< নহিমিয়ের বই 2 >
1 ১ অর্তক্ষস্ত রাজার রাজত্বের কুড়ি বছরের নীসন মাসে রাজার সামনে আঙ্গুর রস থাকাতে আমি সেই আঙ্গুর রস নিয়ে রাজাকে দিলাম। তার আগে আমি তাঁর সামনে কখনও দুঃখিত হইনি।
೧ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
2 ২ রাজা আমাকে বললেন, “তোমার তো অসুখ হয়নি, তবে মুখ কেন দুঃখিত দেখাচ্ছে? এ তো মনের কষ্ট ছাড়া আর কিছু নয়।” তখন আমি খুব ভয় পেলাম।
೨ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
3 ৩ আর আমি রাজাকে বললাম, “মহারাজ দীর্ঘজীবী হোন। আমি কেন দুঃখিত হব না? যে শহর আমার পূর্বপুরুষদের কবরস্থান, তা ধ্বংস হয়ে গেছে ও তার দরজা সব আগুনে পুড়ে গেছে।”
೩ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
4 ৪ তখন রাজা আমাকে বললেন, “তুমি কি চাও?” তখন আমি স্বর্গের ঈশ্বরের কাছে প্রার্থনা করলাম।
೪ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
5 ৫ আর রাজাকে বললাম, “মহারাজ যদি খুশী হয়ে থাকেন এবং আপনার দাস যদি আপনার চোখে দয়া পেয়ে থাকে, তবে আপনি আমাকে যিহূদায়, আমার পূর্বপুরুষদের কবরের শহরে, যেতে অনুমতি দিন, যেন আমি তা তৈরী করি।”
೫ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
6 ৬ তখন রাজা-রাণীও তাঁর পাশে বসে ছিলেন-আমাকে জিজ্ঞাসা করলেন, “তোমার যেতে কতদিন লাগবে? আর কবে ফিরে আসবে?” এই ভাবে রাজা খুশি হয়ে আমাকে বিদায় দিলেন, আর আমি তার কাছে দিন জানালাম।
೬ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
7 ৭ আর আমি রাজাকে বললাম, “যদি মহারাজ খুশী হয়, তবে নদীর পারের শাসনকর্তারা যেন যিহূদায় আমার না আসা পর্যন্ত আমার যাওয়ায় সাহায্য করেন, এই জন্য তাঁদের নামে আমাকে চিঠি দিতে আদেশ দিক।
೭ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
8 ৮ আর মন্দিরের পাশে অবস্থিত দুর্গের দরজার ও শহরের দেওয়ালের ও আমার ঘরে ঢোকার দরজার কড়িকাঠের জন্য রাজার বন রক্ষক আসফ যেন আমাকে কাঠ দেন, এই জন্য তাঁর নামেও একটি চিঠি দিতে আদেশ দিক।” তাতে আমার উপরে আমার ঈশ্বরের মঙ্গলময় হাত থাকায় রাজা আমাকে সে সমস্ত দিলেন।
೮ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
9 ৯ পরে আমি নদীর পারে অবস্থিত শাসনকর্ত্তাদের কাছে এসে রাজার চিঠি তাঁদেরকে দিলাম। রাজা সেনাপতিদেরকে ও ঘোড়াচালকদেরকে আমার সঙ্গে পাঠিয়েছিলেন।
೯ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
10 ১০ আর হোরোণীয় শহরবাসী সন্বল্লট ও অম্মোনীয় দাস টোবিয় যখন খবর পেল, তখন ইস্রায়েলীয়দের সাহায্যের জন্য একজন যে লোক এসেছে, এটা বুঝতে পেরে তারা খুব অসন্তুষ্ট হল।
೧೦ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
11 ১১ আর আমি যিরূশালেমে এসে সেই জায়গায় তিন দিন থাকলাম।
೧೧ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
12 ১২ পরে আমি ও আমার সঙ্গী কিছু লোক, আমরা রাতে উঠলাম; কিন্তু যিরূশালেমের জন্য যা করতে ঈশ্বর আমার মনে ইচ্ছা দিয়েছিলেন, তা কাউকেও বলিনি এবং আমি যে পশুর ওপরে চড়েছিলাম, সেটা ছাড়া আর কোনো পশু আমার সঙ্গে ছিল না।
೧೨ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
13 ১৩ আমি রাতে উপত্যকার দরজা দিয়ে বের হয়ে নাগকুয়ো ও সার দরজা পর্যন্ত গেলাম এবং যিরূশালেমের ভাঙ্গা দেওয়াল ও আগুনে পুড়ে যাওয়া দরজা সব দেখলাম।
೧೩ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
14 ১৪ আর উনুই দরজা ও রাজার পুকুর পর্যন্ত গেলাম, কিন্তু সেই জায়গায় আমার বাহন পশুর যাবার জায়গা ছিল না।
೧೪ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
15 ১৫ তখন আমি রাতে স্রোতের ধার দিয়ে উপরে উঠে দেওয়াল দেখলাম, আর ফিরে উপত্যকার দরজা দিয়ে ঢুকলাম, পরে ফিরে আসলাম।
೧೫ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
16 ১৬ কিন্তু আমি কোন জায়গায় গেলাম, কি করলাম, তা শাসনকর্তারা জানত না এবং সেই দিন পর্যন্ত আমি ইহুদীদের কি যাজকদের কি প্রধান লোকদেরকে শাসনকর্তাদেরকে কি অন্য কর্মচারীদেরকে কাউকেও তা বলি নি।
೧೬ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
17 ১৭ পরে আমি তাদেরকে বললাম, “আমরা কেমন খারাপ অবস্থায় আছি, তা তোমরা দেখছ; যিরূশালেম ধ্বংস হয়ে গেছে ও তার দরজা সব আগুনে পুড়ে আছে; এস, আমরা যিরূশালেমের দেওয়াল তৈরী করি, যেন আর মর্যাদাহীন না থাকি।”
೧೭ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
18 ১৮ পরে আমার উপরে বিস্তারিত ঈশ্বরের মঙ্গলময় হাতের কথা এবং আমার প্রতি বলা রাজার কথা তাদেরকে জানালাম। তাতে তারা বলল, “চল, আমরা উঠে গিয়ে গাঁথি।” এই ভাবে তারা সেই ভাল কাজের জন্য নিজের নিজের হাত শক্তিশালী করল।
೧೮ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
19 ১৯ কিন্তু হোরোণীয় সন্বল্লট, অম্মোনীয় দাস টোবিয় ও আরবীয় গেশম্ এই কথা শুনে আমাদের বিদ্রূপ ও উপহাস করে বলল, “তোমরা এ কি কাজ করছ? তোমরা কি রাজার বিরুদ্ধে বিদ্রোহ করবে?”
೧೯ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
20 ২০ তখন আমি উত্তরে তাদেরকে বললাম, “যিনি স্বর্গের ঈশ্বর, তিনিই আমাদেরকে সফল করবেন; অতএব তাঁর দাস আমরা উঠে গাঁথব; কিন্তু যিরূশালেমে তোমাদের কোনো অংশ কি অধিকার কি স্মৃতিচিহ্ন নেই।”
೨೦ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.