< দানিয়েল 3 >

1 রাজা নেবুখাদনেজার 27 মিটার উঁচু এবং 2.7 মিটার চওড়া একটি সোনার মূর্তি তৈরি করলেন এবং ব্যাবিলন প্রদেশের দূরা সমভূমিতে স্থাপন করলেন।
ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 তারপর রাজা দেশের সমস্ত রাজ্যপাল, উপরাজ্যপাল, প্রদেশপাল, উপদেষ্টা, কোষাধ্যক্ষ, বিচারক, উপবিচারক এবং প্রদেশসমুহের সমস্ত শাসনকর্তাদের এই মূর্তি প্রতিষ্ঠা উপলক্ষে সমবেত হতে আদেশ জারি করলেন।
ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.
3 তখন রাজ্যপাল, উপরাজ্যপাল, প্রদেশপাল, উপদেষ্টা, কোষাধ্যক্ষ, বিচারক, উপবিচারক এবং প্রদেশসমুহের সমস্ত শাসনকর্তাগণ রাজা নেবুখাদনেজারের স্থাপিত সেই মূর্তি প্রতিষ্ঠা উৎসবে একত্র হলেন এবং মূর্তির সামনে দাঁড়ালেন।
ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.
4 তখন রাজঘোষক উচ্চস্বরে ঘোষণা করলেন, “প্রত্যেক বংশ, জাতি ও ভাষার মানুষগণ, আপনাদের প্রতি এই আদেশ দেওয়া হয়েছে:
ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ
5 যখনই আপনারা শিঙ্গা, বাঁশি, সেতার, সুরবাহার, বীণা, সানাই ও সর্বপ্রকার যন্ত্রের বাজনা শুনবেন আপনারা উপুড় হয়ে রাজা নেবুখাদনেজারের স্থাপিত সোনার মূর্তিকে আরাধনা করবেন।
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
6 কেউ যদি উপুড় হয়ে আরাধনা না করে, তাকে তৎক্ষণাৎ জ্বলন্ত অগ্নিকুণ্ডে ফেলে দেওয়া হবে।”
ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.
7 অতএব প্রত্যেক বংশ, জাতি ও ভাষার মানুষগণ যখন শিঙ্গা, বাঁশি, সেতার, সুরবাহার, বীণা ও সর্বপ্রকার যন্ত্রের বাজনা শুনলেন, তারা উপুড় হলেন ও রাজা নেবুখাদনেজারের প্রতিষ্ঠিত সোনার মূর্তিকে আরাধনা করল।
ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.
8 এসময় কিছু জ্যোতিষীগণ সামনে এগিয়ে এসে ইহুদিদের দোষারোপ করল।
ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು
9 তারা রাজা নেবুখাদনেজারকে বলল, “মহারাজ, চিরজীবী হোন!
ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
10 মহারাজ, আপনি আদেশ জারি করেছেন, যে কেউ শিঙ্গা, বাঁশি, সেতার, সুরবাহার, বীণা, সানাই ও সর্বপ্রকার যন্ত্রের বাজনা শুনবে সে এই সোনার মূর্তিকে উপুড় হয়ে আরাধনা করবে,
ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
11 আর কেউ যদি উপুড় হয়ে আরাধনা না করে তাকে জ্বলন্ত অগ্নিকুণ্ডে ফেলে দেওয়া হবে।
ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?
12 কিন্তু মহারাজ, আপনি কয়েকজন ইহুদিকে ব্যাবিলনের রাজকাজে নিযুক্ত করেছেন যাদের নাম শদ্রক, মৈশক ও অবেদনগো, যারা আপনাকে গ্রাহ্য করে না। তারা আপনার দেবতাদের সেবা করে না, এমনকি আপনার স্থাপিত সোনার মূর্তিরও আরাধনা করে না।”
ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.
13 রাগে ক্ষিপ্ত হয়ে, নেবুখাদনেজার আদেশ দিলেন শদ্রক, মৈশক ও অবেদনগোকে তার সামনে আনতে, তাই তাদের রাজার সামনে হাজির করা হল।
ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.
14 নেবুখাদনেজার তাদের জিজ্ঞাসা করলেন, “শদ্রক, মৈশক ও অবেদনগো, একথা কি সত্য যে তোমরা আমার দেবতাদের ও আমার স্থাপিত সোনার মূর্তিকে আরাধনা করো না?
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?
15 এখন যদি তোমরা শিঙ্গা, বাঁশি, সেতার, সুরবাহার, বীণা, সানাই ও সর্বপ্রকার যন্ত্রের বাজনা শোনার সঙ্গে সঙ্গে উপুড় হও এবং সেই মূর্তিকে আরাধনা করো, তবে ভালো। কিন্তু যদি তোমরা আরাধনা না করো, তোমাদের তৎক্ষণাৎ জ্বলন্ত অগ্নিকুণ্ডে ফেলে দেওয়া হবে। তখন কোনও দেবতা আমার হাত থেকে তোমাদের উদ্ধার করতে পারবে?”
ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
16 শদ্রক, মৈশক ও অবেদনগো রাজাকে উত্তর দিলেন, “হে নেবুখাদনেজার, আপনার এই কথার জবাব দেওয়ার কোনো দরকার আমাদের নেই
ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
17 যদি আমাদের জলন্ত অগ্নিকুণ্ডে ফেলে দেওয়া হয়, আমাদের ঈশ্বর যাকে আমরা সেবা করি, তিনি আমাদের রক্ষা করতে পারবেন এবং হে রাজা, আপনার হাত থেকেও আমাদের রক্ষা করবেন।
ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.
18 কিন্তু তিনি যদি আমাদের রক্ষা নাও করেন, আপনি জেনে রাখুন হে মহারাজ যে, আমরা আপনার দেবতাদের সেবা করব না অথবা আপনার স্থাপিত সোনার মূর্তিকেও আরাধনা করব না।”
ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.
19 নেবুখাদনেজার তখন শদ্রক, মৈশক ও অবেদনগোর প্রতি রাগে ক্ষিপ্ত হয়ে উঠলেন এবং তার মুখ লাল হয়ে উঠল; এবং তিনি আদেশ দিলেন অগ্নিকুণ্ড যেমন থাকে, তার থেকেও সাতগুণ বেশি উত্তপ্ত করতে।
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.
20 তারপর তিনি কয়েকজন বলবান সৈন্যদের আদেশ দিলেন শদ্রক, মৈশক ও অবেদনগোকে শক্ত করে বাঁধতে ও অগ্নিকুণ্ডে ছুঁড়ে ফেলতে।
ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.
21 অতএব তাদেরকে পরনের পোশাক, আচ্ছাদন, মাথার কাপড় ও অন্যান্য বস্ত্র সহ বেঁধে জ্বলন্ত অগ্নিকুণ্ডে ফেলে দেওয়া হল।
ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.
22 রাজার কঠোর আদেশের ফলে অগ্নিকুণ্ড এতটাই উত্তপ্ত করা হল এবং সেই আগুনের তাপে যারা শদ্রক, মৈশক ও অবেদনগোকে আগুনে ফেলতে গিয়েছিল, সেই সৈন্যদের মৃত্যু হল।
ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.
23 আর এই তিনজন, হাত পা বাঁধা অবস্থায়, জলন্ত আগুনের মধ্যে পড়ল।
ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.
24 তখন রাজা নেবুখাদনেজার অত্যন্ত আশ্চর্য হয়ে লাফ দিয়ে উঠে দাঁড়ালেন এবং উপদেষ্টাদের জিজ্ঞাসা করলেন, “আমরা কি তিনজনকে বেঁধে অগ্নিকুণ্ডে ফেলে দিলাম না?” তারা উত্তর দিলেন, “নিশ্চই, মহারাজ।”
ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.
25 তিনি বললেন, “দেখো! আমি চারজনকে আগুনের মধ্যে মুক্ত ও অক্ষত অবস্থায় চারপাশে হাঁটতে দেখছি। এবং চতুর্থ জনকে দেবতার পুত্র বলে মনে হচ্ছে।”
ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.
26 তারপর নেবুখাদনেজার অগ্নিকুণ্ডের প্রবেশপথের দিকে গেলেন ও চিৎকার করে বললেন, “পরাৎপর ঈশ্বরের সেবক শদ্রক, মৈশক ও অবেদনগো বের হয়ে এসো! এখানে এসো!” তখন শদ্রক, মৈশক ও অবেদনগো আগুন থেকে বের হয়ে এল।
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.
27 সকল রাজ্যপাল, উপরাজ্যপাল, প্রদেশপাল, ও রাজ উপদেষ্টাবর্গ তাদেরকে ঘিরে ধরল। তারা দেখল যে আগুন তাদের দেহে কোনও ক্ষতি করেনি, আগুনে তাদের চুলও পোড়েনি, পরনের পোশাক আগুনে পুড়ে যায়নি, এমনকি তাদের গায়ে আগুনের পোড়া গন্ধও নেই।
ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.
28 তখন নেবুখাদনেজার বললেন, “শদ্রক, মৈশক ও অবেদনগোর ঈশ্বরের প্রশংসা হোক, যিনি নিজের দূত পাঠিয়ে তাঁর দাসদের রক্ষা করেছেন! তারা তাদের ঈশ্বরে আস্থা রেখেছে এবং রাজার আদেশ অমান্য করেছে। এমনকি নিজেদের আরাধ্য ঈশ্বর ছাড়া অন্য দেবতাদের সেবা ও আরাধনা না করে নিজেদের জীবন দিতেও তারা প্রস্তুত ছিল।
ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.
29 অতএব, আমি আদেশ জারি করছি, কোনো জাতি ও ভাষাভাষীর কেউ যদি শদ্রক, মৈশক ও অবেদনগোর আরাধ্য ঈশ্বরের বিপক্ষে কোনো কথা বলে তবে তাদের টুকরো টুকরো করা হবে, তাদের ঘরবাড়ি ভেঙে ধ্বংসাস্তূপে পরিণত করা হবে, কারণ অন্য কোনো দেবতা এইভাবে রক্ষা করতে পারে না।”
ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.
30 এরপর রাজা শদ্রক, মৈশক ও অবেদনগোকে ব্যাবিলন প্রদেশে আরও উঁচু পদে নিযুক্ত করলেন।
ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.

< দানিয়েল 3 >