< আদিপুস্তক 39 >
1 যোষেফকে মিশরে নিয়ে যাওয়া হল। পোটিফর বলে একজন মিশরীয়, যিনি ফরৌণের রাজকর্মকর্তাদের মধ্যে একজন তথা পাহারাদারদের দলপতি ছিলেন, তিনি তাঁকে সেই ইশ্মায়েলীয়দের কাছ থেকে কিনে নিয়েছিলেন, যারা তাঁকে মিশরে নিয়ে গেল।
ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.
2 সদাপ্রভু যোষেফের সঙ্গে ছিলেন তাই তিনি সাফল্য পেলেন, এবং তিনি তাঁর মিশরীয় প্রভুর বাড়িতে বসবাস করতেন।
ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
3 তাঁর প্রভু যখন দেখলেন যে সদাপ্রভু তাঁর সঙ্গে আছেন এবং তিনি যা যা করেন সবেতেই সদাপ্রভু তাঁকে সফলতা দেন,
ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.
4 তখন যোষেফ তাঁর দৃষ্টিতে অনুগ্রহ লাভ করলেন ও তাঁর সেবক হয়ে গেলেন। পোটিফর তাঁকে নিজের পরিবারের দেখাশোনার দায়িত্ব দিলেন, এবং তাঁর মালিকানাধীন সবকিছু দেখাশোনার দায়িত্বও তাঁকে দিলেন।
ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
5 যে সময় থেকে তিনি যোষেফকে তাঁর পরিবারের ও তাঁর মালিকানাধীন সবকিছুর দায়িত্ব দিলেন, সদাপ্রভু যোষেফের জন্য সেই মিশরীয়ের পরিবারকে আশীর্বাদ করলেন। বাড়িতে ও জমিতে, পোটিফরের যা যা ছিল, সে সবকিছুর উপর সদাপ্রভুর আশীর্বাদ বর্তে ছিল।
ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.
6 অতএব পোটিফর তাঁর সবকিছু দেখাশোনার দায়িত্ব যোষেফের উপর ছেড়ে দিলেন; যোষেফ সেই দায়িত্ব সামলানোর সময়, তিনি যে যে খাবারদাবার খেতেন সেগুলি ছাড়া তিনি আর কোনো বিষয়ে চিন্তা করতেন না। যোষেফ শক্তপোক্ত ও সুদর্শন পুরুষ ছিলেন,
ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.
7 এবং কিছুকাল পর তার প্রভু-পত্নীর দৃষ্টি যোষেফের উপর গিয়ে পড়ল ও সে বলল, “আমার সাথে বিছানায় এসো!”
ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.
8 কিন্তু তিনি সেই প্রস্তাব প্রত্যাখ্যান করলেন। “আমাকে দায়িত্ব দিয়ে,” তিনি তাকে বললেন, “আমার প্রভু বাড়ির কোনও বিষয়েই আর মাথা ঘামান না; তাঁর মালিকানাধীন সবকিছুই তিনি আমার দায়িত্বে ছেড়ে দিয়েছেন।
ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
9 এই বাড়িতে আমার চেয়ে বড়ো আর কেউ নেই। আপনাকে ছাড়া আর কোনো কিছুই আমার প্রভু আমার কাছ থেকে দূরে সরিয়ে রাখেননি, কারণ আপনি যে তাঁর স্ত্রী। তবে কীভাবে আমি এ ধরনের জঘন্য কাজ এবং ঈশ্বরের বিরুদ্ধে পাপ করব?”
ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.
10 আর যদিও সেই মহিলা দিনের পর দিন যোষেফকে একই কথা বলে যাচ্ছিল, তবুও তিনি তাঁর সাথে বিছানায় যেতে অস্বীকার করলেন; এমনকি তিনি তাঁর সঙ্গে থাকতেও চাইলেন না।
ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.
11 একদিন তিনি নিজের দায়িত্ব পালন করার জন্য বাড়ির ভিতরে গেলেন, এবং পারিবারিক দাস-দাসীদের মধ্যে কেউই তখন ভিতরে ছিল না।
ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ.
