< 1 Yohana 2 >

1 Mri, mi si han kpi biyi ni yu'u du yina lahtre na. Uri ni ta lahtre ki hei ni di u kpa wo mbu ni wo timbu, wato yesu christy wa wu di riri wa ana latre na.
ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
2 Wa wu yi ni wur latre mbu laga ana'u mbu ni klembu na u gbugbu wawu.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
3 Kitoh di ki ye toh idan ki u tre ma.
ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
4 Indi wa atre di wawu toh Irji da na hu tre ma na a hi di wu che u jaji na hei ni suron ma na.
ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
5 Indi wa a grji trema jaji hei wu ni Irji. Na yi ki toh di ki hei tare ni wu.
ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
6 Indi wa a tre di wa wu hei ni. Irji ka zre na wawu a zre a.
ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
7 Mir ya, mina si han tre sisa ma ni yu'u na ahi cihe tre wa bi woh rimumal chiche tre a hi tre wa bi wo'a.
ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
8 Misi han tre sa ma ni yu'u wa a jaji ni mi kristi ni mi mbi me, don ibwu a zren ka si hi kpama. u kpan u jaji a si kpan
ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
9 Indi wa a tre di wawu hei ni mi kpan, da ni kran vayi ma ahei ni mi bwu, da si zre ni mi bwu har ni zizah.
ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
10 Indi wa a ni yiem vayi ma ahei ni mi kpan, ama kub zah na.
೧೦ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
11 Naki, i wa a nikra vayi ma ahei ni mi bwu da si zre ni mi bwu a na ton bubu wa a si hi na; don ibwu a ka shishi ma.
೧೧ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
12 Mi si han ni yu'u mri, ba wur lahtre mbi hie ni yu'u ni tu de ma.
೧೨ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13 Mi si han ni yu'u bati dan bi yi bi toh wa ahei rji ni mumla, Mi si han ni yu'u mri ze don bi zan gbe ngbenlen ibrji, mi han ni yu'u mri don bi toh ti'a.
೧೩ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14 Mi riga nan ni yuwu ba ti don bi toh ndia rji ni mumla, Mi riga han ni yu'u mrize don bi hei ni gbengbenlen, u tre Irji a hei ni yi, na ki bi zan gbengbenlen bi me me dri.
೧೪ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
15 Na kpayiem ni kpi gbugbulu na, ni kpi bi wa ba hei ni mi gbugbulu 'a indi wa a ni son gbugbulu, i son 'u Irji na ni 'u na.
೧೫ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16 Du ikpi bi wa ba hei ni mi gbugbulu, ba bi nma kpa ba vo shishi, ni bi kpa di tsri, nu zu tu ba na rji ni ti na ba rji ni gbugbulu.
೧೬ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17 Gbugbulun ni kpi bi wa a ni son ba si kle, indi wa a si ti du ni tre rji a ni son seisei nisei. (aiōn g165)
೧೭ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn g165)
18 Imir itoh a ye 'u kle, na wa bi woh bi kran kristi ba si ye zizan gbugbu'u ba ye. Na ki bi ka toh di itoh ye kle.
೧೮ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19 Ba ryu ni mi mbu iki tsro di ba na hei ni ta na. Bana hei ni ta ba na san ni ta, da ba ni kpaba a tsro di bana hei ni ta na.
೧೯ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
20 Bi hei ni anointing u rji ni tsa tsra ka bi toh wa wu bi.
೨೦ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
21 Mi na han ni yuu di bina toh jaji na naki bi toh'o, iche na hei ni mi jaji na.
೨೧ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
22 A hi gha hi ndi u'iche, a hi ndi wa ana kpayiem ni yesu da kristi na ndi ki ma hi wa ba kran yesu, wa ana toh ti'a mba ver a na.
೨೨ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.
23 Indi wa ana yeini ni vre'a na a nato ti'a na. Indi wa a buh yun ma da kpa vre'a hei ni ti'a game.
೨೩ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
24 Naki iwu du kpi wa'u woh rji ni mumla krie ni'u inde kpi wa u woh rji ni mumla ahei ni wu, in u' wu hei ni vre ba tima game.
೨೪ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
25 Wa yi hi ikpie wa a chu yun ni ta wu ire u tutru. (aiōnios g166)
೨೫ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios g166)
26 Me han kpi bi yi yiwu du bari gru ye yi you ni nkon meme ma na.
೨೬ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
27 Naki u' ikpie wa'u kpa ni wu ahei ni wu, wuna si wa indio du ye tsro u na du Ruhu ma wa wu kpa tsro kpe ba wawu wa ba jaji bana che na, ni yada a tsro u son ni'u na ki me.
೨೭ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
28 Zizan mri son naki chachu wa aye ki hei ni gbengbenlen, ana shan ni tita niye ma na.
೨೮ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
29 Inde wu toh da a hei ni kiklan suron, u ka toh di indi wa ani ti kpe wa a zizi ba grji di ki ma ni'u.
೨೯ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

< 1 Yohana 2 >