< লেবীয় বই 4 >

1 আর সদাপ্রভু মোশিকে বললেন,
ಯೆಹೋವನು ಮೋಶೆಗೆ ಇಂತೆಂದನು,
2 তুমি ইস্রায়েল সন্তানদের বল, কেউ যদি ভুলবশতঃ পাপ করে, অর্থাৎ সদাপ্রভুর আজ্ঞানিষিদ্ধ কাজের কোনো এক কাজ যদি করে;
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
3 বিশেষত অভিষিক্ত যাজক যদি এমন পাপ করে, যাতে লোকদের ওপরে দোষ হয়, তবে সে নিজের পাপের জন্য সদাপ্রভুর উদ্দেশ্যে নির্দোষ এক ছোট বলদ আনবে পাপের জন্য বলিরূপে উৎসর্গ করবে।
ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
4 পরে সমাগম তাঁবুর দরজার মুখে সদাপ্রভুর সামনে সেই বলদ আনবে; তার মাথার ওপর হাত রেখে সদাপ্রভুর সামনে তাকে হত্যা করবে।
ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
5 আর অভিষিক্ত যাজক সেই গোবৎসের কিছু রক্ত নিয়ে সমাগম তাঁবুর মধ্যে আনবে।
ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
6 আর যাজক সেই রক্তে নিজের আঙুল ডুবিয়ে পবিত্র জায়গায় পর্দার সামনের অংশে সদাপ্রভুর সামনে সাত বার তার কিছু রক্ত ছিটিয়ে দেবে।
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
7 পরে যাজক সেই রক্তের কিছুটা নিয়ে সমাগম তাঁবুর ভেতর সদাপ্রভুর সামনে রাখা সুগন্ধি ধূপের বেদির শিঙে দেবে, পরে গোবৎসের সব রক্ত নিয়ে সমাগম তাঁবুর দরজায় রাখা হোমবেদির মূলে ঢালবে।
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
8 আর পাপের জন্য বলির বলদের সব মেদ, অর্থাৎ ভেতরের অংশে ঢাকা মেদ, অন্ত্রের ওপরের সব মেদ
ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
9 এবং দুটো কিডনি ও তার ওপরে থাকা মেদ ও যকৃতের ওপরে থাকা ফুসফুস কিডনির সঙ্গে ছাড়িয়ে নেবে।
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
10 ১০ মঙ্গলের জন্য বলির বলদের থেকে যেমন নিতে হয়, সেই রকম নেবে এবং যাজক হোমবেদির ওপরে তা পোড়াবে।
೧೦ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
11 ১১ পরে ঐ গোবৎসের চামড়া সব মাংস, মাথা ও পা, অন্ত্র ও গোবর
೧೧ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
12 ১২ সবশুদ্ধ বলদটি নিয়ে শিবিরের বাইরে কোন শুচি জায়গায়, ছাই ফেলে দেবার জায়গায়, এনে কাঠের ওপরে আগুনে পুড়িয়ে দেবে; ছাই ফেলে দেবার জায়গায় তা পোড়াতে হবে।
೧೨ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
13 ১৩ আর ইস্রায়েলের সব মণ্ডলী যদি প্রমাদবশতঃ পাপ করে এবং তা সমাজের চোখের আড়ালে থাকে এবং সদাপ্রভুর আজ্ঞানিষিদ্ধ কোনো কাজ করে যদি দোষী হয়,
೧೩“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
14 ১৪ তবে তাদের করা সেই পাপ যখন জানা যাবে সেই দিনের সমাজ পাপের জন্য বলিরূপে এক ছোট গোবৎস উৎসর্গ করবে; লোকেরা সমাগম তাঁবুর সামনে তাকে আনবে।
೧೪ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
15 ১৫ পরে মণ্ডলীর প্রাচীনরা সদাপ্রভুর সামনে সেই গোবৎসের মাথায় হাত রাখবে এবং সদাপ্রভুর সামনে তাকে হত্যা করা হবে।
೧೫ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
16 ১৬ পরে অভিষিক্ত যাজক সেই বলদের কিছু রক্ত সমাগম তাঁবুর মধ্যে আনবে।
೧೬ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
17 ১৭ আর যাজক সেই রক্তে নিজের আঙুল ডুবিয়ে তার কিছুটা পর্দার আগে, সদাপ্রভুর সামনে সাত বার ছিটাবে
೧೭ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
18 ১৮ এবং সেই রক্তের কিছুটা নিয়ে সদাপ্রভুর সামনে সমাগম তাঁবুর মধ্যে রাখা বেদির শিঙের ওপরে দেবে; পরে সমাগম তাঁবুর দরজার সামনে হোমবেদির মূলে অন্য সব রক্ত ঢেলে দেবে।
೧೮ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
19 ১৯ আর বলি থেকে তার সব মেদ নিয়ে বেদির ওপরে পোড়াবে।
