< দানিয়েল 9 >
1 দারিয়াবস, মাদীয় বংশজাত এবং অহশ্বেরশের পুত্র, ব্যাবিলনীয়দের রাজা হয়েছিলেন।
೧ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
2 তার রাজত্বের প্রথম বছরে, আমি, দানিয়েল ভাববাদী যিরমিয়কে সদাপ্রভুর দেওয়া বাক্য থেকে বুঝলাম যে, জেরুশালেমের পতন সত্তর বছর স্থায়ী হবে।
೨ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.
3 তাই আমি প্রভু ঈশ্বরের মুখ অন্বেষণ করলাম ও চটের কাপড় পড়ে, ছাই মেখে, উপবাসে, তাঁর কাছে প্রার্থনা ও বিনতি করলাম।
೩ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
4 আমি সদাপ্রভু আমার ঈশ্বরের কাছে প্রার্থনা করে, স্বীকার করলাম: “প্রভু, মহান ও ভয়াবহ ঈশ্বর, যারা তাঁকে প্রেম করে ও তাঁর আজ্ঞাসকল মেনে চলে, তাদের প্রতি তিনি তাঁর প্রেমের নিয়ম রক্ষা করেন,
೪ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
5 আমরা পাপ করেছি, অন্যায় আচরণ করেছি। আমরা দুষ্ট পথে চলেছি, বিদ্রোহী হয়েছি; তোমার আজ্ঞা ও বিধান থেকে বিপথে গিয়েছি।
೫ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
6 আমরা তোমার ভক্তদাস ভাববাদীদের কথায় কর্ণপাত করিনি, যারা তোমার মহানামে আমাদের রাজা, অধিপতি, পূর্বপুরুষ এবং দেশের সকলের সঙ্গে কথা বলেছিলেন।
೬ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
7 “প্রভু, তুমি ন্যায়পরায়ণ, কিন্তু আজকের দিনে আমরা লজ্জায় আবৃত; যিহূদার লোকসকল, জেরুশালেমের সব নিবাসী এবং সমস্ত ইস্রায়েল, যারা কাছে এবং দূরে, তোমার প্রতি আমাদের অবিশ্বস্ততার কারণে তুমি আমাদের সমস্ত দেশে ছড়িয়ে-ছিটিয়ে দিয়েছ।
೭ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.
8 আমরা ও আমাদের রাজাগণ, আমাদের অধিপতিগণ ও আমাদের পূর্বপুরুষেরা, আমরা সকলে লজ্জাতে আবৃত কারণ হে সদাপ্রভু, আমরা তোমার বিরুদ্ধে পাপ করেছি।
೮ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
9 আমরা তোমার বিরুদ্ধে বিদ্রোহী হওয়া সত্ত্বেও হে প্রভু আমাদের ঈশ্বর, তুমি দয়ালু ও ক্ষমাশীল;
೯ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.
10 সদাপ্রভু আমাদের ঈশ্বরের আমরা অবাধ্য হয়েছি, এমনকি তাঁর পাঠান ভক্তদাস ভাববাদীদের মাধ্যমে যে বিধান আমাদের দেওয়া হয়েছিল তাও অমান্য করেছি।
೧೦ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
11 সমগ্র ইস্রায়েল তোমার বিধান অমান্য করেছে ও বিপথে গেছে, তোমার বাধ্য হতে অস্বীকার করেছে। “তাই ঈশ্বরের দাস মোশির ব্যবস্থায় যেসব অভিশাপ ও বিচারের কথা লেখা আছে তা আমাদের উপর ঢেলে দেওয়া হয়েছে কারণ আমরা তোমার বিরুদ্ধে পাপ করেছি।
೧೧ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
12 আমাদের ও আমাদের শাসকবর্গের বিরুদ্ধে যে বাক্য বলা হয়েছিল, আমাদের উপর মহা দুর্ভোগ এনে তুমি তা পূরণ করেছ। জেরুশালেমের প্রতি যা ঘটেছে তা সমস্ত আকাশের নিচে কখনও ঘটেনি।
೧೨ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
13 মোশির ব্যবস্থায় যেমন লেখা আছে সেই অনুসারে এসব বিপর্যয় আমাদের উপরে এসেছে, তবুও পাপ থেকে মন ফিরিয়ে ও তোমার সত্যের দিকে মনোযোগ দিয়ে আমরা সদাপ্রভু আমাদের ঈশ্বরের কাছে অনুগ্রহ বিনতি করিনি।
೧೩ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
14 সদাপ্রভু আমাদের উপর বিপর্যয় আনতে পিছপা হননি কারণ সদাপ্রভু আমাদের ঈশ্বর যা করেন তাতেই তিনি ন্যায়পরায়ণ, তবুও আমরা তাঁর আজ্ঞা পালন করিনি।
೧೪ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
15 “এখন হে প্রভু, আমাদের ঈশ্বর, তুমি মহান বাহুবলে মিশর দেশ থেকে তোমার লোকদের উদ্ধার করেছ এবং আপন মহানাম আজকের দিন পর্যন্ত বিখ্যাত করেছ, তবুও আমরা পাপ করেছি, অন্যায় করেছি।
೧೫ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
16 হে প্রভু, তোমার ধার্মিকতা অনুসারে জেরুশালেমের প্রতি তোমার রাগ ও ক্রোধ থেকে নিবৃত্ত হও, জেরুশালেম তো তোমারই নগরী, তোমারই পবিত্র পর্বত। আমাদের পাপ ও আমাদের পূর্বপুরুষদের অনাচার, জেরুশালেম ও তোমার লোকেদের চারপাশের সকলের চোখে উপহাসের বস্তু করে তুলেছে।
೧೬ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
17 “এখন, আমাদের ঈশ্বর, তোমার দাসের প্রার্থনা ও বিনতি শোনো। তোমার জন্য, হে প্রভু, তোমার পরিত্যক্ত পবিত্রস্থানের দিকে অনুগ্রহের দৃষ্টি দাও।
೧೭ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.
