< বংশাবলির প্রথম খণ্ড 7 >

1 ইষাখরের ছেলেরা: তোলয়, পূয়, যাশূব ও শিম্রোণ—মোট চারজন।
ಇಸ್ಸಾಕಾರನ ಪುತ್ರರು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.
2 তোলয়ের ছেলেরা: উষি, রফায়, যিরীয়েল, যহময়, যিবসম ও শমূয়েল—তাদের পরিবারের কর্তা। দাউদের রাজত্বকালে, তোলয়ের যেসব বংশধর তাদের বংশতালিকানুসারে যোদ্ধারূপে নথিভুক্ত হল, তাদের সংখ্যা 22,600 জন।
ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.
3 উষির ছেলে: যিষ্রাহিয়। যিষ্রাহিয়ের ছেলেরা: মীখায়েল, ওবদিয়, যোয়েল ও যিশিয়। এই পাঁচজনই প্রধান ছিলেন।
ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.
4 তাদের পারিবারিক বংশতালিকানুসারে, তাদের কাছে 36,000 জন লোক যুদ্ধ করার জন্য প্রস্তুত ছিল, কারণ তাদের অনেকগুলি স্ত্রী ও সন্তানসন্ততি ছিল।
ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.
5 ইষাখরের সব বংশোদ্ভুক্ত যেসব আত্মীয়স্বজন তাদের বংশতালিকানুসারে যোদ্ধারূপে নথিভুক্ত হল, তাদের সংখ্যা মোট 87,000 জন।
ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.
6 বিন্যামীনের ছেলেরা তিনজন: বেলা, বেখর ও যিদীয়েল।
ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಯೆದೀಯಯೇಲ್ ಈ ಮೂರು ಮಂದಿ.
7 বেলার ছেলেরা: ইষবোণ, উষি, উষীয়েল, যিরেমৎ ও ঈরী। এরা পরিবারগুলির কর্তা—মোট পাঁচজন। তাদের বংশতালিকায় 22,034 জন যোদ্ধা নথিভুক্ত হল।
ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.
8 বেখরের ছেলেরা: সমীরা, যোয়াশ, ইলীয়েষর, ইলীয়ৈনয়, অম্রি, যিরেমোৎ, অবিয়, অনাথোৎ ও আলেমৎ। এরা সবাই বেখরের ছেলে।
ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.
9 তাদের বংশতালিকায় 20,200 জন যোদ্ধা নথিভুক্ত হল।
ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಅವರ ವಂಶಾವಳಿಯ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿರುವಂತೆ ಈ ಕುಲಗಳ ಪ್ರಬಲ ಯೋಧರು ಮತ್ತು ನಾಯಕರ ಒಟ್ಟು ಸಂಖ್ಯೆ 20,200 ಆಗಿತ್ತು.
10 যিদীয়েলের ছেলে: বিলহন। বিলহনের ছেলেরা: যিয়ূশ, বিন্যামীন, এহূদ, কানান্না, সেথন, তর্শীশ ও অহীশহর।
ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;
11 যিদীয়েলের এইসব ছেলে পরিবারের কর্তা ছিলেন। 17,200 জন যোদ্ধা যুদ্ধে যাওয়ার জন্য প্রস্তুত ছিল।
ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.
12 শুপ্পিমীয় ও হুপ্পিমীয়রা ঈরের বংশধর, এবং হূশীয়রা অহেরের বংশধর।
ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು.
13 নপ্তালির ছেলেরা: যহসিয়েল, গূনি, যেৎসর ও শিল্লেম—এরা বিলহার বংশধর।
ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.
14 মনঃশির বংশধরেরা: তাঁর অরামীয় উপপত্নীর মাধ্যমে উৎপন্ন বংশধর অস্রীয়েল। সেই উপপত্নী গিলিয়দের বাবা মাখীরকেও গর্ভে ধারণ করল।
ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
15 মাখীর হুপ্পিমীয় ও শুপ্পিমীয়দের মধ্যে থেকেই একজনকে স্ত্রী করে নিয়েছিলেন। তাঁর বোনের নাম মাখা। অন্য একজন বংশধরের নাম সলফাদ, যাঁর শুধু মেয়েই ছিল।
ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.
16 মাখীরের স্ত্রী মাখা এক ছেলের জন্ম দিলেন ও তাঁর নাম রেখেছিলেন পেরশ। তাঁর ভাইয়ের নাম রাখা হল শেরশ, এবং তাঁর ছেলেদের নাম ঊলম ও রেকম।
ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಪೆರೆಷ್ ಎಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್. ಇವನಿಗೆ ಊಲಾಮ್, ರೆಕೆಮ್ ಎಂಬ ಇಬ್ಬರು ಪುತ್ರರಿದ್ದರು.
17 ঊলমের ছেলে: বদান। মনঃশির ছেলে মাখীর, তার ছেলে গিলিয়দ, এরা তার ছেলে।
ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.
18 তাঁর বোন হম্মোলেকত ঈশ্‌হোদ, অবীয়েষর ও মহলাকে জন্ম দিলেন।
ಅವನ ಸಹೋದರಿ ಹಮ್ಮೋಲೆಕೆತಳು ಈಷ್ಹೋದನನ್ನೂ, ಅಬೀಯೆಜೆರನನ್ನೂ, ಮಹ್ಲನನ್ನೂ ಹೆತ್ತಳು.
19 শমীদার ছেলেরা: অহিয়ন, শেখম, লিকহি ও অনীয়াম।
ಶೆಮೀದನನ ಪುತ್ರರು: ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
20 ইফ্রয়িমের বংশধরেরা: শূথেলহ, তাঁর ছেলে বেরদ, তাঁর ছেলে তহৎ, তাঁর ছেলে ইলিয়াদা, তাঁর ছেলে তহৎ,
ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;
21 তাঁর ছেলে সাবদ এবং তাঁর ছেলে শূথেলহ। (জন্মসূত্রে যারা গাত দেশীয় লোক ছিল, তাদের গবাদি পশুপাল দখল করতে গিয়ে এৎসর ও ইলিয়াদা তাদের হাতেই নিহত হলেন।
ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.
22 তাদের বাবা ইফ্রয়িম অনেক দিন ধরে তাদের জন্য শোক করলেন, এবং তাঁর আত্মীয়স্বজন তাঁকে সান্তনা দিতে এসেছিল।
ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.
23 পরে আরেকবার তিনি তাঁর স্ত্রীর সাথে সহবাস করলেন: ও তাঁর স্ত্রী গর্ভবতী হয়ে এক ছেলের জন্ম দিলেন। ইফ্রয়িম তাঁর নাম রেখেছিলেন বরিয়, কারণ তাঁর পরিবারে অমঙ্গল নেমে এসেছিল।
ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.
24 তাঁর মেয়ের নাম শীরা, যিনি নিম্নতর ও উচ্চতর বেথ-হোরোণ তথা উষেণ-শীরা গেঁথে তুলেছিলেন)
ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.
25 তাঁর ছেলে ছিলেন রেফহ, তাঁর ছেলে রেশফ, তাঁর ছেলে তেলহ, তাঁর ছেলে তহন,
ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು,
26 তাঁর ছেলে লাদন, তাঁর ছেলে অম্মীহূদ, তাঁর ছেলে ইলীশামা,
ಅವನ ಮಗನು ಲದ್ದಾನ್, ಅವನ ಮಗನು ಅಮ್ಮೀಹೂದ, ಅವನ ಮಗನು ಎಲೀಷಾಮಾ,
27 তাঁর ছেলে নূন এবং তাঁর ছেলে যিহোশূয়।
ಅವನ ಮಗನು ನೂನನು, ಅವನ ಮಗನು ಯೆಹೋಶುವ.
28 তাদের জমি ও উপনিবেশে বেথেল ও তার চারপাশের গ্রামগুলি যুক্ত ছিল, পূর্বদিকে ছিল নারণ, পশ্চিমদিকে ছিল গেষর ও তার কাছাকাছি থাকা গ্রামগুলি, এবং শিখিম ও সেখানকার গ্রামগুলি থেকে শুরু করে সুদূর অয়া ও সেখানকার গ্রামগুলি পর্যন্ত ছড়িয়ে পড়েছিল তাদের জমিজায়গা।
ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ.
