< দ্বিতীয় বিবরণ 30 >
1 আমি তোমাদের সামনে যে আশীর্বাদ ও অভিশাপগুলি তুলে ধরলাম তার সমস্ত কথা যখন তোমাদের উপরে ফলবে আর তোমাদের ঈশ্বর সদাপ্রভু যেসব জাতির মধ্যে তোমাদের ছড়িয়ে দেবেন তাদের মধ্যে বসবাস করবার সময় এসব কথায় তোমরা মন দেবে,
೧ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
2 সেই সময় তোমরা ও তোমাদের সন্তানেরা তোমাদের ঈশ্বর সদাপ্রভুর কাছে ফিরে আসবে এবং সমস্ত হৃদয় ও সমস্ত প্রাণ দিয়ে তাঁর বাধ্য হবে আর আমি আজ তোমাদের যেসব আদেশ দিচ্ছি তা পালন করবে,
೨ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,
3 তাহলে তোমাদের ঈশ্বর সদাপ্রভু তোমাদের ধন ফিরিয়ে দেবেন। তিনি তোমাদের প্রতি করুণা করবেন এবং যেসব জাতির মধ্যে তোমাদের ছড়িয়ে দেবেন তাদের মধ্য থেকে তিনি আবার তোমাদের সংগ্রহ করবেন।
೩ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
4 পৃথিবীর শেষ সীমানায়ও যদি তোমাদের দূর করে দেওয়া হয় সেখান থেকেও তোমাদের ঈশ্বর সদাপ্রভু তোমাদের সংগ্রহ করবেন।
೪ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
5 তোমাদের পূর্বপুরুষদের দেশেই তিনি তোমাদের ফিরিয়ে আনবেন আর তোমরা তা আবার অধিকার করবে। তিনি তোমাদের আরও সমৃদ্ধিশালী করবেন ও তোমাদের পূর্বপুরুষদের থেকেও তোমাদের লোকসংখ্যা বৃদ্ধি করবেন।
೫ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.
6 তোমরা যাতে তোমাদের সমস্ত মন ও তোমাদের সমস্ত প্রাণ দিয়ে তাঁকে ভালোবেসে বেঁচে থাকো সেইজন্য তোমাদের ঈশ্বর সদাপ্রভু তোমাদের ও তোমাদের বংশধরদের হৃদয়ের সুন্নত করবেন।
೬ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.
7 এসব অভিশাপ তোমাদের ঈশ্বর সদাপ্রভু তোমাদের শত্রুদের উপর আনবেন যারা তোমাদের ঘৃণা ও অত্যাচার করবে।
೭ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
8 তখন তোমরা আবার সদাপ্রভুর বাধ্য হয়ে চলবে আর তাঁর যেসব আদেশ আজ আমি তোমাদের দিচ্ছি তা মেনে চলবে।
೮ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
9 তখন তোমাদের ঈশ্বর সদাপ্রভু তোমাদের হাতের সব কাজে, গর্ভের ফলে, পশুধনের ফলে এবং ক্ষেতের ফসলে আশীর্বাদ করবেন। তোমাদের পূর্বপুরুষদের প্রতি তাঁর যে আনন্দ ছিল, তোমাদের উপরে আবার তাঁর সেই আনন্দ হবে এবং তিনি তোমাদের সমৃদ্ধিশালী করবেন,
೯ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
10 যদি তোমরা এই বিধানপুস্তকে লেখা তাঁর সব আজ্ঞা ও অনুশাসন পালন করে তোমাদের ঈশ্বর সদাপ্রভুর বাধ্য হও, আর তোমাদের সমস্ত মন ও তোমাদের সমস্ত প্রাণ দিয়ে তাঁর প্রতি ফের।
೧೦ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
11 আজ আমি তোমাদের যে আদেশ দিচ্ছি তা পালন করা তোমাদের পক্ষে তেমন শক্ত নয় কিংবা তোমাদের নাগালের বাইরেও নয়।
೧೧ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.
12 তা স্বর্গে নয়, যে তোমাদের জিজ্ঞাসা করতে হবে, “কে স্বর্গে গিয়ে তা এনে আমাদের শোনাবে যাতে আমরা তা পালন করতে পারি?”
೧೨ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
13 এটি সমুদ্রের ওপাড়েও নয়, যে তোমাদের জিজ্ঞাসা করতে হবে, “কে সমুদ্র পার হয়ে গিয়ে তা এনে আমাদের শোনাবে যাতে আমরা তা পালন করতে পারি?”
೧೩ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
14 না, সেই বাক্য তোমাদের খুব কাছেই আছে; তা তোমাদের মুখে ও তোমাদের হৃদয়ে রয়েছে, যেন তোমরা তা পালন করতে পারো।
೧೪ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
15 দেখো, আজ আমি তোমাদের সামনে জীবন ও সমৃদ্ধি, মৃত্যু ও বিনাশ রাখলাম।
೧೫“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
16 এজন্য আজ আমি তোমাদের এই আদেশ দিচ্ছি যে তোমরা তোমাদের ঈশ্বর সদাপ্রভুকে ভালোবাসো, তাঁর পথে বাধ্য হয়ে চলো, এবং তাঁর আজ্ঞা, অনুশাসন ও বিধান পালন করো; তাহলে তোমরা বাঁচবে ও সংখ্যায় বৃদ্ধি পাবে, এবং যে দেশ তোমরা অধিকার করতে যাচ্ছ যেখানে তোমাদের ঈশ্বর সদাপ্রভু তোমাদের আশীর্বাদ করবেন।
೧೬ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
17 কিন্তু তোমাদের হৃদয় যদি তাঁর কাছ থেকে সরে যায় এবং তোমরা তাঁর বাধ্য না হও, আর যদি তোমরা অন্য দেবতাদের কাছে গিয়ে তাদের প্রণাম করো এবং সেবা করো,
೧೭ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
18 তবে আজ আমি তোমাদের বলে দিচ্ছি যে, তোমরা নিশ্চয়ই ধ্বংস হবে। জর্ডন নদী পার হয়ে যে দেশ তোমরা অধিকার করতে যাচ্ছ সেখানে তোমরা বেশি দিন বেঁচে থাকতে পারবে না।
೧೮ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
19 তোমাদের বিরুদ্ধে মহাকাশ ও পৃথিবীকে সাক্ষী রেখে আমি আজ বলছি যে, আমি তোমাদের সামনে জীবন ও মৃত্যু, আশীর্বাদ ও অভিশাপ রাখছি। এখন জীবন বেছে নাও, যেন তোমরা ও তোমাদের সন্তানেরা বেঁচে থাকো
೧೯ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
20 এবং যেন তোমাদের ঈশ্বর সদাপ্রভুকে ভালোবাসো, তাঁর রব শোনো, আর তাঁতে আসক্ত হও। কেননা সদাপ্রভুই তোমাদের জীবন, এবং তিনি তোমাদের পূর্বপুরুষদের, অব্রাহাম, ইস্হাক ও যাকোবকে যে দেশ দেবেন বলে শপথ করেছিলেন সেখানে তোমরা বহু বছর বসবাস করতে পারো।
೨೦ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.