12 তাঁর প্রভু-পত্নী তাঁর আলখাল্লা টেনে ধরে বলল, “আমার সাথে বিছানায় এসো!” কিন্তু তিনি তার হাতে নিজের আলখাল্লাটি ছেড়ে দিয়ে বাড়ি থেকে পালিয়ে গেলেন।
ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
13 যখন সে দেখল যে যোষেফ তার হাতে নিজের আলখাল্লাটি ছেড়ে দিয়ে বাড়ি থেকে পালিয়ে গিয়েছেন,
ಅವನು ತನ್ನ ವಸ್ತ್ರವನ್ನು ತನ್ನ ಕೈಯಲ್ಲಿ ಬಿಟ್ಟು ಬಿಟ್ಟಿದ್ದನ್ನೂ, ಹೊರಗೆ ಓಡಿ ಹೋದದ್ದನ್ನೂ ಅವಳು ಕಂಡು,
14 তখন সে তার পারিবারিক দাস-দাসীদের ডাক দিল। “দেখো,” সে তাদের বলল, “এই হিব্রুটিকে আমাদের সঙ্গে ফুর্তি করার জন্য আনা হয়েছে! সে এখানে ভিতরে এসে আমার সঙ্গে শুতে চেয়েছিল, কিন্তু আমি চিৎকার করে উঠেছিলাম।
ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.
15 যখন সে শুনল আমি সাহায্য পাওয়ার জন্য চিৎকার করছি, তখন সে আমার পাশে তার আলখাল্লাটি ছেড়ে দিয়ে বাড়ি থেকে পালিয়ে গেল।”
ನಾನು ಜೋರಾಗಿ ಕೂಗಿದ್ದನ್ನು ಅವನು ಕೇಳಿ, ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು,” ಎಂದಳು.
16 তাঁর প্রভু ঘরে না ফেরা পর্যন্ত সেই মহিলাটি তাঁর আলখাল্লাটি নিজের পাশে রেখে দিয়েছিল।
ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
17 পরে সে পোটিফরকে এই গল্পটি বলে শোনাল: “যে হিব্রু ক্রীতদাসটিকে তুমি এনেছিলে, সে আমার সঙ্গে ফুর্তি করার জন্য আমার কাছে এসেছিল।
ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.
18 কিন্তু যেই না আমি সাহায্যের জন্য চিৎকার করে উঠেছিলাম, সে আমার পাশে তার আলখাল্লাটি ছেড়ে দিয়ে পালিয়েছিল।”
ಆದರೆ ನಾನು ಜೋರಾಗಿ ಕೂಗಿಕೊಂಡಾಗ, ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು,” ಎಂದಳು.
19 “তোমার ক্রীতদাসটি আমার সঙ্গে এই ধরনের ব্যবহার করেছে,” এই গল্পটি যখন যোষেফের প্রভু-পত্নী তাঁর প্রভুকে বলে শোনাল, তখন তিনি রাগে অগ্নিশর্মা হয়ে উঠলেন।
“ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.
20 যোষেফের প্রভু যোষেফকে ধরে সেই জেলখানায় পুরে দিলেন, যেখানে রাজার কয়েদিদের বন্দি করে রাখা হত। কিন্তু যোষেফ যখন সেই জেলখানায় ছিলেন,
ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
21 সদাপ্রভু তখন তাঁর সঙ্গেই ছিলেন; তিনি তাঁকে দয়া দেখালেন ও সেই জেল-রক্ষকের দৃষ্টিতে তাঁকে অনুগ্রহ পেতেও দিলেন।
ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.
22 অতএব সেই জেল-রক্ষক যোষেফকে জেলের সব বন্দির তত্ত্বাবধায়ক করে দিলেন, এবং সেখানে যা যা কাজকর্ম হত, সেসবের দায়িত্বও তাঁকে দিলেন।
ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.
23 যোষেফের তত্ত্বাবধানে যা কিছু ছিল, তার কোনোটির প্রতিই সেই রক্ষক মনোযোগ দিতেন না, কারণ সদাপ্রভু যোষেফের সঙ্গে ছিলেন ও তিনি যা কিছু করতেন, সবেতেই তিনি তাঁকে সাফল্য দিলেন।
ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.