29 মনঃশির সীমানা বরাবর ছিল বেথ-শান, তানক, মগিদ্দো ও দোর তথা সেই নগরগুলির সঙ্গে থাকা গ্রামগুলি। ইস্রায়েলের ছেলে যোষেফের বংশধরেরা এইসব নগরে বসবাস করত।
ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.
30 আশেরের ছেলেরা: যিম্ন, যিশ্‌বা, যিশ্‌বী ও বরিয়। সেরহ ছিলেন তাদের বোন।
ಆಶೇರನ ಪುತ್ರರು: ಇಮ್ನ, ಇಷ್ವ, ಇಷ್ವೀ, ಬೆರೀಯ, ಅವರ ಸಹೋದರಿಯಾದ ಸೆರಹಳು.
31 বরিয়ের ছেলেরা: হেবর ও মল্কীয়েল, যিনি বির্ষোতের বাবা।
ಬೆರೀಯನ ಪುತ್ರರು: ಹೆಬೆರನು, ಮಲ್ಕೀಯೇಲ್ ಇವನು ಬಿರ್ಜಾಯಿತನ ತಂದೆಯು.
32 হেবর যফলেট, শোমের ও হোথমের এবং তাদের বোন শূয়ার বাবা।
ಹೆಬೆರನು ಯಫ್ಲೇಟನನ್ನೂ, ಶೋಮೇರನನ್ನೂ, ಹೋತಾಮನನ್ನೂ, ಅವರ ಸಹೋದರಿಯಾದ ಶೂವಳನ್ನೂ ಪಡೆದನು.
33 যফলেটের ছেলেরা: পাসক, বিমহল ও অশ্বৎ। এরাই যফলেটের ছেলেসন্তান।
ಯಫ್ಲೇಟನ ಪುತ್ರರು: ಪಾಸಕನು, ಬಿಮ್ಹಾಲನು, ಅಶ್ವಾತನು ಇವರೇ ಯಫ್ಲೇಟನ ಮಕ್ಕಳು.
34 শেমরের ছেলেরা: অহি, রোগহ, যিহুব্ব ও অরাম।
ಶೆಮೆರನ ಪುತ್ರರು: ಅಹೀಯು, ರೊಹ್ಗನು, ಹುಬ್ಬನು, ಅರಾಮ್.
35 তাঁর ভাই হেলমের ছেলেরা: শোফহ, যিম্ন, শেলশ ও আমল।
ಅವನ ಸಹೋದರನಾದ ಹೆಲೆಮನ ಪುತ್ರರು: ಚೋಫಹನು, ಇಮ್ನನು, ಶೇಲೆಷ್‌ನು, ಆಮಾಲನು.
36 শোফহের ছেলেরা: সূহ, হর্ণেফর, শূয়াল, বেরী, যিম্র,
ಚೋಫಹನ ಪುತ್ರರು: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ,
37 বেৎসর, হোদ, শম্ম, শিলশ, যিত্রণ ও বেরা।
ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್, ಬೇರನು.
38 যেথরের ছেলেরা: যিফুন্নি, পিস্প ও অরা।
ಯೆತೆರನ ಪುತ್ರರು: ಯೆಫುನ್ನೆ, ಪಿಸ್ಪ, ಅರಾ.
39 উল্লের ছেলেরা: আরহ, হন্নীয়েল ও রিৎসিয়।
ಉಲ್ಲನ ಪುತ್ರರು: ಆರಹ, ಹನ್ನೀಯೇಲ್, ರಿಚ್ಯ.
40 এরা সবাই আশেরের বংশধর—পরিবারের কর্তা, বাছাই করা লোকজন, সাহসী যোদ্ধা ও অসামান্য নেতা। তাদের বংশতালিকায় যুদ্ধে যাওয়ার জন্য প্রস্তুত 26,000 জন যোদ্ধা নথিভুক্ত হল।
ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.

< বংশাবলির প্রথম খণ্ড 7 >