< যিহিস্কেল ভাববাদীর বই 21 >
1 সদাপ্রভুর বাক্য আমার কাছে উপস্থিত হল
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 “হে মানবসন্তান, তুমি জেরুশালেমের দিকে মুখ করে পবিত্রস্থানের বিরুদ্ধে প্রচার করো। ইস্রায়েল দেশের বিরুদ্ধে ভবিষ্যদ্বাণী করো
೨“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,
3 আর তাকে বলো ‘সদাপ্রভু এই কথা বলেন আমি তোমার বিপক্ষে। আমি খাপ থেকে আমার তরোয়াল বের করে তোমার মধ্য থেকে ধার্মিক ও দুষ্ট সবাইকে মেরে ফেলব।
೩ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
4 দক্ষিণ থেকে উত্তরের সকলকে মেরে ফেলার জন্য আমার তরোয়াল খাপ থেকে বের হবে কারণ আমি ধার্মিক ও দুষ্ট সবাইকে মেরে ফেলব।
೪ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.
5 তখন সব লোক জানবে যে, আমি সদাপ্রভুই খাপ থেকে তরোয়াল বের করেছি; তা আর ফিরবে না।’
೫ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”
6 “সেইজন্য হে মানবসন্তান, তুমি কোঁকাও, ভগ্ন হৃদয়ে ও গভীর দুঃখে তাদের সামনে কোঁকাও।
೬“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
7 আর তারা যখন তোমাকে জিজ্ঞাসা করবে, ‘তুমি কেন কোঁকাচ্ছ?’ তুমি বলবে, ‘খবরের জন্য, কারণ তা আসছে। প্রত্যেক হৃদয় গলে যাবে ও প্রত্যেক হাত দুর্বল হবে; প্রত্যেক আত্মা নিস্তেজ হবে ও প্রত্যেক হাঁটু জলের মতো দুর্বল হয়ে যাবে।’ তা আসছে! তা নিশ্চয় ঘটবে, সার্বভৌম সদাপ্রভু এই কথা বলেন।”
೭‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”
8 সদাপ্রভুর বাক্য আমার কাছে উপস্থিত হল:
೮ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
9 “হে মানবসন্তান, ভাববাণী বলো, ‘সদাপ্রভু এই কথা বলেন: “‘একটি তরোয়াল, একটি তরোয়াল, ধার দেওয়া ও পালিশ করা,
೯“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
10 ধার দেওয়া হয়েছে কেটে ফেলার জন্য, পালিশ করা হয়েছে যেন বিদ্যুতের মতো ঝকমক করে! “‘আমার ছেলে যিহূদার রাজদণ্ডের জন্য কি আনন্দ করব? সেই তরোয়াল সেইরকম প্রত্যেক লাঠিকে তুচ্ছ করে।
೧೦ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?
11 “‘তরোয়াল পালিশ করার জন্য নির্দিষ্ট হয়েছে যেন হাতে ধরা যায়; হত্যাকারীর হাতে দেবার জন্য এটি ধার দেওয়া ও পালিশ করা হয়েছে।
೧೧ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.
12 হে মানবসন্তান, কাঁদো ও বিলাপ করো, কারণ এটি আমার প্রজাদের বিরুদ্ধে; এটি ইস্রায়েলের সমস্ত কর্মকর্তার বিরুদ্ধে। আর আমার প্রজাদের সঙ্গে তাদেরও তরোয়ালেতে ফেলা হবে। কাজেই তুমি বুক চাপড়াও।
೧೨ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”
13 “‘পরীক্ষা নিশ্চয়ই আসবে। যিহূদার রাজদণ্ড, যা তরোয়াল তুচ্ছ করে, যদি আর না থাকে তাতে কি? এই কথা সার্বভৌম সদাপ্রভু বলেন।’
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?
14 “অতএব, হে মানবসন্তান, ভাববাণী বলো আর হাততালি দাও। সেই তরোয়াল দু-বার, এমনকি, তিনবার আঘাত করুক। এটি হত্যা করার সেই তরোয়াল, মহাহত্যা করার এই তরোয়াল, যা তাদের উপর চারিদিক থেকে আসবে।
೧೪ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!
15 কেটে ফেলার জন্য তাদের সব দ্বারে দ্বারে আমি তরোয়াল বসিয়েছি যেন তাদের হৃদয় সব গলে যায় এবং অনেকে পড়ে। দেখো! সেই তরোয়াল বিদ্যুতের মতো ঝকমক করে, এটি হত্যার জন্য ধার দেওয়া হয়েছে।
೧೫ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
16 হে তরোয়াল, ডানদিকে আঘাত করো, তারপর বাঁদিকে করো, যেদিকে তোমার ফলা ঘুরানো যায়।
೧೬ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.
