< যোহন 14 >
1 ১ “তোমাদের মন যেন অস্থির না হয়। তোমরা ঈশ্বরে বিশ্বাস কর; আমাকেও বিশ্বাস কর।
೧“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2 ২ আমার পিতার বাড়িতে থাকার অনেক জায়গা আছে; যদি এরকম না হত, আমি তোমাদের বলতাম, সেইজন্য আমি তোমাদের জন্য থাকার জায়গা তৈরী করতে যাচ্ছি।
೨ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
3 ৩ যদি আমি যাই এবং তোমাদের জন্য থাকার জায়গা তৈরী করি, আমি আবার আসব এবং আমার কাছে তোমাদের নিয়ে যাব যেন আমি যেখানে থাকি তোমরাও সেখানে থাকতে পার,
೩ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
4 ৪ আমি কোথায় যাচ্ছি সে পথ তোমরা জান।”
೪ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
5 ৫ থোমা যীশুকে বললেন, “প্রভু, আমরা জানি না আপনি কোথায় যাচ্ছেন; আমরা কিভাবে পথটা জানব?”
೫ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
6 ৬ যীশু তাঁকে বললেন, “আমিই পথ, আমিই সত্য এবং আমিই জীবন; আমাকে ছাড়া কেউ পিতার কাছে যেতে পারে না।
೬ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
7 ৭ যদি তোমরা আমাকে জানতে, তবে তোমরা আমার পিতা কেও জানতে; এখন থেকে তোমরা তাঁকে জেনেছ এবং তাঁকে দেখেছ।”
೭ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
8 ৮ ফিলিপ যীশুকে বললেন, “প্রভু, আমাদের পিতাকে দেখান এবং এটাই আমাদের জন্য যথেষ্ট হবে।”
೮ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
9 ৯ যীশু তাঁকে বললেন, “ফিলিপ, আমি এত দিন ধরে তোমাদের সঙ্গে আছি তবুও তুমি কি এখনো আমাকে চিনতে পারনি?” যে আমাকে দেখেছে সে পিতাকেও দেখেছে; তোমরা কিভাবে বলতে পারো, “পিতাকে আমাদের দেখান?”
೯ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
10 ১০ তোমরা কি বিশ্বাস কর না যে আমি পিতাতে আছি এবং পিতা আমার মধ্যে আছেন? যে সব শিক্ষার কথা আমি তোমাদের বলছি সে সব আমার নিজের কথা নয়; কিন্তু পিতা আমার মধ্যে থেকে নিজের কাজ করছেন।
೧೦ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
11 ১১ আমাকে বিশ্বাস কর যে, আমি পিতাতে আছি এবং পিতা আমার মধ্যে আছেন; নতুবা আমার কাজের জন্যই আমাকে বিশ্বাস কর।
೧೧ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
12 ১২ সত্য, সত্য, আমি তোমাদের বলছি, যে কেউ আমাতে বিশ্বাস করে, আমি যে সব কাজ করি, সেও এই সব কাজ করবে; এবং সে এর থেকেও মহান মহান কাজ করবে কারণ আমি পিতার কাছে যাচ্ছি।
೧೨“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
13 ১৩ তোমরা আমার নামে যা কিছু চাইবে, আমি তা করব, যেন পিতা তাঁর পুত্রের মাধ্যমে মহিমান্বিত হন।
೧೩ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
14 ১৪ যদি তোমরা আমার নামে কিছু চাও, তা আমি করব।
೧೪ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
15 ১৫ যদি তোমরা আমাকে ভালবাসো, তবে তোমরা আমার সব আদেশ পালন করবে।
೧೫“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
16 ১৬ এবং আমি পিতার কাছে প্রার্থনা করব এবং তিনি তোমাদের অন্য একজন সহায়ক দেবেন সুতরাং তিনি চিরকাল তোমাদের সঙ্গে থাকবেন, (aiōn )
೧೬ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn )
17 ১৭ তিনি সত্যের আত্মা। জগত তাঁকে গ্রহণ করে না কারণ সে তাঁকে দেখেনি অথবা তাঁকে জানে না। তোমরা তাঁকে জান, তিনি তোমাদের সঙ্গে থাকেন এবং তোমাদের মধ্যে থাকবেন।
೧೭ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
18 ১৮ আমি তোমাদের একা রেখে যাব না; আমি তোমাদের কাছে ফিরে আসব।
೧೮“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
19 ১৯ কিছুদিন পরে জগত আর আমাকে দেখতে পাবে না, কিন্তু তোমরা আমাকে দেখতে পাবে। কারণ আমি জীবিত আছি, তোমরাও জীবিত থাকবে।
೧೯ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
20 ২০ যে দিন তোমরা জানবে যে আমি আমার পিতার মধ্যে আছি এবং তোমরা আমার মধ্যে আছ এবং আমি তোমাদের মধ্যে আছি।
೨೦ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
21 ২১ যে আমার সব আদেশ জানে এবং পালন করে, সেই একজন যে আমাকে ভালবাসে; এবং যে আমাকে ভালবাসে আমার পিতাও তাকে ভালবাসবে এবং আমি তাকে ভালবাসব এবং আমি নিজেকে তার কাছে প্রকাশ করব।
೨೧ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
22 ২২ যিহূদা (ঈষ্করিয়োতীয় নয়) যীশুকে বললেন, “প্রভু, কি ঘটেছে, যে আপনি আমাদের কাছেই নিজেকে দেখাবেন জগতের কাছে নয়?”
೨೨ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
23 ২৩ যীশু উত্তর করলেন এবং তাঁকে বললেন, “কেউ যদি আমাকে ভালবাসে, সে আমার কথা পালন করবে। আমার পিতা তাকে ভালবাসবেন এবং আমরা তাঁর কাছে আসব এবং তাঁর সঙ্গে আমাদের বাস করার জায়গা তৈরী করবেন।
೨೩ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
24 ২৪ যে কেউ আমাকে ভালবাসে না আমার কথা পালন করে না। যে কথা তোমরা শুনছ সেটা আমার নয় কিন্তু পিতার যিনি আমাকে পাঠিয়েছেন।”
೨೪ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
25 ২৫ আমি তোমাদের এই সব বিষয় বলেছি, যখন আমি তোমাদের মধ্যে ছিলাম।
೨೫“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
26 ২৬ যখন সহায়ক, পবিত্র আত্মা, যাঁদের পিতা আমার নামে পাঠাবেন, তাঁরা তোমাদের সব বিষয়ে শিক্ষা দেবেন এবং আমি তোমাদের যা বলেছি সে সব মনে করিয়ে দেবেন।
೨೬ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
27 ২৭ আমি তোমাদের জন্য শান্তি রেখে যাচ্ছি; আমার শান্তি তোমাদের দান করছি। জগত যেভাবে দেয় আমি সেভাবে দিই না। তোমাদের মন যেন অস্থির না হয় এবং মনে ভয় না থাকে।
೨೭“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
28 ২৮ তোমরা শুনেছ যে, আমি তোমাদের বলেছি, আমি চলে যাচ্ছি এবং আবার তোমাদের কাছে ফিরে আসব। যদি তোমরা আমাকে ভালবাসতে, তবে তোমরা আনন্দ করতে কারণ আমি বাবার কাছে যাচ্ছি, কারণ বাবা আমার চেয়ে মহান।
೨೮ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
29 ২৯ এখন ঐ সব ঘটবার আগে আমি তোমাদের বলছি, যখন এটা ঘটবে তোমরা বিশ্বাস করবে।
೨೯ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.
30 ৩০ আমি তোমাদের সঙ্গে আর বেশি কথা বলব না, কারণ জগতের শাসনকর্ত্তা আসিতেছে। আমার উপরে তাঁর কোনো ক্ষমতা নেই,
೩೦ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
31 ৩১ কিন্তু জগত যেন জানে যে, আমি পিতাকে ভালবাসি, পিতা আমাকে যা আদেশ করেন আমি সেই রকম করি। ওঠ, আমরা এ জায়গা ছেড়ে চলে যাই।
೩೧ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.