< 1 Yohana 3 >
1 Toh i irin son wa anota, du ba yo ta ti mri Irji naki ki hei a hei naki gbugbulu na toh ta na. Naki ba na to Iti a na iftift ikpe bari bi didima u” bi Greeku' nisein ba toh da gran ya da ki hei ifga.
೧ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
2 Kpukpamu ki mri Irji zizan ba riheiu gran yada ki hei ki toh inde yesu a ye kita me ki hei ki toh inde yesu a ye kita me ki hei na wawu hei ki toh naki yada a hei.
೨ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
3 Indi wa a si yo shishi ni ua ka gla kpama na wa wu hei.
೩ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
4 Indi wa a si lahtre a si ti kpe wa a na didima na don lahtre hi kpe meme.
೪ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
5 Bi toh ba shile kristi rju du ye ban lahtre mbu rhu ni ta wu naki ni u' kena lahtre na heina.
೫ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
6 Ba ndi wa ani hei ni 'u' da si ta lahtre. Ba ndi wa sita latre da tre me di wawu to'o ko a yemen ni wu.
೬ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;
7 Imir na yeim du dio grue yi na ndi wa a si ti kpe didima a hi ndi didi na wa kristy a didi ma.
೭ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
8 Indi wa a si ti latre a rji ni brji, don ibrji latre rji ni mumla, Na ki u' ba shile vre Irji rhu du ye kpa du brji ti meme.
೮ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
9 Indi wa ba grji rji ni Irji ana si ti lahtre na, domin ibin u' Irji a hei ni u' ana la lah tre na, don ahe gjri u rji.
೯ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
10 Na ki mri Irji baba mri ibrji ba shile ba, indi wa ana tikpe didima na ana rji ni Irji na du ni indi wa ani kran vayi ma.
೧೦ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
11 I wa hi imbe wa bi woh ni mumla ki yemen kpa mbu.
೧೧ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12 Kina ti na kayinu na wa a rji ni brji da wu vayi ma ani tu gye awu? don idu ma ana u'brji u vayi ma ka didima.
೧೨ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
13 Mri vayi na ti “mamaki” na, inde gbugbulu ni kran yi.
೧೩ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14 Ki toh ki rju ni mi ique idi ri na rai don ki san mri vayi.
೧೪ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15 Indi wa ana son vayi ma na, a hi u wu ndi bi toh bi wu ndi ba na hei ni re u tutrun ni wu na. (aiōnios )
೧೫ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios )
16 Na ki ki toh son wa kristi ka tu ma no ba wu don kita. Kita me ki ka tumbu no domin mri vayi.
೧೬ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17 Du ndi wa ahei ni kpi bi gbugbulu yi, da toh vayi ma ni mi yah da na zo u na, yaya itre Irji ni he ni u?
೧೭ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
18 Mri mu ki na ta tre ki yemen mir vayi ni yun kuklu na ki ti ni mi suron jaji.
೧೮ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
19 Na ki ki toh di ki rji ni jaji, naki ki kpayemen ni suron mbu ni u.
೧೯ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
20 Inde suron mbu kashe ta, Irji zan suron mbu da toh kpi ba wawu.
೨೦ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
21 Kaunatatu, inde suron mbu na kashe ta na, ki ka hei ni gbengbenlen ni Irji.
೨೧ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
22 Du ikpe wa ki mie ki kpa ni u' don ki zi itre ma di ni ti kpe wa ani nu kikla suron
೨೨ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
23 I wa yi hi tre ma ki ka kpayemen ni vre ma yesu kristi di son kpa mbu na wa no ta tre ma.
೨೩ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
24 Indi wa azi tre Irji a hei ni Irji u Irji hei ni ndia. Naki ki toh di a hei ni ta ni mi Ruhu tsatsarka da a nota.
೨೪ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.