< গীতসংহিতা 139 >
1 সংগীত পরিচালকের জন্য। দাউদের গীত। হে সদাপ্রভু, তুমি আমার অনুসন্ধান করেছ, আর তুমি আমাকে জানো।
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
2 তুমি জানো আমি কখন বসি আর কখন উঠি; দূর থেকেও তুমি আমার মনের ভাবনা বুঝতে পারো।
೨ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
3 তুমি জানো আমি কোথায় যাই আর আমি কোথায় শয়ন করি; আমার চলার সব পথ তোমার পরিচিত।
೩ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
4 আমার জিভে কোনও কথা উচ্চারিত হবার আগেই তুমি, হে সদাপ্রভু, তা সম্পূর্ণভাবে জানো।
೪ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
5 তুমি আমাকে সামনে ও পিছনে ঘিরে রেখেছ, এবং আমার উপর তোমার হাত রেখেছ।
೫ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
6 এই জ্ঞান আমার কাছে খুব আশ্চর্যজনক, এত উঁচু যে তা আমার বোধের অগম্য।
೬ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7 আমি তোমার আত্মাকে এড়িয়ে কোথায় যাব? আমি তোমার সামনে থেকে কোথায় পালাব?
೭ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
8 যদি আমি আকাশমণ্ডলে উঠে যাই, সেখানে তুমি আছ; যদি আমি পাতালে বিছানা পাতি, সেখানেও তুমি রয়েছ। (Sheol )
೮ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. (Sheol )
9 যদি আমি প্রত্যুষের ডানায় ভর করে উড়ে যাই, যদি আমি সমুদ্রের সুদূর সীমায় বসতি স্থাপন করি,
೯ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10 এমনকি সেখানেও তোমার হাত আমাকে পথ দেখাবে, তোমার ডান হাত আমাকে ধরে রাখবে।
೧೦ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
11 যদি আমি বলি, “নিশ্চয় অন্ধকার আমাকে আচ্ছন্ন করবে আর আলো আমার চারিদিকে অন্ধকারে পরিণত হবে,”
೧೧ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?
12 এমনকি, আঁধারও তোমার কাছে অন্ধকার নয়; রাত্রিও দিনের আলোর মতো উজ্জ্বল, কারণ অন্ধকার তোমার কাছে আলোর সমান।
೧೨ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
13 কারণ তুমি আমার অন্তরের সত্তা নির্মাণ করেছ; এবং মাতৃগর্ভে তুমি আমার দেহকে বুনেছ,
೧೩ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
14 আমি তোমার স্তব করি, কারণ আমি ভয়াবহরূপে ও আশ্চর্যরূপে নির্মিত; তোমার সব কাজকর্ম বিস্ময়কর তা আমি যথার্থভাবে জানি।
೧೪ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
15 আমার পরিকাঠামো তোমার কাছে লুকানো ছিল না, যখন আমি গোপন স্থানে নির্মিত হয়েছিলাম, যখন পৃথিবীর অধঃস্থানে আমাকে একসাথে বোনা হয়েছিল।
೧೫ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
16 তোমার চোখ আমার অগঠিত দেহটি দেখেছিল; আমার জীবনের নির্ধারিত দিনগুলি তোমার বইতে লেখা ছিল জীবনে একদিন অতিবাহিত হওয়ার আগেই।
೧೬ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17 হে ঈশ্বর, তোমার ভাবনাগুলি আমার কাছে কত মূল্যবান! সেগুলির সমষ্টি কী বিপুল!
೧೭ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
18 যদি আমি সেগুলি গুনতে যেতাম, তবে সেগুলি বালুকণার চেয়েও সংখ্যায় বেশি হত, যখন আমি জেগে উঠি, তখনও তুমি আমার সঙ্গে আছ।
೧೮ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
19 হে ঈশ্বর, যদি তুমি দুষ্টদের ধ্বংস করতে! আমার কাছ থেকে দূর হও, তোমরা যারা রক্তপিপাসু!
೧೯ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
20 তোমার সম্বন্ধে তারা মন্দ উদ্দেশ্য নিয়ে কথা বলে, তোমার বিপক্ষরা তোমার নামের অপব্যবহার করে।
೨೦ದೇವರೇ, ಅವರು ನಿನ್ನ ಶತ್ರುಗಳು, ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
21 হে সদাপ্রভু, আমি কি তাদের ঘৃণা করি না যারা তোমাকে ঘৃণা করে? এবং তাদের কি অবজ্ঞা করি না যারা তোমার বিপক্ষে বিদ্রোহ করে?
೨೧ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
22 তাদের জন্য কেবল আমার ঘৃণাই রয়েছে; আমি তাদের আমার শত্রু বলেই গণ্য করি।
೨೨ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.
23 হে ঈশ্বর, তুমি আমার অনুসন্ধান করো আর আমার হৃদয়ের কথা জানো; আমাকে পরীক্ষা করো আর জানো আমার উদ্বেগের ভাবনা।
೨೩ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
24 দেখো, আমার মধ্যে দুষ্টতার পথ পাওয়া যায় কি না, আর আমাকে অনন্ত জীবনের পথে চালাও।
೨೪ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.