< 1 Yohana 4 >
1 Kaunatatu, na kpayeim ni Ruhohi wa wu mba u' na naki bi ka tsra ba toh ko ba rji ni Irji. Bi toh Irji, bi che ba hei game ba shu ni gbugbulu zizan.
೧ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2 Naki bi toh Ruhu Irji- du Ruhu wa a kpa yiem di yesu kristi aye ni mi n'man a rji ni Rji kena.
೨ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
3 Du Ruhu wa ana kpa yeim ni yesu na, ana rji ni Irji na. A Ruhu bi kran yesu kena wa bi woh da ni ye a riga da ye ni mi gbugbulu ye. Iftift Greek bi sen bi didi ba bla ifga di du Ruhu wa ana toh di Yesu a ye ni mi n man rji ni Irji na, ana u' Irji na ahi ki hi Ruhu bi kran Yesu, wa bi woh Kuma a hei ni gbugbulu ye ifga
೩ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
4 Bi yi bi rji ni Irji mri di zan gbengbenlen mba don wa a hei ni suron mbi a brabran zan wa ahei ni gbugbulu a.
೪ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
5 Ba rji ni gbugbulu, du kpe wa ba tre ahi wu gbugbulu, gbugbulu'a ni sren toh ni bawu.
೫ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6 Kita ki rji ni Irji, indi wa atoh Irji ani sren toh ni tawu indi wa ana rji ni Irji na ana sren toh ni tawu na naki kitoh Ruhu'u jaji, ni Ruhu'u' lahtre
೬ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
7 Kaunatatu kin yema ni kpambu don i yemen a rji ni Irji, du indi wa ani yemn grji ni Irji wa kuma a toh Irji.
೭ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
8 Indi wa na yemen ni ndi na ana toh Irji na, don Irji hi kauna.
೮ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
9 Naki iyemen u Irji ba shile ni mi mbu di Irji aton vre ma riri ye ni mi gbugbulu du ta kiso tutrun ni tu ma.
೯ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
10 Na yi a hi kpayemen ana kita ki son Irji na, na yi a wawu yemen ni ta, da ton vre ma du yekpa ta chuwoh ni lahtre.
೧೦ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
11 Kaunatatu inde Irji ni son ta, i kita me ki ka kpayemen ni kpambu.
೧೧ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
12 Ba ndi wa a taba toh Irji. Ki ti ni son kpambu Irji hei nimibu ison ma ni mi mbu ni mla tati.
೧೨ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
13 Na ki ki toh di ki hei tare ni u'wa hei ni mi mibu. Anota bru Ruhu ma bari.
೧೩ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
14 Na ki ki toh di kpayeim di Iti a ton vre ma du ye da kpa gbugbulu'a cuwo.
೧೪ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
15 Du ndi wa a bu yua ma da tre di Yesu a vre Irji, Irji hei ni 'u' u wa wu hei ni mi Irji.
೧೫ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16 Naki kita ki toh di kpayiem ni son wa Irji hei wu ta wu'a Irji hi son, ndi wa ahei ni mi son yi a hei ni mi Irji, u'Irji hei ni u game.
೧೬ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
17 Ahei naki ison yi mla ta ti du ta hei ni gbengbenlen chachu bla tre ma naki ma ahei jaji kita me ki ka hei naki ni mi gbugbulu.
೧೭ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
18 Sisir na hei ni mi son a na, ison u' jaji azu sisir rju naki sisir hei ni horo. ndi wa ni klu sisir anati jaji ni mi son na.
೧೮ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
19 Ki son 'u' don Irji guci sonta.
೧೯ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
20 Inde ndi wa a tre wawu ni son Irji da ni kran vayi ma, ahi ndi wu che. Ndi wa ana son vayi ma wa asi toh ana ni son Irji wa ana toh-o ma?
೨೦ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
21 Naki wa yi ni tre wa ki kpa ni u' indi wa ni son Irji wa ka son vayi ma game.
೨೧ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.