< যিহিস্কেল ভাববাদীর বই 47 >
1 তারপর সেই ব্যক্তি আমাকে মন্দিরের ঢুকবার মুখের কাছে ফিরিয়ে আনলেন, আর আমি দেখলাম মন্দিরের ঢুকবার মুখের তলা থেকে জল বের হয়ে পূর্বদিকে বইছে। (কারণ মন্দির পূর্বমুখী ছিল) সেই জল মন্দিরের দক্ষিণ পাশের তলা থেকে বেদির দক্ষিণ পাশ দিয়ে বয়ে যাচ্ছিল।
೧ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.
2 পরে তিনি উত্তর দ্বারের মধ্য দিয়ে আমাকে বের করে আনলেন এবং বাইরের পথ দিয়ে ঘুরিয়ে পূর্বমুখী বাইরের দ্বারের কাছে নিয়ে গেলেন, আর সেই জল-দ্বারের দক্ষিণ পাশ দিয়ে বয়ে যাচ্ছিল।
೨ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು.
3 মাপের দড়ি হাতে নিয়ে তিনি মাপতে মাপতে 1,000 হাত পূর্বদিকে গেলেন আর আমাকে গোড়ালি-ডোবা জলের মধ্য দিয়ে নিয়ে গেলেন।
೩ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.
4 তারপর তিনি আর 1,000 হাত মেপে আমাকে হাঁটু জলের মধ্য দিয়ে নিয়ে গেলেন। তারপর তিনি আর 1,000 হাত মেপে কোমর পর্যন্ত জলের মধ্য দিয়ে আমাকে নিয়ে গেলেন।
೪ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು.
5 তারপর তিনি আর 1,000 হাত মাপলেন, কিন্তু জল তখন নদী হয়ে যাওয়াতে আমি পার হতে পারলাম না, কারণ জল বেড়ে গিয়েছিল এবং সাঁতার দেবার মতো গভীর হয়েছিল, এমন নদী হয়েছিল যা কেউ হেঁটে পার হতে পারে না।
೫ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.
6 তিনি আমাকে জিজ্ঞাসা করলেন, “হে মানবসন্তান, তুমি কি এটি দেখলে?” তারপর তিনি আমাকে আবার নদীর তীরে নিয়ে গেলেন।
೬ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.
7 সেখানে পৌঁছে আমি নদীর দুই ধারেই অনেক গাছপালা দেখতে পেলাম।
೭ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.
8 তিনি আমাকে বললেন, “এই জল পূর্বদিকে বয়ে যাচ্ছে এবং অরাবার মধ্য দিয়ে সমুদ্রে গিয়ে পড়ছে। যখন সেটি গিয়ে সমুদ্রে পড়ে তখন সেখানকার নোনতা জল মিষ্টি হয়ে যায়।
೮ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
9 যেখান দিয়ে এই নদীটা বয়ে যাবে সেখানে সব রকমের ঝাঁক বাঁধা জীবন্ত প্রাণী ও প্রচুর মাছ বাস করবে, কারণ এই জল যেখান দিয়ে বয়ে যাবে সেখানকার জল মিষ্টি করে তুলবে; সেইজন্য যেখান দিয়ে নদীটা বয়ে যাবে সেখানকার সবকিছুই বাঁচবে।
೯ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
10 জেলেরা নদীর তীরে দাঁড়াবে; ঐন-গদী থেকে ঐন-ইগ্লয়িম পর্যন্ত জাল মেলে দেবার জায়গা হবে। ভূমধ্যসাগরের মাছের মতো সেখানেও বিভিন্ন রকমের অনেক মাছ পাওয়া যাবে।
೧೦ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.
11 কিন্তু জলা জায়গা ও বিলের জল মিষ্টি হবে না; সেগুলি নুনের জন্য থাকবে।
೧೧ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.
