< শমূয়েলের প্রথম বই 25 >

1 এদিকে হয়েছে কী, শমূয়েল মারা গেলেন ও সমস্ত ইস্রায়েল একত্রিত হয়ে তাঁর জন্য শোকপ্রকাশ করল; এবং তারা তাঁকে রামায় তাঁর ঘরেই কবর দিয়েছিল। পরে দাউদ পারণ মরুভূমির দিকে চলে গেলেন।
ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
2 মায়োনে কোনো একজন লোক ছিল, কর্মিলে তার কিছু বিষয়সম্পত্তি ছিল ও সে খুব ধনীও ছিল। তার কাছে 1,000 ছাগল ও 3,000 মেষ ছিল, সে তখন কর্মিলে সেগুলির লোম ছাঁটছিল।
ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
3 তার নাম নাবল ও তার স্ত্রীর নাম অবীগল। অবীগল খুব বুদ্ধিমতী ও সুন্দরী ছিলেন, কিন্তু তাঁর স্বামী ছিল অভদ্র ও বেয়াদব—সে ছিল কালেব বংশীয় একজন লোক।
ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
4 দাউদ মরুপ্রান্তরে থাকার সময় শুনতে পেয়েছিলেন যে নাবল মেষের লোম ছাঁটছে।
ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.
5 তাই তিনি তার কাছে দশজন যুবককে পাঠিয়ে তাদের বলে দিলেন, “তোমরা কর্মিলে নাবলের কাছে গিয়ে তাকে আমার নামে শুভেচ্ছা জানাবে।
ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
6 তাকে গিয়ে বোলো: ‘আপনি দীর্ঘজীবী হোন! আপনি কুশলে থাকুন ও আপনার পরিবারও কুশলে থাকুক! এবং আপনার সর্বস্বের কুশল হোক!
ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.
7 “‘আমি শুনতে পেয়েছি এখন নাকি মেষের লোম ছাঁটার সময়। আপনার রাখালরা যখন আমাদের সঙ্গে ছিল, আমরা তাদের সঙ্গে খারাপ ব্যবহার করিনি, আর যতদিন তারা কর্মিলে ছিল তাদের কোনো কিছুই হারায়নি।
ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
8 আপনার দাসদের জিজ্ঞাসা করুন, তারাই আপনাকে বলে দেবে। অতএব আমার লোকজনের প্রতি একটু অনুগ্রহ দেখান, যেহেতু আমরা উৎসবের দিনে এলাম। আপনি যা পারেন, দয়া করে আপনার এই দাসদের ও আপনার ছেলে দাউদের হাতে তা তুলে দিন।’”
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
9 দাউদের লোকজন নাবলের কাছে পৌঁছে দাউদের নাম করে তাকে এসব কথা বলল। পরে তারা অপেক্ষা করল।
ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.
10 নাবল দাউদের দাসদের উত্তর দিয়েছিল, “কে এই দাউদ? কে এই যিশয়ের ছেলে? আজকাল বিস্তর দাস তাদের প্রভুদের ছেড়ে চলে যাচ্ছে।
೧೦ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
11 আমি কেন আমার মেষের পশমকর্তকদের জন্য রাখা রুটি ও জল ও মাংস নিয়ে সেইসব লোকের হাতে তুলে দেব, যাদের বিষয়ে আমি জানিই না তারা কোথা থেকে এসেছে?”
೧೧ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
12 দাউদের লোকজন মুখ ফিরিয়ে চলে গেল। তাঁর কাছে ফিরে গিয়ে তারা প্রতিটি কথা বলে শুনিয়েছিল।
೧೨ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
13 দাউদ তাঁর লোকজনকে বললেন, “তোমরা প্রত্যেকে কোমরে তরোয়াল বেঁধে নাও!” তারা তেমনটিই করল, ও দাউদও নিজের তরোয়ালটি বেঁধে নিয়েছিলেন। প্রায় 400 জন দাউদের সঙ্গে গেল, আর 200 জন মালপত্র দেখাশোনা করার জন্য থেকে গেল।
೧೩ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
14 দাসদের মধ্যে একজন নাবলের স্ত্রী অবীগলকে বলল, “দাউদ আমাদের প্রভুকে শুভেচ্ছা জানানোর জন্য মরুপ্রান্তর থেকে দূত পাঠিয়েছিলেন, কিন্তু তিনি তাদের চূড়ান্ত অপমান করেছেন।
೧೪ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
15 অথচ ওই লোকগুলি আমাদের পক্ষে বড়োই ভালো ছিল। তারা আমাদের সঙ্গে খারাপ ব্যবহার করেননি, আর যতদিন আমরা মাঠে তাদের কাছে ছিলাম, আমাদের কোনো কিছুই হারায়নি।
೧೫ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.
16 যতদিন আমরা তাদের কাছে থেকে আমাদের মেষগুলি চরাতাম, রাতদিন তারা আমাদের চারপাশে তখন এক দেওয়াল হয়েই ছিল।
೧೬ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.
17 এখন ভেবে দেখুন আপনি কী করতে পারবেন, কারণ আমাদের প্রভুর ও তার সমগ্র পরিবারের উপর সর্বনাশ ঘনিয়ে এসেছে। তিনি এমনই বজ্জাত যে কেউই তাকে কিছু বলতে পারে না।”
೧೭ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
18 অবীগল দ্রুত ব্যবস্থা নিয়েছিলেন। তিনি 200 টুকরো রুটি, চামড়ার দুই থলি দ্রাক্ষারস, রান্নার জন্য কেটেকুটে প্রস্তুত করা পাঁচটি মেষ, পাঁচ কাঠা সেঁকা শস্যদানা, 100 তাল কিশমিশ ও 200 তাল নিংড়ানো ডুমুর নিয়ে সেগুলি গাধার পিঠে চাপিয়ে দিয়েছিলেন।
೧೮ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
19 পরে তিনি তাঁর দাসদের বললেন, “তোমরা এগিয়ে যাও; আমি তোমাদের পিছু পিছু আসছি।” কিন্তু তিনি তাঁর স্বামীকে কিছু বলেননি।
೧೯ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
20 তিনি যখন গাধার পিঠে চেপে পাহাড়ের সরু গিরিখাত ধরে আসছিলেন, তখন দাউদও তাঁর লোকজন নিয়ে অবীগলের দিকে নেমে আসছিলেন, ও তাদের সঙ্গে তাঁর দেখা হল।
೨೦ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.
21 দাউদ অল্প কিছুক্ষণ আগেই বলেছিলেন, “কোনও লাভ হয়নি—আমি অনর্থক এই লোকটির সম্পত্তি মরুপ্রান্তরে পাহারা দিয়েছি আর তার কোনো কিছুই হারায়নি। সে ভালোর বদলে আমাকে মন্দ উপহার দিয়েছে।
೨೧ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
22 যদি কাল সকাল পর্যন্ত আমি তার পরিবারের একটিও পুরুষ সদস্যকে জীবিত রাখি, তবে যেন ঈশ্বর দাউদকে আরও কঠোর শাস্তি দেন!”
೨೨ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
23 অবীগল দাউদকে দেখে চট করে গাধার পিঠ থেকে নেমে মাটিতে উবুড় হয়ে তাঁকে প্রণাম করলেন।
೨೩ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.
24 তিনি দাউদের পায়ে পড়ে বললেন: “হে আমার প্রভু, আপনার দাসীকে ক্ষমা করুন, আমাকে বলতে দিন; আপনার দাসী যা বলতে চায় তা একটু শুনুন।
೨೪ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.
25 হে আমার প্রভু, দয়া করে সেই বজ্জাত লোকটির কথায় মনোযোগ দেবেন না। তার যেমন নাম সেও ঠিক সেরকমই—তার নামের অর্থ মূর্খ, আর মূর্খতা তার সহবর্তী। আর আমার কথা যদি বলেন, আপনার এই দাসী, আমি আমার প্রভুর পাঠানো লোকদের দেখতে পাইনি।
೨೫ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
26 আর এখন, হে আমার প্রভু, আপনার ঈশ্বর জীবন্ত সদাপ্রভুর দিব্যি ও আপনার প্রাণের দিব্যি, যেহেতু সদাপ্রভু আপনাকে রক্তপাত করা থেকে ও নিজের হাতে প্রতিশোধ নেওয়া থেকে বিরত রেখেছেন, তাই আপনার শত্রুদের ও যারা আমার প্রভুর ক্ষতি করতে চায়, তাদের দশা যেন নাবলের মতো হয়।
೨೬ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
27 আপনার দাসী আমার প্রভুর কাছে এই যেসব উপহার নিয়ে এসেছে, সেগুলি যেন আপনার অনুগামী লোকদের দেওয়া হয়।
೨೭ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.
28 “দয়া করে আপনার দাসীর বেয়াদবি ক্ষমা করবেন। আপনার ঈশ্বর সদাপ্রভু নিঃসন্দেহে আমার প্রভুর জন্য এক স্থায়ী সাম্রাজ্য প্রতিষ্ঠিত করবেন, কারণ আপনি সদাপ্রভুর হয়ে যুদ্ধ করছেন, এবং আপনি যতদিন বেঁচে থাকবেন ততদিন আপনার মধ্যে কোনও অন্যায় খুঁজে পাওয়া যাবে না।
೨೮ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
29 যদি কেউ আপনার প্রাণহানি করার জন্য আপনার পশ্চাদ্ধাবনও করে, তবুও আমার প্রভুর প্রাণ আপনার ঈশ্বর সদাপ্রভুর দ্বারা জীবিতদের দলে সুরক্ষিত থাকবে, কিন্তু আপনার শত্রুদের প্রাণ গুলতির থলিতে রাখা পাথরের মতো তিনি ছুঁড়ে ফেলে দেবেন।
೨೯ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
30 সদাপ্রভু যখন আমার প্রভুর জন্য তাঁর করা প্রতিটি মঙ্গল-প্রতিজ্ঞা পূর্ণ করবেন ও ইস্রায়েলের উপর তাঁকে শাসনকর্তারূপে নিযুক্ত করবেন,
೩೦ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
31 তখন আমার প্রভুকে আর তাঁর বিবেকে অনর্থক রক্তপাতের বা নিজেরই নেওয়া প্রতিশোধের হতভম্বকারী বোঝা বয়ে বেড়াতে হবে না। আপনার ঈশ্বর সদাপ্রভু যখন আমার প্রভুকে সাফল্য দেবেন, আপনার এই দাসীকে তখন একটু স্মরণ করবেন।”
೩೧ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.
32 দাউদ অবীগলকে বললেন, “ইস্রায়েলের ঈশ্বর সেই সদাপ্রভুর গৌরব হোক, যিনি তোমাকে আজ আমার সঙ্গে দেখা করতে পাঠিয়েছেন।
೩೨ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
33 তোমার সুবিবেচনার জন্য এবং আমাকে আজ তুমি রক্তপাত করা থেকে ও নিজের হাতে প্রতিশোধ নেওয়া থেকে বিরত রেখেছ বলে তুমি ধন্যা।
೩೩ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.
34 তা না হলে, যিনি আমাকে আজ তোমার ক্ষতি করা থেকে বিরত রেখেছেন সেই জীবন্ত সদাপ্রভুর দিব্যি, তুমি যদি তাড়াতাড়ি আমার সঙ্গে দেখা করতে না আসতে, তবে নাবলের পরিবারের একজন পুরুষ সদস্যও সকাল পর্যন্ত বেঁচে থাকত না।”
೩೪ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.
35 পরে দাউদ অবীগলের আনা সবকিছু তাঁর হাত থেকে গ্রহণ করলেন ও তাঁকে বললেন, “শান্তিতে ঘরে ফিরে যাও। আমি তোমার কথা শুনেছি ও তোমার অনুরোধ রেখেছি।”
೩೫ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.
36 অবীগল যখন নাবলের কাছে ফিরে গেলেন, সে তখন বাড়িতে ছিল ও সেখানে রাজকীয় এক ভোজসভা চলছিল। সে খোশমেজাজে ছিল ও পুরোপুরি মাতাল হয়ে পড়েছিল। তাই সকাল না হওয়া পর্যন্ত অবীগল তাকে কিছু বলেননি।
೩೬ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
37 পরে সকালে নাবল যখন ভদ্রস্থ হল, তার স্ত্রী তাকে সব কথা বলে শুনিয়েছিলেন, ও সে মনমরা হয়ে পাথরের মতো স্তব্ধ হয়ে গেল।
೩೭ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.
38 প্রায় দশদিন পর, সদাপ্রভু নাবলকে আঘাত করলেন ও সে মারা গেল।
೩೮ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.
39 নাবলের মৃত্যুর খবর পেয়ে দাউদ বললেন, “সদাপ্রভুর গৌরব হোক, আমার প্রতি নাবল অবজ্ঞামূলক আচরণ করেছিল বলেই তিনি আমার পক্ষে দাঁড়িয়েছেন। তিনি তাঁর দাসকে অন্যায় করা থেকে বিরত রেখেছেন ও নাবলের অন্যায় তারই মাথায় বর্ষণ করেছেন।” পরে দাউদ অবীগলকে খবর পাঠালেন, তাঁকে তাঁর স্ত্রী হওয়ার প্রস্তাব দিলেন
೩೯ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
40 তাঁর দাসেরা কর্মিলে গিয়ে অবীগলকে বলল, “দাউদ তাঁর স্ত্রী করে নিয়ে যাওয়ার জন্য আপনার কাছে আমাদের পাঠিয়ে দিয়েছেন।”
೪೦ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
41 তিনি মাটিতে উবুড় হয়ে পড়ে বললেন, “আমি আপনার দাসী এবং আমি আপনার সেবা করার ও আমার প্রভুর দাসদের পা ধুয়ে দেওয়ার জন্য প্রস্তুত।”
೪೧ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
42 অবীগল তাড়াতাড়ি একটি গাধার পিঠে চেপে, পাঁচজন দাসী সঙ্গে নিয়ে দাউদের পাঠানো দূতদের সঙ্গে চলে গেলেন ও তাঁর স্ত্রী হলেন।
೪೨ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.
43 দাউদ যিষ্রিয়েলীয় অহীনোয়মকেও বিয়ে করলেন, ও তারা দুজনেই তাঁর স্ত্রী হলেন।
೪೩ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
44 কিন্তু শৌল তাঁর মেয়ে, দাউদের স্ত্রী মীখলকে গল্লীম নিবাসী লয়িশের ছেলে পল্‌টিয়েলের হাতে তুলে দিলেন।
೪೪ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.

< শমূয়েলের প্রথম বই 25 >