17 আমিও হাততালি দেব, আর আমার ক্রোধ শান্ত হবে। আমি সদাপ্রভুই এই কথা বলেছি।”
೧೭ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”
18 সদাপ্রভুর বাক্য আমার কাছে উপস্থিত হল:
೧೮ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,
19 “হে মানবসন্তান, ব্যাবিলনের রাজার তরোয়ালের জন্য দুটি রাস্তায় চিহ্ন দাও, সেই দুটি রাস্তাই এক দেশ থেকে বের হবে। যেখানে রাস্তা ভাগ হয়ে নগরের দিকে গেছে সেখানে পথনির্দেশ করার খুঁটি দাও।
೧೯“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
20 তরোয়ালের জন্য অম্মোনীয়দের রব্বা নগরের বিরুদ্ধে যাবার একটি রাস্তা এবং যিহূদা ও প্রাচীর দিয়ে ঘেরা জেরুশালেমের বিরুদ্ধে যাবার অন্য একটি রাস্তায় চিহ্ন দাও।
೨೦ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
21 কারণ ব্যাবিলনের রাজা পূর্বলক্ষণ জানার জন্য যেখানে দুটি রাস্তা মিশেছে সেখানে দাঁড়াবে; সে তির ছুড়বে, তার দেবতাদের সঙ্গে পরামর্শ করবে ও যকৃত পরীক্ষা করবে।
೨೧“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
22 তার ডান হাতে আসবে জেরুশালেমের গণনা, যেখানে সে প্রাচীর ও দ্বার ভাঙবার যন্ত্র বসাবে, হত্যা করার হুকুম দেবে, ঢালু ঢিবি ও উঁচু ঢিবি তৈরি করবে।
೨೨ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
23 যারা তার আনুগত্য স্বীকার করেছে তাদের কাছে এই লক্ষণ মিথ্যা মনে হবে, কিন্তু তাদের দোষের কথা সে তাদের মনে করিয়ে দেবে এবং তাদের বন্দি করে নিয়ে যাবে।
೨೩ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”
24 “এজন্য সার্বভৌম সদাপ্রভু এই কথা বলেন: ‘তোমরা খোলাখুলিভাবে পাপ করে তোমাদের দোষ দেখিয়ে দিয়েছ, তোমাদের সব কাজে তোমাদের অন্যায় প্রকাশ পাচ্ছে—তার ফলে তোমাদের বন্দি করে নিয়ে যাওয়া হবে।
೨೪ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.
25 “‘ওহে অপবিত্র ও দুষ্ট ইস্রায়েলের রাজপুত্র, তোমার দিন উপস্থিত হয়েছে, তোমার শাস্তির সময় চরমসীমায় পৌঁছেছে,
೨೫ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”
26 সার্বভৌম সদাপ্রভু এই কথা বলেন তোমার পাগড়ি খোলো, মুকুট নামিয়ে ফেলো। যেমন ছিল তেমন আর হবে না; ছোটোকে বড়ো আর বড়োকে ছোটো করা হবে।
೨೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
27 ধ্বংস! ধ্বংস! আমি এসব ধ্বংস করে দেব! যাঁর সত্যিকারের অধিকার আছে তিনি না আসা পর্যন্ত এগুলি আর পুনরুদ্ধার হবে না; আমি তাঁকেই এসব কিছু দেব।’
೨೭ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”
28 “আর তুমি, হে মানবসন্তান, ভাববাণী বলো, ‘সার্বভৌম সদাপ্রভু অম্মোনীয়দের ও তাদের অপমানের বিষয়ে এই কথা বলেন: “‘একটি তরোয়াল, একটি তরোয়াল, খোলা হয়েছে হত্যা করার জন্য, পালিশ করা হয়েছে গ্রাস করার জন্য ও যেন তা বিদ্যুতের মতো ঝকমক করে!
೨೮ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
29 এদিকে লোকেরা তোমার বিষয়ে মিথ্যা দর্শন পেলেও এবং মিথ্যা ভবিষ্যৎ-কথনের চর্চা করলেও যাদের মেরে ফেলা হবে সেই দুষ্টদের গলার উপর তোমাকে রাখা হবে, তাদের দিন এসে পড়েছে, তাদের শাস্তির সময় চরমসীমায় পৌঁছেছে।
೨೯ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
30 “‘তরোয়াল খাপে ফিরিয়ে নাও। যে জায়গায় তোমাদের সৃষ্টি, তোমাদের সেই পূর্বপুরুষদের দেশে আমি তোমাদের বিচার করব।
೩೦“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.
31 আমার ক্রোধ আমি তোমার উপর ঢেলে দেব এবং তোমাদের বিরুদ্ধে আমার ভীষণ অসন্তোষের আগুনে ফুঁ দেব; আমি তোমাদের এমন নিষ্ঠুর লোকদের হাতে তুলে দেব যারা ধ্বংস করতে দক্ষ।
೩೧ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
32 তোমরা আগুনের জন্য কাঠের মতো হবে, তোমাদের রক্ত তোমাদের দেশের মধ্যেই পড়বে, তোমাদের আর স্মরণ করা হবে না, কারণ আমি সদাপ্রভুই এই কথা বলছি।’”
೩೨ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”