೧೯ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
20 ২০ সে ঐ পাপের জন্য বলির বলদকে যেরকম করে, একেও সেরকম করবে; এভাবে যাজক তাদের জন্য প্রায়শ্চিত্ত করবে, তাতে তাদের পাপের ক্ষমা হবে।
೨೦ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
21 ২১ পরে সে বলদকে শিবিরের বাইরে নিয়ে গিয়ে প্রথম বলদটি যেমন পুড়িয়েছিলে, তেমনি তাকেও পুড়িয়ে দেবে; এটা সমাজের পাপের জন্য বলিদান।
೨೧ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
22 ২২ আর যদি কোনো অধ্যক্ষ পাপ করে, অর্থাৎ প্রমাদবশতঃ নিজের ঈশ্বর সদাপ্রভুর আজ্ঞানিষিদ্ধ কোনো কাজ করে দোষী হয়,
೨೨“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
23 ২৩ তবে তার করা সেই পাপ যখন জানা যাবে, সেদিনের নিজের উপহার বলে এক নির্দোষ পুরুষ ছাগল আনবে।
೨೩ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24 ২৪ পরে ঐ ছাগলের মাথায় হাত দিয়ে হোমবলি হত্যার জায়গায় সদাপ্রভুর সামনে তাকে হত্যা করবে; এটা পাপের জন্য বলিদান।
೨೪ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
25 ২৫ পরে যাজক নিজের আঙুল দিয়ে সেই পাপের জন্য বলির কিছুটা রক্ত নিয়ে হোমবেদির শিঙের ওপরে দেবে এবং তার রক্ত হোমবেদির মূলে ঢেলে দেবে।
೨೫ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
26 ২৬ আর মঙ্গলের জন্য বলিদানের মেদের মত তার সব মেদ নিয়ে বেদিতে পোড়াবে এভাবে যাজক পাপমোচনের জন্য প্রায়শ্চিত্ত করবে, তাতে তার পাপের ক্ষমা হবে।
೨೬ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
27 ২৭ আর সাধারণ লোকদের মধ্যে যদি কেউ প্রমাদবশতঃ সদাপ্রভুর কোনো আজ্ঞানিষিদ্ধ কাজের জন্য পাপ করে দোষী হয়,
೨೭“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
28 ২৮ তবে সে যখন নিজের করা পাপ জানবে তখন নিজের করা সেই পাপের জন্য নিজের উপহার বলে পালের ভেতর থেকে এক নির্দোষ ছাগী আনবে।
೨೮ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
29 ২৯ পরে ঐ পাপের জন্যে বলির মাথায় হাত রেখে হোমবলির জায়গায় সেই পাপের জন্য বলি হত্যা করবে
೨೯ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
30 ৩০ পরে যাজক আঙুল দিয়ে তার কিছুটা রক্ত নিয়ে হোমবেদির শিঙের ওপরে দেবে এবং তার সব রক্ত বেদির মূলে ঢেলে দেবে।
೩೦ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
31 ৩১ আর মঙ্গলের জন্য বলি থেকে নেওয়া মেদের মত তার সব মেদ ছাড়িয়ে নেবে; পরে যাজক সদাপ্রভুর উদ্দেশ্যে সুগন্ধের জন্য বেদির ওপরে তা পুড়িয়ে দেবে; এভাবে যাজক তার জন্য প্রায়শ্চিত্ত করবে, তাতে তার পাপের ক্ষমা হবে।
೩೧ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
32 ৩২ যদি সে পাপের জন্য বলির উপহারের জন্য ভেড়ার বাচ্চা আনে, তবে একটা নির্দোষ মেয়ে ভেড়ার বাচ্চা আনবে।
೩೨“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
33 ৩৩ আর সেই পাপের জন্য বলির মাথায় হাত দিয়ে হোমবলি হত্যার জায়গায় সেই পাপের জন্য বলি হত্যা করবে।
೩೩ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
34 ৩৪ পরে যাজক আঙুল দিয়ে সেই পাপের জন্য বলির কিছুটা রক্ত নিয়ে হোমবেদির শিংগুলোর ওপরে দেবে ও সব রক্ত বেদির মূলে ঢালবে।
೩೪ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
35 ৩৫ পরে মঙ্গলের বলির ভেড়ার বাচ্চার মেদ যেমন ছাড়ান যায়, তেমনি যাজক এর সব মেদ ছাড়িয়ে নেবে এবং সদাপ্রভুর জন্য আগুনে তৈরী উপহারের রীতি অনুসারে তা বেদিতে পোড়াবে; এভাবে যাজক তার করা পাপের প্রায়শ্চিত্ত করবে; তাতে তার পাপের ক্ষমা হবে।
೩೫ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

< লেবীয় বই 4 >