< বিচারকর্ত্তৃগণের বিবরণ 3 >
1 যেসব ইস্রায়েলী কনানে কোনও যুদ্ধের অভিজ্ঞতা লাভ করেনি, তাদের পরীক্ষা করার জন্য সদাপ্রভু এসব জাতিকে অবশিষ্ট রেখেছিলেন:
೧ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
2 (ইস্রায়েলীদের সেই বংশধরদের যুদ্ধবিগ্রহ শিক্ষা দেওয়ার জন্যই শুধুমাত্র তিনি এরকম করলেন, ইতিপূর্বে যাদের যুদ্ধের কোনও অভিজ্ঞতা ছিল না)
೨ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
3 ফিলিস্তিনীদের পাঁচজন শাসনকর্তা, বায়াল-হর্মোণ পর্বত থেকে লেবো-হমাৎ পর্যন্ত বিস্তৃত লেবাননের পার্বত্য অঞ্চলে বসবাসকারী সমস্ত কনানীয়, সীদোনীয় এবং হিব্বীয় জাতি।
೩ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
4 মোশির মাধ্যমে ইস্রায়েলীদের পূর্বপুরুষদের সদাপ্রভু যে আদেশগুলি দিয়েছিলেন, সেগুলি তারা পালন করে কি না, তা জানার জন্যই এই জাতিদের অবশিষ্ট রাখা হল।
೪ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
5 ইস্রায়েলীরা কনানীয়, হিত্তীয়, ইমোরীয়, পরিষীয়, হিব্বীয় এবং যিবূষীয়দের মধ্যে বসবাস করল।
೫ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
6 ইস্রায়েলীরা তাদের মেয়েদের বিয়ে করে আনত ও নিজেদের মেয়েদের সঙ্গে তাদের ছেলেদের বিয়ে দিত, এবং তাদের দেবতাদের সেবা করত।
೬ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
7 সদাপ্রভুর দৃষ্টিতে যা মন্দ ইস্রায়েলীরা তাই করল; তারা তাদের ঈশ্বর সদাপ্রভুকে ভুলে গিয়ে বায়াল-দেবতাদের ও আশেরা-দেবীদের সেবা করল।
೭ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
8 সদাপ্রভুর ক্রোধ ইস্রায়েলীদের বিরুদ্ধে প্রজ্বলিত হল, আর তিনি তাদের অরাম-নহরয়িমের রাজা সেই কূশন-রিশিয়াথয়িমের হাতে বিক্রি করে দিলেন, ইস্রায়েলীরা আট বছর যাঁর শাসনাধীন হয়ে থাকল।
೮ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
9 কিন্তু তারা যখন সদাপ্রভুর কাছে কেঁদে উঠল, তিনি তাদের জন্য এক রক্ষাকর্তাকে—কালেবের ছোটো ভাই কনসের ছেলে অৎনীয়েলকে—উত্থাপিত করলেন, যিনি তাদের রক্ষা করলেন।
೯ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
10 সদাপ্রভুর আত্মা অৎনীয়েলের উপর নেমে এলেন, আর তিনি ইস্রায়েলীদের বিচারক হলেন এবং যুদ্ধযাত্রা করলেন। সদাপ্রভু অরামের রাজা কূশন-রিশিয়াথয়িমকে সেই অৎনীয়েলের হাতে সমর্পণ করলেন, যিনি তাঁকে পরাজিত করলেন।
೧೦ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
11 অতএব কনসের ছেলে অৎনীয়েলের মৃত্যু না হওয়া পর্যন্ত চল্লিশ বছরের জন্য দেশে শান্তি বজায় থাকল।
೧೧ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
12 আবার ইস্রায়েলীরা সদাপ্রভুর দৃষ্টিতে যা মন্দ তাই করল, এবং যেহেতু তারা এরকম মন্দ কাজ করল, তাই সদাপ্রভু মোয়াবের রাজা ইগ্লোনকে ইস্রায়েলের উপর শক্তিপ্রদর্শন করতে দিলেন।
೧೨ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
13 অম্মোনীয় ও অমালেকীয়দের সঙ্গে নিয়ে এসে ইগ্লোন ইস্রায়েলকে আক্রমণ করলেন, এবং খর্জুরপুর অধিকার করে নিলেন।
೧೩ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
14 ইস্রায়েলীরা আঠারো বছর যাবৎ মোয়াবের রাজা ইগ্লোনের শাসনাধীন হয়ে থাকল।
೧೪ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
15 ইস্রায়েলীরা আবার সদাপ্রভুর কাছে কেঁদে উঠল, এবং তিনি তাদের এক রক্ষাকর্তা দিলেন—যিনি হলেন বিন্যামীনীয় গেরার ছেলে ন্যাটা এহূদ। ইস্রায়েলীরা তাঁকে রাজস্ব-অর্থ সমেত মোয়াবরাজ ইগ্লোনের কাছে পাঠাল।
೧೫ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
16 এহূদ প্রায় 45 সেন্টিমিটার লম্বা এবং উভয় দিকে ধারবিশিষ্ট একটি ছোরা তৈরি করলেন, ও সেটি তিনি তাঁর পোশাকের নিচে তাঁর ডান ঊরুতে বেঁধে রাখলেন।
೧೬ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
17 তিনি মোয়াবের রাজা সেই ইগ্লোনের কাছে সেই রাজস্ব-অর্থ পেশ করলেন, যিনি অত্যন্ত স্থূলকায় এক ব্যক্তি ছিলেন।
೧೭ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
18 সেই রাজস্ব-অর্থ পেশ করার পর এহূদ তাদের বিদায় করে দিলেন, যারা তা বহন করে এনেছিল।
೧೮ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
19 কিন্তু গিল্গলের নিকটবর্তী সেই পাথর-প্রতিমাগুলির কাছে পৌঁছানোর পর আবার তিনি ইগ্লোনের কাছে ফিরে এসে বললেন, “হে মহারাজ, আপনার জন্য আমার কাছে এক গোপন সংবাদ আছে।” রাজামশাই তাঁর সেবকদের বললেন, “আমাদের একা ছেড়ে দাও!” আর তারা সবাই বাইরে চলে গেল।
೧೯ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
20 রাজামশাই যখন তাঁর প্রাসাদের উপরতলার ঘরে একা বসেছিলেন, তখন এহূদ তাঁর কাছে এগিয়ে গিয়ে বললেন, “আপনার জন্য আমার কাছে ঈশ্বরের এক বাণী আছে।” রাজামশাই যেই না তাঁর আসন ছেড়ে উঠে দাঁড়ালেন,
೨೦ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
21 এহূদ তাঁর বাঁ হাত বাড়িয়ে ডান ঊরু থেকে সেই ছোরাটি টেনে বের করে সোজা রাজামশাই-এর পেটে ঢুকিয়ে দিলেন।
೨೧ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
22 এমনকি ছোরার সঙ্গে বাঁটটিও ভিতরে ঢুকে গেল, এবং তাঁর নাড়িভুঁড়ি বাইরে বেরিয়ে এল। এহূদ ছোরাটি টেনে বের করলেন না, এবং সেটি চর্বিতে আটকে থাকল।
೨೨ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
23 পরে এহূদ বাইরে বারান্দায় বেরিয়ে এলেন; তিনি উপরতলার ঘরের দরজা বাইরে থেকে বন্ধ করে তাতে তালা লাগিয়ে দিলেন।
೨೩ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
24 তিনি চলে যাওয়ার পর দাসেরা এসে দেখল যে উপরতলার ঘরের দরজা তালাবন্ধ। তারা বলল, “রাজামশাই নিশ্চয় প্রাসাদের শৌচাগারে প্রকৃতির ডাকে সাড়া দিতে গিয়েছেন।”
೨೪ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
25 তারা বিব্রত না হওয়া পর্যন্ত অপেক্ষা করে গেল, কিন্তু রাজামশাই দরজা খুলছেন না দেখে তারা একটি চাবি নিয়ে দরজাটি খুলে ফেলল। সেখানে তারা দেখল যে তাদের মনিব মৃত অবস্থায় মেঝেতে পড়ে আছেন।
೨೫ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
26 তারা যখন অপেক্ষা করছিল, তখন এহূদ পালিয়ে গেলেন। তিনি পাথর-প্রতিমাগুলি পার করে গেলেন ও পালিয়ে সিয়ীরাতে গিয়ে পৌঁছালেন।
೨೬ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
27 সেখানে পৌঁছে তিনি ইফ্রয়িমের পার্বত্য অঞ্চলে শিঙা বাজালেন, এবং ইস্রায়েলীরা তাঁর সঙ্গে পাহাড় থেকে নেমে গেল, ও এহূদ তাদের নেতৃত্ব দিলেন।
೨೭ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
28 “আমার অনুগামী হও,” তিনি আদেশ দিলেন, “কারণ সদাপ্রভু তোমাদের শত্রু মোয়াবকে তোমাদের হাতে সমর্পণ করে দিয়েছেন।” অতএব তারা এহূদের অনুগামী হল এবং জর্ডনের হাঁটুজলবিশিষ্ট সেই স্থানগুলি অধিকার করে নিল, যেগুলি মোয়াবের দিকে উঠে যায়; তারা কাউকেই ওপারে যেতে দিল না।
೨೮ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
29 সেই সময় তারা প্রায় 10,000 মোয়াবীয়কে আঘাত করল, যারা সবাই ছিল সবল ও শক্তিশালী; একজনও পালাতে পারল না।
೨೯ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
30 সেদিন মোয়াবকে ইস্রায়েলের শাসনাধীন করা হল, এবং আশি বছরের জন্য দেশে শান্তি বজায় থাকল।
೩೦ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
31 এহূদের পর এলেন অনাতের ছেলে শম্গর, যিনি বলদের অঙ্কুশ দিয়ে 600 ফিলিস্তিনীকে আঘাত করলেন। তিনিও ইস্রায়েলকে রক্ষা করলেন।
೩೧ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.