18 হে আমাদের ঈশ্বর, কর্ণপাত করো ও শোনো; চোখ খুলে দেখো, তোমার নামাঙ্কিত নগরীর কী দুরাবস্থা। আমাদের ধার্মিকতার বলে নয় কিন্তু তোমার মহান করুণার বলে আমরা তোমার কাছে এই বিনতি করছি।
೧೮ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
19 হে প্রভু, শোনো! হে প্রভু, ক্ষমা করো! হে প্রভু, এদিকে মন দাও ও আমাদের অনুরোধে কাজ করো! তোমার জন্য, হে আমার ঈশ্বর, দেরি কোরো না, কারণ তোমার নগর ও তোমার নগরবাসীরা তোমার নাম বহন করে।”
೧೯ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”
20 আমি কথা বলছিলাম ও প্রার্থনা করছিলাম, আমার পাপ ও স্বজাতি ইস্রায়েলীদের পাপস্বীকার করছিলাম এবং সদাপ্রভু আমার ঈশ্বরের কাছে তাঁর পবিত্র পর্বতের জন্য বিনতি করছিলাম।
೨೦ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
21 যখন আমি প্রার্থনায় রত ছিলাম, তখন গ্যাব্রিয়েল, যে ব্যক্তিকে আমি আগের দর্শনে দেখেছিলাম, সান্ধ্যকালীন উৎসর্গের সময় দ্রুতগতিতে আমার কাছে এলেন।
೨೧ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
22 তিনি আমাকে বুঝিয়ে বললেন, “দানিয়েল, এখন আমি তোমাকে অন্তর্দৃষ্টি ও বোধশক্তি দিতে এসেছি।
೨೨ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
23 তুমি যে মুহূর্তে প্রার্থনা শুরু করেছিলে সেই মুহূর্তে এক আদেশ দেওয়া হয়েছিল যা আমি তোমাকে বলতে এসেছি কারণ তুমি ঈশ্বরের চোখে খুব মূল্যবান। তাই আমার কথা মন দিয়ে শোনো, যেন সেই দর্শন বুঝতে পারো:
೨೩ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
24 “তোমার স্বজাতি ও পবিত্র নগরীর জন্য সত্তরের ‘সাত’ নির্ধারিত হয়েছে তাদের অপরাধ সমাপ্ত করার জন্য, পাপ কাজ বন্ধ করার জন্য, দুষ্টতার প্রায়শ্চিত্ত করার জন্য, চিরস্থায়ী ধার্মিকতা আনার জন্য, দর্শন ও ভাববাণী সুনিশ্চিত করার জন্য এবং মহাপবিত্র স্থান অভিষিক্ত করার জন্য।
೨೪ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
25 “মন দিয়ে শোনো ও বুঝে নাও: জেরুশালেমের পুনরুদ্ধার ও পূর্ণগঠনের আদেশ জারি হওয়ার সময় থেকে অভিষিক্ত ব্যক্তি, শাসক আসা পর্যন্ত সত্তরের ‘সাত’ এবং বাষট্টির ‘সাত’ অতিবাহিত হবে। জেরুশালেম রাস্তা ও শক্তিশালী প্রতিরক্ষা সহ পুনর্গঠিত হবে, যদিও সেই সময় সংকটময় হবে
೨೫ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
26 পরে বাষট্টির ‘সাত’ পূর্ণ হলে সেই অভিষিক্ত ব্যক্তিকে হত্যা করা হবে এবং তার কিছুই থাকবে না। তারপর এক শাসকের আবির্ভাব হবে যার সৈন্যবাহিনী নগর ও মন্দির ধ্বংস করবে। বন্যার মতো শেষ সময় ঘনিয়ে আসবে: অন্তিমকাল পর্যন্ত যুদ্ধ চলবে কারণ প্রবল তাণ্ডব নির্ধারিত হয়েছে।
೨೬ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
27 সেই শাসক এক ‘সাতের’ জন্য অনেকের সঙ্গে নিয়ম স্থাপন করবে। কিন্তু সেই ‘সাতের’ মাঝে সে উৎসর্গ ও বলিদান প্রথা বন্ধ করে দেবে। এবং মন্দিরে ধ্বংস-আনয়নকারী সেই ঘৃণ্য বস্তু স্থাপন করবে, যতক্ষণ না পর্যন্ত শেষ সময় যা নির্ধারিত হয়েছিল, তার উপর ঘনিয়ে আসবে।”
೨೭ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”