12 নদীর দুই ধারেই সব রকমের ফলের গাছ জন্মাবে। সেগুলির পাতা শুকিয়ে যাবে না, ফলও শেষ হবে না। প্রতি মাসেই তাতে ফল ধরবে, কারণ উপাসনার স্থান থেকে জল তার মধ্যে বয়ে আসছে। সেগুলির ফল খাবার জন্য আর পাতা সুস্থ হবার জন্য ব্যবহার করা হবে।”
೧೨ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”
13 সার্বভৌম সদাপ্রভু এই কথা বলেন, “তোমরা ইস্রায়েলের বারো গোষ্ঠীর মধ্যে যে দেশটি ভাগ করে দেবে, তার সীমা এইরকম, যোষেফের দুই অংশ হবে।
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.
14 তোমরা তা সমান ভাগে ভাগ করে নেবে। কারণ এই দেশটি আমি তোমাদের পূর্বপুরুষদের দেব বলে হাত তুলে শপথ করেছিলাম; এই দেশটি তোমাদেরই সম্পত্তি হবে।
೧೪ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.
15 “দেশের সীমানা হবে এই: “উত্তর দিকের সীমানা হবে ভূমধ্যসাগর থেকে লেবোহমাৎ ছাড়িয়ে হিৎলোনের রাস্তা বরাবর সদাদ পর্যন্ত,
೧೫“ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.
16 বরোথা এবং সিব্রয়িম (যা দামাস্কাসের ও হমাতের সীমানার মধ্যে) হৌরণের সীমানার কাছে হৎসর-হত্তীকোন পর্যন্ত।
೧೬ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.
17 এই সীমানা চলে যাবে ভূমধ্যসাগর থেকে দামাস্কাসের উত্তর সীমার পাশে হৎসর-ঐনন পর্যন্ত, অর্থাৎ উত্তর দিকের হমাতের সীমানা পর্যন্ত। এটাই হবে উত্তর দিকের সীমানা।
೧೭ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು.
18 পূর্বদিকের সীমানা, হৌরণ ও দামাস্কাসের মধ্য দিয়ে গিলিয়দ ও ইস্রায়েল দেশের মধ্যেকার জর্ডন নদী বরাবর গিয়ে মরুসাগরের তামার পর্যন্ত। এটাই হবে পূর্বদিকের সীমানা।
೧೮“ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.
19 দক্ষিণ দিকের সীমানা মরুসাগরের তামর থেকে কাদেশের মরীবার জল পর্যন্ত গিয়ে মিশরের মরা নদী বরাবর ভূমধ্যসাগর পর্যন্ত চলে যাবে। এটিই হবে দক্ষিণের সীমানা।
೧೯ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.
20 পশ্চিমদিকের সীমানা হবে ভূমধ্যসাগর বরাবর লেবো হমাতের উল্টো দিক পর্যন্ত। এটিই হবে পশ্চিমদিকের সীমানা।
೨೦ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು.
21 “ইস্রায়েলের গোষ্ঠীগুলি অনুসারে তোমরা নিজেদের মধ্যে দেশটা ভাগ করে নেবে।
೨೧ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.
22 তোমাদের মধ্যে যেসব বিদেশি তাদের ছেলেমেয়েদের নিয়ে স্থায়ীভাবে বসবাস করছে তাদের জন্য ও তোমাদের জন্য দেশটি সম্পত্তি হিসেবে ভাগ করে দেবে। তাদের তোমরা দেশে জন্মানো ইস্রায়েলী হিসেবে ধরবে; তোমাদের সঙ্গে তারাও ইস্রায়েলের গোষ্ঠীগুলির মধ্যে জমির ভাগ পাবে।
೨೨ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.
23 যে গোষ্ঠীর মধ্যে সেই বিদেশি বসবাস করবে সেখানেই তোমরা তাকে জমির অধিকার দেবে,” সার্বভৌম সদাপ্রভু এই কথা বলেন।
೨೩ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ.