখতে পাব না?” এটি সদাপ্রভুর ঘোষণা। “আমি কি স্বর্গ ও পৃথিবীর সব জায়গায় থাকি না?” এটি সদাপ্রভুর ঘোষণা।
೨೪ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
25 ২৫ “যে ভাববাদীরা আমার নাম নিয়ে মিথ্যা ভাববাণী করছে আমি তা শুনেছি। তারা বলেছে, ‘আমি একটি স্বপ্ন দেখেছি! আমি একটি স্বপ্ন দেখেছি’।
೨೫ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
26 ২৬ এটা আর কত দিন চলবে, ভাববাদীরা নিজের অন্তরের মিথ্যা দিয়ে ভাববাণী বলবে?
೨೬ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
27 ২৭ তারা পরিকল্পনা করছে, যেমন তাদের পূর্বপুরুষেরা বাল দেবতার জন্য আমার নাম ভুলে গিয়েছিল, তেমন তারা তাদের প্রতিবেশীদের কাছে স্বপ্নের কথা বলে আমার প্রজাদের আমার নাম ভুলিয়ে দেবে।
೨೭ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
28 ২৮ যে ভাববাদী স্বপ্ন দেখেছে, সে তার স্বপ্নের বিবরণ দিক। কিন্তু যাকে আমি কিছু বলেছি, সে বিশ্বস্তভাবে আমার বাক্য বলুক। দানাশস্যের কাছে খড় কি?” এটি সদাপ্রভুর ঘোষণা।
೨೮ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
29 ২৯ “আমার বাক্য কি আগুনের মত নয়? এবং হাতুড়ী দিয়ে শিলা টুকরো করার মত কি নয়?” এটি সদাপ্রভুর ঘোষণা।
೨೯ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
30 ৩০ তাই দেখ, আমি সেই ভাববাদীদের বিরুদ্ধে, যে কেউ অন্যদের কাছ থেকে বাক্য চুরি করে এবং বলে সেটা আমার কাছ থেকে এসেছে, এটি সদাপ্রভুর ঘোষণা।
೩೦ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
31 ৩১ দেখ, আমি সেই ভাববাদীদের বিরুদ্ধে, যারা ভাববাণী ঘোষণা করতে নিজেদের জিভ ব্যবহার করে, এটি সদাপ্রভুর ঘোষণা।
೩೧ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
32 ৩২ দেখ, আমি সেই ভাববাদীদের বিরুদ্ধে যারা মিথ্যা স্বপ্ন দেখে “এবং তারপরে তাদের প্রচার করে ও আমার প্রজাদের তাদের মিথ্যা ও অহঙ্কার দিয়ে বিপথে চালায়, এটি সদাপ্রভুর ঘোষণা। আমি তাদের বিরুদ্ধে, কারণ আমি তাদের পাঠাই নি, বা আদেশও দিইনি। নিশ্চিত যে, তারা এই লোকদের কোনো সাহায্য করতে পারবে না।” এটি সদাপ্রভুর ঘোষণা।
೩೨ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
33 ৩৩ “যখন এই লোকেরা বা একজন ভাববাদী বা একজন যাজক তোমাকে জিজ্ঞাসা করবে, ‘সদাপ্রভুর ঘোষণা কি?’ তখন তুমি অবশ্যই তাদের বলবে, ‘কি ঘোষণা? কারণ আমি তোমাদের ত্যাগ করেছি।’ এটি সদাপ্রভুর ঘোষণা।
೩೩ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
34 ৩৪ আর কোন ভাববাদী, যাজক এবং লোকেরা বলে, ‘এটাই সদাপ্রভুর ঘোষণা,’ তবে আমি সেই লোক ও তার পরিবারকে শাস্তি দেব।
೩೪ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
35 ৩৫ তোমরা, প্রত্যেকে তার প্রতিবেশীকে এবং প্রত্যেকে তার ভাইকে অবশ্যই এই কথা বল, ‘সদাপ্রভু কি উত্তর দিয়েছেন?’ এবং ‘সদাপ্রভু কি বলেছেন?’
೩೫ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’
36 ৩৬ কিন্তু তোমরা সদাপ্রভুর ঘোষণা সম্মন্ধে আর কথা বোলো না, কারণ প্রত্যেক লোকের ঘোষণা তাদের নিজেদের বাক্যে পরিণত হয়েছে এবং তোমরা জীবন্ত ঈশ্বর, বাহিনীগণের সদাপ্রভুর বাক্য বিকৃত করেছ, বাহিনীগণের সদাপ্রভু, আমাদের ঈশ্বর।
೩೬ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
37 ৩৭ তোমরা ভাববাদীদের এই কথা অবশ্যই বল, ‘সদাপ্রভু তোমাকে কি উত্তর দিয়েছেন? সদাপ্রভু কি বলেছেন?’
೩೭ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.
38 ৩৮ যদি তুমি সদাপ্রভুর কাছ থেকে ঘোষণা প্রকাশ করতে চাও, সদাপ্রভু এই কথা বলেন, ‘সদাপ্রভুর ঘোষণা, তোমার এই কথা বলার কারণে, যখন আমি তোমাকে একটি আদেশ পাঠাই এবং বলি, এটি বোল না যে, এটি সদাপ্রভুর কাছ থেকে একটি ঘোষণা,’
೩೮ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
39 ৩৯ তাহলে দেখ, আমি তোমাকে তুলব এবং সেই শহরের সঙ্গে, যেটি আমি তোমাদের ও তোমাদের পূর্বপুরুষদের দিয়েছিলাম, আমার কাছ থেকে দূর করে দেব।
೩೯ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
40 ৪০ তখন আমি তোমাদের উপরে চিরস্থায়ী লজ্জা ও অপমান দেব, যা কখনও কেউ ভুলবে না।”
೪೦ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”